- ಕರವೇ ಸ್ವಾಭಿಮಾನಿ ಸೇನೆಗೆ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಸೇರ್ಪಡೆ: ನಾಡು-ನುಡಿಯ ರಕ್ಷಣೆಗೆ ಹಲವರು ಕಟಿಬದ್ಧ
- ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
- ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
- ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
- ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
- ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
- ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ
- ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
Author: Kodagu-admin
ರಾಜ್ಯ ಸರ್ಕಾರಿ ನೌಕರರ ಜಿಲ್ಲಾ ಮಟ್ಟದ ಕ್ರೀಡಾಕೂಟಕ್ಕೆ ಚಾಲನೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ 9 ಕೋಟಿ ರೂ. ವೆಚ್ಚದಲ್ಲಿ ಸಿಂಥಟಿಕ್ ಅಥ್ಲೆಟಿಕ್ ಟ್ರ್ಯಾಕ್ ನಿರ್ಮಾಣಕ್ಕೆ ಸರ್ಕಾರದಿಂದ ಮಂಜೂರಾತಿ ದೊರೆತಿದ್ದು, ಈಗಾಗಲೇ 20 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಸರ್ಕಾರಿ ನೌಕರರ ಸಂಘ, ಜಿಲ್ಲಾ ಶಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಕೊಡಗು ಜಿಲ್ಲಾ ಮಟ್ಟದ ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟ ಸಾಂಸ್ಕøತಿಕ ಸ್ಪರ್ಧೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಹಾಗೆಯೇ ಜಿಲ್ಲಾ ಕ್ರೀಡಾಂಗಣದಲ್ಲಿ ಮಿನಿ ಒಳಾಂಗಣ ಸೆಮಿ ಇಂಡೋರ್ ಸಿಂಥಟಿಕ್ ಬಾಸ್ಕೆಟ್ ಬಾಲ್ ಅಂಕಣ ನಿರ್ಮಾಣಕ್ಕೆ ಸರ್ಕಾರದಿಂದ 150 ಲಕ್ಷ ರೂ. ವೆಚ್ಚಕ್ಕೆ ಅನುಮೋದನೆ ದೊರೆತಿದ್ದು, ಈಗಾಗಲೇ 20 ಲಕ್ಷ ರೂ. ಬಿಡುಗಡೆಯಾಗಿದೆ ಎಂದು ಶಾಸಕರು…
ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಮಡಿಕೇರಿ ಸಂಚಾರ ಠಾಣೆ ವತಿಯಿಂದ ಅರಿವು ಕಾರ್ಯಗಾರ ಗುರುವಾರ ಮಡಿಕೇರಿ ಸಂಚಾರ ಠಾಣೆಯ ವತಿಯಿಂದ ಮಡಿಕೇರಿ ನಾಗರಿಕರಿಗೆ ಮತ್ತು ವಾಹನ ಚಾಲಕರುಗಳಿಗೆ ರಸ್ತೆ ಸುರಕ್ಷತೆ ಮತ್ತು ಸಂಚಾರ ಸುರಕ್ಷತೆಗಳ ಬಗ್ಗೆ ಮಡಿಕೇರಿ ಮೈತ್ರಿ ಪೊಲೀಸ್ ಸಮುದಾಯ ಭವನದಲ್ಲಿ ಜಾಗೃತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು
