Author: Kodagu-admin

*“ಕಾಂತಾರ” ಸಿನಿಮಾವನ್ನು ಸಿನಿಮಾ ರೀತಿಯಲ್ಲೇ ನೋಡಿ – ದೈವ ನಿಂದನೆ ಮಾಡಬೇಡಿ!* *KODAGU NEWS* ಮಂಗಳೂರು – ಕರಾವಳಿ ಭಾಗದ ಸಾವಿರಾರು ವರ್ಷಗಳ ಇತಿಹಾಸ ಹೊಂದಿರುವ ದೈವ ಆರಾಧನೆಯು ನಮ್ಮ ಸಂಸ್ಕೃತಿ, ನಂಬಿಕೆ ಮತ್ತು ಪರಂಪರೆಯ ಮೂಲಾಧಾರವಾಗಿದೆ. *“ಕಾಂತಾರ”* ಸಿನಿಮಾ ಮೂಲಕ ತುಳುನಾಡಿನ ದೈವ ಆರಾಧನೆ ಜಗತ್ತಿಗೆ ಪರಿಚಿತವಾಗಿದೆ ಎಂಬುದು ಸತ್ಯವಾದರೂ, ಕೆಲವರು ಸಿನಿಮಾದ ಹಿನ್ನಲೆಯಲ್ಲಿ ದೈವವನ್ನು ನಿಂದಿಸುವ, ಅಪಮಾನ ಮಾಡುವ ರೀತಿಯಲ್ಲಿ ವರ್ತಿಸುತ್ತಿರುವುದು ಗಂಭೀರವಾಗಿ ಖಂಡನೀಯ ಎಂದು ದೈವ ಆರಾಧಕರು ಮತ್ತು ದೈವ ನರ್ತಕರ ಸಂಘ ಸ್ಪಷ್ಟಪಡಿಸಿದೆ. ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ನಿಕಟಪೂರ್ವ ಸದಸ್ಯ ಹಾಗೂ ದೈವ ಆರಾಧಕರು ಮತ್ತು ದೈವ ನರ್ತಕರ ಸಂಘದ ಸ್ಥಾಪಕ ಅಧ್ಯಕ್ಷ ಪಿ. ಎಂ. ರವಿ ಹಾಗೂ ಸಂಘದ ಅಧ್ಯಕ್ಷ ಸದಾಶಿವ ರೈ ಅವರು ಮಾಧ್ಯಮಗಳಿಗೆ ನೀಡಿದ ಹೇಳಿಕೆಯಲ್ಲಿ – *“ಸಿನಿಮಾವನ್ನು ಸಿನಿಮಾ ರೀತಿಯಲ್ಲಿ ನೋಡಬೇಕು. ದೈವದ ನೃತ್ಯ ಅಥವಾ ದೈವ ಆರಾಧನೆಯನ್ನು ವ್ಯಂಗ್ಯವಾಗಿ, ಹಾಸ್ಯವಾಗಿ ಅಥವಾ ನಿಂದನಾತ್ಮಕವಾಗಿ ಪ್ರದರ್ಶಿಸುವುದು ನಮ್ಮ ಸಂಸ್ಕೃತಿಗೆ…

