- ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
- ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
- ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
- ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
- ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ಮಹಮ್ಮದ್ ಯಾಸೀನ್ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ
- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
Author: Kodagu-admin
*ಕೊಡಗು ಜಿಲ್ಲಾ ಪೊಲೀಸ್ ಪತ್ರಿಕಾ ಪ್ರಕಟಣೆ* The Environment (Protection) Act, 1986 and Noise Pollution (Regulation and Control) Rules-2000 ರ ಅನ್ವಯ ನಿಗಧಿಪಡಿಸಿರುವ ಡೆಸಿಬಲ್ ಗಿಂತ ಹೆಚ್ಚಿನ ಡೆಸಿಬಲ್ ಸೌಂಡ್ಸ್ ಸಿಸ್ಟಂ ಉಪಕರಣಗಳನ್ನು ಬಳಸದಂತೆ ಸೂಚನೆಗಳನ್ನು ನೀಡಲಾಗಿದ್ದರೂ ಸಹ ಕೊಡಗು ಜಿಲ್ಲೆಯಲ್ಲಿ ನಡೆಯುವ ಗಣೇಶ ಹಬ್ಬ ಹಾಗೂ ದಸರಾ ಹಬ್ಬಗಳ ಆಚರಣೆಯಲ್ಲಿ ಹೆಚ್ಚಿನ ಡೆಸಿಬಲ್ ಸೌಂಡ್ಸ್ ಸಿಸ್ಟಂ ಉಪಕರಣಗಳನ್ನು ಬಳಸುತ್ತಿರುವುದರಿಂದ ಕೊಡಗು ಜಿಲ್ಲಾಡಳಿತ ಮತ್ತು ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ರವರನ್ನು 06 ನೇ ಪ್ರತಿವಾದಿಯಾಗಿ ಮಾಡಿ ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಿದ್ದು, ಕರ್ನಾಟಕದ ಉಚ್ಚ ನ್ಯಾಯಾಲಯವು ಅರ್ಜಿ ವಿಚಾರಣೆಯನ್ನು ನಡೆಸಿ ಈ ಮೇಲಿನ ಕಾಯ್ದೆ ಮತ್ತು ನಿಯಮಗಳಲ್ಲಿ ಸೂಚಿಸಿರುವಂತೆ ಕಾನೂನು ಪಾಲನೆ ಮಾಡುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳುವಂತೆ ಕೊಡಗು ಜಿಲ್ಲಾಡಳಿತ ಮತ್ತು ಕೊಡಗು ಪೊಲೀಸ್ ಇಲಾಖೆ ಹಾಗೂ ಸಂಬಂಧಪಟ್ಟ ಸಂಸ್ಥೆಗೆ ನ್ಯಾಯಾಲಯವು ಸೂಚನೆಗಳನ್ನು ನೀಡಲಾಗಿರುತ್ತದೆ. ಆದ್ದರಿಂದ ಭಾರತದ ಸರ್ವೋಚ್ಚ ನ್ಯಾಯಾಲಯ ಮತ್ತು ಕರ್ನಾಟಕದ…
ವಿರಾಜಪೇಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಮಳಿಗೆ, ಎಸ್ ಜೋಯ್ಸ್ ಟವರ್ಸ್ ನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಉದ್ಘಾಟಿಸಿದರು. ಬಳಿಕ ಶುಭ ಕೋರಿದ ಶಾಸಕರು, ವೇಗವಾಗಿ ಬೆಳೆಯುತ್ತಿರುವ ವಿರಾಜಪೇಟೆ ನಗರದ ಜನತೆಯ ಅಗತ್ಯಗಳನ್ನು ಪೂರೈಸಲು ಒಂದೇ ಸಂಕೀರ್ಣದಲ್ಲಿ ಎಲ್ಲಾ ಸವಲತ್ತು ದೊರೆಯುವುದು ತುಂಬಾ ಅನುಕೂಲವಾಗುತ್ತದೆ. ಅಂತಹ ವಾತಾವರಣ ನಿರ್ಮಿಸುವುದು ಸಹ ಒಂದು ಉತ್ತಮ ಚಿಂತನೆಯಾಗಿದೆ. ಈ ವಾಣಿಜ್ಯ ಸಂಕೀರ್ಣವು ಯಶಸ್ಸನ್ನು ಕಾಣುತ್ತಾ ಮತ್ತಷ್ಟು ಅಭಿವೃದ್ಧಿ ಹೊಂದಲಿ ಎಂದು ಇದೇ ಸಂದರ್ಭದಲ್ಲಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಜೋಯ್ಸ್ ಟವರ್ಸ್ ನ ಮಾಲೀಕರು, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ,ಪುರಸಭೆ ಸಾಯಿ ಸಮಿತಿ ಅಧ್ಯಕ್ಷರಾದ ಅಬುದುಲ್ ಜಲಿಲ್,ಪುರಸಭೆ ಸದಸ್ಯರಾದ ರಾಜೇಶ್, ಮತೀನ್, ಪೃಥ್ವಿನಾಥ್, ರಜಿನಿಕಾಂತ್, ಕಾಂಗ್ರೆಸ್ ಮುಖಂಡರಾದ ಜೋಕಿಮ್, ರಾಜೇಶ್ ನಯಾರ್, ಕುಂದಚೀರ ಮಂಜು ದೇವಯ್ಯ, ಎ ವಿ ಮಂಜುನಾಥ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಜಮ್ಮಡ ಸೋಮಣ್ಣ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
*ಕೊಡಗು ವೈದ್ಯಕೀಯ ವಿಜ್ಞಾನ ಗಳ ಸಂಸ್ಥೆ ಬೋಧಕ ಆಸ್ಪತ್ರೆಯಲ್ಲಿ ಪಿಪಿಪಿ ಮಾದರಿಯಲ್ಲಿ ಕಾರ್ಡಿಯಾಕ್ ಯೂನಿಟ್ ಸ್ಥಾಪಿಸುವ ಸಂಬಂಧ ಪ್ರಗತಿ ಪರಿಶೀಲನೆ ಸಭೆಯಲ್ಲಿ ಡಾ. ಮಂತರ್ ಗೌಡ ಭಾಗಿ* ವೈದ್ಯಕೀಯ ಶಿಕ್ಷಣ ಇಲಾಖೆ ಸಚಿವರಾದ ಡಾ. ಶರಣ ಪ್ರಕಾಶ ಪಾಟೀಲ ರವರ ಅಧ್ಯಕ್ಷತೆಯಲ್ಲಿ ವಿಕಾಸ ಸೌಧ ದಲ್ಲಿ ಕಾರ್ಡಿಯಾಕ್ ಯೂನಿಟ್ ಸ್ಥಾಪಿಸುವ ಸಂಬಂಧ ಪರಿಶೀಲನಾ ಸಭೆಯಲ್ಲಿ ಮಡಿಕೇರಿ ವಿಧಾನ ಸಭಾ ಕ್ಷೇತ್ರದ ಸದಸ್ಯರಾದ ಡಾ ಮಂತರ್ ಗೌಡ ರವರು ಪಾಲ್ಗೊಂಡು ಯೋಜನೆ ಕಾರ್ಯಗತಗೊಳಿಸುವ ಸಂಭಂಧ ಸಚಿವರೊಂದಿಗೆ ಚರ್ಚಿಸಿ ಶೀಘ್ರವಾಗಿ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿ ಅನುಮೋದನೆ ಪಡೆಯುವ ಸಂಬಂಧ ಚರ್ಚಿಸಿದರು. ಮಾನ್ಯ ಸಚಿವರು ಯೋಜನೆ ಪ್ರಗತಿ ವಿವರವನ್ನು ಪರಿಶೀಲಿಸಿ ಅತ್ಯಾಧುನಿಕ ತಂತ್ರಜ್ಞಾನದ ಕ್ಯಾತ್ ಲ್ಯಾಬ್ ಸ್ಥಾಪಿಸುವ ಸಂಬಂಧ ಅಗತ್ಯ ಪ್ರಸ್ತಾವನೆಯನ್ನು ಶೀಘ್ರವಾಗಿ ಸಲ್ಲಿಸಿ ಟೆಂಡರ್ ಆಹ್ಚಾನಿಸಲು ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೊಹಮ್ಮದ್ ಮೊಹಿಸಿನ್, ಜಂಟಿ ಕಾರ್ಯದರ್ಶಿ ಡಾ. ವೆಂಕಟೇಶ್ ಮೂರ್ತಿ, ವೈದ್ಯಕೀಯ ಶಿಕ್ಷಣ ನಿರ್ದೇಶನಾಲಯ…
