Author: Kodagu-admin

ಬಿರುನಾಣಿಯಲ್ಲಿ ಹುಲಿ ದಾಳಿಗೆ ಹಸು ಬಲಿ ವಿರಾಜಪೇಟೆ ತಾಲ್ಲೂಕಿನ ಬಿರುನಾಣಿ ಗ್ರಾಮದಲ್ಲಿ ಹುಲಿ ದಾಳಿ ನಡೆಸಿ ಹಸುವೊಂದನ್ನು ಬಲಿ ಪಡೆದಿರುವ ಘಟನೆ ನಡೆದಿದೆ. ಬಿರುನಾಣಿ ಗ್ರಾಮದ ಪುತ್ತು ಭಗವತಿ ದೇವಸ್ಥಾನದ ಸಮೀಪ ರೈತ ಅನ್ನಳಮಾಡ ಚಿಪ್ಪ ಅಪ್ಪಚ್ಚು ಅವರಿಗೆ ಸೇರಿದ ಹಸುವನ್ನು ಗದ್ದೆಯಲ್ಲಿ ಮೇಯಲು ಕಟ್ಟಲಾಗಿತ್ತು. ಈ ವೇಳೆ ದಾಳಿ ನಡೆಸಿದ ಹುಲಿ ಹಸುವನ್ನು ಬಲಿ ಪಡೆದಿದೆ. ಘಟನೆಯಿಂದ ಸ್ಥಳೀಯ ರೈತರು ಆತಂಕಗೊಂಡಿದ್ದು, ಹುಲಿ ಸೆರೆಗೆ ಅರಣ್ಯ ಇಲಾಖೆ ತಕ್ಷಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Read More

ಮಂತರ್ ಗೌಡರಿಗೂ ನಿಗಮ ಮಂಡಳಿ ಸ್ಥಾನ ನೀಡಿ: ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯ ಮಡಿಕೇರಿ: ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಅವರಿಗೆ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ ನೀಡುವಂತೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಅಭಿಮಾನಿಗಳಿಂದ ಒತ್ತಾಯ ಕೇಳಿಬಂದಿದೆ. 2021ರ ವಿಧಾನ ಪರಿಷತ್ ಚುನಾವಣೆಯ ಮೂಲಕ ಕೊಡಗಿನ ರಾಜಕೀಯಕ್ಕೆ ಪ್ರವೇಶಿಸಿದ ಡಾ. ಮಂತರ್ ಗೌಡ, ಬಿಜೆಪಿ ಅಭ್ಯರ್ಥಿ ಸುಜಾ ಕುಶಾಲಪ್ಪ ವಿರುದ್ಧ ಅಲ್ಪ ಮತಗಳ ಅಂತರದಿಂದ ಸೋಲು ಅನುಭವಿಸಿದ್ದರು. ಆದರೆ ಚುನಾವಣಾ ಸೋಲಿನಿಂದ ಹಿಂದೆ ಸರಿಯದೆ ಕೊಡಗಿನಲ್ಲಿ ಪಕ್ಷ ಸಂಘಟನೆಗೆ ಹೆಚ್ಚಿನ ಒತ್ತು ನೀಡಿದರು. 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಹಾಗೂ ಪ್ರಬಲ ನಾಯಕ ಅಪ್ಪಚ್ಚು ರಂಜನ್ ವಿರುದ್ಧ ಸ್ಪರ್ಧಿಸಿ ಗೆಲುವು ಸಾಧಿಸುವ ಮೂಲಕ ಮಡಿಕೇರಿ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಮತ್ತೆ ಬಲ ತುಂಬಿದರು. ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಹಿನ್ನೆಲೆಯಲ್ಲಿ ಸಚಿವ ಸ್ಥಾನ ನೀಡಲು ಸಾಧ್ಯವಿಲ್ಲ ಎಂದು ಪಕ್ಷದ ವರಿಷ್ಠರು ತಿಳಿಸಿರುವ ಹಿನ್ನೆಲೆಯಲ್ಲಿ, ಇದೀಗ ನಿಗಮ ಮಂಡಳಿ ಅಧ್ಯಕ್ಷ ಸ್ಥಾನ…