Read More

ಮಹರ್ಷಿ ವಾಲ್ಮೀಕಿ ಅವರು ಬರೆದಿರುವ ರಾಮಾಯಣದಲ್ಲಿ ಭಾರತೀಯ‌ ಸಂಸ್ಕೃತಿ, ಇತಿಹಾಸ ಮತ್ತು ಪರಂಪರೆಯನ್ನು ಕಾಣಬಹುದಾಗಿದೆ ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ನಗರದ ಗಾಂಧಿ ಭವನದಲ್ಲಿ ಮಂಗಳವಾರ ನಡೆದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಸಮಾರಂಭದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.‌ ಮಹರ್ಷಿ ವಾಲ್ಮೀಕಿ ಅವರು ರಾಮಾಯಣ ಮಹಾಕಾವ್ಯ ರಚಿಸುವ ಮೂಲಕ ಭಾರತೀಯ ಸಂಸ್ಕೃತಿ ಮತ್ತು ಇತಿಹಾಸವನ್ನು ಸಾರಿದ್ದಾರೆ. ಮಹಾ ಕಾವ್ಯದ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ನೀಡಿದ್ದಾರೆ ಎಂದು ಜಿಲ್ಲಾಧಿಕಾರಿ ಅವರು ಹೇಳಿದರು. ಮಹರ್ಷಿ ವಾಲ್ಮೀಕಿ ಅವರ ಪರಿಕಲ್ಪನೆ, ದೂರದರ್ಶಿತ್ವ ಸ್ಮರಣೀಯವಾದುದು ಎಂದು ಜಿಲ್ಲಾಧಿಕಾರಿ ಅವರು ನುಡಿದರು. ಆಧುನಿಕತೆ ಬೆಳೆದಂತೆ ಭಾರತೀಯ ಹಿಂದಿನ ಇತಿಹಾಸ ಮತ್ತು ಸಂಸ್ಕೃತಿಯನ್ನು ಮರೆಯಬಾರದು. ವಾಲ್ಮೀಕಿ ರಾಮಾಯಣದ ಬಗ್ಗೆ ಅಂತರ್ಜಾಲದಲ್ಲಿ ಸಾಕಷ್ಟು ಮಾಹಿತಿ ದೊರೆಯಲಿದ್ದು, ಪ್ರತಿಯೊಬ್ಬರೂ ಅಧ್ಯಯನ ಮಾಡುವಂತಾಗಬೇಕು ಎಂದು ವೆಂಕಟ್ ರಾಜಾ ಅವರು ವಿವರಿಸಿದರು. ವಿದ್ಯಾರ್ಥಿಗಳು ಅಧ್ಯಯನ ಕಡೆ…

Read More

ಬೆಂಗಳೂರಿನ ವಿಧಾನಸೌಧ ಸಭಾಂಗಣದಲ್ಲಿ ಇಂದು ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಿದರು. ರಾಜ್ಯ ಸರಕಾರದ ಸಚಿವರುಗಳು ಶಾಸಕರುಗಳು ಭಾಗವಹಿಸಿದ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಉಪಸಿತರಿದ್ದರು. ಬುಡಕಟ್ಟು ಜನಾಂಗದಿಂದ ಸಮಾಜದ ಮುನ್ನೆಲೆಗೆ ಬಂದು, ನಿರಾಶ್ರಿತರಿಗೆ ದಿಡ್ಡಳ್ಳಿಯಲ್ಲಿ ಪುನರ್ವಸತಿ ಕಲ್ಪಿಸಲು ಹೋರಾಟ ಮಾಡಿ ಯಶಸ್ಸು ಗಳಿಸಿದ, ಕೊಡಗಿನ ವಿರಾಜಪೇಟೆ ಕ್ಷೇತ್ರದ ಜೆ.ಕೆ ಮುತ್ತಮ್ಮರವರಿಗೆ ಪ್ರತಿಷ್ಠಿತ ವಾಲ್ಮೀಕಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಯಿತು. ಸಂಘಟನಾ ಕ್ಷೇತ್ರದಲ್ಲಿ ತಮ್ಮ ಅಮೋಘ ಕೊಡುಗೆಗಾಗಿ ರಾಜ್ಯ ಸರ್ಕಾರ ಇವರನ್ನು ಗುರುತಿಸಿ, ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಎ.ಎಸ್ ಪೊನ್ನಣ್ಣ ರವರು ಪ್ರಶಸ್ತಿ ವಿತರಿಸಿದರು. ಮುತ್ತಮ್ಮರವರಿಗೆ ಅರ್ಹವಾಗಿ ಈ ಪ್ರಶಸ್ತಿಯನ್ನು ನೀಡಲೇಬೇಕೆಂದು, ಮಾನ್ಯ ಶಾಸಕರು ರಾಜ್ಯ ಸರ್ಕಾರಕ್ಕೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಿ ಶಿಫಾರಸ್ಸು ಮಾಡಿರುವುದು ಗಮನಾರ್ಹ.