ಬಾಳೆಲೆಯ ವಿಜಯಲಕ್ಷ್ಮಿ ವಿದ್ಯಾ ಸಂಸ್ಥೆಗೆ ಹಳೆಯ ವಿದ್ಯಾರ್ಥಿಗಳಿಂದ ಕಂಪ್ಯೂಟರ್ ಶಿಕ್ಷಣಕ್ಕಾಗಿ ಧನ ಸಹಾಯ ವಿಜಯಲಕ್ಷ್ಮಿ ವಿದ್ಯಾ ಸಂಸ್ಥೆಯಲ್ಲಿ ಪ್ರೌಢ ಮತ್ತು ಪಿಯುಸಿ ವ್ಯಾಸಂಗವನ್ನು 1997ರಿಂದ 2002ರಗೆ ಮುಗಿಸಿದ ಹಳೆಯ ವಿದ್ಯಾರ್ಥಿಗಳಾದ ಉಷಾರಾಣಿ,ಉಷಾ ಸಿ.ಜೆ, ಮಾಲತಿ ಟಿ.ಕೆ, ಪಟ್ಟಡ ಬೋಪಯ್ಯ, ಸೋಮಯ್ಯ ಎ.ಎ, ಕುಮಾರ ಯಂ.ಕೆ, ಸಂತೋಷ್.ಯಂ, ಸುಷ್ಮಿತಾ ಕೆ.ವಿ, ಸೌಮ್ಯ ಪಿ.ಪಿ, ಸಜಿತಾ ಯನ್.ಅರ್ ,ನಂದಿನಿ ಹೆಚ್.ಅರ್ ,ಮಿನೋದ್ ಯಂ.ಜಿ, ಮಾಯಮುಡಿ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯವರಾದ ಜಯಮ್ಮ ಇವರುಗಳೆಲ್ಲಾ ಸೇರಿ ಬಾಳೆಲೆ ವಿಜಯಲಕ್ಷ್ಮಿ ಪ್ರೌಢ ಶಾಲಾ ವಿಭಾಗದಲ್ಲಿ ವಿದ್ಯಾರ್ಥಿಗಳಿಗೆ ಗುಣಮಟ್ಟದ ಕಂಪ್ಯೂಟರ್ ಶಿಕ್ಷಣ ನೀಡುವ ಸಲುವಾಗಿ 12000ರೂಗಳ ಧನ ಸಹಾಯವನ್ನು ನೀಡಿದರು ವಿದ್ಯಾಸಂಸ್ಥೆಯ ಪರವಾಗಿ ಉಪಹಿರಿಯ ಸಹಾಯಕ ಅಧ್ಯಾಪಕರುಗಳಾದ ಬೆನಡಿಕ್ಟ್ ಫರ್ನಾಂಡಿಸ್ ನಗದನ್ನು ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಸಮ್ಮುಖದಲ್ಲಿ ಸ್ವೀಕರಿಸಿದರು ಕೊಡಗು ನ್ಯೂಸ್
ತುರ್ತು ಆರೈಕೆಯಲ್ಲಿ ವೈದ್ಯಕೀಯ ಕಾನೂನು ಅಗತ್ಯತೆಗಳು ಮೂಲಭೂತ ಬೆಂಬಲ ಕುರಿತು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜು ಸಭಾಂಗಣದಲ್ಲಿ ಕಾರ್ಯಾಗಾರ ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆ ಸಹಯೋಗದಲ್ಲಿ ವಿಧಿವಿಜ್ಞಾನ ಶಾಸ್ತ್ರ ವಿಭಾಗ ವತಿಯಿಂದ ‘ತುರ್ತು ಆರೈಕೆಯಲ್ಲಿ ವೈದ್ಯಕೀಯ ಕಾನೂನು ಅಗತ್ಯತೆಗಳು ಮತ್ತು ಮೂಲಭೂತ ಜೀವ ಬೆಂಬಲ ಕುರಿತ’ ಕಾರ್ಯಗಾರವು ಜನವರಿ, ಇಂದು ಆರಂಭಗೊಂಡಿದೆ. ಕಾರ್ಯಾಗಾರವು ನಾಳೆ ಕೂಡ ನಡೆಯಲಿದೆ. ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಕಾಲೇಜು ಸಭಾಂಗಣದಲ್ಲಿ ಚಾಲನೆ ದೊರಕಿತು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ, ಜಿಲ್ಲಾಧಿಕಾರಿ ಎಸ್.ಜೆ.ಸೋಮಶೇಖರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿಂದುಮಣಿ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ನಿರ್ದೇಶಕರಾದ ಡಾ.ಲೋಕೇಶ್, ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿಶಾಲ್ ಕುಮಾರ್, ವೈದ್ಯಕೀಯ ಅಧೀಕ್ಷರಾದ ಡಾ.ಸೋಮಶೇಖರ್, ಜಿಲ್ಲಾ ಸರ್ಜನ್ ಡಾ.ನಂಜುಂಡಯ್ಯ, ಡಾ.ಅಭಿನಂದನ್, ಡಾ.ಧನಂಜಯ್ ಕುಮಾರ್, ಡಾ.ಮೋಹನ್ ಅಪ್ಪಾಜಿ, ಡಾ.ಉಮೇಶ್ ಬಾಬು, ಡಾ.ಕೇದಾರನಾಥ, ಡಾ.ಪುರುಷೋತ್ತಮ, ಕೆ.ಎಂ.ರೋಹಿಣಿ ಬಸವರಾಜು, ಡಾ.ಸುಮುಖ್ ಎ.ಟಿ. ಮತ್ತಿತರರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಕೊಡಗು ನ್ಯೂಸ್
