Author: Kodagu-admin

ಕೊಡಗು ಜಿಲ್ಲೆಗೆ ಆಗಮಿಸಿರುವ ಮಾನ್ಯ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರನ್ನು ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ *ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು* ಇಂದು ಆತ್ಮೀಯವಾಗಿ ಸ್ವಾಗತಿಸಿ ಸನ್ಮಾನಿಸಿದರು.

Read More

ಕೊಡಗು ಜಿಲ್ಲಾ ಪ್ರವಾಸದಲ್ಲಿರುವ ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರೊಂದಿಗೆ ಇಂದು, ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣನವರು, ಹಿರಿಯ ಕಾಂಗ್ರೆಸ್ ಮುಖಂಡ ಮಾಜಿ ಸಚಿವರಾದ ಶ್ರೀ ಎಂ.ಸಿ ನಾಣಯ್ಯ ರವರ ಮನೆಗೆ ಭೇಟಿ ನೀಡಿದರು. ಔಪಚಾರಿಕವಾದ ಈ ಭೇಟಿ ಸಂದರ್ಭ, ಇಂದು ಜನ್ಮದಿನವನ್ನು ಆಚರಿಸುತ್ತಿರುವ ಶ್ರೀ ಎಂ.ಸಿ ನಾಣಯ್ಯ ರವರನ್ನು ಅಭಿನಂದಿಸುವುದರೊಂದಿಗೆ ಅವರ ಆರೋಗ್ಯವನ್ನು ವಿಚಾರಿಸಿಕೊಂಡರು. ಈ ಸಂದರ್ಭದಲ್ಲಿ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಉಪಾಧ್ಯಕ್ಷರಾದ ಎಸ್. ಆರ್. ಮೆಹರೋಜ್ ಖಾನ್ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.

Read More

ಕಾರ್ಮಿಕ ಸಚಿವರಾದ ಶ್ರೀ ಸಂತೋಷ್ ಲಾಡ್ ರವರೊಂದಿಗೆ ಇಂದು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಜಿಲ್ಲಾ ಕಾಂಗ್ರೆಸ್ ಕಚೇರಿ ಭೇಟಿ ನೀಡಿದರು. ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶಾಸಕರು, ನಾವೆಲ್ಲರೂ ಸಿದ್ದಾಂತವನ್ನು ಪಾಲಿಸಿಕೊಂಡು ಬಂದಲ್ಲಿ ಕಾಂಗ್ರೆಸ್ ಪಕ್ಷ ಕಟ್ಟುವುದು ಸುಲಭ ಎಂಬ ಕರೆಯನ್ನು ನೀಡಿದರು. ಸದಾ ತಳಮಟ್ಟದಲ್ಲಿ ಜನರನ್ನು ಸಂಪರ್ಕಿಸುತ್ತ ಕಾಂಗ್ರೆಸ್ ಪಕ್ಷದ ಗ್ಯಾರಂಟಿಯನ್ನು ಮನೆ ಮನೆಗೆ ತಲುಪಿಸುವ ಕೆಲಸವನ್ನು ಪಕ್ಷದ ಕಾರ್ಯಕರ್ತರು ಮಾಡಬೇಕೆಂಬ ಸಲಹೆ ನೀಡಿದರು. ಕೊಡಗು ಜಿಲ್ಲಾ ಕಾರ್ಮಿಕ ಘಟಕದ ಅಧ್ಯಕ್ಷರಾದ ದಿನೇಶ್ ಶೆಟ್ಟಿ ಹಾಗೂ ಸಮಿತಿ ಸದಸ್ಯರುಗಳ ಉಸ್ತುವಾರಿಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ಮಡಿಕೇರಿ ಶಾಸಕರಾದ ಡಾ. ಮಂತರ್ ಗೌಡ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರುಗಳು, ಮುಂಚೂಣಿ ಘಟಕಗಳ ಅಧ್ಯಕ್ಷರುಗಳು, ಡಿಸಿಸಿ ಪದಾಧಿಕಾರಿಗಳು, ಪಕ್ಷದ ಪ್ರಮುಖರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