Read More

ಕರ್ನಾಟಕ ರಾಜ್ಯ  ಸರಕಾರದ ಇಂದು ವಿಧಾನಸೌಧದ ಸಭಾಂಗಣದಲ್ಲಿ ನಡೆಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಹಾಗೂ ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ  ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ , ಸರಕಾರದ ಅಧೀನ ಕಾರ್ಯದರ್ಶಿಗಳು, ಹಿಂದುಳಿದ ವರ್ಗಗಳ ಅಧ್ಯಕ್ಷರು, ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

ಕೊಡಗು ಜಿಲ್ಲೆ, ಕುಶಾಲನಗರ ತಾಲೂಕು ಕೊಡವ ಸಮಾಜದ ಆಯೋಜಿಸಿದ ಕೈಲ್ ಪೋಳ್ದ್ ಸಂತೋಷಕೂಟ ಕಾರ್ಯಕ್ರಮದಲ್ಲಿ, ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದರು. ಕುಶಾಲನಗರದ ಕೊಡವ ಸಮಾಜ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದ ಸಾಂಸ್ಕೃತಿಕ ಹಾಗೂ ವಿವಿಧ ಸಾಂಪ್ರದಾಯಿಕ ಚಟುವಟಿಕೆಗಳಲ್ಲಿ ಭಾಗವಹಿಸಿದ ಶಾಸಕರು, ಬಳಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು. ಕೊಡಗಿನ ಹಾಗೂ ವಿಶೇಷವಾಗಿ ಕೊಡವರ ಐತಿಹಾಸಿಕ ಪರಂಪರೆ, ಸಂಸ್ಕೃತಿ ಹಾಗೂ ಆಚರಣೆಗಳನ್ನು ಜೀವಂತವಾಗಿರಿಸುವಲ್ಲಿ ಕೊಡವ ಸಮಾಜಗಳು ವಿಶೇಷ ಪಾತ್ರ ನಿಭಾಯಿಸುತ್ತಾ ಬಂದಿವೆ. ಸಮಾಜದ ಬಾಂಧವರಲ್ಲಿ ವಿಶೇಷವಾಗಿ ಯುವ ಪೀಳಿಗೆಯಲ್ಲಿ ನಮ್ಮ ಸಂಸ್ಕೃತಿ ಹಾಗೂ ಆಚರಣೆಗಳನ್ನು ಅನುಸರಿಸುತ್ತಾ ಬೆಳೆಸುವ ಗುರುತರ ಜವಾಬ್ದಾರಿಯನ್ನು ಕೊಡವ ಸಮಾಜದವರು ವಹಿಸಿಕೊಳ್ಳಬೇಕು. ಒಂದು ಸಮಾಜ ಇತಿಹಾಸದಲ್ಲಿ ಅಚ್ಚಳಿಯದೆ ಉಳಿಯಲು ಅದರ ಸಂಸ್ಕೃತಿ, ಭಾಷೆ ಹಾಗೂ ಆಚರಣೆಗಳನ್ನು ಪೋಷಿಸಿ ಬೆಳೆಸುವುದು ಅತ್ಯಂತ ಅವಶ್ಯಕ ವಿಷಯವಾಗಿದೆ. ಆಧುನಿಕ ಜಗತ್ತಿಗೆ ಹೊಂದಿಕೊಳ್ಳುತ್ತಾ ನಮ್ಮ ಆಚರಣೆಗಳನ್ನು ಜಗತ್ತಿಗೆ ಪರಿಚಯಿಸುವುದರಲ್ಲಿ ನಾವು ಇಂದಿಗೂ ಹಿಂದೆ ಬೀಳಬಾರದು ಎಂದು ಕರೆ…

