- ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
- ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
- ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
- ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
- ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
- ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ
- ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
- ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
Author: Kodagu-admin
ಮಹಿಳೆಯರು ಜಾಗೃತರಾದರೆ ಸ್ವಸ್ಥ ಮತ್ತು ಸದೃಢ ಸಮಾಜ ನಿರ್ಮಾಣ ಸಾಧ್ಯ -ಜಿ.ವಿ. ಶ್ರೀನಾಥ್ ವರದಿ:ಝಕರಿಯ ನಾಪೋಕ್ಲು ನಾಪೋಕ್ಲು :ಮಹಿಳೆಯರು ಸುಶಿಕ್ಷಿತರಾಗುವ ಮೂಲಕ ಜಾಗೃತರಾದರೆ ಸ್ವಸ್ಥ ಮತ್ತು ಸದೃಢ ಸಮಾಜ ನಿರ್ಮಾಣ ಸಾದ್ಯವೆಂದು ಮಡಿಕೇರಿ ತಾಲ್ಲೂಕು ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿಗಳಾದ ಜಿ.ವಿ.ಶ್ರೀನಾಥ್ ಅಭಿಪ್ರಾಯಪಟ್ಟರು. ಮಕ್ಕಂದೂರು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಸಂಜೀವಿನಿ ಒಕ್ಕೂಟದ ಸ್ತ್ರೀ ಶಕ್ತಿ ಸಂಘಗಳು ಆಯೋಜಿಸಿದ ಲಿಂಗತ್ವ ಆಧಾರಿತ ದೌರ್ಜನ್ಯ ವಿರುದ್ದ ರಾಷ್ಟ್ರೀಯ ಅಭಿಯಾನದಡಿಯಲ್ಲಿ ಮಹಿಳೆಯರಿಗೆ ರಕ್ಷಣೆ ಕುರಿತು ಅರಿವು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು ಕೇವಲ ನಾಲ್ಕು ಗೋಡೆಗೆ ಸೀಮಿತವಾಗಿದ್ದ ಮಹಿಳೆ ಈಗ ಅಂತರಾಷ್ಟ್ರೀಯ ಮಟ್ಟದವರೆಗೂ ಸಾಧನೆ ಮಾಡುತ್ತಿರುವುದಕ್ಕೆ ಸಂಘಟನೆ ಮತ್ತು ಶೈಕ್ಷಣಿಕ ಬೆಳವಣಿಗೆ ಕಾರಣವಾಗಿದೆ.