- ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
- ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
- ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
- ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
- ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
- ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ
- ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
- ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
Author: Kodagu-admin
ಕೊಡಗು ಜಿಲ್ಲಾ ಜೆಡಿಎಸ್ ಎಸ್ಸಿ ಎಸ್ಟಿ ಘಟಕದಿಂದ ಸಂಸದರಿಗೆ ಮನವಿ ಪತ್ರ ಸಲ್ಲಿಕೆ ಕೊಡಗು ಜಿಲ್ಲೆಯ ಅಮ್ಮತ್ತಿ ಕಾರ್ಮಾಡು, ಗ್ರಾಮ ಪಂಚಾಯತಿ ವ್ಯಾಪ್ತಿಯ ಎಸ್ಸಿ ಎಸ್ಟಿ ಸಮುದಾಯದ ವಸತಿ ನಿರಾಶ್ರಿತರಿಗೆ ಸೂರಿನ ವ್ಯವಸ್ಥೆಯನ್ನು ಕಲ್ಪಿಸಿ ಕೊಡಬೇಕೆಂದು, ಕೊಡಗು ಜಿಲ್ಲಾ ಜೆಡಿಎಸ್ ಪಕ್ಷದ ಎಸ್ಸಿ ಎಸ್ಟಿ ಘಟಕದ ಜಿಲ್ಲಾಧ್ಯಕ್ಷ ಜಯಮ್ಮ ಅಮ್ಮತ್ತಿ ರವರ ನಾಯಕತ್ವದಲ್ಲಿ ಕೊಡಗು ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ರವರಿಗೆ ಮನವಿ ಪತ್ರ ಸಲ್ಲಿಸಲಾಯಿತು. ಕೊಡಗು ಜಿಲ್ಲಾ ಜೆಡಿಎಸ್ ಸಾಮಾಜಿಕ ಜಾಲತಾಣ ಉಪಾಧ್ಯಕ್ಷರಾದ ಶಿಯಾಬುದ್ದೀನ್ ವಿ.ಪಿ.ಎಸ್. ನಲ್ಲಿ ಹುದಿಕೇರಿ, ಮಡಿಕೇರಿ ಅಲ್ಪಸಂಖ್ಯಾತ ಘಟಕ ಅಧ್ಯಕ್ಷರಾದ ಅಶ್ರಫ್ ಹಾ ಕತ್ತೂರು, ವಿರಾಜಪೇಟೆ ತಾಲೂಕು ಯುವ ಘಟಕದ ಅಧ್ಯಕ್ಷರಾದ ಸೈಫುದ್ದೀನ್ ಜಾಮಿಯಾಲ, ಅಲ್ಪಸಂಖ್ಯಾತ ಘಟಕದ ರಾಜ್ಯಪ್ರಧಾನ ಕಾರ್ಯದರ್ಶಿ ಆಬಿದ್ ಹುಸೈನ್ ಮೈಸೂರು, ಮೈಸೂರು ಜಿಲ್ಲಾ ಯುವ ಜೆಡಿಎಸ್ ಮುಖಂಡ ಪ್ರವೀಣ್ ಸಂದರ್ಭ ಹಾಜರಿದ್ದರು. ಕೊಡಗು ನ್ಯೂಸ್
