Author: Kodagu-admin

ದೋಣಿಗಲ್ – ಸೋಮವಾರಪೇಟೆ – ಮಡಿಕೇರಿ K SHIP – 4 ರಸ್ತೆ ನಿರ್ಮಾಣ ಕಾಮಗಾರಿಗೆ DPR ಸಿದ್ಧಪಡಿಸಲು 7 ಕೋಟಿ ರೂ ಅನುದಾನ ಬಿಡುಗಡೆ – ಟೆಂಡರ್ ಪ್ರಕ್ರಿಯೆ ಪೂರ್ಣ – ಕಂಪನಿ ಪ್ರತಿನಿಧಿಗಳೊಂದಿಗೆ ಶಾಸಕ ಡಾ.ಮಂತರ್ ಗೌಡ ಸಭೆ. K SHIP – 4 ಯೋಜನೆಯಡಿಯಲ್ಲಿ ಮಡಿಕೇರಿ – ದೋಣಿಗಲ್ (NH 75) ರಸ್ತೆ ಅಭಿವೃದ್ಧಿಗೆ ಕಳೆದ ಬಜೆಟ್ ನಲ್ಲಿ ಘೋಷಣೆಯಾಗಿದ್ದು, ರಸ್ತೆ ಅಭಿವೃದ್ಧಿ ಪಡಿಸುವ ಪ್ರಕ್ರಿಯೆಗಳ ತಾಂತ್ರಿಕ ಕಾರ್ಯಗಳು ಪ್ರಾರಂಭಗೊಂಡಿದ್ದು DPR ಸಿದ್ಧಪಡಿಸುವ ನಿಟ್ಟಿನಲ್ಲಿ ಈಗಾಗಲೇ 7 ಕೋಟಿ ರೂ ಅನುದಾನ ಬಿಡುಗಡೆಯಾಗಿದೆ. ಈ ಹಿನ್ನೆಲೆಯಲ್ಲಿ DPR ಸಿದ್ಧಪಡಿಸಲು ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡಿದೆ. ಬೆಂಗಳೂರಿನ ಶಾಸಕರ ಭವನದ ಶಾಸಕರ ಕಛೇರಿಯಲ್ಲಿ ಡಿಪಿಆರ್ (DPR) ಸಂಬಂಧಿಸಿದಂತೆ ಕಂಪನಿಯ ಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅಗತ್ಯ ಸೂಚನೆಗಳನ್ನು ನೀಡಲಾಗಿದೆ. ಈ ರಸ್ತೆಯಿಂದ ಕೊಡಗಿನ ಜನತೆಗೆ ಹಾಗೂ ವಾಣಿಜ್ಯೋದ್ಯಮ, ನೂತನ ಕೈಗಾರಿಕೆಗಳು, ಪ್ರವಾಸೋದ್ಯಮ ಅಭಿವೃದ್ಧಿಗೆ ಮತ್ತಷ್ಟು ಸಹಕಾರಿಯಾಗಲಿದೆ ಶಾಸಕ ಡಾ.ಮಂತರ್ ಗೌಡ ರವರು…