Read More

#ಜಿಲ್ಲಾ_ಮಟ್ಟಕ್ಕೆ_ಆಯ್ಕೆಯಾದ_ಅರುಣ_ಪದವಿ_ಪೂರ್ವ_ಕಾಲೇಜಿನ_ವಿದ್ಯಾರ್ಥಿನಿಯರು. ಚೇರಂಬಾಣೆಯ ಅರುಣ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿಯರು ಕಬ್ಬಡಿ ಪಂದ್ಯಾವಳಿಯಲ್ಲಿ ವಿಜೇತರಾಗಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Read More

#ಜಿಲ್ಲಾ_ಮಟ್ಟಕ್ಕೆ_ಆಯ್ಕೆಯಾದ_ವಿವೇಕಾನಂದ_ಕಾಲೇಜಿನ_ವಿದ್ಯಾರ್ಥಿಗಳು. ಸೋಮವಾರಪೇಟೆಯಲ್ಲಿ ನಡೆದ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಸೋಮವಾರಪೇಟೆಯ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ತಂಡ ಜಯಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

Read More

ಅಸಂಘಟಿತ ಕಾರ್ಮಿಕರಿಗೆ ಸರ್ಕಾರದಿಂದ ಹಲವು ಯೋಜನೆ; ಸಂತೋಷ್ ಲಾಡ್ *************************************************************** ಮಡಿಕೇರಿ :-ಕಾರ್ಮಿಕ ಇಲಾಖೆಯಲ್ಲಿ ಅಸಂಘಟಿತ ಕಾರ್ಮಿಕರಿಗೆ ಹಲವು ಯೋಜನೆ ಜಾರಿಗೊಳಿಸಿದ್ದು, ಆ ದಿಸೆಯಲ್ಲಿ ಅಸಂಘಟಿತ ಕಾರ್ಮಿಕರು ಕಾರ್ಮಿಕ ಇಲಾಖೆಯಲ್ಲಿ ಹೆಸರು ನೋಂದಾಯಿಸುವಂತೆ ಕಾರ್ಮಿಕ ಸಚಿವರಾದ ಸಂತೋಷ್.ಎಸ್.ಲಾಡ್ ಅವರು ಕರೆ ನೀಡಿದ್ದಾರೆ. ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಕಾರ್ಮಿಕ ಇಲಾಖೆ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಇವರ ಸಹಯೋಗದಲ್ಲಿ ನಗರದ ಕ್ರಿಸ್ಟಲ್ ಸಭಾಂಗಣದಲ್ಲಿ ಕೊಡಗು ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ಮಂಡಳಿಯ ವಿವಿಧ ಯೋಜನೆಗಳ ಕುರಿತು ಬುಧವಾರ ನಡೆದ ಅರಿವು ಕಾರ್ಯಕ್ರಮಕ್ಕೆ ಚಾಲನೆ ನೀಡಿ ಸಚಿವರು ಮಾತನಾಡಿದರು. ಕಾರ್ಮಿಕ ಇಲಾಖೆಯಲ್ಲಿ 26 ರಿಂದ 101 ರೀತಿಯ ಅಸಂಘಟಿತ ಕಾರ್ಮಿಕರಿಗೆ ಸರ್ಕಾರ ಹಲವು ಯೋಜನೆ ಜಾರಿಗೊಳಿಸಿದೆ. ಇವುಗಳನ್ನು ಪಡೆದುಕೊಳ್ಳಲು ಮುಂದಾಗಬೇಕು ಎಂದು ಸಂತೋಷ್ ಎಸ್.ಲಾಡ್ ಅವರು ಕೋರಿದರು. ಸರ್ಕಾರ ಪ್ರಮುಖವಾಗಿ ಗಿಗ್ ಕಾರ್ಮಿಕರಿಗೆ ವಿಮಾ ಯೋಜನೆಯನ್ನು ಜಾರಿಗೊಳಿಸಿರುವುದು ಇಡೀ…

