Author: Kodagu-admin

ಕೊಡಗು ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರಿಂದ ಸಂಸದರಿಗೆ ಮನವಿ ಸಲ್ಲಿಕೆ ಕೊಡಗು ಮೈಸೂರ್ ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್ ಕೃಷ್ಣ ದತ್ತ ಚಾಮರಾಜ ಒಡಯರ್ ರವರನ್ನು ಕೊಡಗು ಜಿಲ್ಲೆಯ ಜೆಡಿಎಸ್ ಅಲ್ಪಸಂಖ್ಯಾತ ಮುಖಂಡರು ಭೇಟಿಯಾಗಿ ವಿವಿಧ ಬೇಡಿಕೆಗಳಿಗೆ ಮನವಿ ಸಲ್ಲಿಸಿದರು. ಅಲ್ಪಸಂಖ್ಯಾತ ಸಮುದಾಯದ ಸಮುದಾಯ ಭವನ,ಮಸೀದಿ, ಕಬರ್ ಸ್ಥಾನಗಳಿಗೆ ತಡೆಗೋಡೆ ಹಾಗೂ ಮೂಲಭೂತ ಸೌಕರ್ಯಗಳನ್ನು ಒದಗಿಸುವಂತೆ ಮಾನ್ಯ ಸಂಸದರಲ್ಲಿ ಮನವಿ ಮಾಡಿಕೊಂಡರು. ಈ ಸಂದರ್ಭ ವಿರಾಜಪೇಟೆ ತಾಲೂಕು ಜೆಡಿಎಸ್ ಯುವ ಘಟಕದ ಅಧ್ಯಕ್ಷ ಸೈಫುದ್ದಿನ್ ಚಾಮಿಯಾಲ,ಕುಶಾಲನಗರ ತಾಲೂಕು ಅಲ್ಪಸಂಖ್ಯಾತ ಅಧ್ಯಕ್ಷ ಸಿಯಾಬುದ್ದೀನ್,ಮಡಿಕೇರಿ ತಾಲೂಕು ಅಲ್ಪಸಂಖ್ಯಾತ ಅಧ್ಯಕ್ಷ ಅಶ್ರಫ್ ಹಾಕತ್ತೂರ್, ಅಲ್ಪಸಂಖ್ಯಾತ ಘಟಕದ ರಾಜ್ಯ ಕಾರ್ಯದರ್ಶಿ ಅಬಿದ್ ಹುಸೈನ್ ಇದ್ದರು. ಕೊಡಗು ನ್ಯೂಸ್