Read More

ಕೊಡಗು ಜಿಲ್ಲಾ ಜೆಡಿಎಸ್ ಅಧ್ಯಕ್ಷರಾಗಿ ಕಾರ್ಮಾಡು ಸುಬ್ಬಣ್ಣ ನೇಮಕ ಬೆಂಗಳೂರಿನ ಜೆ.ಪಿ.ಭವನದಲ್ಲಿ ನಡೆದ ಪಕ್ಷದ ಕೋರ್ ಕಮಿಟಿ ಸಭೆ ಕೋರ್ ಕಮಿಟಿ ಅಧ್ಯಕ್ಷ ಕೃಷ್ಣಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಇಂದು ನಡೆದ ಕೋರ್ ಕಮಿಟಿ ಸಭೆ ಅರಕಲಗೂಡು ಶಾಸಕ ಎ.ಮಂಜು, ಮಾಜಿ ಎಂಎಲ್ಸಿ ತಿಪ್ಪೆಸ್ವಾಮಿ, ನಾಡಗೌಡ, ಶರಣಪುರ ಕಂದಾಕೂರ್. ಸಿ.ಎಸ್.ಪುಟ್ಟರಾಜು ಮತ್ತೀತರ ಮುಖಂಡರು ಕೋರ್ ಕಮಿಟಿ ಸಭೆಯಲ್ಲಿ ಭಾಗಿ ಸಭೆಯಲ್ಲಿ ಕೊಡಗು ಜಿಲ್ಲಾಧ್ಯಕ್ಷರಾಗಿ ಕಾರ್ಮಾಡು ಸುಬ್ಬಣ್ಣ ಅವರ ನೇಮಕ ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಪಕ್ಷ ಗೆಲುವು ಸಾಧಿಸುವ ಹಿನ್ನೆಲೆಯಲ್ಲಿ ಕೊಡಗಿನಲ್ಲಿ ಪಕ್ಷವನ್ನು ಸಂಘಟಿಸುವ ಜವಾಬ್ದಾರಿಯನ್ನು ಸುಬ್ಬಣ್ಣ ಅವರಿಗೆ ವಹಿಸಿದ ಕೋರ್ ಕಮಿಟಿ ಬೆಂಗಳೂರಿನಲ್ಲಿ ಕೋರ್ ಕಮಿಟಿ ಸಭೆಗೆ ಜಿಲ್ಲೆಯಿಂದ ಜೆಡಿಎಸ್ ಪಕ್ಷದ ಕೊಡಗು ಜಿಲ್ಲಾ ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಕೆ.ಜಿ. ಜಾಶೀರ್, ಪೊನ್ನಂಪೇಟೆ ತಾಲೂಕು ಜೆಡಿಎಸ್ ಅಧ್ಯಕ್ಷ ಸುರೇಶ್, ಸೋಮವಾರಪೇಟೆ ಯುವ ಜೆಡಿಎಸ್ ಅಧ್ಯಕ್ಷ ಪ್ರವೀಣ್, ಲೋಹಿತ್ ಗೌಡ, ಸೇರಿದಂತೆ ಮತ್ತೀತರರು ತೆರಳಿದ್ದರು ಜೆಡಿಎಸ್ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡ ಕಾರ್ಮಾಡು ಸುಬ್ಬಣ್ಣ ಅವರು…

