- ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
- ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
- ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
- ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
- ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
- ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ
- ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
- ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
Author: Kodagu-admin
ಕೊಡಗು-ಮೈಸೂರು ಪೊಲೀಸರ ಕಟ್ಟುನಿಟ್ಟಿನ ಕ್ರಮ ಹಿನ್ನೆಲೆ ಕುಶಾಲನಗರ ಕೊಪ್ಪ ಬೈಲುಕೊಪ್ಪ ಗಡಿ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಹೈಟೆಕ್ ಆಯುರ್ವೇದಿಕ್ ಮಸಾಜ್ ಕೇಂದ್ರಗಳಿಗೆ ಬೀಗ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ 15 ಮಸಾಜ್ ಕೇಂದ್ರಗಳು ಲಾಕ್ ಔಟ್ ಆಗಿದೆ. ಕೊಡಗು ನ್ಯೂಸ್
ಕುಶಲನಗರ ಹೈಟೆಕ್ ಸ್ಪಾ ಗಳಿಗೆ ಬೀಗ ಕೊಡಗು-ಮೈಸೂರು ಪೊಲೀಸರ ಕಟ್ಟುನಿಟ್ಟಿನ ಕ್ರಮ ಹಿನ್ನೆಲೆ ಕುಶಾಲನಗರ ಕೊಪ್ಪ ಬೈಲುಕೊಪ್ಪ ಗಡಿ ವ್ಯಾಪ್ತಿಯಲ್ಲಿ ನಡೆಯುತ್ತಿದ್ದ ಹೈಟೆಕ್ ಆಯುರ್ವೇದಿಕ್ ಮಸಾಜ್ ಕೇಂದ್ರಗಳಿಗೆ ಬೀಗ ಸಾರ್ವಜನಿಕ ದೂರಿನ ಹಿನ್ನೆಲೆಯಲ್ಲಿ 15 ಮಸಾಜ್ ಕೇಂದ್ರಗಳು ಲಾಕ್ ಔಟ್ ಆಗಿದೆ. ಕೊಡಗು ನ್ಯೂಸ್
ಕೊಡಗು ಜಿಲ್ಲಾ ಪೊಲೀಸ್ ಪ್ರಕಟಣೆ ಕಾಫಿ ಮತ್ತು ಮೆಣಸು ಬೆಳಗಾರರಿಗೆ ಎಚ್ಚರದ ಸಂದೇಶ ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿನ ಎಲ್ಲಾ ಕಾಫಿ ಮತ್ತು ಕಾಳು ಮೆಣಸು ಬೆಳೆಗಾರರು ಕಾಫಿ-ಕಾಳು ಮೆಣಸು ಫಸಲನ್ನು ಕೊಯ್ಲು ಮಾಡುವ ಕಾಲವಾಗಿರುತ್ತದೆ. ಕೊಯ್ಲು