ಟಿ.ಶೆಟ್ಟಿಗೇರಿಯ ವೃಂದ ಬೋಜಮ್ಮ ದೆಹಲಿಯ ಪಥಸಂಚಲನಕ್ಕೆ ಆಯ್ಕೆ ಮಡಿಕೇರಿ :ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲು ಜಿಲ್ಲೆಯ ಟಿ.ಶೆಟ್ಟಿಗೇರಿಯ ವೃಂದ ಬೋಜಮ್ಮ ಎಂ. ಅವರು ಆಯ್ಕೆಯಾಗಿದ್ದಾರೆ. ಉತ್ತರಖಾಂಡ್ ಡೆಹರಡೂನ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಇಂಜಿನಿಯರಿಂಗ್ ಪದವಿ ಪಡೆಯುತ್ತಿರುವ ವೃಂದ ಬೋಜಮ್ಮ ಅವರು ಜ.26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚಲನದಲ್ಲಿ ಭಾಗವಹಿಸಲಿದ್ದಾರೆ. ವೃಂದ ಬೋಜಮ್ಮ ಅವರು ಟಿ.ಶೆಟ್ಟಿಗೇರಿಯ ಮುಕ್ಕಾಟಿರ ನಂದ ಮುತ್ತಣ್ಣ ಹಾಗೂ ಸುಮಿತ್ರ ಅವರ ಪುತ್ರಿಯಾಗಿದ್ದಾಳೆ. ಕೊಡಗು ನ್ಯೂಸ್
ದೇವರಕೊಲ್ಲಿ ಬಳಿ ಲಾರಿ ಬೆಂಕಿಗಾಹುತಿ ಮೈಸೂರು ನಿಂದ ಮಂಗಳೂರಿಗೆ ಹೋಗುತ್ತಿದ್ದ ಲಾರಿ ದೇವರಕೊಲ್ಲಿ ಬಳಿ ಇಂದು ಬೆಳ್ಳಿಗೆ 6 ಗಂಟೆಗೆ ನಡೆದ ಘಟನೆ ಸ್ಥಳಕ್ಕೆ ಮಡಿಕೇರಿ ಅಗ್ನಿಶಾಮಕ ಸಿಬ್ಬಂದಿ ಭೇಟಿ ಪರಿಶೀಲನೆ ಹಸ್ಕ್ ತುಂಬಿಸಿಕೊಂಡು ಹೋಗುತ್ತಿದ್ದ ಲಾರಿ ಯಾವುದೇ ಅನಾಹುತ ಸಂಭವಿಸಿಲ್ಲ
ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಮಡಿಕೇರಿ ಗ್ರಾಮಾಂತರ ಠಾಣೆ ವತಿಯಿಂದ ಜಾಥಾ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ಮಡಿಕೇರಿ ಗ್ರಾಮಾಂತರ ಠಾಣೆಯ ವತಿಯಿಂದ ವ್ಯಾಪ್ತಿಯ ಮೂರ್ನಾಡು ಮತ್ತು ಪೆರಾಜೆ ಗ್ರಾಮಗಳಲ್ಲಿ ರಸ್ತೆ ಜಾಥಾ ಮತ್ತು ಸಭೆ ನಡೆಸಿ ವಿದ್ಯಾರ್ಥಿಗಳು ಮತ್ತು ನಾಗರಿಕರಿಗೆ ರಸ್ತೆ ಮತ್ತು ಸಂಚಾರ ಸುರಕ್ಷತೆ, ಸಂಚಾರ ಕಾನೂನು ಮುಂತಾದ ವಿಷಯಗಳ ಬಗ್ಗೆ ಮಾಹಿತಿ ನೀಡಿ ಜಾಗೃತಿ ಮೂಡಿಸಲಾಯಿತು. ಕೊಡಗು ನ್ಯೂಸ್
ಮಡಿಕೇರಿಯಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘದ ವಾರ್ಷಿಕೋತ್ಸವ ಹಾಗೂ2026ರ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು :ಕೊಡಗು ಜಿಲ್ಲಾ ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘದ ವತಿಯಿಂದ 5ನೇ ವರ್ಷದ ವಾರ್ಷಿಕೋತ್ಸವ ಹಾಗೂ 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಕಾರ್ಯಕ್ರಮ ಮಡಿಕೇರಿಯ ಆರೋಗ್ಯ ಕಚೇರಿಯಲ್ಲಿ ನಡೆಯಿತು. ಕಾರ್ಯಕ್ರಮವನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ.ಡಾ.ಸತೀಶ್ ಕುಮಾರ್ ಕೆ, ಎಂ. ರವರು ಗಿಡಕ್ಕೆ ನೀರು ಹಾಕುವ ಮೂಲಕ ಉದ್ಘಾಟಿಸಿ ಮಾತನಾಡುತ್ತಾ ಇಲಾಖೆಯಲ್ಲಿ ಆರೋಗ್ಯ ನಿರೀಕ್ಷಣಾಧಿಕಾರಿಗಳು ಬಹಳ ಅಗತ್ಯವಿದ್ದು ಇವರಿಂದಲೇ ಸಾಂಕ್ರಾಮಿಕ ರೋಗಗಳು ನಿರ್ಮೂಲನೆ ಮತ್ತು ನಿಯಂತ್ರಣಕ್ಕೆ ಬಂದಿರುವುದು ಶ್ಲಾಘನೀಯ ವೆಂದರು. ತಮ್ಮ ವೃತ್ತಿಗೆ ಚುತಿ ಬರದಂತೆ ಕರ್ತವ್ಯ ನಿರ್ವಹಿಸುವ ಮೂಲಕ ಸಂಘಟನೆ ಬೆಳೆಸಿಕೊಂಡು ಹೋಗುವಂತೆ ತಿಳಿಸಿದರು. ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಿ.ಎಲ್.ಶ್ರೀನಿವಾಸ್ ಮತ್ತು ಜಿಲ್ಲಾ ಎನ್ಫೋಸ್೯ ಮೆಂಟ್ ಅಧಿಕಾರಿಗಳಾದ ಡಾ.ಆನಂದ್.ಎನ್ ರವರು 2026ನೇ ಸಾಲಿನ ಕ್ಯಾಲೆಂಡರ್ ಬಿಡುಗಡೆ ಮಾಡಿ ಮಾತನಾಡಿ ಶುಭ ಕೋರಿದರು. ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ರಾಜ್ಯ ಆರೋಗ್ಯ ನಿರೀಕ್ಷಣಾಧಿಕಾರಿಗಳ ಸಂಘ ಕೊಡಗು ಜಿಲ್ಲಾ…
