Author: Kodagu-admin

ಕಕ್ಕಬ್ಬೆ ಕುಂಜಿಲ ಗ್ರಾಮದ ಕಾಫಿ ತೋಟದಲ್ಲಿ ನೇಣು ಬಿಗಿದು ಅಸ್ಸಾಂ ಕಾರ್ಮಿಕ ಆತ್ಮಹತ್ಯೆ -ಕಾಜಿಮುದ್ದಿನ್ ಮೃತ ದುರ್ದೈವಿ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು : ಅಸ್ಸಾಂ ಮೂಲದ ಕಾರ್ಮಿಕನನೊಬ್ಬ ಕಾಫಿ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಕ್ಕಬ್ಬೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಂಜಿಲ ಗ್ರಾಮದಲ್ಲಿ ಗುರುವಾರ ಸಂಜೆ ನಡೆದಿದೆ. ಅಸ್ಸಾಂ ರಾಜ್ಯದ ಸೋಲ್ ಪುರಿ ನಿವಾಸಿ ಕಾಜಿಮುದ್ದೀನ್ (27) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಕಾರ್ಮಿಕ. ಮೃತ ವ್ಯಕ್ತಿ ಕಕ್ಕಬ್ಬೆ ಗ್ರಾಮದ ಬೆಳೆಗಾರ ದೊರೆ ಎಂಬುವವರ ಲೈನ್ ಮನೆಯಲ್ಲಿ ಪತ್ನಿ ಮಕ್ಕಳೊಂದಿಗೆ ವಾಸವಾಗಿದ್ದರು. ಆರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ ಕಾಜಿಮುದ್ದೀನ್ ಗುರುವಾರ ಪತ್ನಿಯೊಂದಿಗೆ ಕುಂಜಿಲ ಗ್ರಾಮದ ಉಸ್ಮಾನ್ ಎಂಬುವವರ ಕಾಫಿ ತೋಟಕ್ಕೆ ಕೆಲಸಕ್ಕೆ ತೆರಳಿದ್ದರು ಎನ್ನಲಾಗಿದೆ. ಈ ಸಂದರ್ಭ ಮೃತ ಕಾಜಿಮುದ್ದೀನ್ ಗೆ ಅತಿಯಾದ ಹೊಟ್ಟೆ ನೋವು ಕಾಣಿಸಿಕೊಂಡಿದ್ದು ಮನೆಗೆ ತೆರಳಿ ಮಾತ್ರೆ ತಿಂದು ಬರುತ್ತೇನೆಂದು ಪತ್ನಿಗೆ ಹೇಳಿ ತೋಟದಿಂದ ತೆರಳಿದ್ದಾನೆ. ಆದರೆ ತೋಟದಿಂದ ಮನೆಗೆ ಮಧ್ಯಾಹ್ನ ಪತ್ನಿ…

Read More

ಖಿದ್ಮಾ ಸಾಹಿತ್ಯ ರತ್ನ ಪ್ರಶಸ್ತಿಗೆ ಕೊಡಗಿನ ಅಮ್ಮತ್ತಿಯ ತೌಸೀಫ್ ಆಯ್ಕೆ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು :ಖಿದ್ಮಾ ಫೌಂಡೇಶನ್ ಕರ್ನಾಟಕ, ಅನ್ನದಾತ ಪ್ರಕಾಶನ ಹಾಗು ಕನ್ನಡ ಸಾಹಿತ್ಯ ಪರಿಷತ್ತು ಮೈಸೂರು ಇವರ ಸಹಯೋಗದಲ್ಲಿ ಆಯೋಜಿಸಲಾಗಿರುವ ಖಿದ್ಮಾ ಕನ್ನಡ ಸಂಗಮ ಕಾರ್ಯಕ್ರಮದಲ್ಲಿ ನೀಡಲ್ಪಡುವ ರಾಜ್ಯ ಮಟ್ಟದ ಖಿದ್ಮಾ ಸಾಹಿತ್ಯ ರತ್ನ ಪ್ರಶಸ್ತಿಗೆ ಕೊಡಗಿನ ಯುವ ಪ್ರತಿಭೆ ಅಮ್ಮತ್ತಿಯ ಎಂ. ಎ. ತೌಸೀಫ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಖಿದ್ಮಾ ಫೌಂಡೇಶನ್ ಅಧ್ಯಕ್ಷ ಆಮಿರ್ ಅಶ್ಅರಿ ಬನ್ನೂರು ತಿಳಿಸಿದ್ದಾರೆ. ತೌಸೀಫ್ ಕಳೆದ ಎಸ್ಎಸ್ಎಫ್ ಸಾಹಿತ್ಯೋತ್ಸವದಲ್ಲಿ ಭಾಗವಹಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿ ಜನರಲ್ ವಿಭಾಗದ ಚರ್ಚಾ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದುಕೊಂಡಿದ್ದರು.ಜ25 ರಂದು ಚಾಮರಾಜನಗರ ವಿಧಾನಸಭಾ ಕ್ಷೇತ್ರದ ಶಾಸಕ ಹರೀಶ್ ಗೌಡರು ತೌಸೀಫ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ.