Read More

ಎಸ್‌ಎಸ್‌ಎಫ್ ನೆಲ್ಲಿಹುದಿಕೇರಿ ಸೆಕ್ಟರ್ 2026-27ನೇ ಸಾಲಿನ ನೂತನ ಕಾರ್ಯಾಕಾರಿಣಿ ಸಮಿತಿ ಅಸ್ತಿತ್ವಕ್ಕೆ ನೆಲ್ಲಿಹುದಿಕೇರಿ: ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ (ಎಸ್‌ಎಸ್‌ಎಫ್) ನೆಲ್ಲಿಹುದಿಕೇರಿ ಸೆಕ್ಟರ್‌ನ 2026-27ನೇ ಸಾಲಿನ ಪುನರ್ರಚನಾ ಕೌನ್ಸಿಲ್ ಜನವರಿ 5, ಸೋಮವಾರದಂದು ನೆಲ್ಲಿಹುದಿಕೇರಿ ಸಾಂತ್ವನ ಭವನದಲ್ಲಿ ಅತ್ಯಂತ ವ್ಯವಸ್ಥಿತವಾಗಿ ಜರುಗಿತು. ಸಂಘಟನಾತ್ಮಕ ಬಲವರ್ಧನೆ ಮತ್ತು ವಿದ್ಯಾರ್ಥಿ ಚಟುವಟಿಕೆಗಳಿಗೆ ಹೊಸ ವೇಗ ನೀಡುವ ನಿಟ್ಟಿನಲ್ಲಿ ನೂತನ ಸಾರಥಿಗಳನ್ನು ಈ ಸಂದರ್ಭದಲ್ಲಿ ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು. ನೂತನ ಪದಾಧಿಕಾರಿಗಳು (2026-27): ಅಧ್ಯಕ್ಷರು: ಅಬ್ದುಲ್ ಹಕೀಂ ಅನ್ವಾರಿ ಅಲ್ ಅಹ್ಸನಿ ನೆಲ್ಲಿಹುದಿಕೇರಿ ಪ್ರಧಾನ ಕಾರ್ಯದರ್ಶಿ: ಮುಹಮ್ಮದ್ ರಿಯಾಜ್ ನೆಲ್ಲಿಹುದಿಕೇರಿ ಹಣಕಾಸು ಕಾರ್ಯದರ್ಶಿ: ಇಸ್ಹಾಕ್ ಕಂಡಕ್ಕರೆ ಉಪಾಧ್ಯಕ್ಷರು: ಇಬ್ರಾಹಿಂ ಅನ್ವಾರಿ ಸಖಾಫಿ ಕಂಡಕ್ಕರೆ ಹಾಗೂ ಸಂಘಟನೆಯ ವಿವಿಧ ವಿಭಾಗಗಳ ಉಸ್ತುವಾರಿಗಾಗಿ ಕಾರ್ಯದರ್ಶಿಗಳು ಕನ್ವೀನರ್ಗಳು ಮತ್ತು ಕಾರ್ಯಕಾರಿ ಸಮಿತಿ ಸದಸ್ಯರನ್ನು ಒಳಗೊಂಡ ಬಲಿಷ್ಠ ತಂಡವನ್ನು ರಚಿಸಲಾಯಿತು. ಎಸ್‌ಎಸ್‌ಎಫ್ ಕೊಡಗು ಜಿಲ್ಲಾ ಸಮಿತಿ ಹಾಗೂ ಸೋಮವಾರಪೇಟೆ ಡಿವಿಷನ್ ಸಮಿತಿಯ ಪ್ರಮುಖ ನಾಯಕರ ಘನ ಉಪಸ್ಥಿತಿಯಲ್ಲಿ ಈ ಆಯ್ಕೆ ಪ್ರಕ್ರಿಯೆಯು ಸಂಪನ್ನಗೊಂಡಿತು.…

Read More

ನಾಪೋಕ್ಲು:ಬೇತು ಅಂಗನವಾಡಿ ಕೇಂದ್ರದಲ್ಲಿ ಯಶಸ್ವಿಯಾಗಿ ನಡೆದ ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು :ನಾಪೋಕ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೇತು ಗ್ರಾಮದ ಅಂಗನವಾಡಿ ಕೇಂದ್ರದಲ್ಲಿ ಅನೀಮಿಯ ಕಾರ್ಯಗಾರ ಮತ್ತು ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿಯಾಗಿ ನಡೆಯಿತು. ಜಿಲ್ಲಾ ಅರೋಗ್ಯ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಆಯೋಜಿಸಲಾದ ಶಿಬಿರದಲ್ಲಿ ಮಕ್ಕಳ ರಕ್ತಹೀನತೆ,ಅಪೌಷ್ಟಿಕತೆ ಯ ತಪಾಸಣೆ ನಡೆಸಲಾಯಿತು.ಶಿಬಿರದಲ್ಲಿ ಹಿಮೋಗ್ಲೋಬಿನ್ ಕಡಿಮೆ ಇರುವ ಮಕ್ಕಳಿಗೆ ಔಷಧಿಗಳನ್ನು ವಿತರಿಸಲಾಯಿತು.ಐದು ವರ್ಷದೊಳಗಿನ ಮಕ್ಕಳಿಗೆ ನೀಡಬೇಕಾದ ಆಹಾರ ಪದ್ಧತಿ, ಸರಿಯಾದ ಸಮಯಕ್ಕೆ ಅನೀಮಿಯ ಆರೋಗ್ಯ ತಪಾಸಣೆ ನಡೆಸುವ ಕುರಿತು ಆರೋಗ್ಯ ಇಲಾಖೆ ಅಧಿಕಾರಿಗಳು ಪೋಷಕರಿಗೆ ತಿಳಿಸಿದರು. ಶಿಬಿರದಲ್ಲಿ ಬೇತು ಅಂಗನವಾಡಿ ಕೇಂದ್ರಕ್ಕೆ ಒಳಪಡುವ ಐದು ವರ್ಷದೊಳಗಿನ ಮಕ್ಕಳನ್ನು ಪೋಷಕರು ಕರೆತಂದು ಆರೋಗ್ಯ ತಪಾಸಣೆ ನಡೆಸಿ ಶಿಬಿರದ ಪ್ರಯೋಜನ ಪಡೆದುಕೊಂಡರು. ಶಿಬಿರದಲ್ಲಿ ಆರ್ ಬಿಎಸ್ ಕೆ ತಂಡದ ವೈದ್ಯಾಧಿಕಾರಿ ಡಾ. ಶೈಮಾ, ಶುಶ್ರೂಷಕಿ ಮಮತ ಮಕ್ಕಳ ಆರೋಗ್ಯ ತಪಾಸಣೆ ನಡೆಸಿದರು. ಈ ಸಂದರ್ಭ ಬೇತು…