ಜಿಲ್ಲಾಮಟ್ಟದ ಹಾಕಿ ಪಂದ್ಯಾವಳಿ :ಕಕ್ಕಬ್ಬೆ ಕೇಂದ್ರ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು:ಚೇನಂಡ ಕುಟುಂಬಸ್ಥರು ಆಯೋಜಿಸಿದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗಮಟ್ಟದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಕೇಂದ್ರ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಪಾಲ್ಗೊಂಡು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಮೂರ್ನಾಡುವಿನ ಪ್ರೌಢಶಾಲಾ ಆಟದ ಮೈದಾನದಲ್ಲಿ 2026ರ ಕೊಡವ ಕೌಟುಂಬಿಕ ಹಾಕಿ ಪಂದ್ಯಾವಳಿ ಆಯೋಜಿಸಲಿರುವ ಕೊಕೇರಿಯ ಚೇನಂಡ ಕುಟುಂಬಸ್ಥರು ಆಯೋಜಿಸಿದ ಜಿಲ್ಲಾ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ಹಾಕಿ ಪಂದ್ಯಾವಳಿಯಲ್ಲಿ ಕಕ್ಕಬ್ಬೆ ಕೇಂದ್ರ ಪ್ರಾಥಮಿಕ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 5-1 ಗೋಲುಗಳ ಅಂತರದಿಂದ ವಿರಾಜಪೇಟೆಯ ಎಫ್ಎಂಸಿ ತಂಡವನ್ನು ಮಣಿಸಿ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದ್ದಾರೆ. ವಿದ್ಯಾರ್ಥಿಗಳ ಸಾಧನೆಗೆ ಶಾಲೆಯ ಆಡಳಿತ ಮಂಡಳಿ ಹಾಗೂ ಶಿಕ್ಷಕ ವೃಂದ ಅಭಿನಂದನೆ ಸಲ್ಲಿಸಿದ್ದಾರೆ.
ಕೆ.ಪಿ.ಸಿ.ಸಿ ಸೂಚನೆ ಮೇರೆಗೆ ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರರಾಗಿ ತೆನ್ನಿರ ಮೈನಾ ನೇಮಕ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರು ಹಾಗೂ ಕರ್ನಾಟಕ ಸರ್ಕಾರದ ಉಪಮುಖ್ಯಮಂತ್ರಿ ಗಳಾದ ಡಿ.ಕೆ.ಶಿವಕುಮಾರ್ ರವರ ಸೂಚನೆ ಮೇರೆಗೆ ತೆನ್ನಿರ ಮೈನಾ ರವರನ್ನು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ರನ್ನಾಗಿ ನೇಮಕ ಮಾಡಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷರಾದ ರಮೇಶ್ ಬಾಬು ರವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ದಿನಾಂಕ 1-1-2026 ರಿಂದ ಜಾರಿಗೆ ಬರುವಂತೆ ಹೊರಡಿಸಿರುವ ನೇಮಕಾತಿ ಆದೇಶದಲ್ಲಿ ಕಾಂಗ್ರೆಸ್ ಪಕ್ಷದ ಸಿದ್ದಾಂತಗಳಿಗೆ ಅನುಗುಣವಾಗಿ ಪಕ್ಷದ ವಕ್ತಾರರಾಗಿ ಜವಾಬ್ದಾರಿ ಯನ್ನು ನಿರ್ವಹಿಸಲು ಹಾಗೂ ಪಕ್ಷದ ಸೂಚನೆಗಳಿಗೆ ಅನುಗುಣವಾಗಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಳ್ಳಲು ರಮೇಶ್ ಬಾಬು ರವರು ಕೋರಿದ್ದಾರೆ.