Read More

ಅಂಗಡಿ ಮುಂಗಟ್ಟು ಮುಚ್ಚಿ ಪ್ರತಿಭಯನೆಗೆ ವರ್ತಕರ ಸಾಥ್ ಮರಗೋಡು: ಸಂಚಾರ ಯೋಗ್ಯತೆ ಕಳೆದುಕೊಂಡ ಕಟ್ಟೆಮಾಡು–ಮರಗೋಡು ರಸ್ತೆಯ ದುಸ್ಥಿತಿಯನ್ನು ಖಂಡಿಸಿ ಮರಗೋಡು ಗ್ರಾಮದಲ್ಲಿ ನಡೆದ ರಸ್ತೆ ತಡೆ ಪ್ರತಿಭಟನೆಗೆ ವ್ಯಾಪಕ ಬೆಂಬಲ ವ್ಯಕ್ತವಾಯಿತು. ಪ್ರತಿಭಟನೆಯ ಅಂಗವಾಗಿ ಗ್ರಾಮದಲ್ಲಿನ ವ್ಯಾಪಾರಸ್ಥರು ಅಂಗಡಿ ಮುಂಗಟ್ಟುಗಳನ್ನು ಮುಚ್ಚಿ ಗ್ರಾಮಸ್ಥರ ಹೋರಾಟಕ್ಕೆ ಸಂಪೂರ್ಣ ಬೆಂಬಲ ಸೂಚಿಸಿದರು. ಕಳೆದ 20 ವರ್ಷಗಳಿಂದ ಡಾಂಬರೀಕರಣವಾಗದಿರುವ ಈ ಪ್ರಮುಖ ರಸ್ತೆಯಿಂದ ಸಾರ್ವಜನಿಕರು, ವ್ಯಾಪಾರಿಗಳು ಹಾಗೂ ವಾಹನ ಸವಾರರು ತೀವ್ರ ಸಂಕಷ್ಟ ಅನುಭವಿಸುತ್ತಿದ್ದಾರೆ. ಸರ್ಕಾರ ಹಾಗೂ ಸಂಬಂಧಪಟ್ಟ ಇಲಾಖೆಗಳ ನಿರ್ಲಕ್ಷ್ಯದಿಂದ ಬೇಸತ್ತ ಗ್ರಾಮಸ್ಥರು ಮರಗೋಡು ಗ್ರಾಮ ಕೇಂದ್ರದಲ್ಲಿ ಜಮಾಯಿಸಿ ಪ್ರತಿಭಟನೆ ನಡೆಸಿದರು. ಪ್ರತಿಭಟನೆ ಹಿನ್ನೆಲೆಯಲ್ಲಿ ಖಾಸಗಿ ಬಸ್‌ಗಳು ಸಂಚಾರ ಸ್ಥಗಿತಗೊಳಿಸಿದ ಪರಿಣಾಮ ಪ್ರಯಾಣಿಕರು ತೊಂದರೆಗೆ ಒಳಗಾದರು. ಗುಂಡಿ ಬಿದ್ದ ರಸ್ತೆಯಲ್ಲಿ ನಿತ್ಯ ಬೈಕ್ ಸವಾರರು ಉರುಳಿ ಬೀಳುವ ಸ್ಥಿತಿ ನಿರ್ಮಾಣವಾಗಿದ್ದು, ಹದಗೆಟ್ಟ ರಸ್ತೆಯಲ್ಲಿ ವಾಹನ ಸವಾರರು ಪ್ರಾಣಪಣಕ್ಕೆ ಸರ್ಕಸ್ ಮಾಡುವಂತಾಗಿದೆ. ಸ್ಥಳಕ್ಕೆ ಮಡಿಕೇರಿ ಡಿವೈಎಸ್‌ಪಿ ಸೂರಜ್ ಭೇಟಿ ನೀಡಿ, ಸಾರ್ವಜನಿಕರಿಗೆ ತೊಂದರೆ ಆಗದಂತೆ ರಸ್ತೆ…

Read More

ದಕ್ಷಿಣ ಕೊಡಗಿಗೂ ಲಗ್ಗೆ ಇಟ್ಟ ಪ್ರವಾಸಿಗರು ಮೈಸೂರು ಗೋಣಿಕೊಪ್ಪ ಮಾರ್ಗವಾಗಿ 3 ಕಿ.ಮೀ ದೂರ ಟ್ರಾಫಿಕ್ ಜಾಮ್ ಸಾಲು ಸಾಲು ರಜಾ ನಡುವೆ ವರ್ಷದ ಕೊನೆ ದಿನಗಳನ್ನು ಪ್ರಕೃತಿಯ ನಡುವೆ ಕಳೆಯಲು ಹೆಚ್ಚಿನ ಸಂಖ್ಯೆಯಲ್ಲಿ ಇದೀಗ ದಕ್ಷಿಣ ಕೊಡಗಿನತ್ತ ಪ್ರವಾಸಿಗರು ಹೆಜ್ಜೆ ಇಟ್ಟಿದ್ದಾರೆ ಎಂಬುದಕ್ಕೆ ಸಾಕ್ಷಿ ಇಂದು ಬೆಳಗಿನಿಂದಲೇ ಮೈಸೂರು ಗೋಣಿಕೊಪ್ಪಲು ರಸ್ತೆಯಲ್ಲಿ ವಾಹನ ಸಂಚಾರ ಹೆಚ್ಚಾಗಿದೆ. ಚೆನ್ನಂಗೊಲ್ಲಿ ಯಿಂದ ಗೋಣಿಕೊಪ್ಪಲ್ ವರೆಗೆ 3 ಕಿಲೋಮೀಟರ್ ಸರತಿ ಸಾಲಿನಲ್ಲಿ ನಿಧಾನಕ್ಕೆ ವಾಹನ ಹೋಗುತ್ತಿರುವ ದೃಶ್ಯ ಕಂಡು ಬಂತು. ಎಲ್ಲಾ ಅಧಿಕೃತ ಹೋಂ ಸ್ಟೇ ಹಾಗೂ ರೆಸಾರ್ಟ್ ಜನವರಿ 5ರವರೆಗೆ ಭರ್ತಿಯಾಗಿದೆ ಎಂದು ಹೇಳಲಾಗಿದೆ. ಕೊಡಗು ನ್ಯೂಸ್