Read More

ಕುಶಾಲನಗರ ಪಟ್ಟಣ ವೃತ್ತ ನಿರೀಕ್ಷಕರಾಗಿ ಪ್ರದೀಪ್ ನೇಮಕ ಕುಶಾಲನಗರ ಪಟ್ಟಣ ಪೊಲೀಸ್ ಠಾಣೆಯ ವೃತ್ತ ನಿರೀಕ್ಷಕರಾಗಿ ಬಿ.ಆರ್ ಪ್ರದೀಪ್ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶಹೊರಡಿಸಿದೆ.ಇವರು ಈ ಹಿಂದೆ 2016ರಲ್ಲಿ ಮಡಿಕೇರಿ ಗ್ರಾಮಾಂತರ ವೃತ್ತ ನಿರೀಕ್ಷಕರಾಗಿ ಕಾರ್ಯನಿರ್ವಹಿಸಿದ್ದರು.

Read More

ಕೋಯಿನಾಡು ವಿವಿಧ ಅಂಗನವಾಡಿ ಕೇಂದ್ರಗಳಲ್ಲಿಯಶಸ್ವಿಯಾಗಿ ನಡೆದ ಅನೀಮಿಯ ಅರಿವು ಕಾರ್ಯಾಗಾರ ಮತ್ತು ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು : ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವತಿಯಿಂದ ಮಡಿಕೇರಿ ತಾಲೂಕಿನ ಕೋಯಿನಾಡು ವ್ಯಾಪ್ತಿಯ ಚಡಾವು,ಕೋಯಿನಾಡು ಒಂದು ಮತ್ತು ಎರಡನೇ ಅಂಗನವಾಡಿ ಕೇಂದ್ರಗಳಲ್ಲಿ ಅನೀಮಿಯ ಅರಿವು ಕಾರ್ಯಗಾರ ಮತ್ತು ಮಕ್ಕಳ ಆರೋಗ್ಯ ತಪಾಸಣಾ ಶಿಬಿರ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ಕಾರ್ಯಕ್ರಮದಲ್ಲಿ ಮಡಿಕೇರಿ ತಾಲೂಕು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ ಅಶೋಕ್ ರವರು ಮಾತನಾಡಿ ಮಕ್ಕಳಲ್ಲಿನ ಅಪೌಷ್ಟಿಕತೆ,ಅಶುಚಿತ್ವ, ರಕ್ತಹೀನತೆಯನ್ನು ತಡೆಗಟ್ಟುವ ಸಲುವಾಗಿ ಅನೀಮಿಯ ತಪಾಸಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಆರೋಗ್ಯ ಇಲಾಖೆ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಪ್ರಾರಂಭಿಸಿರುವ ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಪೋಷಕರು ತಮ್ಮ ಐದು ವರ್ಷದೊಳಗಿನ ಮಕ್ಕಳನ್ನು ಕರೆತಂದು ಆರೋಗ್ಯ ತಪಾಸಣೆ ನಡೆಸುವ ಮೂಲಕ ಮಕ್ಕಳ ಬೆಳವಣಿಗೆಗೆ ಸಹಕರಿಸಿ ಶಿಬಿರದ ಪ್ರಯೋಜನ ಪಡೆದುಕೊಳ್ಳಬೇಕೆಂದು…