Read More

ಸಿದ್ದಾಪುರ ಪೊಲೀಸ್ ಠಾಣಾ ವ್ಯಾಪ್ತಿಯ ಬಾಡಗ ಬಾಣಂಗಾಲ ಗ್ರಾಮದಲ್ಲಿ ಅಕ್ರಮವಾಗಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ/ಸರಬರಾಜು ಮಾಡುತ್ತಿದ್ದ ವ್ಯಕ್ತಿಗಳನ್ನು ಪತ್ತೆ ಹಚ್ಚುವಲ್ಲಿ ಕೊಡಗು ಜಿಲ್ಲಾ ಪೊಲೀಸ್ ಯಶಸ್ವಿಯಾಗಿದೆ. ಕೊಡಗು ಜಿಲ್ಲಾ ವ್ಯಾಪ್ತಿಯಲ್ಲಿ ಮಾದಕ ವಸ್ತುಗಳ ಮಾರಾಟದ ಬಗ್ಗೆ ನಮ್ಮ ಕಛೇರಿ /ಠಾಣೆಗಳಿಗೆ ಸಾರ್ವಜನಿಕರಿಂದ ದೂರು ಬರುತ್ತಿದ್ದು, ನಿಷೇಧಿತ ಮಾದಕ ವಸ್ತುಗಳ ಮಾರಾಟ/ಸರಬರಾಜು / ಬಳಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಶ್ರೀ ಸೂರಜ್.ಪಿ.ಎ, ಡಿಎಸ್‌ಪಿ, ಮಡಿಕೇರಿ ಉಪವಿಭಾಗ, ಶ್ರೀ ರಾಜು.ಪಿ.ಕೆ, ಸಿಪಿಐ, ಮಡಿಕೇರಿ ನಗರ ವೃತ್ತ ಮತ್ತು ಶ್ರೀ ಮಂಜುನಾಥ.ಈ, ಪಿಎಸ್‌ಐ, ಸಿದ್ದಾಪುರ ಪೊಲೀಸ್ ಠಾಣೆ & ಸಿಬ್ಬಂದಿಗಳು ತನಿಖೆ ಕೈಗೊಂಡು ಮಾಹಿತಿ ಸಂಗ್ರಹಿಸಿ ದಿನಾಂಕ: 14-09-2025 ರಂದು ಬಾಡಗ ಬಾಣಂಗಾಲ ಗ್ರಾಮದ ಮಾರ್ಗೊಲ್ಲಿ ಟಾಟಾ ಕಾಫಿ ಎಸ್ಟೇಟ್ ಜಂಕ್ಷನ್ ಬಸ್ ನಿಲ್ದಾಣದ ಬಳಿ ನಿಷೇಧಿತ ಮಾದಕ ವಸ್ತು ಗಾಂಜಾ ಮಾರಾಟ/ಸರಬರಾಜು ಮಾಡುವ ಕುರಿತು ಖಚಿತ ಮಾಹಿತಿ ಹಿನ್ನೆಲೆಯಲ್ಲಿ ದಾಳಿ ನಡೆಸಿ ಪಶ್ಚಿಮಬಂಗಾಳ ರಾಜ್ಯ ನಾದಿಯ ಜಿಲ್ಲೆ ಮೂಲದ ಸಿದ್ದಾಪುರದ ಮಾರ್ಗೊಲ್ಲಿ ಟಾಟಾ…

