Author: Kodagu-admin

ದಿನಾಂಕ: 05-11-2025 ರಂದು ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ಎಂ.ಚೆಂಬು ಗ್ರಾಮದ ನಿವಾಸಿ ಶ್ರೀ ವೀರಪ್ಪ ಪಿ.ಪಿ. ರವರ ಮನೆಯಲ್ಲಿ ಯಾರು ಇಲ್ಲದಿರುವ ಸಂದರ್ಭ ರೂಮಿನಲ್ಲಿದ್ದ ಗಾಡೇಜ್‌ನ ಸಣ್ಣ ಕ್ಯಾಶ್ ಲಾಕರ್‌ನಲ್ಲಿ ಇಟ್ಟಿದ್ದ ಅಂದಾಜು ರೂ. 15,000/- ನಗದು ಮತ್ತು 120 ಗ್ರಾಂ ತೂಕದ ಚಿನ್ನಾಭರಣಗಳು ಕಳ್ಳತನವಾಗಿರುವ ಕುರಿತು ದೂರು ಸ್ವೀಕರಿಸಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸ್ ‌ ಠಾಣೆಯಲ್ಲಿ ಕಲಂ: 331(3), 331(4), 305(ಎ) ಬಿಎನ್‌ಎಸ್ ಆಕ್ಟ್ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿರುತ್ತದೆ. ಸದರಿ ಪ್ರಕರಣದ ಆರೋಪಿಗಳ ಪತ್ತೆಗಾಗಿ ಶ್ರೀ ಸೂರಜ್.ಪಿ.ಎ, ಡಿಎಪಿ, ಮಡಿಕೇರಿ ಉಪವಿಭಾಗ, ಶ್ರೀ ಚಂದ್ರಶೇಖರ್.ಹೆಚ್.ವಿ, ಪಿಐ, ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣೆ, ಶ್ರೀ ಮಂಜುನಾಥ್.ಈ, ಪಿಎಸ್‌ಐ ಸಿದ್ದಾಪುರ ಪೊಲೀಸ್‌ ಠಾಣೆ ಮತ್ತು ಉಪವಿಭಾಗ ಮಟ್ಟದ ಅಪರಾಧ ಪತ್ತೆ ಸಿಬ್ಬಂದಿಗಳು & ತಾಂತ್ರಿಕ ಸಿಬ್ಬಂಗಳು ಒಳಗೊಂಡಂತೆ ವಿಶೇಷ ತನಿಖಾ ತಂಡವನ್ನು ರಚಿಸಿ ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿ: 10-11-2025 ರಂದು ಶಿವಮೊಗ್ಗ ಜಿಲ್ಲೆ, ಭದ್ರವಾತಿ…

