- ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಪರಿಹಾರ: ಸಚಿವರ ಸಭೆಯಲ್ಲಿ ಗದ್ದಲ!
- ಕೊಡಗು ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ತ್ರಿಕೋನ ಸ್ಪರ್ಧೆ: ದೆಹಲಿ ತಲುಪಿದ ಮೂವರ ಹೆಸರು?
- ಕರವೇ ಸ್ವಾಭಿಮಾನಿ ಸೇನೆಗೆ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಸೇರ್ಪಡೆ: ನಾಡು-ನುಡಿಯ ರಕ್ಷಣೆಗೆ ಹಲವರು ಕಟಿಬದ್ಧ
- ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
- ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
- ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
- ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
- ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
Author: Kodagu-admin
ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಕೆ ಆಗುವ ಜಲಾಶಯಕ್ಕೆ ಜಿಲ್ಲಾಧಿಕಾರಿ ಎಸ್ ಜೆ ಸೋಮಶೇಖರ್ ಭೇಟಿ ಮಡಿಕೇರಿ ನಗರಕ್ಕೆ ಕುಡಿಯುವ ನೀರು ಪೂರೈಕೆ ಆಗುವ ಕುಂಡಾಮೇಸ್ತ್ರಿ ಮತ್ತು ಕೂಟುಹೊಳೆ ಜಲಾಶಯಕ್ಕೆ ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್ ಅವರು ಶನಿವಾರ ಭೇಟಿ ನೀಡಿ ಪರಿಶೀಲಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಉಪ ವಿಭಾಗಾಧಿಕಾರಿ ನಿತಿನ್ ಚಕ್ಕಿ, ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ, ಪೌರಾಯುಕ್ತರಾದ ಎಚ್.ಆರ್. ರಮೇಶ್, ಎಂಜಿನಿಯರ್ಗಳಾದ ಸತೀಶ್, ಹೇಮಂತ್ ಕುಮಾರ್, ಪ್ರಸನ್ನ ಇತರರು ಇದ್ದರು. ಕೊಡಗು ನ್ಯೂಸ್