Read More

*ಗೃಹಲಕ್ಷ್ಮಿ ಹಣ ಶೀಘ್ರ  ಖಾತೆಗೆ: ಅಧಿಕಾರಿಗಳ ಭರವಸೆ* ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯಸೌಧದಲ್ಲಿ ಪೊನ್ನಂಪೇಟೆ ತಾಲ್ಲೂಕು ಗ್ಯಾರಂಟಿ ಅನುಷ್ಥಾನ fಸಮಿತಿ ಪ್ರಗತಿ ಪರಿಶೀಲನಾ ಸಭೆಯು ತಾಲ್ಲೂಕು ಗ್ಯಾರಂಟಿ ಯೋಜನೆಗಳ ಅಧ್ಯಕ್ಷರಾದ ಪ್ರಶಾಂತ್ ರವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಪ್ರಮುಖವಾಗಿ ಚೆಸ್ಕಾಂ ಇಲಾಖೆ ಬಗ್ಗೆ ಚರ್ಚಿಸಿ ಇಲಾಖೆಯಿಂದ ಹಲವಾರು ಕಾಮಗಾರಿಗಳು ಪೂರ್ಣಗೊಂಡಿದ್ದು ಉತ್ತಮವಾಗಿ ಕೆಲಸ ನಿರ್ವಹಿಸಿದ್ದಾರೆ ಎಂದು ಸಭೆಯಲ್ಲಿ ಸರ್ವಸದಸ್ಯರು ಅಭಿಪ್ರಾಯ ವ್ಯಕ್ತಪಡಿಸಿದರು. ಪೊನ್ನಂಪೇಟೆ ತಾಲ್ಲೂಕಿಗೆ 151.97 ಅನುದಾನ ಬಿಡುಗಡೆಯಾಗಿದ್ದು 56 ಕೋಟಿ ರೂ.ವೆಚ್ಚದ ಕಾಮಗಾರಿಗಳು ತಾಲ್ಲೂಕಿನಲ್ಲಿ ಪೂರ್ಣಗೊಂಡಿದೆ ಎಂದು ಸಭೆಗೆ ಚೆಸ್ಕಾಂ‌ ಅಧಿಕಾರಿಯವರು ಮಾಹಿತಿ ನೀಡಿದರು.ತಾಲ್ಲೂಕಿನಲ್ಲಿ 99.26 ರಷ್ಟು ಗೃಹ ಜ್ಯೋತಿ ಯೋಜನೆಯನ್ನು ಸದುಪಯೋಗಪಡಿಸಿಕೊಂಡಿದ್ದಾರೆ ಸಭೆಗ ತಿಳಿಸಿದರು. ವರ್ಷದ ಅಂತ್ಯದ ಒಳಗಾಗಿ ಎಲ್ಲಾ ವಿದ್ಯುತ್ ಸಂಬಂಧಿತ ಕಾಮಗಾರಿಗಳು ಪೂರ್ಣಗೊಳಿಸಲು ಕ್ರಮವಹಿ ಎಂದು ಚೆಸ್ಕಾಂ‌ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು. ಅನ್ನಭಾಗ್ಯ-” ಕಾಳಸಂತೆಯಲ್ಲಿ” ಅಕ್ಕಿ ಮಾರಟವಾಗುವುದನ್ನು ತಡೆಗಟ್ಟಲು ಸೂಚನಾ ನಾಮಫಲಗಳನ್ನು ನ್ಯಾಯಬೆಲೆ ಅಂಗಡಿಗಳಲ್ಲಿ ಅಳವಡಿಸುತ್ತಿಲ್ಲ ಕಡ್ಡಾಯವಾಗಿ ಅಳವಡಿಸಲು ಕ್ರಮವಹಿಸಿ ಸಾರ್ವಜನಿಕರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನೋಡಿಕೊಳ್ಳಲು…