ಮಾಡಿರುವ ಕಾಫಿ ಕಾಳು ಮೆಣಸನ್ನು ಸಂಗ್ರಹ ಮಾಡಿರುವ ಸ್ಥಳಗಳಿಂದ ಕಳವು ಮಾಡಿರುವ ಕುರಿತು ವಿವಿಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಆದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಜಿಲ್ಲೆಯಲ್ಲಿನ ಕಾಫಿ ಮತ್ತು ಕಾಳುಮೆಣಸು ವ್ಯಾಪಾರ ಮಾಡುವವರೊಂದಿಗೆ ಸಭೆ ನಡೆಸಿ ಸೂಕ್ತ ಸಲಹೆ ಸೂಚನೆಗಳನ್ನು ನೀಡುವಂತೆ ಹಾಗೂ ಕಾಫಿ ಮತ್ತು ಕಾಳು ಮೆಣಸು ವ್ಯಾಪಾರಸ್ಥರ ಸಂಪೂರ್ಣ ಮಾಹಿತಿಯನ್ನು ಸಂಗ್ರಹಿಸುವಂತೆ ಸ್ಥಳೀಯ ಪೊಲೀಸ್ ಠಾಣಾಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಲಾಗಿರುತ್ತದೆ. ಜಿಲ್ಲೆಯಲ್ಲಿನ ಕಾಫಿ ಮತ್ತು ಕಾಳುಮೆಣಸು ವ್ಯಾಪಾರಸ್ಥರು ಕಾಫಿ ಮತ್ತು ಕಾಳು ಮೆಣಸು ಖರೀದಿ ಮಾಡುವ ಸಂದರ್ಭದಲ್ಲಿ ಮಾರಾಟ ಮಾಡುವವರ ಸಂಪೂರ್ಣ ಮಾಹಿತಿ ಸಂಗ್ರಹಿಸಿ ಇಟ್ಟುಕೊಳ್ಳುವುದು ಮತ್ತು ಬೆಳೆ ಖರೀದಿ ಸಂದರ್ಭ ಸಂಶಯ ಉಂಟಾದಲ್ಲಿ ಅಂತಹ ವ್ಯಕ್ತಿಗಳ ಭಾವಚಿತ್ರವನ್ನು ತೆಗೆದುಕೊಳ್ಳುವುದು ಹಾಗೂ…
ಮಡಿಕೇರಿ ಲೋಕಾಯುಕ್ತ ಇಂಜಿನಿಯರ್ ಹಾಗೂ ಕಾರ್ಯಪಾಲಕ ಇಂಜಿನಿಯರ್ಗಳಿಂದ ಡಿಸಿ ಕಚೇರಿ ತಡೆಗೋಡೆ ವೀಕ್ಷಣೆ ವಿವಾದಿತ ಕೊಡಗು ಡಿ.ಸಿ.ಕಛೇರಿ ತಡೆಗೋಡೆ ವೀಕ್ಷಣೆಗೆ ಬಂದ ಲೋಕಾಯುಕ್ತ ಮುಖ್ಯ ಇಂಜಿನಿಯರ್ ಹಾಗೂ ಕಾರ್ಯಪಾಲಕ ಇಂಜಿನಿಯರ್ ಗಳ ನಡೆ ಸಾರ್ವಜನಿಕ ವಲಯದಲ್ಲಿ ಸಂಶಯಕ್ಕೆ ಎಡೆ ಮಾಡಿದೆ. ಇಂದು ಬೆಳಿಗ್ಗೆ ಯಾರ ಕಣ್ಣಿಗೂ ಕಾಣಿಸದಂತೆ ತಡೆಗೋಡೆ ಬಳಿ ಬಂದು ಮೇಲಿಂದ ಒಮ್ಮೆ,ಕೆಳಗಿನಿಂದ ಒಮ್ಮೆ ತಡೆಗೋಡೆಯನ್ನು ಪ್ರವಾಸಿಗರ ರೀತಿ ವೀಕ್ಷಣೆ ಮಾಡಿ ನಂತರ ನಗರ ಹೊರವಲಯದ ಗೌಪ್ಯ ಸ್ಥಳಕ್ಕೆ ತೆರಳಿದ ಅಧಿಕಾರಿಗಳು ಪತ್ರಕರ್ತರ ಕಣ್ಣಿಗೂ ಹಾಗೂ ಸಾರ್ವಜನಿಕರ ಕಣ್ಣಿಗೂ ಕಾಣಸಿಗದೆ ಮಾಯವಾದ ಬಗ್ಗೆ ವರದಿಯಾಗಿದೆ. ಬರೋಬ್ಬರಿ 7.5 ಕೋಟಿ ವೆಚ್ಚದಲ್ಲಿ ನಿರ್ಮಾಣವಾದ ತಡೆಗೋಡೆ ಕಳಪೆ ಕಾಮಗಾರಿ ಪರಿಣಾಮ ಕುಸಿದು ಬೀಳುವ ಆತಂಕ ಎದುರಾಗಿತ್ತು.ಈ ಕಾಮಗಾರಿಯಲ್ಲಿ ಅಕ್ರಮ ನಡೆದಿದೆ ಎಂದು ಕಾಂಗ್ರೆಸ್ ಮುಖಂಡ ತೆನ್ನಿರ ಮೈನಾ ಕರ್ನಾಟಕ ಲೋಕಾಯುಕ್ತದಲ್ಲಿ ದೂರು ಸಲ್ಲಿಸಿದ್ದರು. ಸರ್ಕಾರ ಕಳಪೆ ಕಾಮಗಾರಿ ಹಾಗೂ ದುರುಪಯೋಗ ಮೇಲ್ನೋಟಕ್ಕೆ ಸಾಬೀತಾದ ಹಿನ್ನಲೆಯಲ್ಲಿ ಅಧಿಕಾರಿಗಳ ಮೇಲೆ ಶಿಸ್ತು ಕ್ರಮ ಜರುಗಿಸಿತ್ತು. ತಡೆಗೋಡೆ…
14ನೇ ವರ್ಷದ ಗ್ರಾಮೀಣ ಮಟ್ಟದ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಸುಶಾಸನಾ ದಿನದ (ಉತ್ತಮ ಆಡಳಿತ ದಿನ) ಪ್ರಯುಕ್ತ 14ನೇ ವರ್ಷದ ಗ್ರಾಮೀಣ ಮಟ್ಟದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಯುವಜನ ವ್ಯವಹಾರ ಹಾಗೂ ಕ್ರೀಡಾ ಸಚಿವಾಲಯ,ಮೈಬಾರತ್ ಕೊಡಗು ಜಿಲ್ಲೆ, ಜಿಲ್ಲಾ ಯುವ ಒಕ್ಕೂಟ ಕೊಡಗು,ತಾಲ್ಲೂಕು ಯುವ ಒಕ್ಕೂಟ ಮಡಿಕೇರಿ, ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಲಯನ್ಸ್ ಕ್ಲಬ್ ಮಡಿಕೇರಿ, ರೋಟರಿ ಕ್ಲಬ್ ಆಫ್ ಮಡಿಕೇರಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ, ಕೊಡಗು ರೋಟರಿ ಮಡಿಕೇರಿ, ಕಾರ್ಮಿಕ ಇಲಾಖೆ ಮಡಿಕೇರಿ, ಜಿಲ್ಲಾ ಆಸ್ಪತ್ರೆ ಮಡಿಕೇರಿ, ಮೇಕೆರಿ ಗ್ರಾಮ ಪಂಚಾಯಿತಿ, ಸ್ವಾಗತ ಯುವಕ ಸಂಘ ಮೇಕೆರಿ ಇವರುಗಳ ಸಂಯುಕ್ತ ಆಶ್ರಯದಲ್ಲಿ ಡಿಸೆಂಬರ್ 26 ರಂದು 9:30 ರಿಂದ 2 ಗಂಟೆಯವರೆಗೆ ಅಂಬೇಡ್ಕರ್ ಕಾರ್ಮಿಕ ಸಹಾಯಹಸ್ತ ಯೋಜನೆಯಲ್ಲಿ ಅಸಂಘಟಿತ ಕಾರ್ಮಿಕರ ನೋಂದಣಿ ಮತ್ತು ಸ್ಮಾರ್ಟ್ ಕಾರ್ಡ್ ವಿತರಣೆ. ಕರ್ನಾಟಕ ರಾಜ್ಯ ಮೋಟಾರ್ ಸಾರಿಗೆ ಹಾಗೂ ಇತರೆ ಸಂಬಂಧಿತ ಕಾರ್ಮಿಕರ ಸಾಮಾಜಿಕ ಭದ್ರತೆ ಮತ್ತು ಕ್ಷೇಮಾಭಿವೃದ್ಧಿಯಿಂದ…
