Author: Kodagu-admin

ಮಡಿಕೇರಿ: ಕೊಡಗು ಪತ್ರಕತ೯ರ ಸಂಘ(ರಿ)ದ ವಾಷಿ೯ಕ ಮಹಾಸಭೆಯು ನಗರದ ಪತ್ರಿಕಾಭವನ ಸಭಾಂಗಣದಲ್ಲಿ ನಡೆಯಿತು. ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಾಧಕ ಪತ್ರಕರ್ತರನ್ನು ಸನ್ಮಾನಿಸಲಾಯಿತು. ರಾಜ್ಯ ಚೇಂಬರ್ ಆಫ್ ಕಾಮಸ್೯ ವತಿಯಿಂದ ಅತ್ಯುತ್ತಮ ಉದ್ಯಮಕ್ಕಾಗಿನ ಪ್ರಶಸ್ತಿಗೆ ಭಾಜನರಾದ ಶಕ್ತಿ ಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್, ಕನ್ನಡ ಭವನ ಸಂಸ್ಥೆಯಿಂದ ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾದ ಶಕ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ. ಅನಂತಶಯನ, ತಮಿಳು ಪತ್ರಕತ೯ರ ಸಂಘದ ಪ್ರಶಸ್ತಿಗೆ ಭಾಜನರಾದ ಎಸ್.ಎಂ.ಮುಬಾರಕ್, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಕ್ಕೆ ಭಾಜನರಾಗಿದ್ದ ಬಿ.ಸಿ. ದಿನೇಶ್, ಎನ್ ಎಸ್ ಎಸ್ ಸಂಸ್ಥೆಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪಡೆದ ಡಾ. ಎಂ.ಎನ್. ವನಿತ್ ಕುಮಾರ್, ಬುದ್ದ ನಾಡ ಭೂಷಣ ಪ್ರಶಸ್ತಿ ಪಡೆದ ಜಯಪ್ಪ ಹಾನಗಲ್ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು. ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ ಮಾತನಾಡಿ 15 ತಿಂಗಳಿನಿಂದ ಸಂಘವು ವ್ಯೆವಿಧ್ಯಮಯ ಕಾರ್ಯಕ್ರಮಗಳ ಮೂಲಕ ಸಮಾಜ ಮುಖಿಯಾಗಿದೆ. ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಉತ್ತಮ…

Read More

ಕುಶಾಲನಗರ: ನಿನ್ನೆ ಮೊನ್ನೆಯವರೆಗೂ ಮನೆಯಂಗಳದಲ್ಲಿ ನಗುತ್ತಾ, ಓಡಾಡುತ್ತಾ ಆಟವಾಡುತ್ತಿದ್ದ ನಾಲ್ಕು ವರ್ಷದ ಪುಟ್ಟ ಕಂದಮ್ಮ ಅಪೂರ್ವ, ದುರಾದೃಷ್ಟವಶಾತ್ ಗೇಟ್ ಬಿದ್ದು ಮೃತಪಟ್ಟಿರುವ ಘಟನೆ ಬಸವನಹಳ್ಳಿ ಹಾಡಿಯಲ್ಲಿ ಇಡೀ ಕುಟುಂಬವನ್ನೇ ಕಣ್ಣೀರಿನಲ್ಲಿ ಮುಳುಗಿಸಿದೆ. ಮಗುವಿನ ಅಗಲಿಕೆಯ ನೋವಿನಿಂದ ಕಂಗೆಟ್ಟಿರುವ ಕುಟುಂಬದ ಮನೆಗೆ ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಭೇಟಿ ನೀಡಿ, ಪುಟ್ಟ ಅಪೂರ್ವನಿಗೆ ಅಂತಿಮ ನಮನ ಸಲ್ಲಿಸಿದರು. ಬಳಿಕ ದುಃಖತಪ್ತ ಪೋಷಕರನ್ನು ಭೇಟಿಯಾಗಿ, ಅವರ ನೋವಿಗೆ ಸಾಂತ್ವನ ಹೇಳಿದರು. ಮಗುವನ್ನು ಕಳೆದುಕೊಂಡ ತಾಯಿಯ ಕಣ್ಣೀರು… ತಂದೆಯ ಮೌನದ ನೋವು… ಕಂಡು ಶಾಸಕ ಮಂತರ್ ಗೌಡ ಭಾವುಕರಾದರು. ಇಂತಹ ದುರಂತ ಮತ್ತೊಂದು ಕುಟುಂಬಕ್ಕೆ ಎದುರಾಗದಂತೆ ಅಗತ್ಯ ಕ್ರಮಗಳ ಕುರಿತು ಅಧಿಕಾರಿಗಳಿಂದ ಘಟನೆಯ ಸಂಪೂರ್ಣ ಮಾಹಿತಿ ಪಡೆದುಕೊಂಡರು. “ನಾಲ್ಕು ವರ್ಷದ ಕಂದಮ್ಮನನ್ನು ಕಳೆದುಕೊಂಡಿರುವುದು ಅತ್ಯಂತ ದುಃಖದ ಸಂಗತಿ. ಅಪೂರ್ವನ ಕುಟುಂಬದ ಈ ಕಷ್ಟದ ಸಮಯದಲ್ಲಿ ಅವರೊಂದಿಗೆ ಸದಾ ಬೆಂಬಲವಾಗಿ ನಿಲ್ಲುತ್ತೇನೆ” ಎಂದು ಪೋಷಕರಿಗೆ ಧೈರ್ಯ ತುಂಬಿದರು. ನಗುತ್ತಾ ಓಡಾಡಬೇಕಿದ್ದ ಪುಟ್ಟ ಹೆಜ್ಜೆಗಳು ಶಾಶ್ವತವಾಗಿ ನಿಂತುಹೋಗಿದ್ದು,…