Read More

ನೂತನವಾಗಿ ನಿರ್ಮಾಣವಾಗಿರುವ ರಸ್ತೆ ಕಳಪೆ ಕಾಮಗಾರಿ ಕುರಿತು ವರದಿಯಾಗಿರುವ ಬೆನ್ನಲ್ಲೇ ಗುತ್ತಿಗೆದಾರ ರನ್ನು ಕಪ್ಪು ಪಟ್ಟಿಗೆ ಸೇರಿಸಲು ಶಾಸಕ ಮಂತರ್ ಗೌಡ ಖಡಕ್ ಸೂಚನೆ ಕಡಗದಾಳು ವ್ಯಾಪ್ತಿಯಲ್ಲಿ ರಸ್ತೆ ದುರಸ್ತಿ ಕಾಮಗಾರಿಯನ್ನು ಕಳಪೆಯಾಗಿ ನಿರ್ವಹಿಸಿದ ಗುತ್ತಿಗೆದಾರನನ್ನು ತಕ್ಷಣವೇ ಕಪ್ಪು ಪಟ್ಟಿಗೆ ಸೇರಿಸಿ ನಿರ್ವಹಣೆ ಹೊತ್ತ ಅಧಿಕಾರಿಯ ಮೇಲೆ ಶಿಸ್ತು ಕ್ರಮ ಜರುಗಿಸಲು ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರು ಸೂಚನೆ ನೀಡಿದ್ದು ಗುತ್ತಿಗೆದಾರನ ಬಿಲ್ ತಡೆಹಿಡಿಯಲು ಪಿ ಡಬ್ಲೂ ಡಿ ಮೇಲಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ ಎಂದು ಕೊಡಗು ಜಿಲ್ಲಾ ಕಾಂಗ್ರೆಸ್ ವಕ್ತಾರ ತೆನ್ನಿರ ಮೈನಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ. ಜಿಲ್ಲೆಯಾದ್ಯಂತ ಇರುವ ಲೋಕೋಪಯೋಗಿ ಮುಖ್ಯ ರಸ್ತೆಗಳನ್ನು ದುರಸ್ತಿ ಪಡಿಸಲು ಶಾಸಕದ್ವಯರು ಅತೀ ಹೆಚ್ಚಿನ ಅನುದಾನ ತಂದಿದ್ದು ಟೆಂಡರ್ ಮೂಲಕ ಕಾಮಗಾರಿಗೆ ಚಾಲನೆ ನೀಡಿದ್ದಾರೆ.ಟೆಂಡರ್ ಪಡೆದಿರುವ ಕೆಲವು ಗುತ್ತಿಗೆದಾರರು ಅನೇಕ ವರ್ಷಗಳಿಂದ ಅರ್ಧಂಭರ್ಧ ಕೆಲಸ ಮಾಡುವುದನ್ನು ರೂಢಿ ಮಾಡಿಕೊಂಡಿದ್ದು ಅದೇ ಪ್ರಕ್ರಿಯೆ ಮುಂದುವರಿಸುತ್ತಿರುವುದು ಕಂಡು ಬಂದಿದ್ದು ಅಂತಹ ಗುತ್ತಿಗೆದಾರರ…