Read More

ಕೊಡಗು ಸೇರಿದಂತೆ 6 ಜಿಲ್ಲೆಗಳ ಗ್ಯಾರಂಟಿ ಯೋಜನೆಗಳ ಉಸ್ತುವಾರಿ ಮೆಹರೋಜ್ ಖಾನ್‌ಗೆ ಬೆಂಗಳೂರು: ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನವನ್ನು ಮತ್ತಷ್ಟು ಪರಿಣಾಮಕಾರಿಯಾಗಿ ನಡೆಸುವ ಉದ್ದೇಶದಿಂದ ವಿವಿಧ ಜಿಲ್ಲೆಗಳಿಗೆ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಶ್ರೀ ಎಸ್.ಆರ್. ಮೆಹರೋಜ್ ಖಾನ್ ಅವರಿಗೆ ಬೆಂಗಳೂರು–2 ವಿಭಾಗದ ಉಸ್ತುವಾರಿ ವಹಿಸಲಾಗಿದೆ. ಈ ವಿಭಾಗದ ವ್ಯಾಪ್ತಿಯಲ್ಲಿ ಶಿವಮೊಗ್ಗ, ತುಮಕೂರು, ದಾವಣಗೆರೆ, ಚಿತ್ರದುರ್ಗ, ಕೋಲಾರ ಹಾಗೂ ಕೊಡಗು ಜಿಲ್ಲೆಗಳು ಒಳಗೊಂಡಿವೆ. ಈ ಜಿಲ್ಲೆಗಳಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ, ಫಲಾನುಭವಿಗಳಿಗೆ ಯೋಜನೆಗಳ ಸೌಲಭ್ಯ ಸಮರ್ಪಕವಾಗಿ ತಲುಪುತ್ತಿರುವುದರ ಪರಿಶೀಲನೆ ಹಾಗೂ ಸಂಬಂಧಿತ ಅಧಿಕಾರಿಗಳೊಂದಿಗೆ ಸಮನ್ವಯ ಸಾಧಿಸುವ ಜವಾಬ್ದಾರಿ ಮೆಹರೋಜ್ ಖಾನ್ ಅವರ ಮೇಲಿರಲಿದೆ. ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರವು ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ರಾಜಕೀಯ ಪ್ರತಿನಿಧಿಗಳನ್ನು ಒಳಗೊಂಡ ಅನುಷ್ಠಾನ ಸಮಿತಿಗಳನ್ನು ರಚಿಸಿರುವುದಾಗಿ ವರದಿಗಳಲ್ಲೂ ಉಲ್ಲೇಖಿಸಲಾಗಿದೆ.   ಕೊಡಗು ಜಿಲ್ಲೆಗೆ ಸಂಬಂಧಿಸಿದಂತೆ ಮೆಹರೋಜ್ ಖಾನ್ ಅವರಿಗೆ ದೊರೆತಿರುವ ಈ ಜವಾಬ್ದಾರಿ ಜಿಲ್ಲೆಯ ಗ್ಯಾರಂಟಿ ಯೋಜನೆಗಳ ಅನುಷ್ಠಾನದ…