ನಾಪೋಕ್ಲು ಕೊಡವ ಸಮಾಜದ ವತಿಯಿಂದ ಎ ಎಸ್ ಪೊನ್ನಣ್ಣನವರನ್ನು ಸನ್ಮಾನಿಸಲಾಯಿತು. ವಿವಿಧ ಅಭಿವೃದ್ಧಿ ಕಾಮಗಾರಿಗಳ ಪ್ರಯುಕ್ತ ಇಂದು ನಾಪೋಕ್ಲು ಭಾಗಕ್ಕೆ, ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಆಗಮಿಸಿದರು. ಈ ಸಂದರ್ಭದಲ್ಲಿ ನಾಪೋಕ್ಲು ಕೊಡವ ಸಮಾಜದ ವತಿಯಿಂದ ಮಾನ್ಯ ಶಾಸಕರನ್ನು ಅದ್ದೂರಿಯಾಗಿ ಬರಮಾಡಿಕೊಳ್ಳಲಾಯಿತು ಹಾಗೂ ವಿಶೇಷ ಸನ್ಮಾನ ಏರ್ಪಡಿಸಲಾಯಿತು. ಇತ್ತೀಚೆಗೆ ಮುಕ್ತಾಯಗೊಂಡ ಬೆಳಗಾವಿ ಚಳಿಗಾಲ ಅಧಿವೇಶನ-2025 ರಲ್ಲಿ, ಮಾನ್ಯ ಶಾಸಕರಾದ ಪೊನ್ನಣ್ಣ ರವರ ವಿಶೇಷ ಪ್ರಯತ್ನದಿಂದಾಗಿ, ಕರ್ನಾಟಕ ಭೂಕಂದಾಯ ವಿಧೇಯಕ ಅಂಗೀಕಾರ ಆಗಿರುವುದನ್ನು ಸಂಭ್ರಮಿಸಲು ಈ ಸನ್ಮಾನ ಕಾರ್ಯಕ್ರಮ ಏರ್ಪಡಿಸಲಾಗಿತ್ತು. ಈ ಕಾಯ್ದೆ ಅಂಗೀಕಾರ ಆಗಿರುವುದರಿಂದ ಮುಂದಿನ ದಿನಗಳಲ್ಲಿ ಕೊಡಗಿನ ಬಹುತೇಕ ಜನರನ್ನು ಕಾಡುತ್ತಿದ್ದ, ದಶಕಗಳ ಸಮಸ್ಯೆ ಯಾಗಿದ್ದ ಜಮ್ಮ ಹಾಗೂ ಪಟ್ಟೆದಾರ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳುವಂತಾಗಿದೆ. ಇದರಿಂದಾಗಿ ಬಹುತೇಕ ಕೊಡಗಿನ ಜನತೆಯು ಮುಂದಿನ ದಿನಗಳಲ್ಲಿ ನಿರಾಳವಾಗಿ ತಮ್ಮ ಹಕ್ಕನ್ನು ಪ್ರತಿಪಾದಿಸುತ್ತಾ ಜೀವನ ಸಾಗಿಸಬಹುದು ಎಂದು ಸನ್ಮಾನ ಏರ್ಪಡಿಸಿದವರು ವಿವರಿಸಿದರು. ಮಾನ್ಯ…
20ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾದ ನಾಪೋಕ್ಲು ಕೊಡವ ಸಮಾಜಕ್ಕೆ ತೆರಳುವ ರಸ್ತೆಯನ್ನು ಉದ್ಘಾಟಿಸಿದ ಶಾಸಕ. ಎ.ಎಸ್. ಪೊನ್ನಣ್ಣ ವರದಿ :ಝಕರಿಯ ನಾಪೋಕ್ಲು ನಾಪೋಕ್ಲು :ನಾಪೋಕ್ಲು ಕೊಡವ ಸಮಾಜಕ್ಕೆ ತೆರಳುವ ರಸ್ತೆಗೆ ಪಂಚಾಯತ್ ರಾಜ್ ಇಲಾಖೆಯಿಂದ ಬಿಡುಗಡೆಯಾದ 20 ಲಕ್ಷ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾದ ಕಾಂಕ್ರೀಟ್ ರಸ್ತೆಯನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಎ.ಎಸ್. ಪೊನ್ನಣ್ಣ ಅವರು ಲೋಕಾರ್ಪಣೆ ಗೊಳಿಸಿದರು. ಬಳಿಕ ಮಾತನಾಡಿದ ಶಾಸಕರು ಹಲವು ವರ್ಷಗಳಿಂದ ನಾಪೋಕ್ಲು ಕೊಡವ ಸಮಾಜಕ್ಕೆ ತೆರಳುವ ರಸ್ತೆ ಹದಗೆಟ್ಟಿದ್ದು ದುರಸ್ತಿಪಡಿಸುವಂತೆ ಕೊಡವ ಸಮಾಜದ ಅಧ್ಯಕ್ಷರಾದ ಮುಂಡಂಡ ನಾಣಯ್ಯ ಹಾಗೂ ಈ ಭಾಗದ ಸ್ಥಳೀಯರು ಮನವಿಮಾಡಿದ್ದರು.