ಪ್ರತಿ ಹೆಣ್ಣು ಮಕ್ಕಳಿಗೆ ಶಿಕ್ಷಣ, ಸಾಮಾಜಿಕ ವ್ಯವಸ್ಥೆ, ದೈಹಿಕ, ಭಾವನಾತ್ಮಕ ಸಂಬಂಧಗಳ ಕುರಿತು ಮನೆಯಲ್ಲಿಯೇ ಶಿಕ್ಷಣ ನೀಡಬೇಕಾಗಿದೆ ಎಂದರು. ಹೆಣ್ಣೊಂದು ಕಲಿತರೆ ಶಾಲೆಯೊಂದನ್ನು ತೆರೆದಂತೆ ಎಂಬಂತೆ ಬಾಲ್ಯದಿಂದಲೇ ಶಿಕ್ಷಣ ಮತ್ತು ತಿಳುವಳಿಕೆ ನೀಡುವ ಜವಬ್ದಾರಿ ಎಲ್ಲಾ ತಾಯಂದಿರ ಮೇಲಿದೆ ಎಂದರು. …
ಕೊಡಗಿನ ಹಿರಿಯ ಹಾಕಿ ತರಬೇತುದಾರ, ಸಮಾಜ ಸೇವಕ ಪುಚ್ಚಿಮಡ ಹರೀಶ್ ಪೊನ್ನಂಪೇಟೆಯ ನಿವಾಸಿ ಕೊಡುಗೈದಾನಿ ಪುಚ್ಚಿಮಡ ದಿವಂಗತ ಬೊಪಯ್ಯ ಅವರ ಜೇಷ್ಠ ಪುತ್ರ ಹಿರಿಯ ಹಾಕಿ ತರಬೇತಿದಾರರು, ಸಮಾಜ ಸೇವಕರು, ಮಾಜಿ ಗ್ರಾಮ ಪಂಚಾಯತ್ ಸದಸ್ಯರು ಆದ ಪುಚ್ಚಿಮಡ ಹರೀಶ್ ಅನಾರೋಗ್ಯದಿಂದ ಇಂದು ಮೈಸೂರು ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ಪತ್ನಿ, ಸೇರಿದಂತೆ ಇಬ್ಬರು ಪುತ್ರಿಯರು ಓರ್ವ ಪುತ್ರ, ಸಹೋದರ ಹಾಗು ಕುಟುಂಬ ವರ್ಗದವರು, ಮೊಮ್ಮಕ್ಕಳನ್ನು ಬಿಟ್ಟು ಅಗಲಿದ್ದಾರೆ. ಪೊನ್ನoಪೇಟೆಯಲ್ಲಿ ಟ್ಯುಟೋರಿಯಲ್ ನಡೆಸುತ್ತಿದ್ದ ಸಂದರ್ಭ ಹಲವರಿಗೆ ವಿದ್ಯಾ ಧಾನವನ್ನು ಮಾಡಿದ್ದಾರೆ. ಸ್ವತಹ ಹಾಕಿ ಪಟ್ಟುವಾದ ಇವರು ಅಂದಿನ ದಿನಗಳಲ್ಲಿ ಹಲವು ತಂಡಗಳಲ್ಲಿ ಮುಂಚೂಣಿ ಆಟಗಾರರಾಗಿದ್ದರು. ನಂತರ ಪೊನ್ನಂಪೇಟೆ ಜೂನಿಯರ್ ಕಾಲೇಜ್ ಮೈದಾನದಲ್ಲಿ ಒಲಂಪಿಯನ್ ಸಿ.ಎಸ್ ಪೂಣಚ್ಚ ಸೇರಿದಂತೆ, ಕರ್ನಾಟಕ ರಾಜ್ಯ ತಂಡವನ್ನು ಪ್ರತಿನಿಧಿಸಿದ ರಿಕ್ಕಿ ಗಣಪತಿ,ಉತ್ತಯ್ಯ, ಸೇರಿದಂತೆ ಹಲವು ಕ್ರೀಡಾಪಟುಗಳಿಗೆ ಮೊದಲ ಗುರುವಾಗಿ, ತರಬೇತಿದಾರರಾಗಿದ್ದರು. ಕೊಡಗು ಜಿಲ್ಲೆಯ ತೀರ್ಪುಗಾರಿಗೆ, ತರಬೇತಿದರಾರಿಗೆ ಸೇವಿಸಲಿಸಿದ್ದಾರೆ. ಪೊನ್ನಂಪೇಟೆಯಲ್ಲಿ ಕ್ರೀಡಾ ವಸತಿ ನಿಲಯ ಸ್ಥಾಪಿಸುವಲ್ಲಿ ಕಾರಣಕರ್ತರಾದವರಲ್ಲಿ ಇವರು…