Read More

ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಆಟೋ ಚಾಲಕನಿಗೆ ₹12 ಸಾವಿರ ದಂಡ ಸಿದ್ದಾಪುರ: ಮದ್ಯಪಾನ ಮಾಡಿ ಆಟೋ ರಿಕ್ಷಾ ಚಲಾಯಿಸುತ್ತಿದ್ದ ಚಾಲಕನ ವಿರುದ್ಧ ಕೊಡಗು ಜಿಲ್ಲಾ ಪೊಲೀಸರು ಕ್ರಮ ಕೈಗೊಂಡಿದ್ದು, ನ್ಯಾಯಾಲಯವು ₹12,000 ದಂಡ ವಿಧಿಸಿದೆ. ಸಿದ್ದಾಪುರ ವ್ಯಾಪ್ತಿಯಲ್ಲಿ ಪೊಲೀಸರು ನಡೆಸಿದ ತಪಾಸಣೆ ವೇಳೆ ಮದ್ಯಪಾನ ಮಾಡಿ ವಾಹನ ಚಲಾಯಿಸುತ್ತಿದ್ದ ಆಟೋ ಚಾಲಕ ಪತ್ತೆಯಾಗಿದ್ದಾನೆ. ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಪಿಸಿ ಹಾಗೂ ಜೆಎಂಎಫ್‌ಸಿ ನ್ಯಾಯಾಲಯ, ಮಡಿಕೇರಿ ₹12 ಸಾವಿರ ದಂಡ ವಿಧಿಸಿದೆ. ಮದ್ಯಪಾನ ಮಾಡಿ ವಾಹನ ಚಲಾಯಿಸುವುದರಿಂದ ಚಾಲಕನಷ್ಟೇ ಅಲ್ಲದೆ ಇತರ ವಾಹನ ಸವಾರರು ಹಾಗೂ ಸಾರ್ವಜನಿಕರ ಜೀವಕ್ಕೂ ಅಪಾಯ ಉಂಟಾಗುತ್ತದೆ. ಈ ಹಿನ್ನೆಲೆಯಲ್ಲಿ ಮದ್ಯಪಾನ ಮಾಡಿ ವಾಹನ ಚಲಾಯಿಸುವವರ ವಿರುದ್ಧ ಕಠಿಣ ಕಾನೂನು ಕ್ರಮ ಮುಂದುವರಿಸಲಾಗುವುದು ಎಂದು ಕೊಡಗು ಜಿಲ್ಲಾ ಪೊಲೀಸರು ಎಚ್ಚರಿಸಿದ್ದಾರೆ. “ಮದ್ಯಪಾನ ಮಾಡಿ ವಾಹನ ಚಲಾಯಿಸಬೇಡಿ – ನಿಮ್ಮ ಜೀವ, ಮತ್ತೊಬ್ಬರ ಜೀವದ ಜೊತೆ ಆಟವಾಡಬೇಡಿ” ಎಂದು ಪೊಲೀಸರು ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ.