ಅದರಂತೆ ಪಂಚಾಯಿತ್ ರಾಜ್ ಇಲಾಖೆಯ ಪ್ರಗತಿಪತ ಯೋಜನೆ ಅಡಿಯಲ್ಲಿ ಈ ರಸ್ತೆಯ ಒಂದು ಭಾಗವನ್ನು ತುರ್ತಾಗಿ 20 ಲಕ್ಷ ರೂಗಳ ಅನುದಾನದಲ್ಲಿ ಕಾಂಕ್ರೆಟ್ ರಸ್ತೆಯನ್ನು ನಿರ್ಮಿಸಲಾಗಿದ್ದು ಅದರ ಉದ್ಘಾಟನೆ ನೆರವೇರಿಸಿದ್ದೇವೆ. ಇದೇ ಮಾರ್ಗವಾಗಿ ಅಜ್ಜಿಮುಟ್ಟ ಎಮ್ಮೆಮಾಡು ಗ್ರಾಮಕ್ಕೆ ತೆರಳುವ 3.5ಕಿಮೀ ರಸ್ತೆಯನ್ನು ಪಂಚಾಯತ್…
ರಸಪ್ರಶ್ನೆ ಸ್ಪರ್ಧೆ ಮರಗೋಡು ವಿದ್ಯಾಸಂಸ್ಥೆಯ ಆಡಳಿತ ಮಂಡಳಿಯ ವತಿಯಿಂದ ಜಿಲ್ಲಾ ಮಟ್ಟದ ಸ್ಪರ್ಧೆಯನ್ನು ಆಯೋಜನೆ ಮಾಡಲಾಗಿದ್ದು, ಮರಗೋಡು ಭಾರತಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪದವಿ ಪೂರ್ವ ಕಾಲೇಜುಗಳ ಜಿಲ್ಲಾ ಮಟ್ಟದ ರಸಪ್ರಶ್ನೆ ಸ್ಪರ್ಧೆಯಲ್ಲಿ ಕೂಡಿಗೆ ಸರ್ಕಾರಿ ಕಾಲೇಜಿನ ಮಾನಸ ಪಿ.ಜಿ. ಮತ್ತು ಮಾನಸ ಎ.ಪ್ರಥಮ ಸ್ಥಾನ ಪಡೆದು ರೂ.10 ಸಾವಿರ ನಗದು ಬಹುಮಾನ ಮತ್ತು ಆಕರ್ಷಕ ಪಾರಿತೋಷಕ ಪಡೆದರು. ನೆಲ್ಲಿಹುದಿಕೇರಿ ಕಾಲೇಜಿನ ಸಫಾ ಮತ್ತು ಯುಕ್ತ ದ್ವಿತೀಯ ಸ್ಥಾನ ಮತ್ತು ಚೆನ್ನಮ್ಮ ಮಾದಾಪುರ ಕಾಲೇಜಿನ ಸುಕನ್ಯ ಮತ್ತು ರಕ್ಷಾ ತೃತೀಯ ಸ್ಥಾನ ಪಡೆದರು. ಈ ಸ್ಪರ್ಧೆಯನ್ನು ಪೊಕ್‍ಲಂಡ್ರ ಪ್ರಹ್ಲಾದ್ ಅವರು ನಡೆಸಿಕೊಟ್ಟರು. ರಸಪ್ರಶ್ನೆಯು ಎರಡು ಹಂತದಲ್ಲಿ ನಡೆಯಿತು. ಲಿಖಿತ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದು ಅರ್ಹತೆ ಪಡೆದ 8 ತಂಡಗಳಿಗೆ ಮೌಖಿಕ ಪ್ರಶ್ನೋತರದ ಮೂಲಕ ವಿವಿಧ ವಿಷಯಗಳ ಬಗ್ಗೆ ಪ್ರಶ್ನಿಸಿ ವಿದ್ಯಾರ್ಥಿಗಳಲ್ಲಿ ಜ್ಞಾನ ಅರಿವನ್ನು ಹೆಚ್ಚಿಸಲು ಪ್ರಯತ್ನಿಸಲಾಯಿತು. ವಿಜೇತ ವಿದ್ಯಾರ್ಥಿಗಳಿಗೆ ಆಕರ್ಷಕ ಬಹುಮಾನ ನೀಡಲಾಯಿತು. ಪ್ರಥಮ ಬಹುಮಾನವನ್ನು ನಿವೃತ್ತ ಪ್ರಾಂಶುಪಾಲರಾದ…