ಸರಕಾರದ ಮಹತ್ವಾಕಾಂಕ್ಷೆಯ ಪಲ್ಸ್ ಪೋಲಿಯೋ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಮುಖಂಡ ಹಾಗೂ ಸಮಾಜ ಸೇವಕ ನಾಪಂಡ ಮುತ್ತಪ್ಪ ಪುಟಾಣಿಗಳಿಗೆ ಪೋಲಿಯೊ ಹನಿಹಾಕುವ ಮೂಲಕ ಭಾಗವಹಿಸಿದರು. “ಎರಡು ಹನಿಗಳು ಪೋಲಿಯೋ ವಿರುದ್ಧ ನಿರಂತರ ಗೆಲುವು” ಕಾರ್ಯಕ್ರಮದ ಭಾಗವಾಗಿ ಹೆಬ್ಬಾಲೆ ಸರ್ಕಾರಿ ಆಸ್ಪತ್ರೆ ಹಾಗೂ ಅಂಗನವಾಡಿಗಳಲ್ಲಿ ಆಯೋಜನೆಗೊಂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ ನಾಪಂಡ ಮುತ್ತಪ್ಪನವರು ಐದು ವರ್ಷ ಒಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕೋ ಕಾರ್ಯಕ್ರಮವನ್ನು ಸರ್ಕಾರ ಹಮ್ಮಿಕೊಂಡಿದ್ದು ಡಿಸೆಂಬರ್ 21ರಿಂದ 24ರ ವರೆಗೆ ನಡೆಯುವ ಈ ಕಾರ್ಯಕ್ರಮದಲ್ಲಿ ಮಕ್ಕಳ ಸ್ವಾಸ್ತ್ಯದ ದೃಷ್ಟಿಯಿಂದ ಎಲ್ಲರೂ 5 ವರ್ಷ ಒಳಗಿನ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಪಂಚಾಯಿತಿ ಅಧ್ಯಕ್ಷರಾದ ಅರುಣ ಕುಮಾರಿ, ಮಂಜುನಾಥ,ಹೆಚ್ ಜೆ ತ್ರಿನೇಶ್, ಹಾಗೂ ರವಿ ರವರು ಮತ್ತು ಪ್ರಮುಖರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಆಶಾ ಕಾರ್ಯಕರ್ತೆಯರು ಹಾಗೂ ಆಸ್ಪತ್ರೆ ಸಿಬ್ಬಂದಿಗಳಿಗೆ ಟೋಪಿಗಳನ್ನು, ಮಕ್ಕಳಿಗೆ ಸಿಹಿ ಮತ್ತು ಆಟಿಕೆ ವಿತರಿಸಲಾಯಿತು.
ಚಿಕಿತ್ಸೆ ಗೆ ಪ್ರಥಮ ಆದ್ಯತೆ ನೀಡಿ ಬಿಲ್ ಬಗ್ಗೆ ನಂತರ ಗಮನ ಹರಿಸಿ ಎ.ಎಸ್.ಪೊನ್ನಣ್ಣ ಖಡಕ್ ಸೂಚನೆ ಸರ್ಕಾರಿ ಆಸ್ಪತ್ರೆಗೆ ದಾಖಲಾಗುವ ರೋಗಿಗಳಿಗೆ ತಕ್ಷಣವೇ ಚಿಕಿತ್ಸೆ ನೀಡಿ. ಬಿ.ಪಿ.ಎಲ್ ಅಥವಾ ಎ.ಪಿ.ಎಲ್ ನವರು ಎಂದು ನಂತರ ಮಾಹಿತಿ ಪಡೆದು ಬಿಲ್ ಬಗ್ಗೆ ನಿರ್ಧರಿಸಿ ಎಂದು ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಗಳ( ಕೊಡಗು ಜಿಲ್ಲಾಸ್ಪತ್ರೆ) ನಿರ್ದೇಶಕರಿಗೆ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಖಡಕ್ ಸೂಚನೆ ನೀಡಿದ್ದಾರೆ. ಆಕಸ್ಮಿಕ ಪಟಾಕಿ ಸಿಡಿತದಿಂದ ಬೆರಳು ಕಳೆದುಕೊಂಡು