Read More

ಅವ್ಯವಸ್ಥೆ ಪ್ರಶ್ನಿಸಿದ ಕರವೇ ಪದಾಧಿಕಾರಿಗಳಿಗೆ ಪೊಲೀಸ್ ದೂರು ನೀಡುವ ಬೆದರಿಕೆ ಆರೋಪ ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಮದ್ಯದ ವಾಸನೆ, ಬಟ್ಟೆಗಳು ಪತ್ತೆ: ಕುಶಾಲನಗರ ಕೆಎಸ್‌ಆರ್‌ಟಿಸಿ ಅವ್ಯವಸ್ಥೆಗೆ ಕರವೇ ಆಕ್ರೋಶ ಕುಶಾಲನಗರ: ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿರುವ ಮಹಿಳಾ ವಿಶ್ರಾಂತಿ ಕೊಠಡಿಯ ಅವ್ಯವಸ್ಥೆ ಹಾಗೂ ಸ್ವಚ್ಛತೆಯ ಕೊರತೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಸ್ವಾಭಿಮಾನಿ ಬಣ) ತೀವ್ರ ಆಕ್ರೋಶ ವ್ಯಕ್ತಪಡಿಸಿದೆ. ಮಹಿಳಾ ವಿಶ್ರಾಂತಿ ಕೊಠಡಿಯಿಂದ ವಿಪರೀತ ದುರ್ವಾಸನೆ ಬರುತ್ತಿದ್ದು, ಕೊಠಡಿ ಬಳಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ ಎಂದು ಸಾರ್ವಜನಿಕ ಮಹಿಳೆಯರು ಕರವೇ ಪದಾಧಿಕಾರಿಗಳ ಬಳಿ ದೂರು ನೀಡಿದ ಹಿನ್ನೆಲೆಯಲ್ಲಿ ಸಂಘಟನೆಯ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಜಯಶ್ರೀ ಮುರುಗೇಶ್ ಹಾಗೂ ಸುಂಟಿಕೊಪ್ಪ ಹೋಬಳಿ ಅಧ್ಯಕ್ಷೆ ಭವ್ಯ ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದಾರೆ. ಈ ವೇಳೆ ಕೊಠಡಿಯೊಳಗೆ ಮದ್ಯಪಾನದ ಕುರುಹು, ಮಹಿಳೆಯರ ಪ್ಯಾಂಟ್‌ಗಳು ಹಾಗೂ ಬಟ್ಟೆಗಳು, ಎಲೆ-ಅಡಿಕೆ ಚೀಲ ಸೇರಿದಂತೆ ವಿವಿಧ ಕಸದ ವಸ್ತುಗಳು ಪತ್ತೆಯಾಗಿವೆ ಎಂದು ಸಂಘಟನೆ ಆರೋಪಿಸಿದೆ. ಮಹಿಳೆಯರಿಗಾಗಿ ಮೀಸಲಾದ ಕೊಠಡಿಯಲ್ಲಿ ಇಂತಹ ವಸ್ತುಗಳು…

Read More

ಇಂಗು ಗುಂಡಿಯೊಳಗೆ ಉಸಿರುಗಟ್ಟಿ ಇಬ್ಬರ ದಾರುಣ ಸಾವು ಮಾದಾಪುರ: ಒಬ್ಬರ ಜೀವ ಉಳಿಸಲು ಧಾವಿಸಿದ ನೆರೆಮನೆಯಾತನೂ ವಿಧಿಯ ಕ್ರೂರ ಆಟಕ್ಕೆ ಬಲಿಯಾದ ಹೃದಯವಿದ್ರಾವಕ ಘಟನೆ ಮಾದಾಪುರ ಸಮೀಪದ ಹೊಸತೋಟದಲ್ಲಿ ನಡೆದಿದೆ. ಮನೆಯ ಸಮೀಪದಲ್ಲಿದ್ದ ಹಳೆಯ ಶೌಚಾಲಯದ ಗುಂಡಿ ಬಳಿ ತೆರಳಿದ್ದ ಐಗೂರು ಗ್ರಾಮದ ಹೊಸತೋಟದ ನಿತ್ಯ (47) ಅವರು ಏಕಾಏಕಿ ಗುಂಡಿ ಕುಸಿದು ಅದರೊಳಗೆ ಸಿಲುಕಿಕೊಂಡಿದ್ದಾರೆ. ಅವರನ್ನು ಕಂಡು ಆತಂಕಗೊಂಡ ನೆರೆಮನೆಯ ಜನಾರ್ಧನ (47) ಅವರು ಕ್ಷಣವೂ ಯೋಚಿಸದೆ ರಕ್ಷಣೆಗೆ ಧಾವಿಸಿ ಗುಂಡಿಯೊಳಗೆ ಇಳಿದಿದ್ದಾರೆ. ಆದರೆ… ನಿತ್ಯ ಅವರನ್ನು ಬದುಕಿಸಲು ಇಳಿದ ಜನಾರ್ಧನ ಅವರಿಗೂ ಅದೇ ಗುಂಡಿ ಸಾವಿನ ಕೂಪವಾಯಿತು. ಗುಂಡಿಯೊಳಗೆ ಸಂಗ್ರಹವಾಗಿದ್ದ ವಿಷಕಾರಿ ಅನಿಲದಿಂದ ಇಬ್ಬರೂ ಉಸಿರುಗಟ್ಟಿ ಅಸ್ವಸ್ಥರಾಗಿದ್ದಾರೆ. ಮಾದಾಪುರದಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಮಡಿಕೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಕರೆತರುವ ವೇಳೆ ಮಾರ್ಗಮಧ್ಯೆಯೇ ಇಬ್ಬರೂ ಕೊನೆಯುಸಿರೆಳೆದಿದ್ದಾರೆ. ಒಬ್ಬರನ್ನೊಬ್ಬರು ರಕ್ಷಿಸಬೇಕೆಂಬ ಮಾನವೀಯ ಕಾಳಜಿ ಕೊನೆಗೆ ಎರಡು ಕುಟುಂಬಗಳನ್ನು ಕಣ್ಣೀರಿನಲ್ಲಿ ಮುಳುಗಿಸಿದೆ. ಮೃತದೇಹಗಳನ್ನು ಕಂಡು ಕುಟುಂಬಸ್ಥರ ಆಕ್ರಂದನ ಮುಗಿಲುಮುಟ್ಟಿದ್ದು,…