Read More

ನಾಪೋಕ್ಲುವಿನಲ್ಲಿ ರಸ್ತೆ ಸುರಕ್ಷತಾ ಸಪ್ತಾಹದ ಪ್ರಯುಕ್ತ ಪೊಲೀಸರಿಂದ ಜನಜಾಗೃತಿ ಜಾಥಾ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು : ಕೊಡಗು ಜಿಲ್ಲಾ ಪೊಲೀಸ್ ನಾಪೋಕ್ಲು ಪೊಲೀಸ್ ಠಾಣೆಯ ವತಿಯಿಂದ ರಸ್ತೆ ಸುರಕ್ಷತಾ ಸಪ್ತಾಹದ ಅಂಗವಾಗಿ ವಿವಿಧ ಶಾಲೆಗಳ ಸಹಯೋಗದೊಂದಿಗೆ ನಾಪೋಕ್ಲುವಿನಲ್ಲಿ ಜನಜಾಗೃತಿ ಜಾಥಾ ಕಾರ್ಯಕ್ರಮ ನಡೆಸಲಾಯಿತು. ನಾಪೋಕ್ಲು ಪಟ್ಟಣದ ಮಾರುಕಟ್ಟೆ ಬಳಿಯಿಂದ ಪಟ್ಟಣದ ಮುಖ್ಯಬೀದಿಗಳಲ್ಲಿ ಜಾಥಾ ನಡೆಸಿದ ವಿದ್ಯಾರ್ಥಿಗಳು ಹಾಗೂ ಪೊಲೀಸರು ರಸ್ತೆ ಸುರಕ್ಷತಾ ನಿಯಮಗಳ ವಿವಿಧ ಘೋಷವಾಕ್ಯ ದೊಂದಿಗೆ ಸಾರ್ವಜನಿಕರಿಗೆ ಅರಿವು ಮೂಡಿಸಿದರು. ನಾಪೋಕ್ಲು ಠಾಣಾಧಿಕಾರಿ ಪಿ.ಜಿ. ರಾಘವೇಂದ್ರ ಅವರು ಮಾತನಾಡಿ ವಾಹನ ಚಾಲನೆಯ ಸಂದರ್ಭ ರಸ್ತೆ ಸುರಕ್ಷತಾ ಪಾಲನೆ, ಸಂಚಾರ ಕಾನೂನು, ರಸ್ತೆ ಅಪಘಾತದ ಸಂದರ್ಭ ನಾಗರಿಕರು ತೆಗೆದುಕೊಳ್ಳಬೇಕಾದ ಜವಾಬ್ದಾರಿಯ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಈ ಸಂದರ್ಭ ನಾಪೋಕ್ಲು ಪೊಲೀಸ್ ಠಾಣೆಯ ಸಹಾಯಕ ಠಾಣಾಧಿಕಾರಿ ಫ್ರಾನ್ಸಿಸ್, ನಾಪೋಕ್ಲುವಿನ ವಿವಿಧ ಶಾಲೆಯ ಶಿಕ್ಷಕರು, ವಿದ್ಯಾರ್ಥಿಗಳು ಹಾಗೂ ನಾಪೋಕ್ಲು ಪೊಲೀಸ್ ಠಾಣೆಯ ಸಿಬ್ಬಂದಿಗಳು ಪಾಲ್ಗೊಂಡಿದ್ದರು.

