Author: Kodagu-admin

ಮಡಿಕೇರಿ ಸೆ 3 – ನಗರದ ಕೊಡಗು ವಿದ್ಯಾಲಯದಲ್ಲಿ ಗಣೇಶನ ಪೂಜೆಯನ್ನು  ಸಂಭ್ರಮದಿಂದ ಆಚರಿಸಲಾಯಿತು. 6 ನೇ ತರಗತಿಯ ವಿದ್ಯಾರ್ಥಿಗಳು ತಯಾರಿಸಿದ್ದ  ವಿವಿಧ ಗಾತ್ರಗಳಲ್ಲಿನ ಗಣೇಶ ಮೂತಿ೯ಗಳು  ಹೂವು ಮತ್ತು ದೀಪಾಲಂಕಾರದ ಮಧ್ಯೆ ವೇದಿಕೆಯ ಮುಂಭಾಗದಲ್ಲಿ  ಕಂಗೊಳಿಸಿದ್ದವು.  ಶಾಲಾ ಪ್ರಾಂಶುಪಾಲರಾದ   ಸುಮಿತ್ರ ಕೆ.ಎಸ್., ಆಡಳಿತಾಧಿಕಾರಿ   ರವಿ ಪಿ., ಸಂಯೋಜಕ  ಸುಮಂತ್ ಕೆ.ಎಸ್. ಹಾಗೂ ತರಗತಿ ಶಿಕ್ಷಕಿಯರಾದ  ಸಂಶ್ರುತಿ ಮತ್ತು   ಪೊನ್ನಮ್ಮ   ದೀಪ ಪ್ರಜ್ವಲನೆ  ಮಾಡಿದರು. ಗಣೇಶನು ಹೇಗೆ ಆನೆಯ ತಲೆಯೊಂದಿಗೆ ಪ್ರಸಿದ್ಧನಾದನೆಂಬ ಕಥೆಯನ್ನು ವಿದ್ಯಾರ್ಥಿಗಳು ನೃತ್ಯ-ನಾಟಕದ ಮೂಲಕ ಮನೋಜ್ಞವಾಗಿ ಪ್ರದರ್ಶಿಸಿದರು.   ಭಕ್ತಿ ಗೀತೆಗಳಿಗೆ ಆಧಾರಿತ ನೃತ್ಯ ಮತ್ತು ಭಜನೆಗಳು ಎಲ್ಲರ ಮನಸ್ಸನ್ನು ಸೆಳೆದವು. ಶಿಕ್ಷಕ ವೖಂದದವರೂ   “ಗಣೇಶ ನಾಮಾವಳಿ ”  ಪ್ರಸ್ತುತಪಡಿಸಿದರು. ಮನೀಷ್ ರೈ ಮತ್ತು ಆನ್ಯಾ ನಂಜಪ್ಪ ಕಾರ್ಯಕ್ರಮ   ನಿರೂಪಿಸಿದರು. ಮೊಹಮದ್ ಶಾಜ್ ಸ್ವಾಗತಿಸಿ,   ವಿರಾಟ್ ಮುತ್ತಪ್ಪ ಗಣೇಶ ಚತುರ್ಥಿಯ ಮಹತ್ವದ ಬಗ್ಗೆ ತಿಳಿಸಿದರು. ಹೃಧಾನ್ ಮುತ್ತಣ್ಣ  ವಂದಿಸಿದ…