ಚಿಕಿತ್ಸೆ ಪಡೆದು ಚೇತರಿಸಿಕೊಳ್ಳುತ್ತಿರುವ ಗೋಣಿಕೊಪ್ಪದ ಶಾಲಾ ಬಾಲಕ ಪವನ್ ಆರೋಗ್ಯ ವಿಚಾರಿಸಲು ಪೊನ್ನಣ್ಣ ನವರು ಆಸ್ಪತ್ರೆಗೆ ಬಂದಾಗ ಪರಿಶಿಷ್ಟ ಪಂಗಡದ ಬಡ ಕುಟುಂಬದ ಪವನ್ ನನ್ನು ಆಸ್ಪತ್ರೆಗೆ ದಾಖಲಿಸುವ ಸಂಧರ್ಭದಲ್ಲಿ ದಾಖಲಾತಿ ಇಲ್ಲದೆ ಇದ್ದುದರಿಂದ ಎ.ಪಿ.ಎಲ್ ಎಂದು ನಿರ್ಧರಿಸಿ ಬಿಲ್ ಕಟ್ಟಿಸಲಾಗಿತ್ತು. ನಂತರ ಶಾಲ ದಾಖಲಾತಿಯನ್ನು ಸಲ್ಲಿಸಲಾಗಿತ್ತು ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ…
ನಿಷೇಧಿತ MDMA ಮಾರಾಟ: PNDA ಭ್ರಷ್ಟಾಚಾರ ನಿಗ್ರಹದ ಸಂಸ್ಥೆಯ ಕಾರ್ಯಾಧ್ಯಕ್ಷ ಜೈಲುಪಾಲು ಕುಶಾಲನಗರ: ನಿಷೇಧಿತ MDMA ಮಾದಕ ವಸ್ತುವನ್ನು ಮಾರಾಟ ಮಾಡುತ್ತಿದ್ದ ಆರೋಪದಡಿ PNDA ಭ್ರಷ್ಟಾಚಾರ ನಿಗ್ರಹ ದಳ ಎಂಬ ಸಂಸ್ಥೆಯ ಕಾರ್ಯಾಧ್ಯಕ್ಷ ಕ್ಷೆವಿಯರ್ ಎಂಬಾತನನ್ನು ಪೊಲೀಸರು ಕುಶಾಲನಗರದಲ್ಲಿ ಬಂಧಿಸಿ ಜೈಲಿಗೆ ಕಳುಹಿಸಿದ್ದಾರೆ. ಕಳೆದ ಒಂದು ವಾರದ ಹಿಂದೆ ಮಾದಕ ವಸ್ತು ಮಾರಾಟ ಮಾಡುವ ವೇಳೆ ಈತನನ್ನು ಕುಶಾಲನಗರದಲ್ಲಿ ಕುಶಾಲನಗರದಲ್ಲಿ ಬಂಧಿಸಲಾಗಿತ್ತು. ಅಲ್ಲದೆ ಈತನ ಸಂಪರ್ಕದಲ್ಲಿದ್ದ 20 ಕ್ಕೂ ಹೆಚ್ಚು ಜನರನ್ನು ಕರೆಸಿ ವೈದ್ಯಕೀಯ ಪರೀಕ್ಷೆ ನಡೆಸಿ ಅವರುಗಳ ಮೇಲು ಪ್ರಕರಣ ದಾಖಲಿಸಲಾಗಿದೆ ಎಂಬ ಮಾಹಿತಿಯೂ ಇದ್ದು ಇನ್ನಷ್ಟು ಮಾಹಿತಿ ಪೊಲೀಸ್ ಅಧಿಕಾರಿಗಳ ಹೇಳಿಕೆಯಿಂದಷ್ಟೇ ತಿಳಿಯಬೇಕಿದೆ. ಸಮಾಜ ಸೇವೆ ಮಾಡುವ ನೆಪದಲ್ಲಿ ಸಂಸ್ಥೆಗಳನ್ನು ಹುಟ್ಟುಹಾಕಿ ಹುದ್ದೆಗಳನ್ನು ಅಲಂಕರಿಸಿ ಸಮಾಜವನ್ನು ಹಾಳು ಮಾಡುವ ಇಂಥ ಸಂಸ್ಥೆಗಳು ಮತ್ತು ಅದರಲ್ಲಿ ಕರ್ತವ್ಯ ನಿರ್ವಹಿಸುವವರ ಮೇಲೆ ನಿಗಾ ಇಡುವ ಅವಶ್ಯಕತೆಯಿದೆಯೆಂದು ಸಾರ್ವಜನಿಕರು ಅಭಿಪ್ರಾಯಪಟ್ಟಿದ್ದಾರೆ. ಕೊಡಗು ನ್ಯೂಸ್