ದೇಶದಲ್ಲಿಯೇ ಕರ್ನಾಟಕ ಮಾದರಿ ರಾಜ್ಯ ಗ್ಯಾರಂಟಿ ಯೋಜನೆಯಿಂದ ಬಡವರು, ಮಹಿಳೆಯರು ಮತ್ತು ಯುವಜನರಿಗೆ ಆರ್ಥಿಕ ಶಕ್ತಿ ಮೆಹರೋಜ್ ಖಾನ್ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಯು ರಾಜ್ಯದ ಬಡವರು, ಮಹಿಳೆಯರು ಮತ್ತು ಯುವಜನರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಿದ್ದು, ಆ ನಿಟ್ಟಿನಲ್ಲಿ ರಾಜ್ಯದಲ್ಲಿ ಇದುವರೆಗೆ 1.12 ಲಕ್ಷ ಕೋಟಿ ರೂ. ಭರಿಸಲಾಗಿದೆ. ಹಾಗೆಯೇ ಕೊಡಗು ಜಿಲ್ಲೆಯಲ್ಲಿ ಇದುವರೆಗೆ 647.59 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ಅವರು ಮಾಹಿತಿ ನೀಡಿದ್ದಾರೆ. ನಗರದ ಹೊರವಲಯದಲ್ಲಿರುವ ಆಕ್ಸಿರಿಚ್ ರೆಸಾರ್ಟ್‍ನಲ್ಲಿ ಶನಿವಾರ ಕೊಡಗು ಪತ್ರಕರ್ತರ ಸಂಘದ ವತಿಯಿಂದ ಆಯೋಜಿತವಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸರ್ಕಾರ ಜಿಎಸ್‍ಟಿ ಸಂಗ್ರಹಣೆಯಲ್ಲಿ ಸರಾಸರಿ ಹೆಚ್ಚಳವಾಗಿದೆ. ಐದು ಗ್ಯಾರಂಟಿ ಯೋಜನೆ ಜಾರಿಯಿಂದ ಶೇ.24 ರಷ್ಟು ಜಿಡಿಪಿ ದರ ಹೆಚ್ಚಳವಾಗಿದೆ. ನಿರುದ್ಯೋಗ ಪ್ರಮಾಣ ಶೇ.4.3 ರಷ್ಟು ಇದ್ದದ್ದು ಈಗ ಶೇ.2.5 ಕ್ಕೆ ಇಳಿಕೆಯಾಗಿದೆ. ಮಹಿಳೆಯರು ಉದ್ಯೋಗ ಮತ್ತು…
ಗ್ಯಾರಂಟಿ ಯೋಜನೆಗಳ ಯಶಸ್ಸಿನ ಮೂಲಕ ಕಲ್ಯಾಣ ರಾಜ್ಯ ನಿರ್ಮಾಣಕ್ಕೆ ಪ್ರಯತ್ನ ದೇಶದಲ್ಲಿಯೇ ಕರ್ನಾಟಕ ಮಾದರಿ ರಾಜ್ಯ ಗ್ಯಾರಂಟಿ ಯೋಜನೆಯಿಂದ ಬಡವರು, ಮಹಿಳೆಯರು ಮತ್ತು ಯುವಜನರಿಗೆ ಆರ್ಥಿಕ ಶಕ್ತಿ ಮೆಹರೋಜ್ ಖಾನ್ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜಾರಿಗೊಳಿಸಿರುವ ಗ್ಯಾರಂಟಿ ಯೋಜನೆಯು ರಾಜ್ಯದ ಬಡವರು, ಮಹಿಳೆಯರು ಮತ್ತು ಯುವಜನರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಅಭಿವೃದ್ಧಿಗೆ ಸಹಕಾರಿಯಾಗಿದ್ದು, ಆ ನಿಟ್ಟಿನಲ್ಲಿ ರಾಜ್ಯದಲ್ಲಿ ಇದುವರೆಗೆ 1.12 ಲಕ್ಷ ಕೋಟಿ ರೂ. ಭರಿಸಲಾಗಿದೆ. ಹಾಗೆಯೇ ಕೊಡಗು ಜಿಲ್ಲೆಯಲ್ಲಿ ಇದುವರೆಗೆ 647.59 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ಅವರು ಮಾಹಿತಿ ನೀಡಿದ್ದಾರೆ. ನಗರದ ಹೊರವಲಯದಲ್ಲಿರುವ ಆಕ್ಸಿರಿಚ್ ರೆಸಾರ್ಟ್‍ನಲ್ಲಿ ಶನಿವಾರ ಕೊಡಗು ಪತ್ರಕರ್ತರ ಸಂಘದ ವತಿಯಿಂದ ಆಯೋಜಿತವಾಗಿದ್ದ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಸರ್ಕಾರ ಜಿಎಸ್‍ಟಿ ಸಂಗ್ರಹಣೆಯಲ್ಲಿ ಸರಾಸರಿ ಹೆಚ್ಚಳವಾಗಿದೆ. ಐದು ಗ್ಯಾರಂಟಿ ಯೋಜನೆ ಜಾರಿಯಿಂದ ಶೇ.24 ರಷ್ಟು ಜಿಡಿಪಿ ದರ ಹೆಚ್ಚಳವಾಗಿದೆ. ನಿರುದ್ಯೋಗ ಪ್ರಮಾಣ…
ಗೋಣಿಕೊಪ್ಪ-ಪಾಲಿಬೆಟ್ಟ ಮುಖ್ಯ ರಸ್ತೆಯ ಲೋಕಾರ್ಪಣೆಯನ್ನು ಶಾಸಕರಾದ ಎ. ಎಸ್ ಪೊನ್ನಣ್ಣನವರು ನೆರವೇರಿಸಿದರು ಇತ್ತೀಚೆಗೆ ಪೂರ್ಣಗೊಂಡ ಗುಣಮಟ್ಟದ ಗೋಣಿಕೊಪ್ಪ-ಪಾಲಿಬೆಟ್ಟ ಮುಖ್ಯ ರಸ್ತೆಯ ಉದ್ಘಾಟನೆ ಕಾರ್ಯಕ್ರಮವನ್ನು, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ನೆರವೇರಿಸಿದರು. ₹ 1 ಕೋಟಿ 20 ಲಕ್ಷಗಳ ಅನುದಾನದಲ್ಲಿ ಗೋಣಿಕೊಪ್ಪ ದಿಂದ ಪಾಲಿಬೆಟ್ಟಕ್ಕೆ ತೆರಳುವ ಪ್ರಮುಖ ರಸ್ತೆ ಇದಾಗಿದ್ದು, ದಿನಕ್ಕೆ ಸಾವಿರಾರು ವಾಹನಗಳು ಈ ದಾರಿಯಲ್ಲಿ ಸಂಚರಿಸುತ್ತಿವೆ. ಈ ಬಾರಿಯ ತೀವ್ರ ಮಳೆಯಿಂದಾಗಿ ಹಾನಿ ಗಿಡದ ರಸ್ತೆಯ ದುರಸ್ತಿಗೆ ಶಾಸಕರು ವಿಶೇಷ ಅನುದಾನ ಒದಗಿಸಿದ್ದರು. ಕೊಟ್ಟ ಮಾತಿನಂತೆ, ಮಳೆ ನಿಂತ ಕೂಡಲೇ ಗುಣಮಟ್ಟದ ಕಾಮಗಾರಿಯನ್ನು ನಡೆಸಿ ಸಂಚಾರಕ್ಕೆ ಯೋಗ್ಯವಾದ ಉತ್ತಮ ರಸ್ತೆಯನ್ನು ಇಂದು ಸಾರ್ವಜನಿಕರ ಸಮ್ಮುಖದಲ್ಲಿ ಲೋಕಾರ್ಪಣೆಗೊಳಿಸಿದರು. ಈ ಸಂದರ್ಭದಲ್ಲಿ ಮಾನ್ಯ ಶಾಸಕರ ಸಹೋದಾರರಾದ ಶ್ರೀ ಅಜ್ಜಿಕುಟ್ಟಿರ ನರೇನ್ ಕಾರ್ಯಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷರು ಶ್ರೀ ಮಿದೇರಿರ ನವೀನ್, ಗೋಣಿಕೊಪ್ಪ ಪಂಚಾಯಿತಿ ಅಧ್ಯಕ್ಷರು ಪ್ರಮೋದ್ ಗಣಪತಿ,…
ಹರದೂರು ಹೊಳೆಯಲ್ಲಿ ಮುಳುಗಿ ಇಬ್ಬರು ಬಾಲಕರು ಮೃತ್ಯು ಸುಂಟಿಕೊಪ್ಪ ಸಮೀಪದ ಹರದೂರು ಹೊಳೆಯಲ್ಲಿ ಇಬ್ಬರು ಬಾಲಕರು ಮುಳುಗಿ ಜಲ ಸಮಾಧಿ ಆಗಿರುವ ಘಟನೆ ಇಂದು ಮಧ್ಯಾಹ್ನ 3 ಗಂಟೆ ಸಮಯದಲ್ಲಿ ನಡೆದಿದೆ. ಮೃತಪಟ್ಟ ಬಾಲಕರು ಸುಂಟಿಕೊಪ್ಪ ಪಂಪ್ ಹೌಸ್ ರಸ್ತೆಯ ನಿವಾಸಿಗಳು ಎಂದು ಹೇಳಲಾಗಿದೆ. ಹೆಚ್ಚಿನ ಮಾಹಿತಿ ಲಭ್ಯವಾಗಿಲ್ಲ. ಕೊಡಗು ನ್ಯೂಸ್