Read More

ಹೊದವಾಡ ಸರ್ಕಾರಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆ ಕುರಿತು ಅರಿವು ಕಾರ್ಯಗಾರ – ಆಕರ್ಷಣೆಗೆ ಒಳಗಾಗದೆ ವಿದ್ಯಾರ್ಥಿಗಳು ಓದಿನೆಡೆಗೆ ಒತ್ತು ನೀಡಿ-ಶೀಲಾ ಅಶೋಕ್ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು: ವಿದ್ಯಾರ್ಥಿ ಜೀವನದಲ್ಲಿ ಯಾವುದೇ ಆಕರ್ಷಣೆಗಳಿಗೆ ಒಳಗಾಗದೆ ವಿದ್ಯಾರ್ಥಿಗಳು ಓದಿನೆಡೆಗೆ ಒತ್ತು ನೀಡಬೇಕೆಂದು ಮಡಿಕೇರಿ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ ಅಶೋಕ್ ಅವರು ಹೇಳಿದರು. ನಾಪೋಕ್ಲು ಬಳಿಯ ಹೊದವಾಡ ಗ್ರಾಮದ ಸರ್ಕಾರಿ ಪ್ರೌಢ ಶಾಲೆ ಮತ್ತು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆಯೋಜಿಸಲಾದ ಬೇಟಿ ಬಚಾವೋ ಬೇಟಿ ಪಡಾವೋ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.ಮಕ್ಕಳು ಶಿಕ್ಷಣವನ್ನು ಪಡೆದು ಉತ್ತಮ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಬೇಕು. ಓದುವ ವಯಸ್ಸಿನಲ್ಲಿ ಯಾವುದೇ ಆರ್ಕಷಣೆಗೆ ಒಳಗಾಗಬಾರದು ಎಂದರು. ಬಳಿಕ ಸುರಕ್ಷಿತ ಮತ್ತು ಅಸುರಕ್ಷಿತ ಸ್ವರ್ಶಗಳ ಕುರಿತು ಮಕ್ಕಳಿಗೆ ಮಾಹಿತಿ ನೀಡಿ ಮಕ್ಕಳು ಯಾವುದೇ ದೌರ್ಜನ್ಯಕ್ಕೆ ಒಳಗಾದರೆ ಮಕ್ಕಳ ಸಹಾಯವಾಣಿ 1098ಸಂಖ್ಯೆಗೆ ಮಾಹಿತಿ ನೀಡುವಂತೆ ತಿಳಿಸಿದರು. …

Read More

ವರ್ತಕರಿಂದ ರಾಷ್ಟ್ರೀಯ ಹೆದ್ದಾರಿ ನಿಯಮ ಉಲ್ಲಂಘನೆ ಸುರೇಶ್ ಬಿಳಿಗೇರಿ. ಪಾದಚಾರಿಗಳಿಗೆ ನಡೆಯಲೆಂದೇ ಮೀಸಲಾಗಿರುವ ಹೆದ್ದಾರಿ ಬದಿಯ ಫೂಟ್ ಪಾತ್ ಗಳು ದಿನೇ ದಿನೇ ವರ್ತಕರ ಫಲಕಗಳ ಪಾಲಾಗುತ್ತಿದ್ದು ರಾಷ್ಟ್ರೀಯ ಹೆದ್ದಾರಿಯ ನಿಯಮವನ್ನು ಉಲ್ಲಂಗಿಸುತ್ತಿರುವುದು ಸ್ಪಷ್ಟವಾಗಿದ್ದರೂ ಕುಶಾಲನಗರ ಪುರಸಭೆ ಕಣ್ಮುಚ್ಚಿ ಕುಳಿತಿದೆ. ಏನಿದು ಸಮಸ್ಯೆ? ಕೊಡಗಿನ ಮೈಸೂರು- ಬಂಟ್ವಾಳ ರಾಷ್ಟ್ರೀಯ ಹೆದ್ದಾರಿಯಲ್ಲಿ ಕುಶಾಲನಗರ ಎಂಬ ವಾಣಿಜ್ಯ ನಗರವೊಂದಿದ್ದು ನಿತ್ಯಸಾವಿರಾರು ವರ್ತಕರು ಕೊಡಗಿನ ಬೇರೆ ಬೇರೆ ಪಟ್ಟಣಗಳಿಂದ ವ್ಯಾಪಾರ ವಹಿವಾಟಿನ ಸರಕುಗಳಿಗಾಗಿ ಇಲ್ಲಿಗೆ ಬರುತ್ತಾರೆ. ವಾರಾಂತ್ಯದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಪ್ರವಾಸಿಗರು ಕೊಡಗಿಗೆ ಈ ಪಟ್ಟಣದ ಮೂಲಕವೇ ಪ್ರವೇಶ ಪಡೆಯುತ್ತಾರೆ. ಕೊಡಗಿನಲ್ಲಿ ವ್ಯಾಪಾರ ಮತ್ತು ಪ್ರವಾಸೋದ್ಯಮದ ಕೇಂದ್ರಬಿಂದುವಾಗಿರುವ ಕುಶಾಲನಗರ ಪಟ್ಟಣ ಈಗ ಹೊಸದೊಂದು ಸಮಸ್ಯೆ ಎದುರಿಸುತ್ತಿದೆ. ರಸ್ತೆಯನ್ನೇ ಆಕ್ರಮಿಸಿಕೊಳ್ಳುತ್ತಿರುವ ಕೆಲ ವರ್ತಕರು: ಕುಶಾಲನಗರ ಮಡಿಕೇರಿ ರಾಷ್ಟ್ರೀಯ ಹೆದ್ದಾರಿ ಬದಿಯಲ್ಲಿರುವ ಬಹುತೇಕ ಅಂಗಡಿ ಮಾಲೀಕರು ತಮ್ಮ ಮಳಿಗೆಯ ನಾಮಫಲಕವನ್ನು ರಾಷ್ಟ್ರೀಯ ಹೆದ್ದಾರಿ ನಿಯಮವನ್ನು ಉಲ್ಲಂಗಿಸಿ ರಸ್ತೆ ಬದಿಗಳಲ್ಲೇ ಅಳವಡಿಸುತ್ತಿರುವುದ ಪಾದಚಾರಿಗಳು ಮತ್ತು ತಾತ್ಕಾಲಿಕ ಪಾರ್ಕಿಂಗ್ ವ್ಯವಸ್ಥೆಯನ್ನು ಅವಲಂಭಿಸುವ…