ಹಳಿ ದಾಟುತ್ತಿದ್ದಾಗ ರೈಲು ಡಿಕ್ಕಿ.ಕೊಡಗು ಮೂಲದ ವ್ಯಕ್ತಿ ಮೃತ್ಯು ಕಾಸರಗೋಡು: ರೈಲು ಬಡಿದು ಕೊಡಗು ನಿವಾಸಿಯೊರ್ವ ಮೃತಪಟ್ಟ ಘಟನೆ ಶುಕ್ರವಾರ ಮಧ್ಯಾಹ್ನ ಕಾಸರಗೋಡು ರೈಲು ನಿಲ್ದಾಣದಲ್ಲಿ ನಡೆದಿದೆ. ಮೃತನನ್ನು ಕರ್ನಾಟಕದ ಕೊಡಗು ನಿವಾಸಿ ರಾಜೇಶ್ (35) ಎಂದು ಗುರುತಿಸಲಾಗಿದೆ. ರೈಲಿನಿಂದ ಇಳಿದು ಹಳಿ ಮೂಲಕ ಅಡ್ಡದಾಟಿ ಮತ್ತೊಂದು ಫ್ಲಾಟ್‌ಫಾರ್ಮ್ ಏರಲು ಯತ್ನಿಸುತ್ತಿದ್ದ ವೇಳೆ ಗೂಡ್ಸ್ ರೈಲು ಬಡಿದು ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ. ಅಪಘಾತದ ಪರಿಣಾಮ ರಾಜೇಶ್ ಅವರ ತಲೆ ಸಂಪೂರ್ಣವಾಗಿ ಜಜ್ಜಿ ಹೋಗಿದ್ದು, ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತದೇಹ ಧರಿಸಿದ್ದ ಅಂಗಿಯ ಜೇಬಿನಲ್ಲಿ ದೊರೆತ ಆಧಾರ್ ಕಾರ್ಡ್ ಆಧಾರದ ಮೇಲೆ ಅವರ ಗುರುತು ಪತ್ತೆಯಾಗಿದೆ. ಮೃತದೇಹದ ಅವಶೇಷಗಳನ್ನು ಸಂಗ್ರಹಿಸಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಸಾಗಿಸಲಾಗಿದ್ದು, ರೈಲು ದುರಂತದ ಮಾಹಿತಿ ಮೃತರ ಸಂಬಂಧಿಕರಿಗೆ ರೈಲ್ವೇ ಪೊಲೀಸರು ತಿಳಿಸಿದ್ದಾರೆ. ಮೃತ ರಾಜೇಶ್ ಅವರು ಚೆನ್ನಯ್ಯ ಎಂಬವರ ಪುತ್ರರಾಗಿದ್ದು, ಹಳಿ ಅಡ್ಡದಾಟುವಾಗ ತೋರಿದ ಅಜಾಗರೂಕತೆಯೇ ಅಪಘಾತಕ್ಕೆ ಕಾರಣವಾಗಿದೆ ಎಂದು ರೈಲ್ವೇ ಪೊಲೀಸರು ಸ್ಪಷ್ಟಪಡಿಸಿದ್ದಾರೆ.…
ವರದಿ :ಝಕರಿಯ ನಾಪೋಕ್ಲು ನಾಪೋಕ್ಲು :ನಾಪೋಕ್ಲುವಿನ ಮೇರಿಮಾತೆ ಚರ್ಚ್ ನಲ್ಲಿ ಕ್ರೈಸ್ತ ಬಾಂಧವರು ಸಂಭ್ರಮ ಶ್ರದ್ದಾ ಭಕ್ತಿಯಿಂದ ಕ್ರಿಸ್ಮಸ್ ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿದರು. ಚರ್ಚ್ ಧರ್ಮ ಗುರುಗಳಾದ ಜ್ಞಾನ ಪ್ರಕಾಶ್ ಅವರ ನೇತೃತ್ವದಲ್ಲಿ ಸುಂದರವಾಗಿ ನಿರ್ಮಿಸಿದ್ದ ಗೋದಲಿಯಲ್ಲಿ ಯೇಸುವಿನ ಬಾಲರೂಪವನ್ನು ಪ್ರತಿಷ್ಠಾಪಿಸಲಾಯಿತು. ಬಳಿಕ ದಿವ್ಯ ಆಡಂಬರ ಗಾಯನ ಬಲಿ ಪೂಜೆ ಅರ್ಪಿಸಿ ಊರಿನ ಸಮಸ್ತ ಜನರಿಗೋಸ್ಕರ ಸಾಮೂಹಿಕವಾಗಿ ವಿಶೇಷ ಪ್ರಾರ್ಥನೆಯನ್ನು ನೆರವೇರಿಸಿ ಕ್ರಿಸ್ಮಸ್ ಹಬ್ಬದ ಶುಭಾಶಯ ಕೋರಿದರು. ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಯೇಸುವಿನ ಗೋದಲಿ ನಿರ್ಮಿಸುವ ಸ್ಪರ್ಧೆಯನ್ನು ಆಯೋಜಿಸಲಾಗಿತ್ತು. ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಬಾಬಿ ವೇಗಸ್ ಪಡೆದುಕೊಂಡರು. ದ್ವಿತೀಯ ಬಹುಮಾನವನ್ನು ಕೆ. ಜೆ.ರಾಯ್ ಪಡೆದುಕೊಂಡರೆ, ತೃತೀಯ ಬಹುಮಾನವನ್ನು ಜಾಲಿ ಅಬ್ರಹಾಂ ಪಡೆದುಕೊಂಡರು. ಸ್ಪರ್ಧೆಯಲ್ಲಿ ವಿಜೇತರಿಗೆ ಕೆ.ಜೆ. ಜಾಯ್ ಅವರ ಪ್ರಾಯೋಜಕತ್ವದಲ್ಲಿ ನೀಡಿರುವ ರೋಲಿಂಗ್ ಟ್ರೋಫಿ ಹಾಗೂ ಬಹುಮಾನವನ್ನು ಚರ್ಚ್ ನ ಧರ್ಮ ಗುರುಗಳಾದ ಜ್ಞಾನಪ್ರಕಾಶ್ ಅವರು ವಿತರಿಸಿದರು.ಇದೇ ಸಂದರ್ಭ ಸಾಂತ ಕ್ಲಾಸ್ ವೇಷಧಾರಿ ಮಕ್ಕಳ ಸಾಂಸ್ಕೃತಿಕ ಕಾರ್ಯಕ್ರಮಲ್ಲಿ ಪಾಲ್ಗೊಂಡ ಮಕ್ಕಳಿಗೆ ಉಡುಗೊರೆ…
ಕಕ್ಕಬ್ಬೆ ವಯಕೋಲ್ ಗ್ರಾಮದಲ್ಲಿ ಕಾಡಾನೆ ಹಾವಳಿಗೆ ಮನೆಯ ಕಾಂಪೌಂಡ್ ದ್ವಂಸ -ಗ್ರಾಮಸ್ಥರಲ್ಲಿ ಆತಂಕ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು :ನಾಪೋಕ್ಲು ಬಳಿಯ ಕಕ್ಕಬ್ಬೆ ಕುಂಜಿಲ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವಯಕೋಲ್ ಗ್ರಾಮದ ತೋಟಗಳಲ್ಲಿ ಕಾಡಾನೆ ಹಾವಳಿ ಮಿತಿಮೀರಿದ್ದು ಮನೆಯೊಂದರ ಅಂಗಳಕ್ಕೆ ಪ್ರವೇಶಿಸಿದ ಕಾಡಾನೆ ಮನೆಯ ತಡೆಗೋಡೆ ತುಳಿದು ಧ್ವಂಸಗೊಳಿಸಿದ್ದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದೆ. ವಯಕೋಲ್ ಗ್ರಾಮದ ನಿವಾಸಿ ಅಹಮದ್ ಹಾಜಿ ಎಂಬುವವರ ಮನೆಯ ಅಂಗಳಕ್ಕೆ ಬುಧವಾರ ಮಧ್ಯರಾತ್ರಿ ಲಗ್ಗೆ ಇಟ್ಟ ಕಾಡಾನೆ ಮನೆಯ ಹಿಂಬದಿಯ ತಡಗೋಡೆ ತುಳಿದು ಧ್ವಂಸಗೊಳಿಸಿದ್ದು ನಷ್ಟ ಸಂಭವಿಸಿದೆ. ಈ ವ್ಯಾಪ್ತಿಯ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಮಿತಿಮೀರಿದ್ದು ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಯಾಗಿದೆ. ಈಗಾಗಲೇ ಗ್ರಾಮದ ತೋಟಗಳಲ್ಲಿ ಕಾಫಿ ಕೊಯ್ಲುಕಾರ್ಯ ಪ್ರಾರಂಭವಾಗಿದ್ದು ಕಾಡಾನೆಗಳ ಹಾವಳಿಯಿಂದ ಕಾರ್ಮಿಕರು ಹಾಗೂ ಬೆಳೆಗಾರರು ತೋಟಗಳಿಗೆ ತೆರಳಲು ಭಯಪಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕೂಡಲೇ ಸಂಬಂಧಪಟ್ಟ ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳನ್ನು ಕಾಡಿಗಟ್ಟುವ ಅಥವಾ ಹಿಡಿದು ಸ್ಥಳಾಂತರಿಸಲು ಕ್ರಮ ಕೈಗೊಳ್ಳಬೇಕು. ಅದರಂತೆ ನಷ್ಟ ಸಂಭವಿಸಿದ ಬೆಳಗಾರರಿಗೆ ಸೂಕ್ತ ಪರಿಹಾರ…
ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಗೊಬ್ಬರ ತುಂಬಿದ ಲಾರಿ -ಗೋಣಿಕೊಪ್ಪ ಚನ್ನೆಂಗೊಲ್ಲಿ ಬಳಿ ಅವಘಡ ಮೈಸೂರಿನಿಂದ ಕೇರಳ ರಾಜ್ಯಕ್ಕೆ ಗೊಬ್ಬರಸಾಗಿಸುತ್ತಿದ್ದ ಲಾರಿಯೊಂದು ಟೈಯರ್ ಒಡೆದ ಪರಿಣಾಮ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ಗೋಣಿಕೊಪ್ಪ ಬಳಿಯ ಚನ್ನೆಂಗೊಲ್ಲಿ ಎಂಬಲ್ಲಿ ನಡೆದಿದೆ. ಅವಘಡ ದಿಂದ ಲಾರಿ ನಿಯಂತ್ರಣ ತಪ್ಪಿ ಸುಮಾರು 50 ಮೀಟರ್‌ವರೆಗೆ ರಸ್ತೆಯಲ್ಲೇ ಜಾರಿಗೊಂಡು ಸಾಗಿ ಸಮೀಪದಲ್ಲಿದ್ದ ಟೀ ಕ್ಯಾಂಟೀನ್ ಎದುರಿಗೆ ನಿಲ್ಲಿಸಿದ ಎರಡು ಸ್ಕೂಟರ್‌ಗಳಿಗೂ ಡಿಕ್ಕಿಯಾಗಿದೆ ಎಂದು ತಿಳಿದು ಬಂದಿದೆ. ಅವಘಡದಿಂದ ಲಾರಿಯ ಚಾಲಕ ಹಾಗೂ ಕ್ಲೀನರ್ ಯಾವುದೇ ಅನಾಹುತ ಸಂಭವಿಸದೆ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.