Read More

ಕಾಫಿ ಟ್ರೇಡರ್ಸ್ ಮಾಲೀಕರು ಬಿಲ್ ನೀಡದಿದ್ದಲ್ಲಿ ನೇರ ಹೊಣೆ-ಎಸ್ ಪಿ ಎಚ್ಚರಿಕೆ ಕೊಡಗು ಜಿಲೆಯಲ್ಲಿರುವ ಯಾವುದೇ ಕಾಫಿ ಟ್ರೇಡರ್ಸ್ ನವರು ಕಾಫಿ ಖರೀದಿ ಸಂದರ್ಭ ರಶೀದಿ ಅಥವಾ ಬಿಲ್‌ನ್ನು ನೀಡದೆ ಹಾಗೂ ಮಾರಾಟ ಮಾಡುವವರ ಸಂಪೂರ್ಣ ವಿವರವನ್ನು ಇಟ್ಟುಕೊಳ್ಳದೆ ವ್ಯವಹಾರ ನಡೆಸಿದಲ್ಲಿ ಮತ್ತು ಕಳ್ಳತನ ಮಾಡಿರುವ ಕಾಫಿಯನ್ನು ಖರೀದಿ ಮಾಡಿರುವುದು ಕಂಡು ಬಂದಲ್ಲಿ ಕಾಫಿ ಟ್ರೇಡರ್ಸ್ ಮಾಲೀಕರನ್ನು ನೇರ ಹೊಣೆಗಾರನ್ನಾಗಿ ಮಾಡಲಾಗುವುದೆಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್ ಅವರು ಎಚ್ಚರಿಕೆ ನೀಡಿದ್ದಾರೆ. ಕೊಡಗು ನ್ಯೂಸ್

Read More

*ಕಕ್ಕಬ್ಬೆ ಮರಂದೋಡ ಗ್ರಾಮದಲ್ಲಿ ಅಕ್ರಮ ಗಾಂಜಾ ಮಾರಾಟಕ್ಕೆ ಯತ್ನ- ಇಬ್ಬರು ಅಸ್ಸಾಂ ಕಾರ್ಮಿಕರು ಅಂದರ್* ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಅಕ್ರಮವಾಗಿ ಮಾರಾಟ -ಸರಬರಾಜು ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕಬ್ಬಿನಕಾಡು – ಮರಂದೋಡ ಗ್ರಾಮದಲ್ಲಿ ವಾಸವಿರುವ ಅಸ್ಸಾಂ ರಾಜ್ಯದ ಧರೋಂಗ್ ಜಿಲ್ಲೆ ಮೂಲದ ಅಮೀರ್ ಹುಸೈನ್ (34) ಮತ್ತು ಮುನಾವರ್ ಹುಸೈನ್ (34) ಎಂಬಿಬ್ಬರು ಬಂಧಿತ ಆರೋಪಿಗಳಾಗಿದ್ದಾರೆ. ನಾಪೋಕ್ಲು ಪೊಲೀಸ್ ಠಾಣಾ ವ್ಯಾಪ್ತಿಯ ಮರಂದೋಡ ಗ್ರಾಮದ ಬಿದ್ದಂಡತಟ್ಟು ರಸ್ತೆಯಲ್ಲಿನ ಬಸ್ ನಿಲ್ದಾಣದ ಬಳಿ ಆರೋಪಿಗಳು ತಾ. 01-09-2025 ರಂದು ನಿಷೇಧಿತ ಮಾದಕ ವಸ್ತು ಗಾಂಜಾವನ್ನು ಅಕ್ರಮವಾಗಿ ಮಾರಾಟ – ಸರಬರಾಜು ಮಾಡುತ್ತಿದ್ದ ಬಗ್ಗೆ ದೊರೆತ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿರುವ ಪೊಲೀಸರು 2 ಕೆ.ಜಿ. 288 ಗ್ರಾಂ ನಿಷೇಧಿತ ಗಾಂಜಾವವನ್ನು ವಶಪಡಿಸಿಕೊಂಡಿದ್ದಾರೆ.ಬಳಿಕ ಆರೋಪಿಗಳಿಬ್ಬರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಮಡಿಕೇರಿ ಪೊಲೀಸ್ ಉಪ ವಿಭಾಗದ ಡಿ.ಎಸ್.ಪಿ. ಸೂರಜ್, ಮಡಿಕೇರಿ ಗ್ರಾಮಾಂತರ ಪ್ರಭಾರ ವೃತ್ತ…