Read More

ಕೊಡಗು ಜಿಲ್ಲೆ ಮಡಿಕೇರಿ ಗ್ರಾಮಾಂತರ ಪೊಲೀಸ್ ಠಾಣಾ ಸರಹದ್ದಿನಲ್ಲಿರುವ ದಿ ತಾಜ್ ರೆಸಾರ್ಟ್‌ನಲ್ಲಿ ಐಡಿಯಲ್ ಸೊಲ್ಯೂಷನ್ಸ್, ಬೆಂಗಳೂರು ಕಂಪನಿಯ ವತಿಯಿಂದ ಹೊರಗುತ್ತಿಗೆ ಆಧಾರದ ಮೇರೆಗೆ ಗಾರ್ಡನಿಂಗ್ ಕೆಲಸ ಮಾಡುತ್ತಿರುವ ಕೆಲಸಗಾರರಿಗೆ 1 ನೇ ಮೊಣ್ಣಂಗೇರಿ ಗ್ರಾಮದಲ್ಲಿರುವ ಕೋರಮಂಡಲ ಬೀಚ್ ಪ್ರಾಪರ್ಟಿಸ್ ಪ್ರೈವೆಟ್ ಲಿಮಿಟೆಡ್ ಕಂಪನಿಗೆ ಸೇರಿದ ವಸತಿ ಗೃಹದಲ್ಲಿ ವಸತಿ ವ್ಯವಸ್ಥೆ ಇದ್ದು, ದಿನಾಂಕ: 07-11-2025 ರಂದು ಸಮಯ ಸುಮಾರು 08:30 ಪಿ.ಎಂ ಗೆ ಸದರಿ ವಸತಿ ಗೃಹದಲ್ಲಿ ವಾಸವಿದ್ದ ಅಸ್ಸಾಂನ ಮೂಲದ ದೀಲೀಪ್ ಶರ್ಮಾ, 36 ವರ್ಷ, ಮತ್ತು ಆತನೊಂದಿಗೆ ಪಕ್ಕದ ರೂಮ್ ನಲ್ಲಿ ವಾಸವಿದ್ದ ದಯಾನಂದ ಪ್ರಸಾದ್, 41 ವರ್ಷ ಕುಡಿದು ಗಲಾಟೆ ಮಾಡಿ ಬಾಟಲಿಯನ್ನು ಮನೆಯ ಮೆಟ್ಟಿಲಿನ ಬಳಿ ಇರುವ ಕಟ್ಟೆಗೆ ಒಡೆದು ಹಾಕಿದ ಸ್ಥಳದ ವಿಡಿಯೋವನ್ನು ದಿಲೀಪ್ ಶರ್ಮಾನು ತನ್ನ ಮೊಬೈಲ್ ನಲ್ಲಿ ಚಿತ್ರೀಕರಿಸಿ ಅವರ ಕೆಲಸದ ಉಸ್ತುವಾರಿ ನೋಡಿಕೊಳ್ಳುತ್ತಿರುವ ಅಧಿಕಾರಿಗೆ ಕಳುಹಿಸಿಕೊಡುತ್ತೇನೆಂದು ವಿಡಿಯೋ ಮಾಡಿದ್ದು, ದಯಾನಂದ ಪ್ರಸಾದನು ಕೋಪಗೊಂಡು ದಿಲೀಪ್ ಶರ್ಮಾನೊಂದಿಗೆ ಜಗಳಮಾಡಿ, ಕೆನ್ನೆಯ…

Read More

ಮಡಿಕೇರಿ :-ಹೋರಾಟ ಮನೋಭಾವದ ಸಮಯ ಪ್ರಜ್ಞೆ ಮತ್ತು ಸ್ವಯಂ ರಕ್ಷಣೆಯಲ್ಲಿ ತಮ್ಮದೇ ಆದ ಪಾತ್ರ ವಹಿಸಿರುವ ವೀರರಾಣಿ ಒನಕೆ ಓಬವ್ವ ಅವರ ಜೀವನ ಚರಿತ್ರೆಯನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದು ಕುಶಾಲನಗರ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಕನ್ನಡ ಭಾಷಾ ಶಿಕ್ಷಕಿ ಬಿ.ಬಿ.ಹೇಮಲತ ಅವರು ಹೇಳಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ನಡೆದ ಕನ್ನಡ ನಾಡಿನ ವೀರನಾರಿ ಒನಕೆ ಓಬವ್ವ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಐತಿಹಾಸಿಕ ಹಿನ್ನೆಲೆ ಹೊಂದಿರುವ ಚಿತ್ರದುರ್ಗದ ಕೋಟೆಯ ರಕ್ಷಣೆಗೆ ಹೋರಾಡಿದ ವೀರರಾಣಿ ಒನಕೆ ಓಬವ್ವ ಅವರ ಹೋರಾಟದ ಜೀವನವನ್ನು ಪ್ರತಿಯೊಬ್ಬರೂ ತಿಳಿದುಕೊಳ್ಳುವಂತಾಗಬೇಕು ಎಂದರು. ಸಾಮಾನ್ಯ ಮಹಿಳೆಯಾಗಿ ಬದುಕುತ್ತಿದ್ದ ಒನಕೆ ಓಬವ್ವ ಶತ್ರುಗಳ ವಿರುದ್ಧ ಹೋರಾಡಿ ಜಯಗಳಿಸುತ್ತಾರೆ. ರಕ್ಷಣೆಗಾಗಿ ಒನಕೆ ಬಳಸುವ ಮೂಲಕ ಜಯ ಪಡೆಯುತ್ತಾರೆ ಎಂದು ಹೇಮಲತ ಅವರು ತಿಳಿಸಿದರು. ವೀರ ವನಿತೆ ಒನಕೆ ಓಬವ್ವ ಅವರು ನಾಡಿಗೆ ನೀಡಿರುವ ಕೊಡುಗೆಯಿಂದ ಇಂದಿಗೂ ಸಹ…

