- ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಪರಿಹಾರ: ಸಚಿವರ ಸಭೆಯಲ್ಲಿ ಗದ್ದಲ!
- ಕೊಡಗು ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ತ್ರಿಕೋನ ಸ್ಪರ್ಧೆ: ದೆಹಲಿ ತಲುಪಿದ ಮೂವರ ಹೆಸರು?
- ಕರವೇ ಸ್ವಾಭಿಮಾನಿ ಸೇನೆಗೆ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಸೇರ್ಪಡೆ: ನಾಡು-ನುಡಿಯ ರಕ್ಷಣೆಗೆ ಹಲವರು ಕಟಿಬದ್ಧ
- ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
- ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
- ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
- ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
- ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
Author: Kodagu-admin
ಶಾಸಕ ಪೊನ್ನಣ್ಣನವರ ಸೂಚನೆ ಮೇರೆಗೆ ಕೀರೆ ಪೊಳೆಗೆ ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಪೊನ್ನಂಪೇಟೆ ತಾಲೂಕು ಗೋಣಿಕೊಪ್ಪ ಪಂಚಾಯಿತಿ ವ್ಯಾಪ್ತಿಯ ಕೀರೆ ಪೊಳೆಗೆ ಸೇತುವೆ ನಿರ್ಮಾಣಕ್ಕೆ ಸ್ಥಳ ಪರಿಶೀಲನೆ ಕಾಮಗಾರಿಯನ್ನು ಕೈಗೊಳ್ಳಲು ಇಂದು ಶಾಸಕರು ಹಾಗೂ ಮುಖ್ಯಮಂತ್ರಿಗಳು ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ ಸೂಚನೆ ಮೇರೆಗೆ ವೀಕ್ಷಣೆಯನ್ನು ಮಾಡಲಾಯಿತು. ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಮಿದೇರೀರ ನವೀನ್, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷರು ಹಾಗೂ ವಲಯ ಅಧ್ಯಕ್ಷರಾದ ಶ್ರೀ ಕುಲಚಂಡ ಪ್ರಮೋದ್ ಗಣಪತಿ, ಪಂಚಾಯಿತಿ ಸದಸ್ಯರಾದ ಚೆಪ್ಪುಡೀರ ಧ್ಯಾನ್, ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ಉಪಾಧ್ಯಕ್ಷರಾದ ಆಲೀರ ರಶೀದ್ ಹಾಗೂ ಪಿಡಬ್ಲ್ಯೂಡಿ ಇಂಜಿನಿಯರ್ ಸತೀಶ್ ಉಪಸ್ಥಿತರಿದ್ದರು. ಕೊಡಗು ನ್ಯೂಸ್
ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಯೋಜನೆಯ ಪ್ರಗತಿ ಪರಿಶೀಲನಾ ಸಭೆ ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯಸೌಧದಲ್ಲಿ ಪೆÇನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಪ್ರಗತಿ ಪರಿಶೀಲನಾ ಸಭೆಯು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪ್ರಶಾಂತ್ ಅವರ ಅಧ್ಯಕ್ಷತೆಯಲ್ಲಿ ಬುಧವಾರ ಜರುಗಿತು. ತಾಲ್ಲೂಕಿನ ವ್ಯಾಪ್ತಿಯಲ್ಲಿ ಗೃಹ ಲಕ್ಷ್ಮಿಯೋಜನೆಯಲ್ಲಿ ಒಟ್ಟು 1.17 ಫಲಾನುಭವಿಗಳಿಗೆ ಸೆಪ್ಟೆಂಬರ್ ತಿಂಗಳವರೆಗೆ ಗೃಹ ಲಕ್ಷ್ಮಿ ಹಣ ಪಾವತಿಯಾಗಿದ್ದು ಇನ್ನೂ 5 ತಿಂಗಳು ಬಾಕಿ ಇದ್ದು ಮುಂದಿನ ದಿನಗಳಲ್ಲಿ ಬಿಡುಗಡೆಯಾಗಲಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು. ಗೃಹ ಲಕ್ಷ್ಮಿ ಯೋಜನೆಯಡಿ ಸೆಪ್ಟೆಂಬರ್ ತಿಂಗಳವರೆಗೆ 720 ಹೊಸ ಫಲಾನುಭವಿಗಳು ಹೆಸರು ನೋದಾಯಿಸಿಕೊಂಡಿದ್ದು ಯೋಜನೆಯ ಸದುಪಯೋಗವನ್ನು ಪಡೆದುಕೊಳ್ಳುತ್ತಿದ್ದು, ಐಟಿ ಮತ್ತು ಜಿಎಸ್‍ಟಿ ಪಾವತಿ ಮಾಡುತ್ತಿರುವ ಫಲನುಭವಿಗಳಲ್ಲಿ ಕೆಲವು ತಾಂತ್ರಿಕ ದೋಷಗಳು ಕಂಡುಬರುತ್ತಿದ್ದು, ಈ ಬಗ್ಗೆ ಸರ್ಕಾರದ ಗಮನ ತಂದು ಸಮಸ್ಯೆ ಬಗೆಹರಿಸಲು ಸಭೆಯಲ್ಲಿ ಚರ್ಚಿಸಲಾಯಿತು. ಸರ್ಕಾರ ಹೊಸದಾಗಿ ಮಹಿಳೆಯರಿಗಾಗಿ ಗೃಹ ಲಕ್ಷ್ಮಿ ವಿವಿದ್ದೋದ್ದೇಶ ಸಹಕಾರ ಸಂಘವನ್ನು ರಚನೆ ಮಾಡಿದ್ದು ಮೊದಲ ಹಂತದಲ್ಲಿ ಈಗಾಗಲೇ…
ಆನೆ ದಾಳಿ ವ್ಯಕ್ತಿಗೆ ಗಂಭೀರ ಗಾಯ ವಿರಾಜಪೇಟೆ ಸರ್ಕಾರಿ ಆಸ್ಪತ್ರೆಗೆ ದಾಖಲು ವಿರಾಜಪೇಟೆ ತಾಲೂಕು ಬಾಡಗ ಬಾಣಂಗಾಲದ ಮಟ್ಟ ಪೈಸಾರಿ ನಿವಾಸಿ ಪೈಸಾರಿ ಸಮೀಪ ನಡೆದುಕೊಂಡು ಹೋಗುತ್ತಿದ್ದಾಗ ಕಾಡನೆ ದಾಳಿ ನಡೆಸಿದ ಘಟನೆ ನಡೆದಿದೆ. ಇಂದು ಬೆಳಗ್ಗೆ 10 ಗಂಟೆಯ ಅಂದಾಜಿಗೆ ಆನೆ ದಾಳಿಗೆ ಒಳಗಾದ ಅಲ್ಲಿನ ನಿವಾಸಿ ದೇವರಾಜ್ (61) ತೊಡೆ ಭಾಗಕ್ಕೆ ಗಂಭೀರ ಸ್ವರೂಪಗಳ ಗಾಯಗಳಾಗಿದ್ದು, ಗಾಯಾಳುವನ್ನು ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಸುದ್ದಿ ತಿಳಿದು ಅರಣ್ಯ ಅಧಿಕಾರಿಗಳು ಆಸ್ಪತ್ರೆಗೆ ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಕೊಡಗು ನ್ಯೂಸ್
ತೀಯಾನ್ ಜಿಲ್ಲಾಧ್ಯಕ್ಷರಾಗಿ ಪದ್ಮನಾಭ ಆಂಡೋಕಲ್ ಆಯ್ಕೆ ಮಡಿಕೇರಿ:-ತೀಯಾನ್ ಮಹಾಸಭಾ ಜಿಲ್ಲಾ ಸಮಿತಿಯ ಸಭೆ ಮಡಿಕೇರಿಯ ರಾಜ್ ದರ್ಶನ್ ಹೋಟೆಲ್ ನಲ್ಲಿ ಬುಧವಾರ ನಡೆಯಿತು. ಇಂದಿನ ಸಭೆಯಲ್ಲಿ ಎಲ್ಲರೂ ಚರ್ಚಿಸಿ ಸರ್ವಾನುಮತದಿಂದ ಈ ಕೆಳಗಿನಂತೆ ಜಿಲ್ಲಾ ಸಮಿತಿಯ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಅಧ್ಯಕ್ಷರು : ಎ. ಎನ್. ಪದ್ಮನಾಭ ಉಪಾಧ್ಯಕ್ಷರು: ಎಸ್ .ಆರ್.ಅಶೋಕ್ ಕುಮಾರ್ ಪ್ರಧಾನ ಕಾರ್ಯದರ್ಶಿ: ಜ್ಯೋತಿ ಅರುಣ್ ಖಜಾಂಜಿ : ಎಂ.ಕೆ. ಮೋಹನ್ ಸಂಘಟನಾ ಕಾರ್ಯದರ್ಶಿ: ಎನ್.ಸಿ.ಸುದರ್ಶನ್ ಗೌರವ ಸಲಹೆಗಾರರು: ಟಿ.ಕೆ.ಸುಧೀರ್ (ಲೆಕ್ಕ ಪರಿಶೋಧಕರು, ಮಡಿಕೇರಿ) ನಿರ್ದೇಶಕರು: ಶಶಿಕುಮಾರ್ ಎನ್.ಸಿ .ಸುನಿಲ್ ಶ್ರೀ ಗಣೇಶ್ ವೀಣಾ ಜಯರಾಮ್ ಕಾನೂನು ಸಲಹೆಗಾರರು: ಕೆ .ವಿ. ಸುನಿಲ್ (ವಿರಾಜಪೇಟೆ) ಜಿಲ್ಲಾ ಯೂತ್ ಅಧ್ಯಕ್ಷರಾಗಿ ಶಜಿ ಭರತ್ ಹಾಗೂ ಉಪಾಧ್ಯಕ್ಷರಾಗಿ ಪ್ರವೀಣ್ ರವರನ್ನು ಒಮ್ಮತದಿಂದ ಆಯ್ಕೆ ಮಾಡಲಾಯಿತು. ಕೊಡಗು ನ್ಯೂಸ್
ಅಕ್ರಮ ಗಾಂಜಾ ಸೇವನೆ ನಾಪೋಕ್ಲುವಿನಲ್ಲಿ ಮೂವರು ಅಸ್ಸಾಂ ಕಾರ್ಮಿಕರ ಬಂಧನ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು :ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಮಾದಕ ವಸ್ತು ಗಾಂಜಾವನ್ನು ಸೇವನೆ ಮಾಡುತ್ತಿದ್ದ ಅಸ್ಸಾಂಮೂಲದ ಮೂವರು ಕಾರ್ಮಿಕರನ್ನು ನಾಪೋಕ್ಲು ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ರಾಜ್ಯದ ದರಾಂಗ್ ಜಿಲ್ಲೆಯ ನಿವಾಸಿಗಳಾದ ಸಾದಿಕ್ ಅಲಿ (35)ಸೈದುಲ್ ರಹ್ಮಾನ್ (27)ನೂರ್ ಮೊಹಮ್ಮದ್(25) ಬಂಧಿತ ಆರೋಪಿಗಳು. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಕೂರುಳಿ ಗ್ರಾಮಕ್ಕೆ ತೆರಳುವ ರಸ್ತೆಯಲ್ಲಿರುವ ಪ್ರಯಾಣಿಕರ ಬಸ್ಸು ತಂಗುದಾಣದ ಬಳಿ ಹಾಗೂ ಬೇತು ಗ್ರಾಮಕ್ಕೆ ತೆರಳುವ ರಸ್ತೆಯ ಜಂಕ್ಷನ್ ಬಳಿ ಗಾಂಜಾ ಸೇವನೆ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ಕೂಡಲೇ ಸ್ಥಳಕ್ಕೆ ಧಾವಿಸಿದ ನಾಪೋಕ್ಲು ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ಇವರನ್ನು ಮಡಿಕೇರಿ ಜಿಲ್ಲಾಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದಾಗ ಮೂವರು ಗಾಂಜ ಸೇವನೆ ಮಾಡಿರುವ ಬಗ್ಗೆ ವೈದ್ಯರು ದೃಢಪಡಿಸಿದ್ದಾರೆ.ನಾಪೋಕ್ಲು ಠಾಣೆಯಲ್ಲಿ ಮೂವರ ವಿರುದ್ಧ ಪ್ರಕರಣ ದಾಖಲಾಗಿದ್ದು ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.…