Read More

ಮಾಲ್ದಾರೆ ಗ್ರಾಮದಲ್ಲಿ ಆತಂಕ ಮೂಡಿಸಿದ್ದ ಚಿರತೆ ಸೆರೆ ಅರಣ್ಯ ಇಲಾಖೆಯ ಯಶಸ್ವಿ ಕಾರ್ಯಾಚರಣೆ; ಗ್ರಾಮಸ್ಥರಲ್ಲಿ ನಿಟ್ಟುಸಿರು ಮಾಲ್ದಾರೆ: ಮಾಲ್ದಾರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡುಗದ್ದೆ ಜಯಾ ಅವರ ತೋಟದಲ್ಲಿ ಆ.6ರಂದು ಚಿರತೆ ದಾಳಿ ನಡೆಸಿ ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಘಟನೆ ಹಿನ್ನೆಲೆಯಲ್ಲಿ ಅರಣ್ಯ ಇಲಾಖೆ ಕಾರ್ಯಾಚರಣೆ ಕೈಗೊಂಡಿದ್ದು, ಆ.7ರಂದು ಶುಕ್ರವಾರ ಚಿರತೆಯನ್ನು ಯಶಸ್ವಿಯಾಗಿ ಸೆರೆಹಿಡಿಯಲಾಗಿದೆ. ಕುಶಾಲನಗರ ವಲಯ, ಆನೆಚೌಕೂರು ವಲಯ ಹಾಗೂ ತಿತಿಮತಿ ವಲಯದ ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಆರ್‌ಆರ್‌ಟಿ ತಂಡದ ಸಿಬ್ಬಂದಿ ಜಂಟಿಯಾಗಿ ಕಾರ್ಯಾಚರಣೆ ನಡೆಸಿ ಚಿರತೆಯನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಚಿರತೆ ಸೆರೆ ಸಿಕ್ಕಿರುವುದರಿಂದ ಮಾಲ್ದಾರೆ ಸುತ್ತಮುತ್ತಲಿನ ಗ್ರಾಮಸ್ಥರು ನಿಟ್ಟುಸಿರು ಬಿಡುವಂತಾಗಿದೆ. ಇನ್ನು ಮುಂದೆ ಗ್ರಾಮಸ್ಥರು ಹಾಗೂ ಕೂಲಿ ಕಾರ್ಮಿಕರು ಯಾವುದೇ ಆತಂಕವಿಲ್ಲದೆ ತಮ್ಮ ಕೆಲಸ ಕಾರ್ಯಗಳಿಗೆ ತೆರಳಬಹುದು ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