Read More

ಚುನಾವಣಾ ಪ್ರಣಾಳಿಕೆಯಂತೆ ವಿರಾಜಪೇಟೆಗೆ ಜಿಲ್ಲಾಸ್ಪತ್ರೆ ತಂದ ಶಾಸಕ ಪೊನ್ನಣ್ಣ ಮಡಿಕೇರಿ: ವಿರಾಜಪೇಟೆ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಇನ್ನು ಮುಂದೆ ಆಧುನಿಕ ಸಲಕರಣೆಗಳನ್ನೊಳಗೊಂಡ ಜಿಲ್ಲಾಸ್ಪತ್ರೆಯ ಸೌಲಭ್ಯ ದೊರೆಯಲಿದೆ. ವಿರಾಜಪೇಟೆ ಶಾಸಕ ಪೊನ್ನಣ್ಣ ಅವರ ಮುತುವರ್ಜಿಯಿಂದ 60 ಹಾಸಿಗೆಗಳುಳ್ಳ ಆಸ್ಪತ್ರೆಯನ್ನು 400 ಹಾಸಿಗೆಯೊಂದಿಗೆ ಮೇಲ್ದರ್ಜೆಗೇರಿಸಲು ಸಚಿವ ಸಂಪುಟದಲ್ಲಿ ಅನುಮೋದನೆ ದೊರೆತಿದ್ದು ಮೊದಲ ಹಂತದಲ್ಲಿ 250 ಹಾಸಿಗೆಗಳ ಆಸ್ಪತ್ರೆ ನಿರ್ಮಾಣ ಕಾರ್ಯ ಇದೆ ನವಂಬರ್ ತಿಂಗಳಿನಲ್ಲಿ ನಡೆಯಲಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಶಾಸಕ ಪೊನ್ನಣ್ಣ ಅವರು ಮಾಧ್ಯಮಗಳೊಂದಿಗೆ ಮಾಹಿತಿ ಹಂಚಿಕೊಂಡಿದ್ದಾರೆ. ಒಟ್ಟು 95 ಕೋಟಿ ವೆಚ್ಚದಲ್ಲಿ ಹಂತ ಹಂತವಾಗಿ ಜಿಲ್ಲಾಸ್ಪತ್ರೆಯಾಗಿ ಮೇಲ್ದರ್ಜೆಗೆ ಏರಲಿರುವ ವಿರಾಜಪೇಟೆ ತಾಲೂಕು ಆಸ್ಪತ್ರೆಗೆ ಇದೆ ನವಂಬರ್ ತಿಂಗಳಿನಲ್ಲಿ ಭೂಮಿ ಪೂಜೆ ನಡೆಯುವ ಸಾಧ್ಯತೆಯಿದೆ. ಇದೆ ಮೊದಲ ಬಾರಿಗೆ ಮತ್ತು ರಾಜ್ಯದಲ್ಲಿ ತಾಲೂಕು ಕೇಂದ್ರಲ್ಲಿ ಜಿಲ್ಲಾಸ್ಪತ್ರೆಯನ್ನು ತಂದುಕೊಟ್ಟ ಹೆಗ್ಗಳಿಕೆಗೂ ಶಾಸಕ ಪೊನ್ನಣ್ಣ ಪಾತ್ರರಾಗಿದ್ದಾರೆ. 2023 ರ ಚುನಾವಣೆ ಸಂದರ್ಭ ತಮ್ಮ ಕ್ಷೇತ್ರದ ಅಭಿವೃದ್ಧಿ ಪ್ರಣಾಳಿಕೆಯಲ್ಲಿ ಹಾಗೂ ಚುನಾವಣಾ ಪ್ರಚಾರಗಳ…