Read More

ನಿವೃತ್ತ ಸರ್ಕಾರಿ ನೌಕರರ ಸಂಘದಿಂದ ಪರಾಕ್ರಮ ದಿನ ಆಚರಣೆ ಸೋಮವಾರಪೇಟೆ ನಿವೃತ್ತ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಸಮೀಪದ ತೋಳೂರು ಶೆಟ್ಟಳ್ಳಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸುಭಾಷ್ ಚಂದ್ರ ಬೋಸ್ ಜಯಂತಿಯನ್ನು ಪರಾಕ್ರಮ ದಿನ ಹಾಗೂ ಹುತಾತ್ಮರ ದಿನವನ್ನಾಗಿ ಆಚರಿಸಲಾಯಿತು. ಸಂಘದ ಅಧ್ಯಕ್ಷ ಸಿ.ಕೆ. ಮಲ್ಲಪ್ಪ ಅವರು ಸುಭಾಷ್ ಚಂದ್ರ ಬೋಸ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮ ಕ್ಕೆ ಚಾಲನೆ ನೀಡಿದರು. ಸಾಲ ಅಭಿವೃದ್ಧಿ ಸದಸ್ಯರಾದ ದಿವಂಗತ ಟಿ.ಕೆ. ಸುಬ್ಬಯ್ಯ ರವರಿಗೆ ಸಂತಾಪ ಸೂಚಿಸಲಾಯಿತು. ನಂತರ ಮಾತನಾಡಿ, ಸುಭಾಷ್ ಚಂದ್ರ ಬೋಸ್ ಒಬ್ಬ ದೇಶಪ್ರೇಮಿಯಾಗಿದ್ದು, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಧೀಮಂತ ವ್ಯಕ್ತಿಯಾಗಿದ್ದಾರೆ ಎಂದು ಬಣ್ಣಿಸಿದರು. ವಿದ್ಯಾರ್ಥಿಗಳಿಂದ ಭಾಷಣ, ಭಾವಗೀತೆ, ಕೋಲಾಟ, ನೃತ್ಯ, ಚಿತ್ರಕಲೆ ನಡೆಸಿ ಬಹುಮಾನ ವಿತರಿಸಲಾಯಿತು. ಶಾಲಾಭಿವೃದ್ಧಿ ಅಧ್ಯಕ್ಷರಾದ ಟಿ.ಡಿ. ಮೋಹನ್ ಕುಮಾರ್ ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಾಯರಾದ ಎಸ್.ಜೆ. ವಾರಿಜಮಣಿ ಸ್ವಾಗತಿಸಿ ಶಿಕ್ಷಕರಾದ ಎಸ್.ಎಂ. ರವಿ ಕಾರ್ಯಕ್ರಮ ನಿರೂಪಿಸಿ ಎಲ್ಲರಿಗೂ ವಂದಿಸಿದರು. ದಿನದ…

Read More

ಕಾರ್ಮಾಡು ರಾಮಮಂದಿರದಲ್ಲಿ ಜೆಡಿಎಸ್ ಯುವ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರ ಹುಟ್ಟು ಹಬ್ಬ ಆಚರಣೆ. ಕೊಡಗು ಜಿಲ್ಲೆಯ ವಿರಾಜಪೇಟೆ ತಾಲೂಕುಸಮೀಪದ ಅಮ್ಮತ್ತಿ ಕಾರ್ಮಾಡುವಿನ ರಾಮಮಂದಿರದಲ್ಲಿ ಜಾತ್ಯತೀತ ಜನತಾದಳದ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿಯವರ ಹುಟ್ಟು ಹಬ್ಬವನ್ನು ಎಸ್ಸಿ ಎಸ್ಟಿ ಘಟಕದ ಜಿಲ್ಲಾಧ್ಯಕ್ಷೆ ಮಾಜಿ ಗ್ರಾಮ ಪಂಚಾಯಿತಿ ಸದಸ್ಯೆ ಅಮ್ಮತಿ ಜಯಮ್ಮ ಅವರ ನೇತೃತ್ವದಲ್ಲಿ ಪುಟಾಣಿ ಮಕ್ಕಳು ಸಾರ್ವಜನಿಕರು ಮಹಿಳೆಯರು ಹಾಗೂ ಪಕ್ಷದ ಮುಖಂಡರು ಸೇರಿಕೇಕ್ ಕಟ್ ಮಾಡುವ ಮೂಲಕ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ವಿರಾಜಪೇಟೆ ತಾಲೂಕು ಅಧ್ಯಕ್ಷ ಪಿ ಎ ಮಂಜುನಾಥ್, ವಿರಾಜಪೇಟೆ ತಾಲೂಕುಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಮಜೀದ್ ಚೋಕಂಡಳ್ಳಿ , ಮಡಿಕೇರಿ ತಾಲೂಕಿನ ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಅಶ್ರಫ್ ಹಾಕತ್ತೂರು, ಕುಶಾಲನಗರ ತಾಲೂಕು ಅಲ್ಪಸಂಖ್ಯಾತ ಘಟಕ ಅಧ್ಯಕ್ಷ ಶಿ ಯಾಬುದ್ದೀನ್ ವಿ.ಪಿ.ಎಸ್, ನಲ್ಯ ಹುದಿಕೇರಿ,ವಿರಾಜಪೇಟೆ ತಾಲ್ಲೂಕು ಕಾರ್ಯದರ್ಶಿ,ಹರ್ಷ ಟಿ ಆರ್, ಮೇಘನಾ, ಸುಮತಿ,ಗೀತಾ , ಸರಸು ಸೇರಿದಂತೆ ಪಕ್ಷದ ಕಾರ್ಯಕರ್ತರು, ಗ್ರಾಮಸ್ಥರು ಪುಟಾಣಿಗಳು ಉಪಸ್ಥಿತರಿದ್ದರು. Janata…