ನಾಪೋಕ್ಲು: ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಾರ್ಷಿಕೋತ್ಸವದ ಸಂಭ್ರಮ : ಗ್ರಾಮೀಣ ಪ್ರದೇಶ ಶೈಕ್ಷಣಿಕವಾಗಿ ಮುಂದುವರೆದಿದೆ – ಪಟ್ಟಡ ಧನು ಉತ್ತಯ್ಯ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು: ದಶಕಗಳ ಹಿಂದೆ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೂನ್ಯ ಫಲಿತಾಂಶ ಪಡೆಯುತ್ತಿದ್ದ ಊರಿನಲ್ಲಿ ಇದೀಗ ಶೇಕಡಾ 100 ಫಲಿತಾಂಶ ಬರುತ್ತಿರುವುದು ಹೆಮ್ಮೆಯ ವಿಷಯ. ಶೈಕ್ಷಣಿಕವಾಗಿ ಹಿಂದುಳಿದಿದ್ದ ನಾಪೋಕ್ಲು ಪಟ್ಟಣದಲ್ಲಿ ಇದೀಗ ವಿವಿಧ ಶಿಕ್ಷಣ ಸಂಸ್ಥೆಗಳು ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು ಗ್ರಾಮೀಣ ಪ್ರದೇಶ ಶೈಕ್ಷಣಿಕವಾಗಿ ಮುಂದುವರೆದಿದೆ ಎಂದು ಗೋಣಿಕೊಪ್ಪಲಿನ ಲಯನ್ಸ್ ವಿದ್ಯಾಸಂಸ್ಥೆಯ ಅಧ್ಯಕ್ಷ ಪಟ್ಟಡ ಧನು ಉತ್ತಯ್ಯ ಹೇಳಿದರು. ನಾಪೋಕ್ಲು ಬಳಿಯ ಬೇತು ಗ್ರಾಮದ ಎಕ್ಸೆಲ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಆಯೋಜಿಸಲಾಗಿದ್ದ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಗ್ರಾಮೀಣ ಪ್ರದೇಶದಲ್ಲಿ ಹಿಂದೆ ವಿದ್ಯಾರ್ಥಿಗಳಿಗೆ ಅವಕಾಶ ಇರಲಿಲ್ಲ .ಈಗ ವಿಫಲ ಅವಕಾಶ ಲಭಿಸಿದೆ. ಅದರ ಸದ್ಬಳಕೆ ಮಾಡಿಕೊಂಡು ಶಿಕ್ಷಣದಲ್ಲಿ ಮುಂದುವರಿಯಬೇಕು ಎಂದರು…
ರಸ್ತೆ ಅಪಘಾತ ತಡೆಯಲು ಹೊಸ ತಂತ್ರಜ್ಞಾನ ಪರಿಚಯಿಸಿದ ಕೇಂದ್ರ ಸರ್ಕಾರ 2026ಕ್ಕೆ ಎಲ್ಲ ವಾಹನಗಳಿಗೆ ಅಳವಡಿಕೆ ರಸ್ತೆ ಸಾರಿಗೆ ಸಚಿವಾಲಯ 2026 ರ ವೇಳೆಗೆ ಭಾರತದಲ್ಲಿ V2V ಸಂವಹನ ವ್ಯವಸ್ಥೆಗಳನ್ನು ಪರಿಚಯಿಸಲು ಸಜ್ಜಾಗಿದೆ. ಕೇಂದ್ರ ಸಚಿವ ನಿತಿನ್ ಗಡ್ಕರಿ ಘೋಷಿಸಿದಂತೆ, ಈ ತಂತ್ರಜ್ಞಾನವು ವಾಹನಗಳ ನಡುವೆ ಸುರಕ್ಷತಾ ಮಾಹಿತಿ ವಿನಿಮಯಕ್ಕೆ ನೆರವಾಗಲಿದೆ. ಇಂಟರ್ನೆಟ್ ಇಲ್ಲದೆ ಸ್ಥಳೀಯ ವೈರ್‌ಲೆಸ್ ಸಿಗ್ನಲ್‌ಗಳ ಮೂಲಕ ಕಾರ್ಯನಿರ್ವಹಿಸುವ ಇದು ಅಪಘಾತಗಳನ್ನು ತಡೆಯಲು ನಿರ್ಣಾಯಕವಾಗಿದೆ. ಪ್ರತಿ ವಾಹನಕ್ಕೆ ಕೆಲವು ಸಾವಿರ ರೂ. ವೆಚ್ಚವಾಗುವ ನಿರೀಕ್ಷೆಯಿದೆ. ಭಾರತದಾದ್ಯಂತ ಅಪಘಾತಗಳನ್ನು ತಪ್ಪಿಸಲು ಹೊಸ ತಂತ್ರಜ್ಞಾನವನ್ನು