Read More

ಬೆಂಗಳೂರು ಕೊಡವ ಸಮಾಜದ ಆಡಳಿತ ಮಂಡಳಿಗೆ ಇತ್ತೀಚೆಗೆ ನಡೆದ ಚುನಾವಣೆಯಲ್ಲಿ, ಅಧ್ಯಕ್ಷರಾಗಿ ಚುನಾಯಿತರಾದ ಚಿರಿಯಪಂಡ ಸುರೇಶ್ ನಂಜಪ್ಪ ರವರು ಹಾಗೂ ನೂತನ ಪದಾಧಿಕಾರಿಗಳು, ಬೆಂಗಳೂರಿನಲ್ಲಿ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶಾಸಕ ಪೊನ್ನಣ್ಣ ಅವರ ಧರ್ಮಪತ್ನಿ ಶ್ರೀಮತಿ ಕಾಂಚನ್ ಪೊನ್ನಣ್ಣ ರವರು ಉಪಸ್ಥಿತರಿದ್ದರು.

Read More

₹40ಲಕ್ಷ ಅನುದಾನದಲ್ಲಿ ಚಾಮಿಯಾಲ-ಅರಮೇರಿ ರಸ್ತೆ ಅಭಿವೃದ್ಧಿ : ಶಾಸಕ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರಿಗೆ ಧನ್ಯವಾದ ಅರ್ಪಿಸಿದ ಗ್ರಾಮಸ್ಥರು ವಿರಾಜಪೇಟೆ ವಿಧಾನಸಭಾ ಕ್ಷೇತ್ರ, ವಿರಾಜಪೇಟೆ ತಾಲೂಕಿನ ಕದನೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಾಮಿಯಾಲ-ಅರಮೇರಿ ರಸ್ತೆಯು ದಶಕಗಳಿಂದ ಅಭಿವೃದ್ಧಿ ಕಾಣದೆ ನೆನೆಗುದಿಗೆ ಬಿದ್ದದ್ದು, ಇಲ್ಲಿಯ ಸಾರ್ವಜನಿಕರಿಗೆ ಓಡಾಡಲು ತುಂಬಾ ತೊಂದರೆಯಾಗುತ್ತಿತ್ತು. ಈ ಹಿಂದೆ ಮಾನ್ಯ ಶಾಸಕರು ಈ ಭಾಗಕ್ಕೆ ಭೇಟಿ ನೀಡಿದ ಸಂದರ್ಭ, ಸ್ಥಳೀಯ ನಾಯಕರು ಹಾಗೂ ಸಾರ್ವಜನಿಕರು ಈ ರಸ್ತೆಯ ಅಭಿವೃದ್ಧಿ ಬಗ್ಗೆ ಮನವಿ ಸಲ್ಲಿಸಿದ್ದರು. ಈ ರಸ್ತೆಯ ಅಭಿವೃದ್ಧಿಯ ಅವಶ್ಯಕತೆಯನ್ನು ಗಂಭೀರವಾಗಿ ಪರಿಗಣಿಸಿದ ಮಾನ್ಯ ಶಾಸಕರು, ತಮ್ಮ ನಿಧಿಯಿಂದ ರೂ 40 ಲಕ್ಷ ಅನುದಾನ ಒದಗಿಸಿ ಈ ರಸ್ತೆ ಸುಸಜ್ಜಿತವಾಗಿ ನಿರ್ಮಾಣವಾಗುವಂತೆ ನೋಡಿಕೊಂಡಿದ್ದಾರೆ. ಈಗ ಈ ರಸ್ತೆ ಸಂಪೂರ್ಣಗೊಂಡಿದ್ದು, ಲೋಕಾರ್ಪಣೆಗೊಳ್ಳಲು ಶಾಸಕರ ಆಗಮನವನ್ನು ಸ್ಥಳೀಯರು ಕಾಯುತ್ತಿದ್ದಾರೆ. ಈ ರಸ್ತೆ ನಿರ್ಮಿಸಲು ಹಾಗೂ ಅನುದಾನ ಒದಗಿಸಲು ಸಹಕರಿಸಿದ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ತಿತೀರಾ ಧರ್ಮಜ ಉತ್ತಪ್ಪ, ಬ್ಲಾಕ್ ಕಾಂಗ್ರೆಸ್…