Read More

********************************************* ಸರ್ಕಾರಿ ಕೆಲಸ ಲಘುವಾಗಿ ಪರಿಗಣಿಸದೆ ಎಚ್ಚರದಿಂದ ಕರ್ತವ್ಯ ನಿರ್ವಹಿಸಿ: ದಿನಕರ ಶೆಟ್ಟಿ ಮಡಿಕೇರಿ :-ಸರ್ಕಾರದ ವಿವಿಧ ಇಲಾಖೆಗಳಿಗೆ ಸಂಬಂಧಿಸಿದಂತೆ ಬಹಳಷ್ಟು ವಿಚಾರಗಳು ಲೋಕಾಯುಕ್ತರ ಗಮನಕ್ಕೆ ಬರುತ್ತಿದ್ದು, ದೂರುಗಳು ಕೇಳಿಬರದಂತೆ ಕಚೇರಿ ಕೆಲಸ ನಿರ್ವಹಣೆ ಸಂಬಂಧಿಸಿದಂತೆ ಹೆಚ್ಚಿನ ಗಮನಹರಿಸುವಂತೆ ಅಧಿಕಾರಿಗಳಿಗೆ ಲೋಕಾಯುಕ್ತ ಮಡಿಕೇರಿ ಡಿವೈಎಸ್‍ಪಿ ದಿನಕರ ಶೆಟ್ಟಿ ಅವರು ಎಚ್ಚರಿಸಿದ್ದಾರೆ. ನಗರದ ತಹಶೀಲ್ದಾರರ ಕಚೇರಿಯಲ್ಲಿ ಸಾರ್ವಜನಿಕರ ಅಹವಾಲು ಸ್ವೀಕಾರ ಮತ್ತು ಕುಂದುಕೊರತೆ ಸಭೆಯಲ್ಲಿ ಸಾರ್ವಜನಿಕರ ಅಹವಾಲು ಆಲಿಸಿ ಮಾತನಾಡಿದ ಅವರು ಕಚೇರಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಅಧಿಕಾರಿಗಳು ಇರುವುದಿಲ್ಲ ಎಂಬ ದೂರುಗಳು ಕೇಳಿ ಬರುತ್ತಿದ್ದು, ಈ ಸಂಬಂಧ ಪ್ರತಿನಿತ್ಯ ಚಲನವಲನ ಬಗ್ಗೆ ದಾಖಲು ಮಾಡಬೇಕು ಎಂದು ನಿರ್ದೇಶನ ನೀಡಿದರು. ಸರ್ಕಾರದ ಅಧಿಕಾರಿ ಮತ್ತು ಸಿಬ್ಬಂದಿಗಳಲ್ಲಿ ಸಮಯ ಪಾಲನೆ ಅತೀ ಮುಖ್ಯ. ಆ ನಿಟ್ಟಿನಲ್ಲಿ ಚಲನವಲನ ವಹಿಯನ್ನು ಸರಿಯಾಗಿ ನಿರ್ವಹಿಸಬೇಕು. ರಜೆ ಪಡೆದಿದ್ದಲ್ಲಿ ರಜೆ ಅರ್ಜಿ ಕಚೇರಿಯಲ್ಲಿ ಇರಬೇಕು. ನಗದು ವಹಿ ಬರೆಯಬೇಕು. ಕಚೇರಿ ಕೆಲಸ ನಿರ್ವಹಣೆ ಸಂಬಂಧ ಸರಿಯಾಗಿ ಪಾಲನೆ ಅತೀ…