Read More

*ಅಶೋಕ್_ಮಡಿಕೇರಿ* ಕೊಡಗು: ICSE ಅಂತರ ಶಾಲಾ ಮಟ್ಟದ ಕಾಲ್ಚೆಂಡು ಪಂದ್ಯಾವಳಿಯ ಅರ್ಹತಾ ಪಂದ್ಯಗಳಲ್ಲಿ ಕಾಪ್ಸ್ ಶಾಲೆಯ ತಂಡ ಅತ್ಯುತ್ತಮ ಪ್ರದರ್ಶನ ನೀಡಿ ಪ್ರಾದೇಶಿಕ ಮಟ್ಟದ ಪಂದ್ಯಾವಳಿಗೆ ಅರ್ಹತೆ ಪಡೆದುಕೊಂಡಿದೆ. ಸೆಮಿಫೈನಲ್ ಪಂದ್ಯದಲ್ಲಿ ಕಾಲ್ಸ್ ವಿರುದ್ಧ 3–0 ಗೋಲುಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿದ ಕಾಪ್ಸ್ ತಂಡ, ಫೈನಲ್ ಪಂದ್ಯದಲ್ಲಿ ಹಾಸನ ತಂಡವನ್ನು 2–0 ಗೋಲುಗಳಿಂದ ಮಣಿಸಿ ಪ್ರಾದೇಶಿಕ ಮಟ್ಟಕ್ಕೆ ಆಯ್ಕೆಯಾಗಿದೆ. ಪಂದ್ಯಾವಳಿಯುದ್ದಕ್ಕೂ ಉತ್ತಮ ಆಟದ ಮೂಲಕ ಗಮನ ಸೆಳೆದ ಕಾಪ್ಸ್ ಶಾಲಾ ತಂಡ, ಇದೀಗ ಪ್ರಾದೇಶಿಕ ಮಟ್ಟದ ಪಂದ್ಯಾವಳಿಯಲ್ಲಿ ಬೆಂಗಳೂರಿನಲ್ಲಿ ಕಣಕ್ಕಿಳಿಯಲಿದೆ. ತಂಡದ ಯಶಸ್ಸಿನ ಹಿಂದೆ ಆಟಗಾರರ ಪರಿಶ್ರಮ ಹಾಗೂ ಉತ್ತಮ ತರಬೇತಿ ಪ್ರಮುಖವಾಗಿದ್ದು, ತಂಡದ ಕೋಚ್ ಆಗಿ ಮಹೇಶ್ ಕಾರ್ಯನಿರ್ವಹಿಸುತ್ತಿದ್ದಾರೆ. ಪ್ರಾದೇಶಿಕ ಮಟ್ಟದಲ್ಲಿಯೂ ಕಾಪ್ಸ್ ಶಾಲೆಯ ತಂಡ ಉತ್ತಮ ಪ್ರದರ್ಶನ ನೀಡಿ ಮತ್ತಷ್ಟು ಯಶಸ್ಸು ಸಾಧಿಸಲಿ ಎಂಬ ಶುಭಾಶಯಗಳು ವ್ಯಕ್ತವಾಗಿವೆ.