ಘಟನೆ ನಡೆದ ಸ್ಥಳದಿಂದ ಈ ಇಬ್ಬರು ಸಹ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ಲಾರಿ ವಿರಾಜಪೇಟೆಯ ಆರ್ಜಿ ಗ್ರಾಮದ ರಶೀದ್ ಎಂಬುವರಿಗೆ ಸೇರಿದ್ದು ಎನ್ನಲಾಗಿದ್ದು. ಗೊಬ್ಬರಕ್ಕೆ ಯಾವುದೇ ಅಧಿಕೃತ ದಾಖಲೆಗಳಿಲ್ಲದೆ ಸಾಗಾಟ ಮಾಡಲಾಗುತ್ತಿತ್ತು ಎಂದು ತಿಳಿದುಬಂದಿದೆ. ಗೋಣಿಕೊಪ್ಪ ಪೊಲೀಸ್ ಠಾಣಾ ಅಧಿಕಾರಿ ಪ್ರದೀಪ್ ಕುಮಾರ್ ಹಾಗೂ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿ ಮುಂದಿನ…
ಹೊಸವರ್ಷದ ಬೆನ್ನಲ್ಲೇ ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರ ಮುಂಜಾಗ್ರತ ಕ್ರಮಕ್ಕಾಗಿ 2026 ರ ಹೊಸ ವರ್ಷದ ಆಚರಣೆಗೆ ಜಿಲ್ಲೆಗೆ ವಿವಿಧ ಕಡೆಗಳಿಂದ ದೇಶಿಯ ಹಾಗೂ ವಿದೇಶಿಯ ಪ್ರವಾಸಿಗರು/ ಸಾರ್ವಜನಿಕರು ಜಿಲ್ಲೆಗೆ ಆಗಮಿಸಲಿದ್ದು, ಪ್ರವಾಸಿಗರು ತಂಗುವ ಹೋಂ-ಸ್ಟೇ, ರೆಸಾರ್ಟ್, ಹೋಟೆಲ್-ಲಾಡ್ಜ್‍ಗಳಲ್ಲಿ ನಿಯಮಗಳನ್ನು ಕಡ್ಡಾಯವಾಗಿ ಜಿಲ್ಲೆಯ ಎಲ್ಲಾ ರೆಸಾರ್ಟ್, ಹೋಟೆಲ್, ಹೋಂ-ಸ್ಟೇ ಮಾಲೀಕರು ಕ್ರಮವಹಿಸುವುದು. ಅತಿಥಿಗಳು ಬಂದಾಗ ರಿಜಿಸ್ಟರ್ ಪುಸ್ತಕದಲ್ಲ್ಲಿ ಆಗಮಿಸಿರುವ ಎಲ್ಲ ಪ್ರವಾಸಿಗರ ಹೆಸರು, ಆಧಾರ್ ಕಾರ್ಡ್, ಪೂರ್ಣ ವಿಳಾಸ, ಮೊಬೈಲ್ ಸಂಖ್ಯೆ, ವಾಹನ ಸಂಖ್ಯೆ ಪಡೆಯುವುದು ಹಾಗೂ ವಿದೇಶಿಯರು ಬಂದಾಗ ಅವರ ವೀಸ ಪಾಸ್‍ಪೋರ್ಟ್/ ವಿಮಾನ ಟಿಕೆಟ್ ಪರಿಶೀಲಿಸಿ ರಿಜಿಸ್ಟರ್‍ನಲ್ಲಿ ಕಡ್ಡಾಯವಾಗಿ ನಮೂದಿಸತಕ್ಕದ್ದು.ಜಿಲ್ಲೆಯ ಪ್ರವಾಸಿ ತಾಣಗಳ ಬಗ್ಗೆ ಸಂಪೂರ್ಣ ಮಾಹಿತಿ ಹಾಗೂ ಮಾರ್ಗ ನಕ್ಷೆಯನ್ನು ತಿಳಿಸುವುದು. ಪ್ರವಾಸಿ ತಾಣಗಳು ತೆರೆಯುವ ಹಾಗೂ ಮುಚ್ಚುವ ವೇಳೆಯನ್ನು ಪ್ರವಾಸಿಗರಿಗೆ ತಿಳಿಸುವುದು.ಕಡ್ಡಾಯವಾಗಿ ಮಾಲೀಕರು ಸದರಿ ಕಟ್ಟಡದಲ್ಲಿ ವಾಸವಿರತಕ್ಕದ್ದು ಹಾಗೂ ಪ್ರವಾಸಿಗರ ಜೊತೆ ಅವರ ಪ್ರವಾಸ ಕುರಿತು ಚರ್ಚಿಸಿ ಸೂಕ್ತ ಮಾರ್ಗದರ್ಶನ ನೀಡುವುದು ಹಾಗೂ ಸ್ಥಳೀಯ…