Read More

ಕುಶಾಲನಗರದಲ್ಲಿ 8.60 ಕೋಟಿ ರೂ. ವೆಚ್ಚದಲ್ಲಿ ಪ್ರಜಾಸೌಧ ಪೂಜೆ ಮಡಿಕೇರಿ :-ಕುಶಾಲನಗರದ ಪಾಲಿಟೆಕ್ನಿಕ್ ಕಾಲೇಜು ಬಳಿ 8.60 ಕೋಟಿ ರೂ. ವೆಚ್ಚದಲ್ಲಿ ನೂತನವಾಗಿ ನಿರ್ಮಿಸಲಾಗುವ ‘ಪ್ರಜಾಸೌಧ’ ತಾಲ್ಲೂಕು ಆಡಳಿತ ಭವನ ನಿರ್ಮಾಣಕ್ಕೆ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಹಾಗೂ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಮಂಗಳವಾರ ಭೂಮಿ ಪೂಜೆ ನೆರವೇರಿಸಿದರು. ಬಳಿಕ ಮಾತನಾಡಿದ ಸಚಿವರು ರಾಜ್ಯಾದ್ಯಾದಂತ ದರಖಾಸ್ ಪೋಡಿ ಅಭಿಯಾನ ಹಮ್ಮಿಕೊಳ್ಳಲಾಗಿದೆ. ಸರ್ಕಾರದಿಂದ ಮಂಜೂರಾದ ಜಮೀನನ್ನು ಅನುಬಂಧ-1 ರಡಿ ಸರ್ವೆ ಮಾಡಲಾಗುತ್ತಿದೆ. ಮನೆ ಮನೆಗೆ ತೆರಳಿ ಮಾಹಿತಿ ಪಡೆದು ಸರಿಪಡಿಸುವ ಕಾರ್ಯ ನಡೆಯುತ್ತಿದೆ ಎಂದು ಸಚಿವರು ಹೇಳಿದರು. ಕೊಡಗು ಜಿಲ್ಲೆಯಲ್ಲಿ 2344 ದರಖಾಸ್ ಪೋಡಿ ಅಭಿಯಾನಡಿ ಪ್ರಕರಣಗಳನ್ನು ತೆಗೆದುಕೊಳ್ಳಲಾಗಿದ್ದು, ಇದರಲ್ಲಿ 1500 ಕ್ಕೂ ಹೆಚ್ಚು ಕಡತ ವಿಲೇವಾರಿ ಮಾಡಲಾಗಿದೆ ಎಂದು ಸಚಿವರು ಹೇಳಿದರು. ರಾಜ್ಯದಲ್ಲಿ 42 ಲಕ್ಷ ಜಮೀನು ಮೃತರ ಹೆಸರಿನಲ್ಲಿದ್ದು, ಇದನ್ನು ಸಹ ಪಟ್ಟಿ ಮಾಡಲಾಗಿದೆ. ಈ ಪೌತಿ ಖಾತೆ ಆಂದೋಲನಡಿ ರೈತರ ಮನೆ ಬಾಗಿಲಿಗೆ…