Read More

*ಅಶೋಕ್_ಮಡಿಕೇರಿ* ICSE ಅಂತರ ಶಾಲಾ ಮಟ್ಟದ ಕಾಲ್ಚೆಂಡು ಪಂದ್ಯಾವಳಿಯ ವಲಯ ಮಟ್ಟದ ಅರ್ಹತಾ ಪಂದ್ಯಗಳಲ್ಲಿ ಕಾಪ್ಸ್ ಶಾಲೆಯ ತಂಡ ಅತ್ಯುತ್ತಮ ಪ್ರದರ್ಶನ ನೀಡಿ ಚಾಂಪಿಯನ್ ಆಗಿ ವಲಯ ಮಟ್ಟದ ಪಂದ್ಯಾವಳಿಗೆ ಅರ್ಹತೆ ಪಡೆದುಕೊಂಡಿದೆ. ಸೆಮಿಫೈನಲ್ ಪಂದ್ಯದಲ್ಲಿ ಕಾಲ್ಸ್ ಶಾಲೆಯ ವಿರುದ್ಧ 3–0 ಗೋಲುಗಳ ಅಂತರದಲ್ಲಿ ಭರ್ಜರಿ ಜಯ ಸಾಧಿಸಿದ ಕಾಪ್ಸ್ ತಂಡ, ಫೈನಲ್ ಪಂದ್ಯದಲ್ಲಿ ಹಾಸನ ತಂಡವನ್ನು 2–0 ಗೋಲುಗಳಿಂದ ಮಣಿಸಿ ಪ್ರಶಸ್ತಿ ತನ್ನದಾಗಿಸಿಕೊಂಡಿತು. ಪಂದ್ಯಾವಳಿಯುದ್ದಕ್ಕೂ ಸಂಘಟಿತ ಆಟ, ಉತ್ತಮ ಪಾಸ್‌ಗಳು ಹಾಗೂ ಪರಿಣಾಮಕಾರಿ ಗೋಲುಗಳ ಮೂಲಕ ಗಮನ ಸೆಳೆದ ಕಾಪ್ಸ್ ತಂಡ, ಇದೀಗ ಮುಂದಿನ ಹಂತವಾದ ವಲಯ ಮಟ್ಟದ ಪಂದ್ಯಾವಳಿಯಲ್ಲಿ ಬೆಂಗಳೂರಿನಲ್ಲಿ ಕಣಕ್ಕಿಳಿಯಲಿದೆ. ತಂಡದ ಯಶಸ್ಸಿನ ಹಿಂದೆ ಆಟಗಾರರ ಪರಿಶ್ರಮದ ಜೊತೆಗೆ ತರಬೇತುದಾರರ ಮಾರ್ಗದರ್ಶನವೂ ಪ್ರಮುಖವಾಗಿದ್ದು, ತಂಡದ ಕೋಚ್ ಆಗಿ ಮಹೇಶ್ ಕಾರ್ಯನಿರ್ವಹಿಸುತ್ತಿದ್ದಾರೆ. ವಲಯ ಮಟ್ಟದಲ್ಲಿಯೂ ಕಾಪ್ಸ್ ಶಾಲೆಯ ತಂಡ ಉತ್ತಮ ಪ್ರದರ್ಶನ ನೀಡಿ ಕೊಡಗಿಗೆ ಕೀರ್ತಿ ತರಲಿ ಎಂಬ ಶುಭಾಶಯಗಳು ವ್ಯಕ್ತವಾಗಿವೆ.