Read More

ಮಡಿಕೇರಿಯಲ್ಲಿ ಮತ್ತೆ ಕಳ್ಳನ ಕೈಚಳಕ. ಸಿದ್ದಾಪುರ ರಸ್ತೆಯಲ್ಲಿ ಡಿಸಿ ಮನೆ ಬಳಿಯಲ್ಲಿಯೇ ಇರುವ ಮನೆಗೆ ನುಗ್ಗಿ ಕಳ್ಳತನ ಮಾಡಿದ ಯುವ ಚೋರ. ಮೂರು ದಿನದ ಹಿಂದೆ ಮಾಜಿ ಕೌನ್ಸಿಲರ್ ಉನ್ನಿ ಕೃಷ್ಣ ಅವರ ಮನೆ ನುಗ್ಗಲು ಯತ್ನಿಸಿದ್ದ ಕಳ್ಳನಿಂದಲೇ ಇಂದು ಮತ್ತೆ ದುಷ್ಕೃತ್ಯ. ಮಧ್ಯಾನ 2.30 ಗಂಟೆ ಸುಮಾರಿಗೆ ಸಿದ್ದಾಪುರ ರಸ್ತೆಯಲ್ಲಿನ ಪ್ರಶಾಂತ್ ಮನೆಗೆ ನುಗ್ಗಿ ಕಳ್ಳತನ. ರಾತ್ರಿ ಮನೆಗೆ ಪ್ರಶಾಂತ್ ಮರಳಿದಾಗ ಬೆಳಕಿಗೆ ಬಂದ ಕೃತ್ಯ. ಮನೆ ಚೆಲ್ಲಾಪಿಲ್ಲಿ ಮಾಡಿ ಹೋಗಿರುವ ಚೋರ. ಸಿ. ಸಿ. ಕ್ಯಾಮೆರಾದಲ್ಲಿ ಕಳ್ಳನ ದೃಶ್ಯ ಸೆರೆ. ಮಡಿಕೇರಿಯ ಜನತೆಗೆ ಈಗ ಯುವ ಚೋರ ನ ಆತಂಕ. ಪೊಲೀಸರು ಈ ಕಳ್ಳನನ್ನು ಕೂಡಲೇ ಕಾರ್ಯಾಚರಣೆ ಮೂಲಕ ಬಂಧಿಸುವಂತೆ ನಾಗರಿಕರ ಆಗ್ರಹ. ಕೊಡಗು ನ್ಯೂಸ್

Read More

ದಿವ್ಯಾಂಗರಾದ ಪವನ್ ರವರು ಎ.ಎಸ್ ಪೊನ್ನಣ್ಣನವರನ್ನು ಭೇಟಿಯಾದರು. ಸಿದ್ದಾಪುರ ಗ್ರಾಮದ ನಿವಾಸಿ, ಪವನ್ ಎಂಬ ದಿವ್ಯಾಂಗರು, ಇಂದು ರಿಕ್ಷಾದಲ್ಲಿ ವಿರಾಜಪೇಟೆಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರ ಗೃಹ ಕಚೇರಿಗೆ ಆಗಮಿಸಿ ತನ್ನ ಅಳಲನ್ನು ತೋಡಿಕೊಂಡರು. ಅವರು ಇದ್ದಲ್ಲಿಗೆ ತೆರಳಿದ ಮಾನ್ಯ ಶಾಸಕರು ಅವರ ಆಹಾಲುಗಳನ್ನು ಆಲಿಸಿ, ಧೈರ್ಯದ ಮಾತುಗಳನ್ನಾಡಿದರಲ್ಲದೆ ಮುಂದಿನ ದಿನಗಳಲ್ಲಿ ಅವರ ಜೀವನೋಪಾಯಕ್ಕೆ ಅಗತ್ಯ ಕ್ರಮ ಕೈಗೊಳ್ಳುವಂತೆ ನೋಡಿಕೊಳ್ಳಲಾಗುವುದು ಎಂಬ ಭರವಸೆ ನೀಡಿದರು. ಕೊಡಗು ನ್ಯೂಸ್