Read More

ಕೊಡಗು ಪತ್ರಕರ್ತರ ಸಂಘ(ರಿ) ಕ್ಷೇಮಾಭಿವೃದ್ಧಿ ಸಮಿತಿಯಿಂದ ಬೃಹತ್ ಉಚಿತ ಆರೋಗ್ಯ ತಪಾಸಣಾ ಶಿಬಿರ *15 ವಿಭಾಗಗಳ ನುರಿತ ತಜ್ಞರಿಂದ ಆರೋಗ್ಯ ತಪಾಸಣೆ* *ಪತ್ರಕರ್ತರು.. ಪತ್ರಕರ್ತರ ಕುಟುಂಬ ಸದಸ್ಯರು.. ಪತ್ರಿಕಾ ಕ್ಷೇತ್ರದ ಸಿಬ್ಬಂದಿಗಳು.. ಪತ್ರಿಕಾ ವಿತರಕರು.. ಕುಟುಂಬ ಸದಸ್ಯರು ಮತ್ತು ಸಾರ್ವಜನಿಕರಿಗಾಗಿ ಬೃಹತ್ ಆರೋಗ್ಯ ತಪಾಸಣಾ ಶಿಬಿರ* ಕೊಡಗು ಪತ್ರಕರ್ತರ ಸಂಘ(ರಿ.) ಪತ್ರಕರ್ತರ ಕ್ಷೇಮಾಭಿವೃದ್ಧಿ ಸಮಿತಿಯಿಂದ 2025 ರ ಸೆಪ್ಟೆಂಬರ್‌ 19ನೇ ತಾರೀಕು ಶುಕ್ರವಾರದಂದು ಮಡಿಕೇರಿಯ ಕಾವೇರಿ ಹಾಲ್ ನಲ್ಲಿ ಪತ್ರಕರ್ತರು, ಪತ್ರಕರ್ತರ ಕುಟುಂಬ ವರ್ಗದವರು, ಪತ್ರಿಕಾ ಕ್ಷೇತ್ರದ ಸಿಬ್ಬಂದಿಗಳು, ಪತ್ರಿಕಾ ವಿತರಕರು ಹಾಗೂ ಕುಟುಂಬದವರಿಗೆ ಬೃಹತ್ ಉಚಿತ ಆರೋಗ್ಯ ತಪಾಸಣೆ ಶಿಬಿರ ನಡೆಯಲಿದೆ. ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ, ಭೋದಕ ಆಸ್ಪತ್ರೆಯ 15 ವಿಭಾಗಗಳ ನುರಿತ ತಜ್ಞರುಗಳು ಹಾಗೂ ವೈದ್ಯರುಗಳು ಈ ಆರೋಗ್ಯ ತಪಾಸಣಾ ಶಿಬಿರದಲ್ಲಿ ಭಾಗವಹಿಸಲಿದ್ದಾರೆ. *ನೇತ್ರ ತಜ್ಞರು, ಜನರಲ್ ಮೆಡಿಸಿನ್, ಮೂಳೆ ತಜ್ಞರು, ಇ.ಎನ್.ಟಿ. ತಜ್ಞರು, ಶ್ವಾಸಕೋಶ ತಜ್ಞರು, ದಂತ ವೈದ್ಯಕೀಯ, ಶಸ್ತ್ರ ಚಿಕಿತ್ಸಕರು, ಮಕ್ಕಳ ತಜ್ಞರು, ಸ್ತ್ರೀರೋಗ…

Read More

*ಒಳಿತನ್ನು ಬೋಧಿಸುವವರೆಲ್ಲರೂ ಗುರುವಿನ ಸಮಾನರು* ಕರ್ನಾಟಕ ವಾರ್ತೆ ಬೇರೆ ಬೇರೆ ದೇಶದಲ್ಲಿ ಬೇರೆ ಬೇರೆ ದಿನದಂದು ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಗುತ್ತದೆ ಆದರೆ ಭಾರತ ದೇಶದಲ್ಲಿ ಮಾತ್ರ ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮದಿನವನ್ನು ಶಿಕ್ಷಕರ ದಿನಾಚರಣೆಯನ್ನಾಗಿ ಆಚರಿಸಲಾಗುತ್ತದೆ. ಎಂದು ಮಡಿಕೇರಿ ಕ್ಷೇತ್ರ ವಿಧಾನಸಭಾ ಶಾಸಕರಾದ ಡಾ. ಮಂತರ್ ಗೌಡ ರವರು ಮಡಿಕೇರಿ ಸಂತ ಜೋಸೆಫರ ಪ್ರೌಢಶಾಲೆಯಲ್ಲಿ ನಡೆದ ಶಿಕ್ಷಕರ ದಿನಾಚರಣೆ ಮತ್ತು ಜಿಲ್ಲಾ ಅತ್ಯುತ್ತಮ ಶಿಕ್ಷಕರ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಶಿಕ್ಷಕರ ಕುರಿತು ಮಾತನಾಡಿ ಶಿಕ್ಷಕರ ಮಹತ್ವವನ್ನು ತಿಳಿಸಿದರು. ಗುರುಗಳಿಲ್ಲದಿದ್ದರೆ ಸಮಾಜದ ಸ್ಥಿತಿಗತಿಗಳು ಬೆರಡೆಯೇ ಸಾಗುತ್ತಿತ್ತು ಗುರುವಿಂದಲೆ ಕೆಡಕುಗಳು ಮರೆಯಾಗಿ ಒಳಿತಾಗುತ್ತಿರುವುದು. ಗುರುವಿಂದಲೇ ಎಲ್ಲವೂ ಸಾಧ್ಯ ಹುಳಿ ಪೆಟ್ಟು ಬಿದ್ದರೆಯೇ ಕಲ್ಲು ಶಿಲೆಯಾಗುವುದು ಆದುದರಿಂದಲೇ ಪ್ರತಿಯೊಬ್ಬರ ಜೀವನದಲ್ಲಿಯೂ ಗುರು ಮಹತ್ವಪೂರ್ಣವಾಗಿದ್ದಾರೆ ಎಂದು ಗುರುವಿನ ಮಹತ್ವ ವನ್ನು ತಿಳಿಸಿದರು. ಇತ್ತೀಚಿನ ದಿನಗಳಲ್ಲಿ ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಆಗುತ್ತಿರುವುದು ಬೇಸರದ ಸಂಗತಿಯಾಗಿದೆ. ಆದುದರಿಂದಲೇ ಶಾಲೆಗಳಿಗೆ ಮಕ್ಕಳು ದಾಖಲಾಗಲು ಶಾಲೆಗಳಲ್ಲಿ ಅನೇಕ…