Read More

ಕಲಾಕಾವ್ಯ ನಾಟ್ಯ ಶಾಲೆಗೆ ಭರತನಾಟ್ಯ ಪರೀಕ್ಷೆಯಲ್ಲಿ ಶೇಕಡ 100 ಫಲಿತಾಂಶ ಭಾಗವಹಿಸಿದ ಎಲ್ಲಾ ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ನಲ್ಲಿ ಪಾಸ್ ಆಗಿದ್ದಾರೆ. ಎಂದು ಗುರುಗಳಾದ ವಿದುಷಿ ಕಾವ್ಯಶ್ರೀ ಕಪಿಲ್ ದುಗ್ಗಳ ತಿಳಿಸಿದ್ದಾರೆ ವಿ. ಟಿ ಗಿರೀಶ್ ಮತ್ತು ಪ್ರಿಯ ದಂಪತಿಗಳ ಪುತ್ರಿ ವ್ರಿಷ್ಟಿ ವಿ. ಜಿ – 373-93.25% ಗಣೇಶ್ ಕೆ ಪಿ ಮತ್ತು ವೀಣಾ ತಂಟೆಪ್ಪಾಡಿ ದಂಪತಿಗಳ ಪುತ್ರಿಸಾಹಿತ್ಯ ಕೆ ಜಿ -368-92% ಅಮಿ ದಿನೇಶ್ ಮತ್ತು ಪವಿತ್ರ ದಂಪತಿಗಳ ಪುತ್ರಿ ಅಮೆ ಜೀವಿಕ -344-86% ಮೂವೇರಾ ಚಂದನ್ ಪೊನ್ನಪ್ಪ ಹಾಗೂ ನೀಲಿಮಾ ಪೊನ್ನಪ್ಪ ದಂಪತಿಗಳ ಪುತ್ರಿ ಯುಕ್ತಿ ಮತ್ತಮ್ಮ ಮ್ ಪಿ -330-82.5% ಮಧುಚಂದ್ರ ಪಿಕೆ ಮತ್ತು ರಚನಾ ಆರ್ ದಂಪತಿಗಳ ಪುತ್ರಿ ಸಾಕ್ಷಿ ಪಿ ಮ್ 310-77. 5 % ಅಂಕಗಳನ್ನು ಪಡೆದು ಉತ್ತೀರ್ಣರಾಗಿದ್ದಾರೆ

Read More

ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ  ಅತಿಥಿಗಳು ಕಾರ್ಯಪ್ಪ ಪ್ರತಿಮೆಗೆ ಪುಷ್ಪ ನಮನ ಹಾಗೂ ಯುವ ಸ್ಪಂದನವನ್ನು ಉದ್ಘಾಟಿಸಿದರು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ  ಪತ್ರಕರ್ತ ಕಿಶೋರ್ ರೈ ಕತ್ತಲೆಕಾಡು, ರಾಷ್ಟ್ರೀಯ ಸೇವಾ ಯೋಜನೆಯಲ್ಲಿ ವಿದ್ಯಾರ್ಥಿಗಳು ತಮ್ಮನ ತಾವು ತೋಡಗಿಸಿಕೊಳ್ಳಲು ಹಾಗೂ ಗುರುತಿಸಿಕೊಳ್ಳಲು ಒಂದು ಉತ್ತಮ‌ ಅವಕಾಶ. ಇಲ್ಲಿ ಸೇವಾ ಮನೋಭಾವ ಮಾತ್ರವಲ್ಲ ಅದರ ಆಚೆಗೂ ಸಾಕಷ್ಟು ಅವಕಾಶಗಳಿಗೆ ಇಂದು ಒಂದು ಉತ್ತಮ ವೇದಿಕೆಯಾಗಿದೆ. ನಾನು ಹೀಗೆ ಲೀಲಾಜಾಲವಾಗಿ ಮಾತನಾಡಲು ಅಡಿಪಾಯ ಹಾಕಿದ್ದೆ ಈ ಎನ್‌ಎಸ್‌ಎಸ್, ಬಹಳ ಅನುಭವ, ಅವಕಾಶಗಳ ಜೊತೆಗೆ ಜೀವನದ ಅನುಭವವನ್ನ  ಎನ್‌.ಎಸ್.ಎಸ್ ನೀಡುತ್ತದೆ ಎಂದು ವಿದ್ಯಾರ್ಥಿಗಳಿಗೆ ಕಿವಿ ಮಾತು ಹೇಳಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ಮಾತನಾಡಿ, ವಿದ್ಯಾರ್ಥಿಗಳು ಶಿಸ್ತು ಸಂಯಮ, ಜೊತೆಗೆ ಸಮಾಜದಲ್ಲಿ ಹೇಗೆ ಬೆರೆಯುತ್ತಾರೆಂಬದನ್ನು ಕಲಿಸಿಕೊಡುತ್ತದೆ. ಹೆಚ್ಚಿನದಾಗಿ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಸ್ವಚ್ಛತೆಯ ಕುರಿತು, ಕಾನೂನು ನಿಯಮದ ಬಗ್ಗೆ…