ಕೇಂದ್ರ ಸರ್ಕಾರ ಪರಿಚಯಿಸಿದೆ. ವಾಹನದಿಂದ ವಾಹನಕ್ಕೆ (V2V) ಸಂವಹನ ವ್ಯವಸ್ಥೆಗಳನ್ನು (V2V Tech Revolution) ಪರಿಚಯಿಸುವ ನಿಟ್ಟಿನಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನೂತನ ಕ್ರಮವನ್ನು ತಂದಿದೆ. ಈ ಯೋಜನೆ 2026 ರ ವೇಳೆಗೆ ಇದನ್ನು ಪೂರ್ಣಗೊಳಿಸುವ ಗುರಿಯನ್ನು ಹೊಂದಿದೆ. ಈ ಬಗ್ಗೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್…
ಪ್ರಜಾಪ್ರಭುತ್ವ ವನ್ನು ನಾಶಗೊಳಿಸಲು ಬಿಜೆಪಿ ಹುನ್ನಾರ ನಡೆಸುತ್ತಿದೆ ಸಚಿವ. ಬೋಸರಾಜ್ ಆಕ್ರೋಶ ಕೇಂದ್ರದಲ್ಲಿರುವ ಬಿಜೆಪಿ ದೇಶದಲ್ಲಿರುವ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ನಾಶಪಡಿಸಲು ಹುನ್ನಾರ ನಡೆಸಿದೆ ಎಂದು ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್. ಬೋಸರಾಜ್ ರವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಡಿಕೇರಿಯಲ್ಲಿ ನಡೆಸಿದ ಸುದ್ದಿಗೋಷ್ಠಿಯಲ್ಲಿ ಕೇಂದ್ರ ಸರ್ಕಾರ ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯನ್ನು ರದ್ದುಗೊಳಿಸಿರುವ ಕುರಿತು ಮಾತನಾಡಿದ ಸಚಿವರು ಅಂದಿನ ಕಾಂಗ್ರೆಸ್ ನೇತೃತ್ವದ ಯು.ಪಿ.ಎ ಸರ್ಕಾರ ಗ್ರಾಮೀಣ ಪ್ರದೇಶದ ಬಡಜನರ ಕಲ್ಯಾಣ ಮತ್ತು ಗ್ರಾಮೀಣ ಪ್ರದೇಶದ ಅಭಿವೃದ್ಧಿ ಯ ಚಿಂತನೆಯೊಂದಿಗೆ ಸುಮಾರು ಆರು ತಿಂಗಳ ಕಾಲ ಎಲ್ಲಾ ರೀತಿಯ ಚರ್ಚೆಗಳು, ಸಭೆಗಳನ್ನು ನಡೆಸಿ ಮನ್ರೇಗಾ ಯೋಜನೆಯನ್ನು ಜಾರಿಗೆ ತಂದು ಕೋಟ್ಯಾಂತರ ಜನರಿಗೆ ಉದ್ಯೋಗ ನೀಡಿ ದೇಶದ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿ ಜೊತೆಗೆ ಪಂಚಾಯತ್ ರಾಜ್ ವ್ಯವಸ್ಥೆಯನ್ನು ಬಲಪಡಿಸಿತು.ಆದರೆ ಈಗ ಬಿಜೆಪಿ ನೇತೃತ್ವದ ಎನ್.ಡಿ.ಎ ಸರ್ಕಾರ ಕೇವಲ 72 ಗಂಟೆಗಳಲ್ಲಿ ಯಾವುದೇ ಸಭೆ,ಸಂವಾಂದ ಚಿಂತನೆಗಳನ್ನು ನಡೆಸದೆ ಏಕಪಕ್ಷೀಯ ನಿರ್ಧಾರ ತೆಗೆದುಕೊಂಡು ಮಹಾತ್ಮ ಗಾಂಧಿ…
ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆ ಸಂಪೂರ್ಣ ನಿಷೇಧ? ಮಹತ್ವದ ನಿರ್ಧಾರಕ್ಕೆ ಮುಂದಾದ ಇಲಾಖೆ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆಯು, ರಾಜ್ಯದ ಪದವಿಪೂರ್ವ ಕಾಲೇಜುಗಳಲ್ಲಿ ಮೊಬೈಲ್ ಬಳಕೆಯನ್ನು ಸಂಪೂರ್ಣ ನಿಷೇಧಿಸಲು ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಕ್ರಮವು ಜನವರಿ 27ರಿಂದ ನಡೆಯಲಿರುವ ಎರಡನೇ ಹಂತದ ರಾಜ್ಯಮಟ್ಟದ ಪಿಯು ಪರೀಕ್ಷೆಗಳಿಂದ ಜಾರಿಗೆ ಬರಲಿದೆ. ಪರೀಕ್ಷಾ ಸಮಯದಲ್ಲಿ ಪ್ರಶ್ನೆಪತ್ರಿಕೆಗಳು ಮೊಬೈಲ್ ಮೂಲಕ ಸೋರಿಕೆಯಾಗುವುದನ್ನು ತಡೆಯಲು ಈ ನಿಷೇಧವನ್ನು ಹೇರಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಪರೀಕ್ಷಾ ಕರ್ತವ್ಯದಲ್ಲಿರುವ ಶಿಕ್ಷಕರು, ಪ್ರಾಂಶುಪಾಲರು ಸೇರಿದಂತೆ ಎಲ್ಲ ಸಿಬ್ಬಂದಿಯ ಮೊಬೈಲ್ ಬಳಕೆಗೆ ಕಡಿವಾಣ ಹಾಕಲಾಗುತ್ತದೆ.
SSLC ಪರೀಕ್ಷೆಗೆ ಹೊಸ ಗೈಡ್ಲೈನ್ಸ್ ಪ್ರಕಟ ವಿದ್ಯಾರ್ಥಿಗಳಿಗೆ ಮತ್ತು ಶಿಕ್ಷಕರಿಗೆ ಖಡಕ್ ಸೂಚನೆ ಎಸ್‌ಎಸ್‌ಎಲ್‌ಸಿ ಪೂರ್ವ ಸಿದ್ಧತೆ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದ್ದು, ಈ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ತಮ್ಮ ಶಾಲೆಗಳ ಫಲಿತಾಂಶ ಹೆಚ್ಚಳಕ್ಕೆ ಕೆಲ ಶಾಲಾ ಮುಖ್ಯಶಿಕ್ಷಕರು ಪ್ರಯತ್ನಿಸಿದ್ದರು. ಇದಕ್ಕಾಗಿ ಪೂರಕವಾಗಿ ವಿದ್ಯಾರ್ಥಿಗಳನ್ನು ತಯಾರಿಗೊಳಿಸುತ್ತಿದ್ದ ಶಾಲೆಗಳು, ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ತಾವಾಗಿಯೇ ವಿದ್ಯಾರ್ಥಿಗಳಿಗೆ ಹಂಚಿಕೆ ಮಾಡಿದ್ದರು ಎಂದು ತಿಳಿದು ಬಂದಿದೆ. ಈ ಪ್ರಶ್ನೆ ಪತ್ರಿಕೆ ಸೋರಿಕೆಯಿಂದ ಶಿಕ್ಷಣ ಇಲಾಖೆ ಅಲರ್ಟ್ ಆಗಿದ್ದು, ಪರೀಕ್ಷೆಯ ಹೊಸ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ. ಎಸ್‌ಎಸ್‌ಎಲ್‌ಸಿ ಪೂರಕ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಆಗಿರುವ ಬೆನ್ನಲ್ಲೇ ರಾಜ್ಯ ಶಿಕ್ಷಣ ಇಲಾಖೆ ಎಚ್ಚೆತ್ತುಕೊಂಡಿದ್ದು, ಮುಖ್ಯ ಪರೀಕ್ಷೆಗೆ ಹೊಸ ಗೈಡ್ಲೈನ್ಸ್ ಬಿಡುಗಡೆ ಮಾಡಿದೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆ ವೇಳೆ ವಿದ್ಯಾರ್ಥಿಗಳಿಗೆ ಮೊಬೈಲ್ ನಿರ್ಬಂಧಿಸಲಾಗಿದೆ. ಇದೀಗ ಶಿಕ್ಷಕರು ಸಹ ಪರೀಕ್ಷೆ ವೇಳೆ ಮೊಬೈಲ್ ಬಳಸುವಂತಿಲ್ಲ ಎಂದು ಹೊಸ ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ. ಅಲ್ಲದೇ 2 ಹಾಗೂ 3ನೇ…