Read More

ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ಶಾಸಕ ಪೊನ್ನಣ್ಣ ವಿರಾಜಪೇಟೆ: ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ವಿರಾಜಪೇಟೆ ತಾಲೂಕಿನ ಕೊಮ್ಮೆತೋಡು ಗ್ರಾಮದಲ್ಲಿ ಆಯೋಜಿಸಿದ್ದ ಕೆಸರುಗದ್ದೆ ಕ್ರೀಡಾಕೂಟದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಕ್ರೀಡಾಕೂಟಕ್ಕೆ ಶುಭ ಹಾರೈಸಿ ಮಾತನಾಡಿದ ಶಾಸಕ ಪೊನ್ನಣ್ಣ, ಕೊಡಗು ಹಾಗೂ ಅಕ್ಕಪಕ್ಕದ ಜಿಲ್ಲೆಗಳಲ್ಲಿ ಪ್ರಸಿದ್ಧವಾಗಿರುವ ಕೆಸರುಗದ್ದೆ ಕ್ರೀಡೆ ಇಂದಿಗೂ ಯುವಜನರನ್ನು ಆಕರ್ಷಿಸುತ್ತಿದೆ ಎಂದರು. ನಮ್ಮ ಪೂರ್ವಜರು ಗದ್ದೆಯಲ್ಲಿ ನಾಟಿ ಕಾರ್ಯ ಆರಂಭಿಸುವ ಮುನ್ನವೇ ಕೆಸರುಗದ್ದೆ ಕ್ರೀಡೆಗಳನ್ನು ಆಯೋಜಿಸುತ್ತಿದ್ದರು. ಗದ್ದೆಯ ಮಣ್ಣನ್ನು ಕೃಷಿಗೆ ಮತ್ತಷ್ಟು ಯೋಗ್ಯಗೊಳಿಸುವ ಉದ್ದೇಶವೂ ಈ ಕ್ರೀಡೆಯ ಹಿಂದೆ ಅಡಗಿತ್ತು. ಹೀಗಾಗಿ ಗ್ರಾಮೀಣ ಕ್ರೀಡೆಗಳು ಕೇವಲ ಮನರಂಜನೆಯಲ್ಲ, ಕೃಷಿ ಬದುಕು ಹಾಗೂ ನಮ್ಮ ಸಂಸ್ಕೃತಿಯೊಂದಿಗೆ ಬೆಸೆದುಕೊಂಡಿರುವ ಪರಂಪರೆಯ ಭಾಗವಾಗಿವೆ ಎಂದು ಅವರು ಹೇಳಿದರು. ಇಂತಹ ಗ್ರಾಮೀಣ ಕ್ರೀಡಾಕೂಟವನ್ನು ಆಯೋಜಿಸಿರುವ ಕೊಡವ ಮುಸ್ಲಿಂ ಸ್ಪೋರ್ಟ್ಸ್ ಅಕಾಡೆಮಿ ಹಾಗೂ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲರಿಗೂ ಶಾಸಕರು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಅಕಾಡೆಮಿಯ…

Read More

ಕಾಫಿ ತೋಟದಲ್ಲಿ ಕಾಡಾನೆ ದಾಳಿ: ಕಾರ್ಮಿಕನಿಗೆ ಗಂಭೀರ ಗಾಯ ಸಿದ್ದಾಪುರ: ವಿರಾಜಪೇಟೆ ತಾಲೂಕಿನ ಅಮ್ಮತ್ತಿ ಸಮೀಪದ ಯಡೂರು ಗ್ರಾಮದಲ್ಲಿ ಕಾಡಾನೆ ದಾಳಿ ನಡೆಸಿ ಕಾರ್ಮಿಕನೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಹಸುವನ್ನು ನೋಡಲು ಕಾಫಿ ತೋಟಕ್ಕೆ ತೆರಳಿದ್ದ ಅಣ್ಣಪ್ಪ (40) ಎಂಬ ಕಾರ್ಮಿಕನ ಮೇಲೆ ಕಾಡಾನೆ ಏಕಾಏಕಿ ದಾಳಿ ನಡೆಸಿದೆ. ದಾಳಿಯಿಂದ ಅಣ್ಣಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ತಿಳಿಯುತ್ತಿದ್ದಂತೆ ಸ್ಥಳಕ್ಕೆ ವಲಯ ಅರಣ್ಯಾಧಿಕಾರಿ ಶಿವರಾಂ ಹಾಗೂ ಸಿಬ್ಬಂದಿ ಆಗಮಿಸಿದ್ದಾರೆ. ಗಾಯಗೊಂಡ ಅಣ್ಣಪ್ಪ ಅವರನ್ನು ಅರಣ್ಯ ಇಲಾಖೆ ಸಿಬ್ಬಂದಿ ತಕ್ಷಣ ಮಡಿಕೇರಿಗೆ ಕರೆತಂದು ಆಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯಿಂದ ಯಡೂರು ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ.