Read More

ಆ.7: ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಅತ್ತೂರು ಗ್ರಾಮದ ತಿರುಮಲ ಎಸ್ಟೇಟ್‌ನಲ್ಲಿ ಕಾನೂನುಬಾಹಿರವಾಗಿ ನಿಷೇಧಿತ ಮಾದಕ ವಸ್ತುವಾದ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಅಸ್ಸಾಂ ಮೂಲದ ಐವರು ವಲಸೆ ಕಾರ್ಮಿಕರನ್ನು ಗೋಣಿಕೊಪ್ಪಲು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ ಸುಮಾರು 6 ಕೆ.ಜಿ. 950 ಗ್ರಾಂ ಒಣಗಿದ ಗಾಂಜಾ ಹಾಗೂ ಪ್ಯಾಕಿಂಗ್‌ಗೆ ಬಳಸುತ್ತಿದ್ದ ಪ್ಲಾಸ್ಟಿಕ್ ಕವರ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಪೊಲೀಸರಿಗೆ ದೊರೆತ ಖಚಿತ ಮಾಹಿತಿಯ ಮೇರೆಗೆ 2026ರ ಆಗಸ್ಟ್ 5ರಂದು ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಲಾಗಿದೆ. ಈ ಸಂಬಂಧ ಗೋಣಿಕೊಪ್ಪಲು ಪೊಲೀಸ್ ಠಾಣೆಯಲ್ಲಿ ಮೊ.ಸಂ.100/2026 ದಾಖಲಿಸಲಾಗಿದ್ದು, ಎನ್‌ಡಿಪಿಎಸ್ ಕಾಯ್ದೆ 1985ರ ಕಲಂ 20(b)(ii)(A) ಅಡಿಯಲ್ಲಿ ಪ್ರಕರಣ ದಾಖಲಿಸಿ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಕಾರ್ಯಾಚರಣೆ ವಿರಾಜಪೇಟೆ ಉಪ ವಿಭಾಗದ ಡಿವೈಎಸ್‌ಪಿ ಮಹೇಶ್ ಕುಮಾರ್ ಎಸ್. ಅವರ ಉಸ್ತುವಾರಿಯಲ್ಲಿ, ಗೋಣಿಕೊಪ್ಪಲು ವೃತ್ತದ ಸಿಐ ಶಿವರಾಜ್ ಆರ್. ಹಾಗೂ ಪಿಎಸ್‌ಐ ಕಾಳೇಗೌಡ ಅವರ ನೇತೃತ್ವದಲ್ಲಿ ನಡೆದಿದ್ದು, ತನಿಖಾ ತಂಡದ ಅಧಿಕಾರಿಗಳು ಮತ್ತು ಸಿಬ್ಬಂದಿಯ ಕಾರ್ಯವನ್ನು ಕೊಡಗು ಜಿಲ್ಲಾ ಪೊಲೀಸ್ ಇಲಾಖೆ…

Read More

ಮಡಿಕೇರಿ, ಆ.7: ಮಡಿಕೇರಿ ಟೌನ್ ಬ್ಯಾಂಕ್‌ನ ನೂತನ ಅಧ್ಯಕ್ಷರಾಗಿ ಬಿ.ಕೆ. ಜಗದೀಶ್ ಹಾಗೂ ಉಪಾಧ್ಯಕ್ಷರಾಗಿ ರೋಷನ್ ಅನ್ವೇಕರ್ ಅವರು ಇಂದು ನಡೆದ ಚುನಾವಣಾ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬಿ.ಕೆ. ಜಗದೀಶ್ ಅವರು ಪ್ರಸ್ತುತ ಮಡಿಕೇರಿ ನಗರ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಕೊಡಗು ಬ್ರಾಹ್ಮಣ ವಿದ್ಯಾಭಿವೃದ್ಧಿ ನಿಧಿಯ ಕಾರ್ಯದರ್ಶಿಯಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇದೇ ವೇಳೆ, ಎರಡನೇ ಬಾರಿ ಮಡಿಕೇರಿ ಟೌನ್ ಬ್ಯಾಂಕ್ ಅಧ್ಯಕ್ಷರಾಗಿ ಆಯ್ಕೆಯಾಗಿರುವುದು ವಿಶೇಷವಾಗಿದೆ.

Read More

ಅಪ್ರಾಪ್ತ ಬಾಲಕನಿಗೆ ವಾಹನ ನೀಡಿದ ಪ್ರಕರಣ: ₹25 ಸಾವಿರ ದಂಡ ವಿರಾಜಪೇಟೆ: ಅಪ್ರಾಪ್ತ ವಯಸ್ಸಿನ ಬಾಲಕನಿಗೆ ವಾಹನ ಚಲಾಯಿಸಲು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಾಹನದ ಮಾಲೀಕರಿಗೆ ನ್ಯಾಯಾಲಯವು ₹25,000 ದಂಡ ವಿಧಿಸಿದೆ. ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ವಿರಾಜಪೇಟೆ ನ್ಯಾಯಾಲಯದಲ್ಲಿ ವಿಚಾರಣೆ ನಡೆಯಿತು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯವು ವಾಹನ ಮಾಲೀಕರಾದ ಸಿಜಿ ಮತ್ತು ಜಿ.ಎಂ.ಎಫ್.ಸಿ. ನ್ಯಾಯಾಲಯದ ಮೂಲಕ ₹25 ಸಾವಿರ ದಂಡ ವಿಧಿಸಿ ಆದೇಶಿಸಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. ಅಪ್ರಾಪ್ತರು ವಾಹನ ಚಲಾಯಿಸುವುದನ್ನು ತಡೆಯುವ ನಿಟ್ಟಿನಲ್ಲಿ ಪೊಲೀಸರು ಕೈಗೊಂಡ ಕ್ರಮದ ಭಾಗವಾಗಿ ಈ ಪ್ರಕರಣ ದಾಖಲಾಗಿದ್ದು, ಪೋಷಕರು ಹಾಗೂ ವಾಹನ ಮಾಲೀಕರು ಅಪ್ರಾಪ್ತರಿಗೆ ವಾಹನ ನೀಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