Read More

ಲೈಂಗಿಕ ದೌರ್ಜನ್ಯದಿಂದ ಮಕ್ಕಳ ಸಂರಕ್ಷಣೆ ಕುರಿತು ಮಡಿಕೇರಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಹಿತಿ ಕಾರ್ಯಗಾರ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು :ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಮಡಿಕೇರಿ ತಾಲೂಕು ಶಿಶು ಅಭಿವೃದ್ಧಿ ಯೋಜನಾಧಿಕಾರಿ ಕಚೇರಿಯ ಸಹಯೋಗದೊಂದಲ್ಲಿ ಲೈಂಗಿಕ ದೌರ್ಜನ್ಯದಿಂದ ಮಕ್ಕಳ ಸಂರಕ್ಷಣಾ ಕಾಯ್ದೆ-2012 ಕುರಿತು ಅಂಗನವಾಡಿ ಕಾರ್ಯಕರ್ತೆಯರಿಗೆ ಮಾಹಿತಿ ಕಾರ್ಯಗಾರ ಕಾರ್ಯಕ್ರಮವು ಮಡಿಕೇರಿಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯಲ್ಲಿನಡೆಯಿತು. ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳಾಭಿವೃದ್ಧಿ ಯೋಜನಾಧಿಕಾರಿ ಸೀತಾ ಲಕ್ಷ್ಮಿಅವರು ಉದ್ಘಾಟಿಸಿ ಮಾತನಾಡಿ, ಹೆಣ್ಣು ಮಗಳನ್ನು ರಕ್ಷಿಸಿ ಹೆಣ್ಣು ಮಗಳನ್ನು ಓದಿಸಿ. ಯೋಜನೆಯು ಕುಸಿಯುತ್ತಿರುವ ಮಕ್ಕಳ ಲಿಂಗ ಅನುಪಾತವನ್ನು ಪರಿಹರಿಸುವ ಮತ್ತು ಹೆಣ್ಣು ಮಗುವಿನ ಬದುಕುಳಿಯುವಿಕೆ, ರಕ್ಷಣೆ ಮತ್ತು ಹೆಣ್ಣು ಮಗುವಿನ ಶಿಕ್ಷಣವನ್ನು ಉತ್ತೇಜಿಸುವ ಗುರಿಯನ್ನು ಹೊಂದಿದೆ ಎಂದು ಹೇಳಿದರು. ಪ್ರಭಾರ ಸಹಾಯಕ ಶಿಶು ಅಭಿವೃದ್ದಿ ಯೋಜನಾಧಿಕಾರಿ ಶೀಲಾ ಅಶೋಕ್ ಅವರು ಮಾತನಾಡಿ ಪೌಷ್ಟಿಕ ಆಹಾರ ಸೇವನೆಯಿಂದ ಆರೋಗ್ಯ ಸುಧಾರಣೆ ಸಾಧ್ಯವಿದೆ. ಈ ನಿಟ್ಟಿನಲ್ಲಿ ಸರ್ಕಾರವು ಪೋಷಣ್ ಅಭಿಯಾನ ಯೋಜನೆಯ ಮೂಲಕ…

Read More

ವಿರಾಜಪೇಟೆಯ ಮಾಜಿ ಸೈನಿಕರ ಸಂಘದ ಮೂರನೇ ಮಹಡಿಯ ಕಟ್ಟಡ ನಿರ್ಮಾಣಕ್ಕೆ, ಸರ್ಕಾರದ ವತಿಯಿಂದ ಹಣಕಾಸು ನೆರವು ಕೇಳಿದ್ದು, ಸರ್ಕಾರದ ವತಿಯಿಂದ ಹಣ ಬರುವುದು ಸ್ವಲ್ಪ ವಿಳಂಬ ಆಗಬಹುದು ಎಂಬ ಕಾರಣದಿಂದಾಗಿ, ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು, ವೈಯಕ್ತಿಕವಾಗಿ ₹1 ಲಕ್ಷ ಹಣವನ್ನು ಈ ಕಾಮಗಾರಿ ಮುಂದುವರೆಯಲು ನೀಡಿರುತ್ತಾರೆ. ಈ ಹಿನ್ನೆಲೆಯಲ್ಲಿ, ಇಂದು ಮಾಜಿ ಸೈನಿಕ ಸಂಘದ ಅಧ್ಯಕ್ಷರು ಮತ್ತು ಆಡಳಿತ ಮಂಡಳಿಯ ಸದಸ್ಯರು, ಶಾಸಕರ ಗೃಹ ಕಛೇರಿಯಲ್ಲಿ ಮಾನ್ಯ ಶಾಸಕರಿಗೆ ಸನ್ಮಾನ ಮಾಡಿದರು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು ಶ್ರೀ ಪಟ್ಟಡ ರಂಜಿ ಪೂಣಚ್ಚ, ಜೋಕಿಮ್, ಬಟ್ಟಕಳ್ಳಂಡ ರಾಜ, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರು ಪಟ್ಟಡ ರಕ್ಷಿತ್ ಚಂಗಪ್ಪ, ಮಂಜುನಾಥ್, ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರು ಮಹೇಶ್ ನಾಚಯ್ಯ, ಮಾಜಿ ಸೈನಿಕರಾದ ಚಪ್ಪಂಡ ಹರೀಶ್, ಪುಗ್ಗೆರ ನಂದ, ತೋರೆರ ಪೂವಯ್ಯ,…

Read More