Read More

ಕೊಡಗು ಜಿಲ್ಲೆಯ ಮಡಿಕೇರಿ ನಗರದ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ವಿಡಿಯೋ ಬಳಸಿಕೊಂಡು ಡೇಟಿಂಗ್ ಮಾಡಲು ಯುವತಿಯರು ಹಾಗೂ ಆಂಟಿಯರು ಸಿಗುತ್ತಾರೆ, ಸರ್ವಿಸ್ ಬೇಕಾದರೆ ಕರೆ ಮಾಡಿ ಎಂದು ಮೊಬೈಲ್ ಸಂಖ್ಯೆಯೊಂದನ್ನು ನೀಡಿ ಸಾಮಾಜಿಕ ಜಾಲತಾಣದಲ್ಲಿ ಅಪ್ರಚಾರ ಮಾಡಿದ ಆರೋಪದಡಿ ವ್ಯಕ್ತಿಯೊಬ್ಬನನ್ನು ಕೊಡಗು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಜಿಲ್ಲೆಯ ಮುಧೋಳ ತಾಲ್ಲೂಕಿನ ಬೆಳಗಲಿ ಗ್ರಾಮದ ನಿವಾಸಿ ನಾಗಪ್ಪ ಹನುಮಂತ ಲಮಾಣಿ (26) ಬಂಧಿತ ಆರೋಪಿಯಾಗಿದ್ದಾನೆ. ಸಮಾಜಿಕ ಜಾಲತಾಣದಲ್ಲಿ ಕೊಡಗು ಜಿಲ್ಲೆಯ ಗೌರವಕ್ಕೆ ದಕ್ಕೆ ತರುವ ರೀತಿಯಲ್ಲಿ ವಿಡಿಯೋ ಹರಿಬಿಟ್ಟ ಕುರಿತು ವಿವಿಧ ಸಂಘ ಸಂಸ್ಥೆಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿ ಕ್ರಮಕ್ಕಾಗಿ ಒತ್ತಾಯಿಸಿದ್ದವು. ಈ ಹಿನ್ನೆಲೆಯಲ್ಲಿ ತನಿಖೆ ಕೈಗೊಂಡ ಕೊಡಗು ಜಿಲ್ಲಾ ಪೊಲೀಸ್ ಘಟಕದ ಸಾಮಾಜಿಕ ಜಾಲತಾಣ ನಿರ್ವಹಣೆ ಮತ್ತು ಕಣ್ಣಾವಲು ತಂಡವು ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಯಶಸ್ವಿಯಾಯಿತು. ಮಡಿಕೇರಿ ಉಪವಿಭಾಗದ ಡಿವೈಎಸ್‌ಪಿ ಸೂರಜ್ ಪಿ.ಎ, ಮಡಿಕೇರಿ ನಗರ ಸಿಪಿಐ ರಾಜು ಪಿ.ಕೆ., ಪಿಎಸ್‌ಐ ಅನ್ನಪೂರ್ಣ ಎಸ್.ಎಸ್. ಹಾಗೂ ಸಿಬ್ಬಂದಿಗಳ ತಂಡ ಕಾರ್ಯಾಚರಣೆ ನಡೆಸಿತು.…