Read More

ಪೊನ್ನಣ್ಣ ನಿವಾಸಕ್ಕೆ ಬಿ.ಕೆ. ಹರಿಪ್ರಸಾದ್ ಸೌಹಾರ್ದ ಭೇಟಿ ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಅವರು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರ ಬೆಂಗಳೂರಿನ ನಿವಾಸಕ್ಕೆ ಸೌಹಾರ್ದ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಶಾಸಕ ಪೊನ್ನಣ್ಣ ಅವರು ಬಿ.ಕೆ. ಹರಿಪ್ರಸಾದ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಉಭಯ ನಾಯಕರು ಪ್ರಸಕ್ತ ರಾಜಕೀಯ ಬೆಳವಣಿಗೆಗಳು, ಪಕ್ಷದ ಸಂಘಟನೆ ಸೇರಿದಂತೆ ಹಲವು ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಸಿದರು. ರಾಜ್ಯದ ರಾಜಕೀಯ ಪರಿಸ್ಥಿತಿ ಹಾಗೂ ಕಾಂಗ್ರೆಸ್ ಪಕ್ಷದ ಮುಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಹಾಗೂ ಜಿಲ್ಲಾಧ್ಯಕ್ಷರ ಬದಲಾವಣೆ ಬಗ್ಗೆಯೂ ನಾಯಕರು ಸಮಾಲೋಚನೆ ನಡೆಸಿದರು ಎಂದು ತಿಳಿದುಬಂದಿದೆ.

Read More

ಮಡಿಕೇರಿ: ಕಷ್ಟಪಟ್ಟು ದುಡಿದು ಸಂಪಾದಿಸಿದ್ದ ಹಣ ಹಾಗೂ ಚಿನ್ನಾಭರಣವನ್ನು ಕಳೆದುಕೊಂಡು ಐದು ವರ್ಷ ಕಳೆದರೂ ನ್ಯಾಯ ಸಿಗದ ನೋವಿನಲ್ಲಿ ದರೋಡೆ ಪ್ರಕರಣದ ಸಂತ್ರಸ್ತೆ ಕಣ್ಣೀರಿಟ್ಟಿದ್ದಾರೆ. ಪ್ರಕರಣದ ತನಿಖೆ ನಡೆಸಿ ಆರೋಪಿಗಳನ್ನು ಪತ್ತೆಹಚ್ಚಬೇಕಾದ ಪೊಲೀಸರು ಇದುವರೆಗೂ ಯಾವುದೇ ಸೂಕ್ತ ಕ್ರಮ ಕೈಗೊಂಡಿಲ್ಲ ಎಂದು ಸುಂಟಿಕೊಪ್ಪ ಸಮೀಪದ ಹಾರಬೈಲು ಗ್ರಾಮದ ಸರೋಜಿನಿ ಆರೋಪಿಸಿದ್ದಾರೆ. ಮಡಿಕೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2021ರ ಏಪ್ರಿಲ್ 27ರಂದು ಸಂಜೆ ಸುಮಾರು 7.30ರ ವೇಳೆಗೆ ಮನೆಯ ಹಿಂಭಾಗದಿಂದ ಒಳನುಗ್ಗಿದ ಮೂವರು ಅಪರಿಚಿತ ವ್ಯಕ್ತಿಗಳು ತನ್ನನ್ನು ಗೋಡೆಗೆ ಒತ್ತಿ ಹಿಡಿದು, ಬಾಯಿಗೆ ಬಟ್ಟೆ ತುರುಕಿ ಹಿಂಸೆ ನೀಡಿದ್ದರು ಎಂದು ಆರೋಪಿಸಿದರು. ಈ ವೇಳೆ ತಾನು ಪ್ರಜ್ಞಾಹೀನಳಾಗಿ ಬಿದ್ದಿದ್ದು, ನಂತರ ಎಚ್ಚರಗೊಂಡಾಗ ಮೈಮೇಲಿದ್ದ ಹಾಗೂ ಬೀರುವಿನಲ್ಲಿದ್ದ ಸುಮಾರು ₹3.90 ಲಕ್ಷ ಮೌಲ್ಯದ ಚಿನ್ನಾಭರಣ ಮತ್ತು ನಗದು ಕಳವಾಗಿರುವುದು ಗಮನಕ್ಕೆ ಬಂದಿತ್ತು ಎಂದು ಹೇಳಿದರು. ಘಟನೆ ನಡೆದ ದಿನವೇ ಸುಂಟಿಕೊಪ್ಪ ಪೊಲೀಸ್ ಠಾಣೆಗೆ ದೂರು ನೀಡಿದ್ದೆ. ಆರೋಪಿಗಳನ್ನು ಪತ್ತೆಹಚ್ಚಿ ಕಾನೂನು ಕ್ರಮ…