Read More

ಕರ್ನಾಟಕ ಕ್ರೀಡಾ ಪ್ರಾಧಿಕಾರದ ನೂತನ ಉಪಾಧ್ಯಕ್ಷರಾಗಿ ಇಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿರುವ ಅಧಿಕೃತ ಕಚೇರಿಯಲ್ಲಿ, ಸನ್ಮಾನ್ಯ *ಶ್ರೀ ಚೆಪ್ಪುಡೀರ ಅರುಣ್ ಮಾಚಯ್ಯರವರು* ಪದಗ್ರಹಣಗೈದರು. ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ *ಶ್ರೀ ಎನ್.ಎಸ್ ಭೋಸ ರಾಜು* , ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ *ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಶ್ರೀಮತಿ ಕಾಂಚನ್ ಪೊನ್ನಣ್ಣ ರವರು* ಹಾಗೂ ಜಿಲ್ಲೆಯಿಂದ ಪದಗ್ರಹಣ ಸಮಾರಂಭಕ್ಕೆ ಸಾಕ್ಷಿಕರಿಸಲು ತೆರಳಿದ ಕಾಂಗ್ರೆಸ್ ಮುಖಂಡರುಗಳು, ಕ್ರೀಡಾ ಇಲಾಖೆಯ ಅಧಿಕಾರಿ ವರ್ಗದವರು ಉಪಸ್ಥಿತರಿದ್ದರು. ದೇವರಿಗೆ ಪೂಜೆ ಸಲ್ಲಿಸಿದ ಬಳಿಕ ಕಚೇರಿಗೆ ಪ್ರವೇಶಿಸಿದ ಕ್ರೀಡಾ ಪ್ರಾಧಿಕಾರದ ಮಾನ್ಯ ಉಪಾಧ್ಯಕ್ಷರನ್ನು ಗಣ್ಯರು ಹೂಗುಚ್ಛ ನೀಡುವ ಮೂಲಕ ಅಭಿನಂದಿಸಿದರು. ಉಸ್ತುವಾರಿ ಸಚಿವರು ಹಾಗೂ ಎ.ಎಸ್ ಪೊನ್ನಣ್ಣ ದಂಪತಿಗಳು ನೂತನ ಉಪಾಧ್ಯಕ್ಷರಿಗೆ ಯಶಸ್ಸಿನ ಶುಭಾಶಯಗಳು ಕೋರಿದರು.

Read More

ಕೊಡಗು ಖಾಸಗಿ ಬಸ್ ಕಾರ್ಮಿಕ ಸಂಘದವರು ಆಯೋಜಿಸಿದ ಆಯುಧ ಪೂಜೆ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು* ಭಾಗವಹಿಸಿದರು. ವಿರಾಜಪೇಟೆಯ ಖಾಸಗಿ ಬಸ್ ನಿಲ್ದಾಣದಲ್ಲಿ ಆಯುಧ ಪೂಜೆ ಕಾರ್ಯಕ್ರಮ ನಡೆಯಿತು. ಆಯುಧ ಪೂಜೆಯಲ್ಲಿ, ಎಲ್ಲಾ ಸಿಬ್ಬಂದಿ ವರ್ಗದವರಿಗೆ ಭಾಗವಹಿಸಿದ ಮಾನ್ಯ ಶಾಸಕರು, ವಾಹನಗಳಿಗೆ ಪೂಜೆ ಸಲ್ಲಿಸಿದ ಬಳಿಕ ಎಲ್ಲರ ಸುರಕ್ಷತೆಗಾಗಿ ಜಗನ್ಮಾತೆ ಆಶೀರ್ವದಿಸಲಿ ಎಂದು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ವೇದಿಕೆ ಮೇಲೆ ಉಪಸ್ಥಿತರಿರುವ ಎಲ್ಲಾ ಗಣ್ಯರು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More