ಸುಂಟಿಕೊಪ್ಪ ಪಿಎಸ್ ಐ ಮೋಹನ್ ರಾಜ್ ಗೆ ಬೆಳ್ಳಿ ಪದಕ ಕೊಡಗಿನ ಪೊನ್ನಂಪೇಟೆಯಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದರಲ್ಲಿ ಆರೋಪಿಯನ್ನು ಬಂಧಿಸಿ ಉತ್ತಮವಾದ ತನಿಖೆಯನ್ನು ನಡೆಸಿ ಸಾಕ್ಷ್ಯಧಾರಗಳನ್ನು ಕಲೆಹಾಕಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಲ್ಲಿ ಪ್ರಮುಖ ಪಾತ್ರವಹಿಸಿದ ತಂಡದಲ್ಲಿದ್ದ ಸುಂಟಿಕೊಪ್ಪ ಪೊಲೀಸ್ ಠಾಣೆಯ ಪಿಎಸ್ಐ ಪಿ.ಮೋಹನ್‌ರಾಜ್ ಅವರಿಗೆ ಪ್ರಶಂಸನಾ ಪತ್ರ ಮತ್ತು ಬೆಳ್ಳಿ ಪದಕ ಲಭಿಸಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮೋಹನ್‌ರಾಜ್ ಸೇರಿದಂತೆ ವಿವಿಧ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ಮತ್ತು ಬೆಳ್ಳಿಯ ಪದಕಗಳನ್ನು ನೀಡಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ.ರಾಮರಾಜನ್ ಗೌರವಿಸಿದ್ದಾರೆ. ಕೊಡಗು ನ್ಯೂಸ್
*ಸುಂಟಿಕೊಪ್ಪ ಪಿಎಸ್ ಐ ಮೋಹನ್ ರಾಜ್ ಗೆ ಬೆಳ್ಳಿ ಪದಕ* ಕೊಡಗಿನ ಪೊನ್ನಂಪೇಟೆಯಲ್ಲಿ ನಡೆದಿದ್ದ ಕೊಲೆ ಪ್ರಕರಣವೊಂದರಲ್ಲಿ ಆರೋಪಿಯನ್ನು ಬಂಧಿಸಿ ಉತ್ತಮವಾದ ತನಿಖೆಯನ್ನು ನಡೆಸಿ ಸಾಕ್ಷ್ಯಧಾರಗಳನ್ನು ಕಲೆಹಾಕಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಲ್ಲಿ ಪ್ರಮುಖ ಪಾತ್ರವಹಿಸಿದ ತಂಡದಲ್ಲಿದ್ದ ಸುಂಟಿಕೊಪ್ಪ ಪೊಲೀಸ್ ಠಾಣೆಯ ಪಿಎಸ್ಐ ಪಿ.ಮೋಹನ್‌ರಾಜ್ ಅವರಿಗೆ ಪ್ರಶಂಸನಾ ಪತ್ರ ಮತ್ತು ಬೆಳ್ಳಿ ಪದಕ ಲಭಿಸಿದೆ. ಜಿಲ್ಲಾ ಪೊಲೀಸ್ ಅಧೀಕ್ಷಕರ ಕಛೇರಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮೋಹನ್‌ರಾಜ್ ಸೇರಿದಂತೆ ವಿವಿಧ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪ್ರಶಂಸನಾ ಪತ್ರ ಮತ್ತು ಬೆಳ್ಳಿಯ ಪದಕಗಳನ್ನು ನೀಡಿ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಕೆ.ರಾಮರಾಜನ್ ಗೌರವಿಸಿದ್ದಾರೆ. ಕೊಡಗು ನ್ಯೂಸ್