Read More

ಮಡಿಕೇರಿ:-ಕನ್ನಡಿಯನ್ನು ಕಿಟಕಿಯನ್ನಾಗಿಸುವಂತ ಪ್ರಕ್ರಿಯೆ ಶಿಕ್ಷಣ. ನಮ್ಮೊಳಗಿರುವ ಪ್ರತಿಭೆಯನ್ನು ಗುರುತಿಸಲು ಶಿಕ್ಷಣ ಅತ್ಯಮೂಲ್ಯ ಕಾರ್ಯವೆಂದು ಕೊಡಗು ಜಿಲ್ಲಾ ಪ್ರಾಂಶುಪಾಲ ಸಂಘದ ಖಜಾಂಚಿ ಅಂತೋಣಿ ವಿಜಯನ್ ಅಲ್ವಾರೀಸ್ ಅವರು ತಿಳಿಸಿದ್ದಾರೆ. ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಮತ್ತು ಕೊಡಗು ಜಿಲ್ಲಾ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರುಗಳ ಸಂಘ ಇವರ ಸಂಯುಕ್ತ ಆಶ್ರಯದಲ್ಲಿ ಶುಕ್ರವಾರ ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದ ಪ್ರತಿಭಾ ಪುರಸ್ಕಾರ ಮತ್ತು 2025-26 ನೇ ಸಾಲಿನ ಶೈಕ್ಷಣಿಕ ಮತ್ತು ಸಾಂಸ್ಕøತಿಕ ಚಟುವಟಿಕೆಗಳನ್ನು ಉದ್ಘಾಟಿಸಿ ಅವರು ಮಾತನಾಡಿದರು. ಶಿಕ್ಷಣ ಇಲಾಖೆ ಹಮ್ಮಿಕೊಳ್ಳುತ್ತಿರುವ ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಲು ಪ್ರಾಂಶುಪಾಲ ಸಂಘ ಬಹಳ ಸಹಕಾರಿಯಾಗಿರುವುದು ಸ್ಮರಣೀಯ. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಅವರಿಗೆ ಸನ್ಮಾನಿಸುವುದು ಅತ್ಯಂತ ಗೌರವಯುತ ಕಾರ್ಯ. ಹಾಗೆಯೇ ಪೆÇೀಷಕರು ಅದಕ್ಕಾಗಿ ಶ್ರಮಿಸುತ್ತಿರುವುದು ಕೂಡ ಗಮನಾರ್ಹವೆಂದು ತಿಳಿಸಿದರು. ಪೆÇೀಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ತನ್ನ ಸಂತೋಷವನ್ನು ತ್ಯಾಗ ಮಾಡಿ ಸಮಯಕ್ಕೆ ಸರಿಯಾಗಿ ವಿದ್ಯಾರ್ಥಿಗಳನ್ನು ಶಾಲೆಗೆ ಕಳುಹಿಸಿ ವಿದ್ಯಾರ್ಥಿಗಳನ್ನು ಹಂತ-ಹಂತವಾಗಿ ತಯಾರು ಮಾಡುತ್ತಿರುವ ಪೆÇೀಷಕರಿಗೆ…

Read More

******************************************************** ಮಡಿಕೇರಿ:-ಸಮಾಜದ ಪ್ರತಿಯೊಬ್ಬ ಅರ್ಹ ವ್ಯಕ್ತಿಗೂ ಸರ್ಕಾರದ 5 ಗ್ಯಾರಂಟಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವಂತೆ ಜಿಲ್ಲಾ ಮಟ್ಟದ ಗ್ಯಾರಂಟಿ ಸಮಿತಿ ಅಧ್ಯಕ್ಷ ಧರ್ಮಜ ಉತ್ತಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ನಗರದ ಜಿ.ಪಂ.ಕಚೇರಿಯಲ್ಲಿ ಜಿಲ್ಲಾ ಮಟ್ಟದ ಪಂಚ ಗ್ಯಾರಂಟಿ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ಯಾರೆಂಟಿ ಯೋಜನೆಗಳು ಜನರಿಗೆ ಆರ್ಥಿಕ ಮತ್ತು ಸಾಮಾಜಿಕವಾಗಿ ಹೆಚ್ಚಿನ ಶಕ್ತಿ ತುಂಬಿದೆ ಎಂದರು. ಗ್ಯಾರೆಂಟಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಅಧಿಕಾರಿಗಳೂ ಸಹ ಅಗತ್ಯ ಸಹಕಾರ ನೀಡಬೇಕು. ಈ ಹಿಂದೆ ಅನ್ನಭಾಗ್ಯ ಅಕ್ಕಿ ಕಾಳಸಂತೆಯಲ್ಲಿ ಮಾರಾಟವಾಗುತ್ತಿರುವ ಬಗ್ಗೆ ನಿರಂತರ ದೂರುಗಳು ದಾಖಲಾಗಿದ್ದು, ಈ ಸಂಬಂಧ ಜಿಲ್ಲೆಯ ವಿವಿಧೆಡೆ ದಾಳಿ ನಡೆಸಿ ಅಕ್ಕಿಯನ್ನು ವಶಕ್ಕೆ ಪಡೆಯಲಾಗಿದೆ. ಅಲ್ಲದೆ ಫಲಾನುಭವಿಯೇ ಅಕ್ಕಿಯನ್ನು ಮಾರಾಟ ಮಾಡುತ್ತಿರುವುದು ತಿಳಿದು ಬಂದಿದ್ದು, ಕಠಿಣ ಕ್ರ,ಮ ಕೈಗೊಳ್ಳುವಂತೆ ಸಂಬಂಧಪಟ್ಟ ಇಲಾಖೆಯ ಮುಖ್ಯಸ್ಥರಿಗೆ ಸೂಚನೆ ನೀಡಲಾಗಿದೆ ಎಂದು ಧರ್ಮಜ ಉತ್ತಪ್ಪ ತಿಳಿಸಿದರು. ಜಿಲ್ಲಾ ಮಟ್ಟದ ಸಮಿತಿ ಸದಸ್ಯರಾದ ಶಶಿಧರ್ ಅವರು…