Read More

ಸಿದ್ದಾಪುರ : ಜೀವನದಲ್ಲಿ ಸಾಧನೆ ಮಾಡಲು ಹೊರಟಿರುವ ನೀವು ದುಶ್ಚಟಕ್ಕೆ ಬಲಿಯಾಗದೆ ಓದಿನ ಕಡೆಗೆ ಗಮನ ಹರಿಸಿ ಎಂದು ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಸಿದ್ದಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಂಜೀವಿನಿ ಒಕ್ಕೂಟದ ಆಶ್ರಯದಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ & ಜೀವನೋಪಾಯ ಇಲಾಖೆ ಕೊಡಗು ಜಿಲ್ಲಾ ಪಂಚಾಯತಿ, ತಾಲ್ಲೂಕು ಪಂಚಾಯತಿ ವಿರಾಜಪೇಟೆ ಹಾಗೂ ವಿವಿಧ ಇಲಾಖೆಗಳ ಸಹಯೋಗದೊಂದಿಗೆ ಸಿದ್ದಾಪುರ ಪಟ್ಟಣದಲ್ಲಿ ಆಯೋಜಿಸಲಾಗಿದ್ದ, ಮಾದಕ ವ್ಯಸನ ಮುಕ್ತ ಕರ್ನಾಟಕ ಅಭಿಯಾನವನ್ನುದ್ದೇಶಿಸಿ ಅವರು ಮಾತನಾಡಿದರು. ಗಾಂಜಾ, ಡ್ರಗ್ಸ್‌ ಸೇವನೆ ಮಾಡಿದರೆ ಮಾತ್ರವಲ್ಲ, ಅದನ್ನು ಮಾರಾಟ ಮಾಡಿದರೂ ಅಪರಾಧವೇ ಈಗಾಗಲೇ ಡ್ರಗ್ಸ್‌ ಸೇವನೆ, ಮಾರಾಟ ಮಾಡುವವರ ಮೇಲೆ ಪೊಲೀಸ್ ಇಲಾಖೆ ನಿಗಾಯಿಟ್ಟಿದೆ. ಮಾದಕ ವ್ಯಸನದಿಂದ ಅಪರಾಧ ಕೃತ್ಯಗಳು ಹೆಚ್ಚಾಗುವುದು ಮಾತ್ರವಲ್ಲದೆ ಆರೋಗ್ಯದ ಮೇಲೂ ದುಷ್ಪರಿಣಾಮ ಬೀರುಯತ್ತದೆ. ಮಾದಕ ಮದ್ಯ ವಸ್ತುಗಳ ಸೇವನೆಯನ್ನು ನಿಯಂತ್ರಿಸದೆ ಹೋದರೆ ಆರೋಗ್ಯಕರ ಸಮಾಜ ನಿರ್ಮಾಣ ಕಷ್ಟ ಸಾಧ್ಯ…

Read More