Read More

ಮಡಿಕೇರಿ : ಆರ್.ವಿ.ಎನ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ ಅಮ್ಮತ್ತಿ ಪ್ರಾಥಮಿಕ ಶಾಲಾ ಮೈದಾನದಲಿ ಆಯೋಜಿಸಲಾಗಿದ್ದ ಅಮ್ಮತ್ತಿ ಒಂಟಿಯಂಗಡಿ ಪ್ರೀಮಿಯರ್ ಲೀಗ್ 2026 ರ ಚಾಂಪಿಯನ್ ಪಟ್ಟವನ್ನು ಎ.ಎಫ್.ಸಿ ತಂಡ ತನ್ನದಾಗಿಸಿಕೊಂಡರೆ. ಸಾಕರ್ ಯುನೈಟೆಡ್ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿತು. ಬಿಡ್ಡಿಂಗ್ ಮಾದರಿಯಲ್ಲಿ ಆಯೋಜಿಸಲಾಗಿದ್ದ ಈ ಪಂದ್ಯಾವಳಿಯು ಜ.3ರಿಂದ ಅಮ್ಮತ್ತಿ ಪ್ರಾಥಮಿಕ ಶಾಲಾ ಮೈದಾನದಲ್ಲಿ ನಡೆಯಿತು. ಪಂದ್ಯಾಟದಲ್ಲಿ ಸಿವಿ ಯುನೈಟೆಡ್ ಒಂಟಿಯಂಗಡಿ, ಸಿ.ವೈ.ಸಿ ಒಂಟಿಯಂಗಡಿ, ಬಿ.ವೈ.ಸಿ ಇಂಜಲಗೆರೆ, ಎ.ಎಫ್.ಸಿ ಅಮ್ಮತ್ತಿ, 3 ಸ್ಟಾರ್ ಅಮ್ಮತ್ತಿ, ಸಾಕರ್ ಯುನೈಟೆಡ್ ಅಮ್ಮತ್ತಿ, ಭಗವತಿ ಶಾಮಿಯಾನ, ವೆಲ್ ಬಾಯ್ಸ್ ಒಳಗೊಂಡಂತೆ 8 ತಂಡಗಳು ಭಾಗವಹಿಸಿದ್ದವು. ಭಾಗವಹಿಸಿದ್ದ 8 ತಂಡಗಳ ಪೈಕಿ ಸಿವಿ ಯುನೈಟೆಡ್, ಎ.ಎಫ್.ಸಿ, ಬಿ.ವೈ.ಸಿ, ಸಾಕರ್ ಯುನೈಟೆಡ್ ಈ ನಾಲ್ಕು ತಂಡಗಳು ಸೆಮಿಫೈನಲ್ ಪ್ರವೇಶಿಸಿದವು. ಬಳಿಕ ಮೊದಲನೇ ಸೆಮಿಫೈನಲ್ ಪಂದ್ಯಾಟದಲ್ಲಿ ಸಾಕರ್ ಯುನೈಟೆಡ್ ಹಾಗೂ ಬಿ ವೈ ಸಿ ಮುಖಾಮುಖಿಯಾಗಿ ಸಾಕರ್ ಯುನೈಟೆಡ್ ತಂಡವು 2-0 ಗೋಲ್ ಗಳಿಂದ ಬಿ.ವೈ.ಸಿ ತಂಡವನ್ನು ಮಣಿಸಿ ಫೈನಲ್ ಪ್ರವೇಶಿಸಿತು. ಸಿ…