Read More

ಕೊಡಗುಮಡಿಕೇರಿ ವಿಧಾನಸಭಾ ಕ್ಷೇತ್ರ ಅಲ್ಪಸಂಖ್ಯಾತ ಘಟಕದಿಂದ ನಿಖಿಲ್ ಕುಮಾರಸ್ವಾಮಿ ರವರ ಹುಟ್ಟುಹಬ್ಬ ಆಚರಣೆ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಶ್ರಫ್ ಹಾಕತ್ತೂರು ರವರ ನಾಯಕತ್ವದಲ್ಲಿ ಕಾರ್ಯಕ್ರಮ ಆ ಯೋಜನೆ ಕರ್ನಾಟಕ ರಾಜ್ಯ ಪ್ರದೇಶ ಜಾತ್ಯತೀತ ದಳದ ಯುವ ಘಟಕದ ರಾಜ್ಯದ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ರವರ ಹುಟ್ಟುಹಬ್ಬ ಆಚರಣೆಯನ್ನು ಹಾಕತ್ತೂರು ಹಿರಿಯ ಮಾದರಿ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಸಿಹಿ ವಿತರಿಸಿ ವಿದ್ಯಾರ್ಥಿಗಳೊಂದಿಗೆ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಹಾಕತ್ತೂರು ಬಿಳಿಗೇರಿ ಗ್ರಾಮ ಪಂಚಾಯತಿ ಸದಸ್ಯರಾದ ಎ. ಎ.ಅಬ್ದುಲ್ ಖಾದರ್, ಮಡಿಕೇರಿ ತಾಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಅಶ್ರಫ್ ಹಾಕತ್ತೂರು, ವಿರಾಜಪೇಟೆ ತಾಲೂಕು ಯುವ ಘಟಕದ ಅಧ್ಯಕ್ಷರಾದ ಸೈಫುದ್ದೀನ್ ಜಾಮಿಯಾಲ , ವಿರಾಜಪೇಟೆ ತಾಲ್ಲೂಕು ಅಲ್ಪಸಂಖ್ಯಾತ ಘಟಕದ ಅಧ್ಯಕ್ಷರಾದ ಮಜೀದ್ ಚೋಕಂಡಲ್ಲಿ, ಕುಶಾಲನಗರ ತಾಲೂಕು ಜೆಡಿಎಸ್ ಅಲ್ಪಸಂಖ್ಯಾತ ಘಟಕ ಅಧ್ಯಕ್ಷರಾದ ಶಿ ಯಾಬುದ್ದೀನ್ ವಿ.ಪಿ.ಎಸ್, ನೆ ಲ್ಯಹುದಿಕೇರಿ ,ಪಕ್ಷದ ಕಾರ್ಯಕರ್ತರಾದ ಎಂ .ಎ. ಇಬ್ರಾಹಿಂ, ಶಾಲಾ ಶಿಕ್ಷಕ ವೃಂದ, ವಿದ್ಯಾರ್ಥಿಗಳು ಹಾಜರಿದ್ದರು. …