Read More

ಸುಂಟಿಕೊಪ್ಪ: ಗದ್ದೆಹಳ್ಳ ಬಸ್‌ ನಿಲ್ದಾಣದಲ್ಲಿ ವೃದ್ಧರೊಬ್ಬರು ಮಳೆ–ಗಾಳಿಯ ನಡುವೆಯೇ ನೆಲದ ಮೇಲೆ ಮಲಗಿರುವ ಹೃದಯವಿದ್ರಾವಕ ದೃಶ್ಯ ಕಂಡುಬಂದಿದೆ. ಆಶ್ರಯವಿಲ್ಲದೆ ಬಸ್‌ ನಿಲ್ದಾಣವನ್ನೇ ಆಸರೆಯಾಗಿಸಿಕೊಂಡಿರುವ ವೃದ್ಧರಿಗೆ ಸ್ಥಳೀಯರು ತಮ್ಮ ಕೈಲಾದಷ್ಟು ಊಟೋಪಚಾರ ಹಾಗೂ ಮಾನವೀಯ ನೆರವು ನೀಡುತ್ತಿದ್ದಾರೆ. ಆದರೆ ಮಳೆಗಾಲದಲ್ಲಿ ನೆಲದ ಮೇಲೆಯೇ ಮಲಗುವ ಪರಿಸ್ಥಿತಿ ವೃದ್ಧರಿಗೆ ಮತ್ತಷ್ಟು ಸಂಕಷ್ಟ ತಂದಿದೆ. ಮಡಿಕೇರಿ ಭಾಗದ ಕೆಲ ವೃದ್ಧಾಶ್ರಮಗಳಲ್ಲಿ ಹಾಸಿಗೆ ಸೇರಿದಂತೆ ಅಗತ್ಯ ಸೌಲಭ್ಯಗಳ ಕೊರತೆ ಇದೆ ಎಂದು ವೃದ್ಧರು ಹೇಳುತ್ತಿರುವ ಹಿನ್ನೆಲೆಯಲ್ಲಿ, ಈ ವೃದ್ಧರಿಗೆ ಸುರಕ್ಷಿತ ಆಶ್ರಯ ಕಲ್ಪಿಸುವ ಅಗತ್ಯವಿದೆ. ಮನುಷ್ಯತ್ವ ಇನ್ನೂ ಜೀವಂತವಿದ್ದರೆ, ಈ ವೃದ್ಧರತ್ತ ಒಂದು ಸಹಾಯದ ಕೈ ಚಾಚೋಣ. ಯಾರಾದರೂ ಸಂಘ-ಸಂಸ್ಥೆಗಳು, ದಾನಿಗಳು ಅಥವಾ ಸಮಾಜ ಸೇವಕರು ಮುಂದೆ ಬಂದು ವೃದ್ಧರಿಗೆ ಸುರಕ್ಷಿತ ವಸತಿ, ಆಹಾರ ಮತ್ತು ಅಗತ್ಯ ಆರೈಕೆ ಒದಗಿಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ. 👉 ವೃದ್ಧರಿಗೆ ನೆರವು ನೀಡಲು ಸಾಧ್ಯವಿರುವವರು ದಯವಿಟ್ಟು ಸ್ಥಳೀಯರು ಅಥವಾ ಸಂಬಂಧಪಟ್ಟ ಅಧಿಕಾರಿಗಳನ್ನು ಸಂಪರ್ಕಿಸಿ, ಮಾನವೀಯ ನೆರವಿಗೆ ಮುಂದಾಗಬೇಕು.

Read More