Read More

ಬೆಟ್ಟಗೇರಿಯಲ್ಲಿ ಎ.ಎಸ್.ಪೊನ್ನಣ್ಣ ಅವರಿಂದ ರಸ್ತೆ ಕಾಮಗಾರಿಗೆ ಚಾಲನೆ ಕ್ಷೇತ್ರ ವ್ಯಾಪ್ತಿಯಲ್ಲಿ 40 ಕೋಟಿ ವೆಚ್ಚದಲ್ಲಿ ಒಟ್ಟು 252 ಕಾಮಗಾರಿಗಳು ಮಡಿಕೇರಿ ಜ.06(ಕರ್ನಾಟಕ ವಾರ್ತೆ):-ತಾಲೂಕಿನ ಬೆಟ್ಟಗೇರಿಯಲ್ಲಿ ಶಾಸಕರ ವಿಶೇಷ ಅನುದಾನದಲ್ಲಿ ನಿರ್ಮಾಣವಾಗುತ್ತಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೆÇನ್ನಣ್ಣ ಅವರು ಭೂಮಿ ಪೂಜೆ ನೆರವೇರಿಸುವ ಮೂಲಕ ಚಾಲನೆ ನೀಡಿದರು. ಕೆಆರ್‍ಐಡಿಎಲ್ ಸಂಸ್ಥೆ ಮೂಲಕ ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 40 ಕೋಟಿ ವೆಚ್ಚದಲ್ಲಿ ಒಟ್ಟು 252 ಕಾಮಗಾರಿಗಳನ್ನು ಎ.ಎಸ್.ಪೆÇನ್ನಣ್ಣ ಅವರು ಜನರ ಕೋರಿಕೆಯ ಮೇರೆಗೆ ಗುರುತಿಸಿ ಅನುದಾನದ ಹಂಚಿಕೆ ಮಾಡಿದ್ದಾರೆ. ಕ್ಷೇತ್ರದ ಕಟ್ಟಕಡೆಯ ವ್ಯಕ್ತಿಗೂ ಮೂಲಭೂತ ವ್ಯವಸ್ಥೆ ದೊರಕಬೇಕು ಎಂಬ ಆಶಯದೊಂದಿಗೆ ಆದ್ಯತೆ ಮೇರೆಗೆ ಗ್ರಾಮೀಣ ಪ್ರದೇಶಗಳನ್ನು ಗುರಿಯಾಗಿಸಿ ಕಾಮಗಾರಿಗೆ ಅನುದಾನ ಒದಗಿಸಲಾಗಿದೆ ಎಂದು ಅವರು ತಿಳಿಸಿದರು. ಸಾರ್ವಜನಿಕರಿಂದ ಮತ್ತಷ್ಟು ಕೋರಿಕೆಗಳು ಸಲ್ಲಿಕೆಯಾಗಿದ್ದು, ಅವುಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು ಎಂದು ಎ.ಎಸ್.ಪೆÇನ್ನಣ್ಣ ನವರು ಮಾಹಿತಿ ನೀಡಿದರು. ಈ ಸಂಧರ್ಭದಲ್ಲಿ ಪ್ರಮುಖರಾದ ಇಸ್ಮಾಯಿಲ್, ರಾಜೀವ್ ಗಾಂಧಿ…

Read More

ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ ಪ್ರತ್ಯೇಕ ಪ್ರಕರಣದಲ್ಲಿ ಅಸ್ಸಾಂ ರಾಜ್ಯದ ಇಬ್ಬರ ಬಂಧನ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು :ಕೊಡಗು ಜಿಲ್ಲಾ ಪೊಲೀಸ್ ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಪ್ರತ್ಯೇಕ ಪ್ರಕರಣಗಳಲ್ಲಿ ಅಸ್ಸಾಂ ರಾಜ್ಯದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅಸ್ಸಾಂ ರಾಜ್ಯದ ದರಾಂಗ್ ಜಿಲ್ಲೆಯ ನಿವಾಸಿ ಮುಸ್ತಫ ಅಲಿ (25) ಇದೆ ಜಿಲ್ಲೆಯ ಮಾಜೂಮ್ ಅಲಿ (34) ಬಂಧಿತ ಆರೋಪಿಗಳಾಗಿದ್ದಾರೆ. ದಿನಾಂಕ 6-01-2026ರಂದು ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಹೊದವಾಡ ಗ್ರಾಮದ ರಾಫೆಲ್ಸ್ ಶಾಲೆ ಬಳಿಯ ಬಸ್ ತಂಗುದಾಣದಲ್ಲಿ ಹಾಗೂ ಕುಂಬಳದಾಳು ಗ್ರಾಮದ ಕುಯ್ಯಂಗೇರಿ ರಸ್ತೆಯಲ್ಲಿರುವ ಪ್ರಯಾಣಿಕರ ಬಸ್ ತಂಗುದಾಣದಲ್ಲಿ ಆರೋಪಿಗಳಾದ ಮುಸ್ತಫ ಅಲಿ ಹಾಗೂ ಮಾಜೂಮ್ ಅಲಿ ಅಕ್ರಮ ಮಾದಕ ವಸ್ತು ಗಾಂಜಾವನ್ನು ಮಾರಾಟ ಮಾಡುತ್ತಿರುವ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ನಾಪೋಕ್ಲು ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಕುಯ್ಯಂಗೇರಿ ಗ್ರಾಮದ ಬಸ್…

Read More