Read More

ಮಡಿಕೇರಿ ಆ. 06 – ಕೊಡಗು ಪತ್ರಕತ೯ರ ಸಂಘ(ರಿ) ನ ವಾಷಿ೯ಕ ಮಹಾಸಭೆಯು ಆಗಸ್ಟ್ 08 ರಂದು ಶನಿವಾರ ಬೆಳಗ್ಗೆ 10.30 ಗಂಟೆಗೆ ನಗರದ ಪತ್ರಿಕಾಭವನ ಸಭಾಂಗಣದಲ್ಲಿ ಆಯೋಜಿತವಾಗಿದೆ. ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ಅಧ್ಯಕ್ಷತೆಯಲ್ಲಿ ಆಯೋಜಿತ ವಾಷಿ೯ಕ ಮಹಾಸಭೆಯಲ್ಲಿ ರಾಜ್ಯ ಚೇಂಬರ್ ಆಫ್ ಕಾಮಸ್೯ ವತಿಯಿಂದ ಅತ್ಯುತ್ತಮ ಉದ್ಯಮಕ್ಕಾಗಿನ ಪ್ರಶಸ್ತಿಗೆ ಭಾಜನರಾದ ಶಕ್ತಿ ಪತ್ರಿಕೆಯ ಸಂಪಾದಕ ಜಿ.ಚಿದ್ವಿಲಾಸ್, ಕನ್ನಡ ಭವನ ಸಂಸ್ಥೆಯಿಂದ ರಾಷ್ಟ್ರಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿಗೆ , ಭಾಜನರಾದ ಶ್ತಿ ಪತ್ರಿಕೆಯ ಸಲಹಾ ಸಂಪಾದಕ ಬಿ.ಜಿ. ಅನಂತಶಯನ, ತಮಿಳು ಪತ್ರಕತ೯ರ ಸಂಘದ ಪ್ರಶಸ್ತಿಗೆ ಭಾಜನರಾದ ಎಸ್.ಎಂ.ಮುಬಾರಕ್, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಸನ್ಮಾನಕ್ಕೆ ಭಾಜನರಾಗಿದ್ದ ಬಿ.ಸಿ. ದಿನೇಶ್, ಎನ್ ಎಸ್ ಎಸ್ ಸಂಸ್ಥೆಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪಡೆದ ಡಾ. ಎಂ.ಎನ್. ವನಿತ್ ಕುಮಾರ್, ಬುದ್ದ ನಾಡ ಭೂಷಣ ಪ್ರಶಸ್ತಿ ಪಡೆದ ಜಯಪ್ಪ ಹಾನಗಲ್ ಅವರನ್ನು ಸನ್ಮಾನಿಸಿ ಗೌರವಿಸಲಾಗುತ್ತಿದೆ ಎಂದು ಸಂಘದ ಪ್ರಧಾನ ಕಾಯ೯ದಶಿ೯ ಸುರೇಶ್ ಬಿಳಿಗೇರಿ…

Read More