Read More

ಚಿಕ್ಕಬಳ್ಳಾಪುರದಲ್ಲಿ ಶಾಲಾ ಮತ್ತು ಸಾಕ್ಷರತಾ ಇಲಾಖೆ ವತಿಯಿಂದ ನಡೆದ 17ರ ವಯೋಮಿತಿಯ ಬಾಲಕ ಮತ್ತು ಬಾಲಕಿಯರ l ರಾಜ್ಯಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಸುಂಟಿಕೊಪ್ಪದ ಸಂತ ಮೇರಿಸ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರ್. ಜೀವಿಕ ಅವರು ಪ್ರಥಮ ಸ್ಥಾನ ಪಡೆದು, ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆರ್. ಜೀವಿಕ ಅವರು ಸುಂಟಿಕೊಪ್ಪದ ನಿವಾಸಿ ಹಾಗೂ ಸೈನಿಕರಾಗಿ ಸೇವೆ ಸಲ್ಲಿಸುತ್ತಿರುವ ರಾಜಕುಮಾರ ಹಾಗೂ ಮಡಿಕೇರಿ ಸರಕಾರಿ ಆಸ್ಪತ್ರೆಯಲ್ಲಿ ದಾದಿಯಾಗಿ ಸೇವೆ ಸಲ್ಲಿಸುತ್ತಿರುವ ಲಕ್ಷ್ಮಿ ಅವರ ಪುತ್ರಿಯಾಗಿದ್ದಾರೆ. ಇವರ ಈ ಸಾಧನೆಗೆ ರೆವೆರೆಂಡ್ ಫಾದರ್ ವಿಜಯಕುಮಾರ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಆರ್. ಸೆಲ್ವರಾಜ್ ಹಾಗೂ ಕೊಡಗು ಕರಾಟೆ ಅಸೋಸಿಯೇಷನ್ ರವರು ಅಭಿನಂದನೆ ಸಲ್ಲಿಸಿದ್ದಾರೆ.

Read More

ಕೊಡಗಿನಲ್ಲಿ ನಿರಂತರ ಕಾಡಾನೆ ದಾಳಿಯಿಂದ ಕೂಲಿ ಕಾರ್ಮಿಕ ಸಾವನ್ನಪ್ಪುತ್ತಿದ್ದರು ಸಚಿವ ಈಶ್ವರ್ ಖಂಡ್ರೆ ಮಾತ್ರ ಕೊಡಗು ಜಿಲ್ಲೆಗೂ ತನಗೂ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿರುವುದು ಜನಸಾಮಾನ್ಯರಲ್ಲಿ ಅಸಮಾಧಾನ ಉಂಟುಮಾಡಿದೆ. ಸರಕಾರ ಆಡಳಿತಕ್ಕೆ ಬಂದ ಬಳಿಕ ಕೇವಲ ಒಂದು ಬಾರಿ ಮಾತ್ರ ಜಿಲ್ಲೆಗೆ ಭೇಟಿ ನೀಡಿರುವ ಸಚಿವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕೊಡಗಿನ ಸಾಮಾನ್ಯ ಜನ ಈಶ್ವರ್ ಖಂಡ್ರೆಯನ್ನು ಕಂಡರೆ ತಿಳಿಸಿ ಎಂದು ಹೇಳುತ್ತಿರುವ ಹಾಸ್ಯದ ಮಾತುಗಳು ಜನವಲದಲ್ಲಿ ಹರಿದಾಡುತ್ತಿದೆ. ಸತ್ತಿದ್ದು ಕಾರ್ಮಿಕ: ದಿನಗೂಲಿ ನೌಕರರ ಜೊತೆ ಸಭೆ ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಅವರ ನೇತೃತ್ವದಲ್ಲಿ ರಾಜ್ಯ ವನ್ಯ ಜೀವಿ ಘಟಕದ ದಿನಗೂಲಿ ಹೊರಗುತ್ತಿಗೆ ನೌಕರರ ನಿಯೋಗದಿಂದ ಅರಣ್ಯ ಸಚಿವರ ಭೇಟಿ ಮಾಡಿ ಚರ್ಚೆ ನಡೆಸಲಾಯಿತಾದರೂ ಎಲ್ಲೂ ಸೋಮವಾರ ಮೃತಪಟ್ಟ ಕಾರ್ಮಿಕನ ಬಗ್ಗೆ ಚರ್ಚೆ ನಡೆದಿಲ್ಲ ಕನಿಷ್ಠ ಸಂತಾಪವನ್ನು ಸೂಚಿಸಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಈಶ್ವರ್ ಖಂಡ್ರೆ ಅವರ ನಿವಾಸದಲ್ಲಿ ಭೇಟಿ ಮಾಡಿರುವ ಅರಣ್ಯ ಇಲಾಕೆಯ ದಿನಗೂಲಿ ನೌಕರರು ತಮ್ಮ ಕಷ್ಟಗಳನ್ನು…