Read More

ಮಡಿಕೇರಿ ದಸರಾ ಸಮಿತಿ ನಿಯೋಗ *************************************************** ಮಡಿಕೇರಿ ಆ.29(ಕರ್ನಾಟಕ ವಾರ್ತೆ):-ಮಡಿಕೇರಿ ಜನೋತ್ಸವ ದಸರಾವನ್ನು ಸಂಭ್ರಮ, ಸಡಗರ, ಸುರಕ್ಷತೆ ಹಾಗೂ ಸ್ವಚ್ಛತೆಯಿಂದ ಆಚರಿಸಲು ಶುಕ್ರವಾರ ನಡೆದ ಸಭೆಯಲ್ಲಿ ತೀರ್ಮಾನಿಸಲಾಯಿತು. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಶಾಸಕರಾದ ಡಾ.ಮಂತರ್ ಗೌಡ, ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಉಪ ಪೊಲೀಸ್ ವರಿಷ್ಠಾಧಿಕಾರಿ ದಿನೇಶ್ ಕುಮಾರ್, ದಸರಾ ಸಮಿತಿ ಕಾರ್ಯಾಧ್ಯಕ್ಷರಾದ ಅರುಣ್ ಕುಮಾರ್ ಇತರರ ಉಪಸ್ಥಿತಿಯಲ್ಲಿ ನಡೆದ ಸಭೆಯಲ್ಲಿ ನಿರ್ಧರಿಸಲಾಯಿತು. ಸಭೆಯಲ್ಲಿ ಮಾತನಾಡಿದ ಶಾಸಕರಾದ ಡಾ.ಮಂತರ್ ಗೌಡ ಅವರು ಸಂಪ್ರದಾಯದಂತೆ ಹಿಂದಿನಿಂದ ನಡೆದುಕೊಂಡು ಬಂದಿರುವ ಮಡಿಕೇರಿ ದಸರಾವನ್ನು ವ್ಯವಸ್ಥಿತವಾಗಿ ಆಚರಿಸುವಂತಾಗಬೇಕು. ಸುರಕ್ಷತೆಗೆ ಒತ್ತು ನೀಡಬೇಕು ಎಂದರು. ಪ್ರತೀ ಮಂಟಪದಲ್ಲಿ ಪೊಲೀಸರನ್ನು ನಿಯೋಜಿಸಬೇಕು. ಕರಗ ಹಾಗೂ ದಶಮಂಟಪಗಳು ಸಾಗುವ ಮಾರ್ಗದ ಗುಂಡಿ ಮುಚ್ಚುವ ಕಾರ್ಯವಾಗಬೇಕು ಎಂದರು. ಹಣ ಬಿಡುಗಡೆ ಸಂಬಂಧ ಮುಖ್ಯಮಂತ್ರಿಯವರು, ಕನ್ನಡ ಮತ್ತು ಸಂಸ್ಕøತಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರನ್ನು ಸೆಪ್ಟೆಂಬರ್ ಮೊದಲ ವಾರದಲ್ಲಿ ಭೇಟಿ…

Read More