Read More

ನಾಪೋಕ್ಲು :ಸ್ಥಳದಾನಿ ಮೊಯಿದ್ದೀನ್ ಕುಂಞಿ ಹಾಜಿ ನಿಧನಕ್ಕೆ -ಚೆರಿಯಪರಂಬು ಶಾಲೆಯ ಆಡಳಿತ ಮಂಡಳಿ, ವಿದ್ಯಾರ್ಥಿಗಳಿಂದ ಶ್ರದ್ಧಾಂಜಲಿ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು:ನಾಪೋಕ್ಲು ಬಳಿಯ ಚೆರಿಯಪರಂಬು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಿರ್ಮಾಣಕ್ಕೆ ಸ್ಥಳವನ್ನು ದಾನವಾಗಿ ನೀಡಿದ್ದ ಪಿ. ಪಿ.ಮೊಯಿದ್ದೀನ್ ಕುಂಞಿ ಹಾಜಿ ಅವರು ಇತ್ತೀಚಿಗೆ ನಿಧನ ಹೊಂದಿದ್ದು ಅವರ ಅಗಲಿಕೆಗೆ ಶಾಲೆಯ ಆಡಳಿತ ಮಂಡಳಿ, ಶಿಕ್ಷಕವೃಂದ ಹಾಗೂ ವಿದ್ಯಾರ್ಥಿಗಳು ಶ್ರದ್ಧಾಂಜಲಿ ಸಲ್ಲಿಸಿದರು. ಮೊಯಿದ್ದೀನ್ ಕುಂಞಿ ಹಾಜಿ ಅವರು ಚೆರಿಯಪರಂಬು ಗ್ರಾಮದಲ್ಲಿ ಶಾಲೆ ನಿರ್ಮಾಣಕ್ಕೆ ಅಂದಿನ ಕಾಲದಲ್ಲಿ ಸೂಕ್ತ ನಿವೇಶನ ಇಲ್ಲದಿರುವುದನ್ನು ಮನಗಂಡು 1975ರಲ್ಲಿ ಚೆರಿಯಪರಂಬು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ 25ಸೆಂಟ್ ಜಾಗವನ್ನು ದಾನವಾಗಿ ನೀಡಿದ್ದರು. ದಾನವಾಗಿ ನೀಡಿದ ಸ್ಥಳದಲ್ಲಿ ಸರ್ಕಾರದಿಂದ ಶಾಲೆ ನಿರ್ಮಾಣವಾಗಿದ ಬಳಿಕ ಅಲ್ಲಿನ ವಿದ್ಯಾರ್ಥಿಗಳಿಗೆ ಬಟ್ಟೆ ಪುಸ್ತಕವನ್ನು ಕೂಡ ಇವರು ಉದರವಾಗಿ ನೀಡುತ್ತಾ ಬಂದಿದ್ದರು. ದಾನಿಗಳಾದ ಮೊಯಿದ್ದೀನ್ ಕುಂಞಿ ಹಾಜಿ ಅವರು ಇತ್ತೀಚೆಗೆ ನಿಧನ ಹೊಂದಿದರು. ಇವರ ಆತ್ಮಕ್ಕೆ ಶಾಂತಿಯನ್ನು ಕೋರಿ ಚೆರಿಯಪರಂಬು ಸರ್ಕಾರಿಶಾಲೆಯಲ್ಲಿ ಶಾಲೆಯ…

