Author: Kodagu-admin

ವಿಧಾನಸೌಧದ ಬ್ಯಾಂಕ್ವೆಟ್ ಸಭಾಂಗಣದಲ್ಲಿಂದು, ಬೆಂಗಳೂರು ವಕೀಲರ ಸಂಘ ಹಾಗೂ ರವಿವರ್ಮ ಕುಮಾರ್ ಅಸೋಸಿಯೇಟ್ಸ್ ವತಿಯಿಂದ ಆಯೋಜಿಸಿದ ಸನ್ಮಾನ ಕಾರ್ಯಕ್ರಮದಲ್ಲಿ ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯರವರು ಭಾಗವಹಿಸಿದರು. ಈ ಕಾರ್ಯಕ್ರಮದಲ್ಲಿ ಹಿರಿಯ ವಕೀಲರಾದ ಪ್ರೊಫೆಸರ್ ರವಿವರ್ಮ ಕುಮಾರ್ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ರವರು ಹಾಗೂ ಆಹ್ವಾನಿತ ಗಣ್ಯಾತಿಗಣ್ಯರು ಉಪಸ್ಥಿತರಿದ್ದರು.

Read More

ಮಾನ್ಯ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯರವರ ಗೃಹ ಕಚೇರಿ ಕೃಷ್ಣಾದಲ್ಲಿಂದು, ಸಹಕಾರ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಈ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಮುಖ್ಯಮಂತ್ರಿಗಳ ಕಾರ್ಯದರ್ಶಿ ಶ್ರೀಮತಿ ಬೋಳಂಡಂಡ ಕಾವೇರಿ ಮತ್ತು ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Read More

ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಪಂಜರಪೇಟೆಯಲ್ಲಿ, ಶ್ರೀ ವಿನಾಯಕ ಸೇವಾ ಸಮಿತಿ-ಪಂಜರಪೇಟೆ, ಇವರು ಆಚರಿಸುತ್ತಿರುವ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ *ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು* ಭಾಗವಹಿಸಿದರು. ಇಂದಿನಿಂದ ಆಚರಿಸಲ್ಪಡುವ ಶ್ರೀ ಮಹಾ ಗಣಪತಿ ಉತ್ಸವದ, ಮೂರ್ತಿ ಪ್ರತಿಷ್ಠಾಪನ ಸಂದರ್ಭ ಉಪಸ್ಥಿತರಿದ್ದ ಮಾನ್ಯ ಶಾಸಕರು ವಿಘ್ನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು. ಪ್ರತಿ ವರ್ಷದಂತೆ ಈ ಸಾಲಿನಲ್ಲಿಯೂ ಅತ್ಯಂತ ವಿಜ್ಯಂಬಣೆಯಿಂದ ಆಚರಿಸಲ್ಪಡುವ ಈ ಹಬ್ಬವು ನಾಡಿನ ಸರ್ವ ಜನತೆಗೆ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ಕರುಣಿಸಲಿ ಎಂದು ಮಾನ್ಯ ಶಾಸಕರು ಪ್ರಾರ್ಥಿಸಿದರು. ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Read More

*ತಾಲೂಕು ಮಟ್ಟದ ಕ್ರೀಡಾಕೂಟ ಉದ್ಘಾಟನೆ* ವಿರಾಜಪೇಟೆಯ ಪ್ರಗತಿ ಶಾಲೆ ಆವರಣದಲ್ಲಿ ಆಯೋಜನೆಗೊಂಡಿರುವ, ವಿರಾಜಪೇಟೆ ತಾಲೂಕು ಮಟ್ಟದ ಕ್ರೀಡಾ ಕೂಟವನ್ನು ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ. ಎಸ್ ಪೊನ್ನಣ್ಣ ರವರು* ಉದ್ಘಾಟಿಸಿದರು. ಬಳಿಕ ಕ್ರೀಡಾಪಟುಗಳನ್ನು ಉದ್ದೇಶಿಸಿ ಮಾತನಾಡಿದ ಮಾನ್ಯ ಶಾಸಕರು, ಕ್ರೀಡೆಯು ಪ್ರತಿಯೊಬ್ಬರ ಜೀವನದಲ್ಲಿ ಮಾನಸಿಕ ಸಮತೋಲನ ವೃದ್ಧಿಸಿಕೊಂಡು ವಿದ್ಯಾಭ್ಯಾಸವನ್ನು ಉತ್ತಮ ರೀತಿಯಲ್ಲಿ ಮಾಡಲು ಸಹಕಾರಿಯಾಗಿದೆ. ದೈಹಿಕ ಸಾಮರ್ಥ್ಯವನ್ನು ಕಾಪಾಡಿಕೊಳ್ಳಲು ಕ್ರೀಡೆಯು ಬಹುಮುಖ್ಯವಾಗಿರುವಂತಹದು. ಪ್ರತಿಯೊಂದು ಕ್ರೀಡೆಯಲ್ಲಿಯೂ ಸೋಲು ಗೆಲುವಿನೊಂದಿಗೆ ಭಾಗವಹಿಸುವಿಕೆಯೂ ಅತಿ ಮುಖ್ಯವಾಗಿರುತ್ತದೆ. ಆದ್ದರಿಂದ ಪ್ರತಿಯೊಬ್ಬ ವಿದ್ಯಾರ್ಥಿಯು ತಮ್ಮನ್ನು ಕ್ರೀಡೆಯಲ್ಲಿ ತೊಡಗಿಸಿಕೊಂಡು ಉನ್ನತ ಪ್ರದರ್ಶನವನ್ನು ನೀಡಿ ಜೀವನದಲ್ಲಿ ಯಶಸ್ಸು ಕಾಣುವಂತಾಗಬೇಕೆಂದು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಪ್ರಗತಿ ಶಾಲೆಯ ಸಂಸ್ಥಾಪಕರು, ಮಾದಂಡ ಎಸ್ ಪೂವಯ್ಯ, ಮಾದಂಡ ತಿಮ್ಮಯ್ಯ ಆಡಳಿತ ಅಧಿಕಾರಿ, ಸುಷ್ಮ ತಿಮ್ಮಯ್ಯ, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ,ಪುರಸಭೆ ಸಾಯಿ ಸಮಿತಿ ಅಧ್ಯಕ್ಷರಾದ ಅಬುದುಲ್ ಜಲಿಲ್, ಬಿ ಇ o ಆನಂದ್, ವಿವಿಧ…

Read More