ಹುದಿಕೇರಿ ಕೊಡವ ಸಮಾಜದಲ್ಲಿ ಕೊಡವ ಸಂಸ್ಕೃತಿ ಉತ್ತೇಜಿಸುವ ವಾಲಗತಾಟ್ ಕಾರ್ಯಕ್ರಮಕ್ಕೆ ಹುದಿಕೇರಿಯ ಕೊಡವ ಸಮಾಜ ಸಭಾಂಗಣದಲ್ಲಿ, ತೂಕ್ ಬೊಳಕ್ ಕಲೆ, ಕ್ರೀಡೆ ಸಾಹಿತ್ಯ ಅಕಾಡೆಮಿ (ರಿ), ಇವರು ಆಯೋಜಿಸಿದ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಿದರು. ಬಳಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಮಾನ್ಯ ಶಾಸಕರು ಸಂಸ್ಥೆಯು ಹಲವಾರು ಸಮಯದಿಂದ ಕಲೆ ಕ್ರೀಡೆ ಹಾಗೂ ಸಾಹಿತ್ಯದ ಪ್ರಚಾರಕ್ಕಾಗಿ ಹಲವಾರು ಉತ್ತಮ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದು ಇದು ನಾಡಿಗೆ ಹಾಗೂ ನಾಡಿನ ಜನತೆಗೆ ಉತ್ತಮ ವೇದಿಕೆಯನ್ನು ಕಲ್ಪಿಸಿ ಕೊಡುತ್ತಿದೆ. ಇಂಥ ಕಾರ್ಯಕ್ರಮಗಳು ನಾಡಿನಲ್ಲಿ ಮತ್ತಷ್ಟು ನಡೆಯುವಂತಾಗಬೇಕು. ಹೀಗೆ ಆದಲ್ಲಿ ನಮ್ಮ ಕಲೆ, ಸಂಸ್ಕೃತಿ, ಸಾಹಿತ್ಯ ಹಾಗೂ ಕ್ರೀಡೆಯನ್ನು ಪೋಷಿಸಿಕೊಂಡು ಮುಂದಿನ ಪೀಳಿಗೆಗೆ ತಲುಪಿಸುವಲ್ಲಿ ಇದು ಸಹಕಾರಿಯಾಗಲಿದೆ ಎಂದು ಬಣ್ಣಿಸಿದರು. ಈ ಸಂದರ್ಭ ಶಾಸಕ ಪೊನ್ನಣ್ಣ ಸೇರಿದಂತೆ ವೇದಿಕೆಯಲ್ಲಿದ್ದ ಅತಿಥಿಗಳು ವಾಲಗತಾಟ್ ಪ್ರದರ್ಶನ ಮಾಡಿ ಗಮನ ಸೆಳೆದರು.…
ಚೆಕ್ ಬೌನ್ಸ್ ಪ್ರಕರಣ ಖುಲಾಸೆ ಗೊಳಿಸಿದ ಜಿಲ್ಲಾ ನ್ಯಾಯಾಲಯ *KODAGU NEWS* ವಿರಾಜಪೇಟೆ ನಗರದ ನಿವಾಸಿ ಪಿ.ಬಿ.ವಿಜಯಕುಮಾರ್ ಅವರು ಸೋಮವಾರ ಪೇಟೆ ತಾಲ್ಲೂಕಿನ ಎಚ್. ಜೆ.ನವೀನ್ ಕುಮಾರ್ ಅವರ ವಿರುದ್ಧ ವಿರಾಜಪೇಟೆ ಪ್ರದಾನ ಸಿವಿಲ್ ನ್ಯಾಯಾಲಯದಲ್ಲಿ ಸಿಸಿ ಸಂಖ್ಯೆ 813/16 ರಂತೆ ಒಂದು ಲಕ್ಷ ಇಪ್ಪತ್ತು ಸಾವಿರ ಹಣ ವಸೂಲಾತಿಗಾಗಿ ನ್ಯಾಯಾಲಯದ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯವು ಆರೋಪಿ ನವೀನ್ ವಿರುದ್ಧ ಆರೋಪ ಸಾಬೀತಾಗಿದ್ದು ಅವರ ಒಂದು ಲಕ್ಷ ಇಪ್ಪತ್ತು ಸಾವಿರ ಹಣಕ್ಕೆ ಬದಲಾಗಿ ಒಂದು ಲಕ್ಷ ಐವತ್ತಮೂರು ಸಾವಿರ ಹಾಗೂ ಆರು ತಿಂಗಳ ಸೆರೆವಾಸ ಅನುಭವಿಸುವಂತೆ ದಿನಾಂಕ 16-1-24 ರಂದು ಆದೇಶ ವಾಗಿತ್ತು. ಈ ಆದೇಶವನ್ನು ಪ್ರಶ್ನಿಸಿ ನವೀನ ಅವರು ವಿರಾಜಪೇಟೆ ಎರಡನೇ ಹೆಚ್ಚುವರಿ ಜಿಲ್ಲಾ ನ್ಯಾಯಾಲಯದಲ್ಲಿ ಸಿಆರ್ ಎ 5007/24 ರಂದು ಮೇಲ್ಮನವಿ ಸಲ್ಲಿಸಿದ್ದರು. ವಿಚಾರಣೆ ನಡೆಸಿದ ಜಿಲ್ಲಾ ನ್ಯಾಯಾಲಯದ ನ್ಯಾಯಧೀಶರಾದ ಶ್ರೀ ಎಸ್ ನಟರಾಜ ಅವರು ವಾದ ಪ್ರತಿ ವಾದ ವನ್ನು ಆಲಿಸಿ ಈ…
ಸುರಕ್ಷಿತ ಸಹಜ ಹೆರಿಗೆ ರಾಜ್ಯಮಟ್ಟದಲ್ಲಿ ಕೊಡಗು ಜಿಲ್ಲೆಗೆ ಎರಡನೇ ಸ್ಥಾನ ಜಿಲ್ಲೆಯಲ್ಲಿ ಮಡಿಕೇರಿ ಜಿಲ್ಲಾಸ್ಪತ್ರೆ ಪ್ರಥಮ ಗೋಣಿಕೊಪ್ಪಲು ಸಮುದಾಯ ಆರೋಗ್ಯ ಕೇಂದ್ರಕ್ಕೆ ದ್ವಿತೀಯ ಸ್ಥಾನ ರಾಜ್ಯದ ಸರ್ಕಾರಿ ಆಸ್ಪತ್ರೆಯಲ್ಲಿ ಸಹಜ ಹೆರಿಗೆಯಲ್ಲಿ ಕೊಡಗು ಜಿಲ್ಲೆ ಎರಡನೇ ಸ್ಥಾನ ಪಡೆದಿದೆ. ಹಾಗೆ ಕೊಡಗಿನಲ್ಲಿ ಮೊದಲನೇ ಸ್ಥಾನ ಜಿಲ್ಲಾ ಆಸ್ಪತ್ರೆ ಮಡಿಕೇರಿಯಾದರೆ, ದ್ವಿತೀಯ ಸ್ಥಾನ ಪೊನ್ನಂಪೇಟೆ ತಾಲೂಕು ಗೋಣಿಕೊಪ್ಪ ಸಮುದಾಯ ಆರೋಗ್ಯ ಕೇಂದ್ರ ಪಡೆದುಕೊಂಡಿದೆ. ಕೊಡಗು ಜಿಲ್ಲೆಯಲ್ಲಿ ಸೋಮವಾರಪೇಟೆ, ಕುಶಾಲನಗರ ವಿರಾಜಪೇಟೆ ತಾಲೂಕು ಆಸ್ಪತ್ರೆಗಳಿದ್ದರು ಹೆಚ್ಚಿನ ಹೆರಿಗೆ ಗೋಣಿಕೊಪ್ಪಲಿನ ಸಮುದಾಯ ಆರೋಗ್ಯ ಕೇಂದ್ರದಲ್ಲಿ ನಡೆಯುತ್ತಿದೆ. ಇಲ್ಲಿನ ಸ್ತ್ರೀ ರೋಗ ತಜ್ಞರಾದ ಗ್ರೀಷ್ಮ ಭೋಜಮ್ಮ , ಹಾಗೂ ಅರವಳಿಕೆ ತಜ್ಞರಾದ ಡಾಕ್ಟರ್ ಸುರೇಶ್ ಇಬ್ಬರೇ ವೈದ್ಯರು ಪ್ರತಿನಿತ್ಯ ನೂರಕ್ಕೂ ಹೆಚ್ಚು ಹೊರರೋಗಿಗಳನ್ನು ಪರೀಕ್ಷಿಸುತ್ತ ಹಗಲು ಹಾಗೂ ರಾತ್ರಿ ಪಾಳೆಯದಲ್ಲಿ ಕರ್ತವ್ಯ ನಿರ್ವಹಿಸುತ್ತಾ ಸಹಜ ಹೆರಿಗೆ ಹಾಗೂ ಸಿಸೇರಿಯನ್ ಕೂಡ ನಡೆಸಿ ದಾಖಲೆ ಬರೆದಿದ್ದಾರೆ. ಈ ಬಾರಿ ಸಹಜ ಹೆರಿಗೆ…
ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ ಮಡಿಕೇರಿ -ಬೇಸಿಗೆ ಅವಧಿಯಲ್ಲಿ ನವೋದಯ ಶಾಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಈ ಬಗ್ಗೆ ಗಮನಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಎಂಜಿನಿಯರ್‍ಗೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಸೂಚಿಸಿದ್ದಾರೆ. ನಗರದ ಜಿ.ಪಂ.ಸಿಇಒ ಅವರ ಕಚೇರಿಯಲ್ಲಿ ಶುಕ್ರವಾರ ನಡೆದ ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಫೆಬ್ರವರಿಯಿಂದಲೇ ನವೋದಯ ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬನಗೊಳ್ಳುವುದರಿಂದ ಪರೀಕ್ಷೆ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಆದ್ದರಿಂದ ಕುಡಿಯುವ ನೀರು ಪೂರೈಕೆ ಸಂಬಂಧ ಎಚ್ಚರವಹಿಸುವಂತೆ ಸಿಇಒ ಅವರು ಸೂಚಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಆರ್.ಭಾಸ್ಕರ್ ಅವರು ಕೂಟುಹೊಳೆಯಿಂದ ಪೂರೈಕೆಯಾಗುವ ಮಾರ್ಗದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನವೋದಯ ಶಾಲೆಗೂ ಕುಡಿಯುವ ನೀರು ಪೂರೈಸುವಂತೆ ನಗರಸಭೆಗೆ ಮನವಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ…
ಮೂರ್ನಾಡು ವಿರಾಜಪೇಟೆ ಮುಖ್ಯ ರಸ್ತೆಯ ಕಾಕೋಟು ಪರಂಬು ಎಂಬಲ್ಲಿ ಘಟನೆ. ಮೂರ್ನಾಡು ಕಡೆಯಿಂದ ವಿರಾಜಪೇಟೆ ಕಡೆಗೆ ತೆರಳುತ್ತಿದ್ದ ಟಿಪ್ಪರ್ ವಾಹನದ ಹಿಂಬದಿಗೆ ಇದೇ ಮಾರ್ಗವಾಗಿ ತೆರಳುತ್ತಿದ್ದ ಬಿಎಸ್ಎನ್ಎಲ್ ಉದ್ಯೋಗಿಗಳು ಸಂಚರಿಸುತ್ತಿದ್ದ ಬೊಲೆರೋ ಜೀಪ್ ನಿಯಂತ್ರಣ ಕಳೆದುಕೊಂಡು ಟಿಪ್ಪರ್ ವಾಹನ ಹಿಂಬದಿಗೆ ಅಪ್ಪಳಿಸಿದೆ. ಅಪಘಾತದಿಂದ ಬೊಲೆರೋ ಜೀಪಿನಲ್ಲಿದ್ದ ಪ್ರಯಾಣಿಕರಿಗೆ ಗಾಯಗಳಾಗಿದ್ದು ವಿರಾಜಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. ಅಪಘಾತದಿಂದ ಬೊಲೆರೋ ಜೀಪ್ ಸಂಪೂರ್ಣ ಜಖಂಗೊಂಡಿದ್ದು ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.