Read More

ಏರ್ ರೈಫಲ್ ಸ್ಪರ್ಧೆಯಲ್ಲಿ ಪಾಲ್ಗೊಂಡ ಸಾಶ್ಯ ನಿಶಾಂತ್ ಗೋಣಿಕೊಪ್ಪಲು : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಆಯೋಜಿಸಿದ್ದ ಕರ್ನಾಟಕ ಸ್ಟೇಟ್ ಗೇಮ್ಸ್ ಬೆಂಗಳೂರಿನ ಸಾಯಿ ಶೂಟಿಂಗ್ ರೇಂಜ್ನಲ್ಲಿ ನಡೆಯಿತು. ಕರ್ನಾಟಕ ರಾಜ್ಯ ರೈಫಲ್ಸ್ ಅಸೋಸಿಯೇಷನ್ ನಡೆಸಿಕೊಟ್ಟ ಸ್ಪರ್ಧೆಯಲ್ಲಿ ಗೋಣಿಕೊಪ್ಪಲಿನ ಕಾಲ್ಸ್ / ಎಎಸ್ಎಫ್ ಶೂಟರ್ ಸಾಶ್ಯ ನಿಶಾಂತ್ ಪಾಲ್ಗೊಂಡು 10 ಮೀಟರ್ ಏರ್ ರೈಫಲ್ ವಿಭಾಗದಲ್ಲಿ 625.5 ಅಂಕ ಗಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇವರಿಗೆ ಶಾಲೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಅಭಿನಂದನೆ ಸಲ್ಲಿಸಿದ್ದಾರೆ. ಕೊಡಗು ನ್ಯೂಸ್

Read More

ಐತಿಚಂಡ ರಮೇಶ್ ಉತ್ತಪ್ಪರಿಗೆ ಗಾಂಧಿ ಸದ್ಭಾವನಾ ಪ್ರಶಸ್ತಿ ನಾಲ್ಕನೆಯ ವರ್ಷದ ‘ಗಾಂಧಿ ಸದ್ಬಾವನಾ ಪ್ರಶಸ್ತಿ’ಗೆ ಲೇಖಕ, ವನ್ಯಜೀವಿ ಆಸಕ್ತ ಹಾಗೂ ವಿಜಯ ಕರ್ನಾಟಕ ದಿನಪತ್ರಿಕೆಯ ಮೈಸೂರು ಆವೃತ್ತಿಯ ಸ್ಥಾನಿಕ ಸಂಪಾದಕ ಐತಿಚಂಡ ರಮೇಶ್ ಉತ್ತಪ್ಪ ಆಯ್ಕೆಯಾಗಿದ್ದಾರೆ. ಜ. 24 ರಂದು ಮಧ್ಯಾಹ್ನ 2.30 ಗಂಟೆಗೆ ನಗರದ ಜಿಲ್ಲಾ ಕನ್ನಡ ಸಾಹಿತ್ಯ ಭವನದಲ್ಲಿ ನಡೆಯಲಿರುವ ‘ಮಕ್ಕಳ ಸಾಂಸ್ಕೃತಿಕ ಉತ್ಸವ’ದಲ್ಲಿ ಕರ್ನಾಟಕ ಸಂಸ್ಕೃತ ವಿಶ್ವವಿದ್ಯಾನಿಲಯದ ವಿಶ್ರಾಂತ ಕುಲಪತಿ ಪ್ರೊ. ಪದ್ಮಾ ಶೇಖರ್ ಪ್ರಶಸ್ತಿ ಪ್ರದಾನ ಮಾಡುವರು. ಕರ್ನಾಟಕ ಮಾಹಿತಿ ಆಯೋಗದ ನಿಕಟಪೂರ್ವ ಆಯುಕ್ತ ಕೆ.ಎಂ. ಚಂದ್ರೇಗೌಡ ಅಧ್ಯಕ್ಷತೆ ವಹಿಸುವರು. ಅದಮ್ಯ ರಂಗಶಾಲೆಯ ಗೌರವ ಕಾರ್ಯದರ್ಶಿ ಟಿ. ಸತೀಶ್ ಜವರೇಗೌಡ ಆಶಯ ನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷ ಕೆ.ಬಿ. ಲಿಂಗರಾಜು, ಹಿರಿಯ ಸಾಹಿತಿ ಮತ್ತು ಅಂಕಣಕಾರ ಮಿರ್ಲೆ ಚಂದ್ರಶೇಖರ, ಗಿರೀಶ್ ಎಂಟ ರ್ ಪ್ರೈಸಸ್ ಮಾಲೀಕ ಎನ್.ಎಲ್. ಗಿರೀಶ್ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Read More