Read More

ಕೊಡಗು ಜಿಲ್ಲೆಯ ನಾಗರೀಕರನ್ನು ದಶಕಗಳಿಂದ ಪರಿಹಾರ ಕಾಣದೆ ಕಾಡುತ್ತಿರುವ ಪಟ್ಟೇದಾರ ಸಮಸ್ಯೆಯ ಕುರಿತು, ಕಳೆದ ವಿಧಾನಸಭಾ ಅಧಿವೇಶನದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ *ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ* ಕೋರಿಕೆ ಮೇರೆಗೆ ರಚಿತವಾದ, ಕರ್ನಾಟಕ ವಿಧಾನಸಭೆ ಪರಿಶೀಲನ ಸಮಿತಿಯ 2ನೇ ಮಹತ್ವದ ಸಭೆ ಇಂದು ವಿಧಾನಸೌಧದಲ್ಲಿ ನಡೆಯಿತು. ಮಾನ್ಯ ಕಂದಾಯ ಸಚಿವರಾದ *ಶ್ರೀ ಕೃಷ್ಣ ಬೈರೇಗೌಡರವರ* ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ವಿರಾಜಪೇಟೆ ಶಾಸಕರಾದ ಸನ್ಮಾನ್ಯ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ, ಕೊಡಗು ಜಿಲ್ಲಾಧಿಕಾರಿಯವರಾದ ಶ್ರೀ ವೆಂಕಟರಾಜ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು. ಹಲವು ಮಹತ್ವದ ನಿರ್ಣಯಗಳನ್ನು ಇಂದಿನ ಸಭೆಯಲ್ಲಿ ಚರ್ಚಿಸಿ ಕೈಗೊಳ್ಳಲಾಯಿತು.

Read More

Avocado scions theft. *KODAGU NEWS* ಪಾಲಿಬೆಟ್ಟದ ತೋಟದಲ್ಲಿ ಆವಕಾಡೊ ಚಿಗುರುಗಕಳ ಕಳ್ಳತನ ಮಾಡುವಾಗ ಸಿಕ್ಕಿಬಿದ್ದ ಕಳ್ಳರು. ಸುಮಾರು 09 ಕಳ್ಳರ ಗುಂಪು ರಾತ್ರಿ ವೇಳೆ ಕಳ್ಳತನ ಮಾಡುವಾಗ ಸಿಕ್ಕಿಬಿದ್ದು ಸಿದ್ದಾಪುರ ಪೊಲೀಸ್ ಠಾಣೆಯ ವಶಕ್ಕೆ ಒಪ್ಪಿಸಲಾಯಿತು.

Read More

ವಿರಾಜಪೇಟೆ ಪುರಸಭೆ ವತಿಯಿಂದ ಮುಖ್ಯಮಂತ್ರಿಗಳ ಅಮೃತ್ ನಗರೋತ್ಥಾನಯೋಜನೆಯ ಹಂತ -04 ರಡಿ ಪರಿಶಿಷ್ಟ ಪಂಗಡದ ವಿದ್ಯಾರ್ಥಿ ನಿಲಯಕ್ಕೆ ಸಾಮಾಗ್ರಿಗಳ ವಿತರಣೆ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭಾಗವಹಿಸಲಾಯಿತು. ಈ ಸಂದರ್ಭದಲ್ಲಿ ವಿರಾಜಪೇಟೆ ಬ್ಲಾಕ್ ಅಧ್ಯಕ್ಷರಾದ ಪಟ್ಟಡ ರಂಜಿ ಪೂಣಚ್ಚ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ, ಪುರಸಭೆ ಸದಸ್ಯರು ರಾಫಿ, ಮತೀನ್,ಬೆನ್ನಿ ಆಗಷ್ಟಿನ್, ರಾಜೇಶ್, ಹಮೀದ್, ಪುರಸಭೆ ಮುಖ್ಯಧಿಕಾರಿ ನಾಚಪ್ಪ, ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Read More