ಎಮ್ಮೆಮಾಡುವಿನ ಬಡ ಕುಟುಂಬಕ್ಕೆ ಜಿಲ್ಲೆಯ ಅನುಗ್ರಹ ಜನಸೇವಾ ಚಾರಿಟೇಬಲ್ ಟ್ರಸ್ಟ್ ನಿಂದ ಮನೆ ನಿರ್ಮಾಣದ ಶಂಕು ಸ್ಥಾಪನೆ- ಟ್ರಸ್ಟ್ ನ ಮಾನವೀಯ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು :ಸೂರಿಲ್ಲದೆ ಕೂಲಿ ಕೆಲಸ ಮಾಡಿ ಜೀವನ ಸಾಗಿಸುವ ಬಡ ಕುಟುಂಬವೊಂದಕ್ಕೆ ಶಾಶ್ವತ ಸೂರಿನ ಭಾಗ್ಯ ಕಲ್ಪಿಸಲು ಮುಂದಾಗಿರುವ ಜಿಲ್ಲೆಯ ಅನುಗ್ರಹ ಜನಸೇವಾ ಚಾರಿಟೇಬಲ್ ಟ್ರಸ್ಟ್ ನ ಸೇವಾ ಕಾರ್ಯಕ್ಕೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ. ನಾಪೋಕ್ಲು ಬಳಿಯ ಎಮ್ಮೆಮಾಡು ಪಡಿಯಾಣಿ ಗ್ರಾಮದ ಹಾರಿಸ್ ಎಂಬ ವ್ಯಕ್ತಿಯ ಕುಟುಂಬದ ಸಂಕಷ್ಟದ ಪರಿಸ್ಥಿತಿಯನ್ನು ಅರಿತು ಜಿಲ್ಲೆಯಲ್ಲಿ ಹಲವಾರು ಬಡ ಹಾಗೂ ನಿರ್ಗತಿಕರಿಗೆ ನೆರವಾಗುತ್ತಿರುವ ಅನುಗ್ರಹ ಜನಸೇವಾ ಚಾರಿಟೇಬಲ್ ಟ್ರಸ್ಟ್ ಪದಾಧಿಕಾರಿಗಳು ಕುಟುಂಬಕ್ಕೆ ಶಾಶ್ವತ ಸೂರು ಕಲ್ಪಿಸಲು ಮುಂದಾಗಿದ್ದಾರೆ. ಗುರುವಾರ ಮನೆ ನಿರ್ಮಾಣದ ಶಂಕುಸ್ಥಾಪನೆಗೆ ಕೊಡಗು ಜಿಲ್ಲಾ ನಾಇಬ್ ಖಾಝಿ ಹಾಗೂ ಸಮಸ್ತ ಮುಶಾವರ ಸದಸ್ಯರಾದ ಅಬ್ದುಲ್ಲ ಫೈಝಿ ಹಾಗೂ ಎಸ್ ವೈಎಸ್ ರಾಜ್ಯ ಉಪಾಧ್ಯಕ್ಷರಾದ ಸಯ್ಯಿದ್ ಇಲ್ಯಾಸ್ ಅಲ್ ಐದರೂಸಿ ತಂಙಳ್ ರವವರುಮನೆ ನಿರ್ಮಾಣಕ್ಕೆ…
ನಾಪೋಕ್ಲುವಿನಲ್ಲಿ ಯಶಸ್ವಿಯಾಗಿ ನಡೆದ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪ್ರೇರಣಾ ಮತ್ತು ವೃತ್ತಿ ಮಾರ್ಗದರ್ಶನ ಶಿಬಿರ :ಕಠಿಣ ಪರಿಶ್ರಮ,ಶಿಸ್ತು ಸಮಯ ನಿರ್ವಹಣೆಯಿಂದ ಯಶಸ್ಸು ಸಾಧ್ಯ -ವಿಕ್ರಮ್ ದತ್ತ ಅಭಿಪ್ರಾಯ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು:ಕಠಿಣ ಪರಿಶ್ರಮ ಶಿಸ್ತು ಹಾಗೂ ಸಮಯ ನಿರ್ವಹಣೆಯಿಂದ ವಿದ್ಯಾರ್ಥಿಗಳು ಯಶಸ್ಸು ಪಡೆಯಲು ಸಾಧ್ಯ ಎಂದು ಬದಿಯಡ್ಕದ ಕುನಿಲ್ ಎಜುಕೇಶನ್ ಇನ್ಸ್ಟಿಟ್ಯೂಟ್ ನ ಸಿಇಒ ವಿಕ್ರಮ್ ದತ್ತ ಅವರು ಅಭಿಪ್ರಾಯಪಟ್ಟರು. ನಾಪೋಕ್ಲುವಿನ ಕರ್ನಾಟಕ ಪಬ್ಲಿಕ್ ಶಾಲೆಯ ಸಭಾಂಗಣದಲ್ಲಿ ರೋಟರಿ ಮಿಸ್ಟಿ ಹೀಲ್ಸ್ ಮಡಿಕೇರಿ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಮತ್ತು ಕ್ಷೇತ್ರ ಸಂಪನ್ಮೂಲ ಕೇಂದ್ರ ಹಾಗೂ ಕರ್ನಾಟಕ ಪಬ್ಲಿಕ್ ಶಾಲೆ ನಾಪೋಕ್ಲು ಇವರ ಸಹಯೋಗದೊಂದಿಗೆ ಹತ್ತನೇ ತರಗತಿಯ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ಪ್ರೇರಣಾ ಮತ್ತು ವೃತ್ತಿ ಮಾರ್ಗದರ್ಶನ ಶಿಬಿರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಪಾಲ್ಗೊಂಡು ಮಾತನಾಡಿದ ಅವರು ವಿದ್ಯಾರ್ಥಿಗಳು ಉತ್ತೀರ್ಣರಾಗುವುದು ಮುಖ್ಯವಲ್ಲ ಜ್ಞಾನ, ಅನುಭವ ಗಳಿಸಿಕೊಳ್ಳುವುದು ಅಗತ್ಯ. ಜೀವನದಲ್ಲಿ ನಾನೇನು ಆಗಬೇಕು, ಮುಂದಿನ ಭವಿಷ್ಯದ ಬಗ್ಗೆ ಈಗಲೇ ನಿರ್ಧರಿಸಕೊಳ್ಳಬೇಕಿದೆ ಎಂದರು. ವಿದ್ಯಾರ್ಥಿಗಳು ಜೀವನದಲ್ಲಿ ಐದು…
ಬೆಟ್ಟಗೇರಿ-ಹೆರವನಾಡು-ಕೇಟೋಳಿ-ಕಾರಗುಂದ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿಗೆ ಎ. ಎಸ್ ಪೂನ್ನಣ್ಣನವರಿಂದ ಭೂಮಿ ಪೂಜೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಡಿಕೇರಿ ತಾಲೂಕು ಬೆಟ್ಟಗೇರಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಬರುವ, ಬೆಟ್ಟಗೇರಿ -ಹೆರವನಾಡು-ಕೇಟೋಳಿ-ಕಾರಗುಂದ ಸಂಪರ್ಕ ರಸ್ತೆಯ ಅಭಿವೃದ್ಧಿಗೆ, ಭೂಮಿ ಪೂಜೆಯನ್ನು ಇಂದು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ನೆರವೇರಿಸಿದರು. ಹೆರವನಾಡು ಗ್ರಾಮ ವ್ಯಾಪ್ತಿಯಲ್ಲಿ ಇಂದು ಪ್ರವಾಸ ಕೈಗೊಂಡ ಮಾನ್ಯ ಶಾಸಕರು, ಕಾಳೇರಮ್ಮನ ಐನ್ ಮನೆ, ಕಡ್ಯದ ಐನ್ ಮನೆ, ಹಾಗೂ ನಿಂಗಪ್ಪನ ಐನ್ ಮನೆಗೆ ತೆರಳುವ ರಸ್ತೆಗಳಿಗೆ ನೂತನವಾಗಿ ಕಾಂಕ್ರೀಟೀಕರಣಗೊಳಿಸಲು ಭೂಮಿ ಪೂಜೆಯನ್ನು ಸಹ ನೆರವೇರಿಸಿದರು. ಭೂಮಿ ಪೂಜೆಯನ್ನು ನೆರವೇರಿಸಿ ಮಾತನಾಡಿದ ಮಾನ್ಯ ಶಾಸಕರು, ಈ ಭಾಗದ ಜನರು ಈ ಹಿಂದೆ ತನ್ನನ್ನು ಭೇಟಿ ಮಾಡಿದ ಸಂದರ್ಭ ದಶಕಗಳಿಂದ ಈ ಭಾಗಕ್ಕೆ ಯಾವುದೇ ರೀತಿಯ ಅಭಿವೃದ್ಧಿಗೆ ಸರಕಾರದ ವತಿಯಿಂದ ಅನುದಾನಗಳು ಒದಗಿಲ್ಲ ಹಾಗೂ ಈ ಹಿಂದಿನ ಶಾಸಕರ ಅವಧಿಯಲ್ಲಿ ಹೆಚ್ಚಿನ ಕೆಲಸಗಳು ಆಗಿಲ್ಲ ಎಂದು…
ಕುಮಾರಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಶಾಸಕ ಎ. ಎಸ್ ಪೊನ್ನಣ್ಣ ನವರು ಭಾಗಿ ಕೊಡಗು ಜಿಲ್ಲೆಯ, ಸೋಮವಾರಪೇಟೆ ತಾಲೂಕು ಶಾಂತಳ್ಳಿಯಲ್ಲಿ ಜರುಗಿದ ಶ್ರೀ ಕ್ಷೇತ್ರ ಕುಮಾರಲಿಂಗೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು. ಸ್ಥಳೀಯ ಭಕ್ತಾಭಿಮಾನಿಗಳ ಆಹ್ವಾನದ ಮೇರೆಗೆ ತೆರಳಿದ ಮಾನ್ಯ ಶಾಸಕರು, ಶ್ರೀ ಕ್ಷೇತ್ರದಲ್ಲಿ ಪೂಜೆ ಸಲ್ಲಿಸಿ ದೇವರ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಮಡಿಕೇರಿ ಶಾಸಕರಾದ ಮಂತರ್ ಗೌಡ, ಸಂಸದರಾದ ಯುದುವೀರ್ ಒಡೆಯರ್, ಪಕ್ಷದ ಮುಖಂಡರಾದ ಲೋಕೇಶ್, ಸತೀಶ್, ಪ್ರತೀಶ್, ಮಾಜಿ ಶಾಸಕರು, ಹಾಗೂ ಪ್ರಮುಖರು ಉಪಸ್ಥಿತರಿದ್ದರು. ಕೊಡಗು ನ್ಯೂಸ್
ಜ.17 ಮತ್ತು 18 ರಂದು ಗ್ಯಾರಂಟಿ ಯೋಜನೆಗಳ ರಾಜ್ಯ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷರ ಕೊಡಗು ಜಿಲ್ಲಾ ಪ್ರವಾಸ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ಅವರು ಜನವರಿ, 17 ಮತ್ತು 18 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಮಾನ್ಯ ಉಪಾಧ್ಯಕ್ಷರು ಜನವರಿ, 17 ರಂದು ಮಧ್ಯಾಹ್ನ 12.30 ಗಂಟೆಗೆ ನಗರದ ವುಡ್ ಸ್ಟಾಕ್ ರೆಸಾರ್ಟ್‍ನಲ್ಲಿ ಕೊಡಗು ಪತ್ರಕರ್ತರ ಸಂಘ ಆಯೋಜಿಸಿರುವ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಜನವರಿ, 18 ರಂದು ಬೆಳಗ್ಗೆ 10 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕೊಡಗು ಜಿಲ್ಲಾ ಪತ್ರಕರ್ತರ ಸಂಕ್ರಾಂತಿ ಕ್ರಿಕೆಟ್ ಸಂಭ್ರಮ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಉಪಾಧ್ಯಕ್ಷರ ಆಪ್ತ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.