ಕೊಡಗು ಕೆಂಬಟ್ಟಿ ಸಮಾಜದಿಂದ ಶಾಸಕರಿಗೆ ಸನ್ಮಾನ ಕೊಡಗು ಕೆಂಬಟ್ಟಿ ಸಮಾಜದ 75 ವರ್ಷಗಳ ಬೇಡಿಕೆಯನ್ನು ಈಡೇರಿಸುಲ್ಲಿ ಪ್ರಾಮಾಣಿಕ ಪ್ರಯತ್ನ ಮಾಡಿದ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ. ಎಸ್ ಪೊನ್ನಣ್ಣರವರಿಗೆ ಕೊಡಗು ಕೆಂಬಟ್ಟಿ ಸಮಾದ ಅಧ್ಯಕ್ಷರಾದ ಮೊಳ್ಳೆಕುಟ್ಟಂಡ ದಿನು ಬೋಜಪ್ಪರವರ ನೇತೃತ್ವದಲ್ಲಿ ಸನ್ಮಾನ ಮಾಡಲಾಯಿತು.ಕೊಡಗಿನ ಕೊಡವ ಭಾಷೆ ಮಾತನಾಡುವ ಕೆಂಬಟ್ಟಿ ಸಮುದಾಯವು ಆದಿಕರ್ನಾಟಕ ಎಂದು ಜಾತಿಪ್ರಮಾಣ ಪತ್ರ ಪಡೆಯುತ್ತಿದ್ದು. ಅವರ ಮೂಲ ಜಾತಿಯ ಹೆಸರಾದ ಕೆಂಬಟ್ಟಿ ಹೆಸರಿನಲ್ಲಿಯೇ ಜಾತಿ ಪ್ರಮಾಣ ಪತ್ರ ಪಡೆಯುವ ಬಗ್ಗೆ ಮಾನ್ಯ ಮುಖ್ಯ ಮಂತ್ರಿಗಳನ್ನು ಭೇಟಿ ಮಾಡಿಸಿ, ಕೇಂದ್ರಕ್ಕೆ ಶಿಫಾರಸು ಮಾಡುವುದಾಗಿ ಭರವಸೆಯನ್ನು ನೀಡಿದರ ಸಲುವಾಗಿ ಇಂದು ವಿಧಾನ ಸೌಧದ ಶಾಸಕರ ಕಛೇರಿಯಲ್ಲಿ ಕೊಡಗು ಕೆಂಬಟ್ಟಿ ಸಮಾಜದ ಪರವಾಗಿ ಸನ್ಮಾನ ಮಾಡಲಾಯಿತು. ಕೊಡಗು ನ್ಯೂಸ್
ಶಾಸಕರಿಂದ ಗುತ್ತಿಗೆ ಪೂಜೆ ನಡೆದು ತಿಂಗಳಾದರೂ ನಡೆಯದ ಮಡಿಕೇರಿ ಗಾಳಿಬೀಡು ರಸ್ತೆ ಕಾಮಗಾರಿ:-ಗುತ್ತಿಗೆದಾರನ ನಿರ್ಲಕ್ಷ್ಯ
ಶಾಸಕರಿಂದ ಗುತ್ತಿಗೆ ಪೂಜೆ ನಡೆದು ತಿಂಗಳಾದರೂ ನಡೆಯದ ಮಡಿಕೇರಿ-ಗಾಳಿಬೀಡು ರಸ್ತೆ ಕಾಮಗಾರಿ : ಗುತ್ತಿಗೆದಾರನ ನಿರ್ಲಕ್ಷ್ಯ 🖋️ಚಂದನ್ ನಂದರಬೆಟ್ಟು ಗಾಳಿಬೀಡು ಗ್ರಾಮಕ್ಕೆ ತೆರಳುವ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿರುವುದನ್ನು ಗಮನಿಸಿ ಶಾಸಕರಾದ ಮಂತರ್ ಗೌಡ ಅವರು ತಿಂಗಳ ಹಿಂದೆ ರಸ್ತೆ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮರುದಿನವೇ ಕೆಲಸ ಆರಂಭಿಸುವಂತೆ ಆದೇಶ ನೀಡಿದ್ದರು. ಶಾಸಕರು ಗುದ್ದಲಿ ಪೂಜೆ ನಡೆಸಿ ಹೋದ ಬಳಿಕ ಒಂದೇ ವಾರದಲ್ಲಿ ಕೆಲಸ ಆರಂಭಿಸುವುದಾಗಿ ಮಾಹಿತಿ ನೀಡಿದ್ದ ಗುತ್ತಿಗೆದಾರ, ಬಳಿಕ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದ್ದು ಇನ್ನೂ ಕೂಡ ಕಾಮಗಾರಿ ಆರಂಭಿಸದೆ ಗ್ರಾಮದ ಜನರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಈ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದು ರಸ್ತೆಯಲ್ಲಿ ವಾಹನಗಳ ಸಂಚಾರಕ್ಕೆ ಅನಾನುಕೂಲವಾಗಿದೆ. ದ್ವಿಚಕ್ರ ಹಾಗು ಇತರ ವಾಹನ ಸವಾರರು ರಸ್ತೆಯಲ್ಲಿ ವಾಹನ ಚಾಲನೆ ಮಾಡಲು ಪರದಾಡುವಂತ ಸನ್ನಿವೇಶ ಸೃಷ್ಟಿಯಾಗಿದೆ. ಈ ಹಿಂದೆ ರಸ್ತೆ ತಡೆ ನಡೆಸಿದ್ದ ಗ್ರಾಮಸ್ಥರು ವರ್ಷಗಳ ಹಿಂದೆ ಇದೆ ರೀತಿ ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದ್ದ ಸಂದರ್ಭದಲ್ಲಿ ಮನವಿ ನೀಡಿ ಯಾವುದೇ…
ಸ್ವಯಂ ಪ್ರೇರಿತ ಶಿಬಿರದಲ್ಲಿ ಹಲವರು ರಕ್ತದಾನ ಕೇಂದ್ರ ಸರಕಾರದ ಮೈಭಾರತ್ , ಯುವಜನ ಸೇವೆ ಮತ್ತು ಕ್ರೀಡಾ ಇಲಾಖೆ,ಕೊಡಗು ಜಿಲ್ಲಾ ಯುವ ಒಕ್ಕೂಟ,ತಾಲ್ಲೂಕು ಯುವ ಒಕ್ಕೂಟ ಮಡಿಕೇರಿ,ರೋಟರಿ ಮಿಸ್ಟಿಹಿಲ್ಸ್ , ರೋಟರಿ ಇನ್ನರ್ ವೀಲ್ , ಲಯನ್ಸ್ ಕ್ಲಬ್ ಮಡಿಕೇರಿ,ರೋಟರಿ ಕ್ಲಬ್ ಆಫ್ ಮಡಿಕೇರಿ ವುಡ್ಸ್ ,ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕಾರ್ಮಿಕ ಇಲಾಖೆ ಮಡಿಕೇರಿ, ರೋಟರಿ ಸಮುದಾಯದಳ ಮೇಕೇರಿ, ಎಸ್. ಡಿ. ಎಂ. ಸಿ. ಮೇಕೇರಿ ಗ್ರಾಮ ಪಂಚಾಯಿತಿ ಮೇಕೇರಿ , ಜಿಲ್ಲಾಸ್ಪತ್ರೆ ರಕ್ತನಿಧಿ ಕೇಂದ್ರ ಮಡಿಕೇರಿ ಹಾಗೂ ಸ್ವಾಗತ ಯುವಕ ಸಂಘ ಮೇಕೇರಿ ಇವರುಗಳ ಸಂಯುಕ್ತಾಶ್ರಯದಲ್ಲಿಂದು ಕೇಂದ್ರ ಸರ್ಕಾರದ ಸುಶಾಸನ ದಿನ ದ ಪ್ರಯುಕ್ತ 14 ನೇ ವರ್ಷದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ ರಕ್ತದಾನದ ಮಹತ್ವದ ಬಗ್ಗೆ ರಕ್ತನಿಧಿ ಕೇಂದ್ರದ ವೈದ್ಯಾಧಿಕಾರಿಗಳಾದ ಡಾ|| ಕರುಂಬಯ್ಯ ಮಾಹಿತಿ ನೀಡಿದರು.ಕಾರ್ಮಿಕ ಇಲಾಖೆಯಿಂದ ಕಾರ್ಮಿಕರಿಗೆ ದೊರೆಯುವ ವಿವಿಧ ಸವಲತ್ತುಗಳ ಬಗ್ಗೆ ಇಲಾಖಾ ಸಿಬ್ಬಂಧಿಗಳು ಮಾಹಿತಿ ನೀಡಿದರು. ಈ ದೇಶದ…