ಮೈಸೂರಿನಲ್ಲಿ ಕೊಡವಾಮೆರ ಆರ ಬೇರ ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಹಾಗೂ ಕೊಡವ ಸಮಾಜ ಮೈಸೂರು ಇವರ ಸಹಯೋಗದಲ್ಲಿ ಇಂದು ಮೈಸೂರು ಕೊಡವ ಸಮಾಜದಲ್ಲಿ “ಕೊಡವಾಮೆರ ಆರ ಬೇರ” ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮಕ್ಕೆ ಮಾನ್ಯ ಶಾಸಕರು ಹಾಗೂ ಸನ್ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ ಅವರು ಚಾಲನೆ ನೀಡಿದರು. ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷರಾದ ಅಜ್ಜಿನಿಕಂಡ ಸಿ. ಮಹೇಶ್ ನಾಚಯ್ಯ, ಕೊಡಗು ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ, ಮೈಸೂರು ಕೊಡವ ಸಮಾಜದ ಅಧ್ಯಕ್ಷರಾದ ಪೊಂಜಂಡ ಎ.ಗಣಪತಿ, ಮೈಸೂರು ಮಹಾ ನಗರಪಾಲಿಕೆ ಮಾಜಿ ಸದಸ್ಯರಾದ ಮಾಳೇಟಿರ ಸುಬ್ಬಯ್ಯ, ಅಕಾಡೆಮಿ ಸದಸ್ಯರು ಉಪಸ್ಥಿತರಿದ್ದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಹಳೆ ವಿದ್ಯಾರ್ಥಿ ಸಂಘದ ಸಭೆಯು ಕಾಲೇಜಿನ ನ್ಯಾಕ್ ಕೊಠಡಿಯಲ್ಲಿ ನಡೆಯಿತು. ಹಳೆ ವಿದ್ಯಾರ್ಥಿ ಸಂಘದ ಸಭೆಯ ಅಧ್ಯಕ್ಷ ಬೊಳ್ಳಜಿರ ಬಿ.ಅಯ್ಯಪ್ಪ ನೇತೃತ್ವದಲ್ಲಿ ಸಭೆ ನಡೆಯಿತು. ಸಭೆಯಲ್ಲಿ ಹಳೆ ವಿದ್ಯಾರ್ಥಿ ಸಂಘದಿಂದ ಕಾಲೇಜಿನಲ್ಲಿ ನಡೆಯಬೇಕಿರುವ ಅಭಿವೃದ್ಧಿಯ ಕುರಿತು ಚರ್ಚೆ ನಡೆಸಲಾಯಿತು ಹಾಗೂ ಗೌರವ ಅಧ್ಯಕ್ಷ ಸ್ಥಾನವನ್ನು ಕಾಲೇಜಿನ ಪ್ರಾಂಶುಪಾಲರು ವಹಿಸುವಂತೆ ನಿರ್ಣಯ ಕೈಗೊಳ್ಳಲಾಯಿತು. ಜೊತೆಗೆ ಮುಂಬರುವ ಕಾಲೇಜು ಅಭಿವೃದ್ಧಿ ಕುರಿತು ಚರ್ಚಿಸಿದ್ದು ಆಡಳಿತ ಮಂಡಳಿ ಸದಸ್ಯರು ನಿರ್ಣಯಗಳಿಗೆ ಸಮ್ಮತಿಸಿದರು. ಗೌರವ ಅಧ್ಯಕ್ಷರು ಹಾಗೂ ಕಾಲೇಜು ಪ್ರಾಂಶುಪಾಲ ಮೇ.ಪ್ರೊ.ರಾಘವ.ಬಿ. ಮಾತನಾಡಿ ಕಾಲೇಜು ಅಭಿವೃದ್ಧಿಗೆ ಹಳೆ ವಿದ್ಯಾರ್ಥಿ ಸಂಘದ ಸಹಕಾರ ಅಗತ್ಯ. ಕಾಲೇಜಿನಲ್ಲಿ ಸಾಕಷ್ಟು ಸಮಸ್ಯೆ ಇದ್ದು ಈ ಬಗ್ಗೆ ಹಳೆ ವಿದ್ಯಾರ್ಥಿ ಸಂಘ ಗಮನ ಹರಿಸುವಂತೆ ಮನವಿ ಮಾಡಿದರು. ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಬೊಳ್ಳಜಿರ ಬಿ. ಅಯ್ಯಪ್ಪ ಮಾತನಾಡಿ, ಹೊಸ ಆಡಳಿತ ಮಂಡಳಿ ಬಂದ ನಂತರ ಈವರೆಗೆ ನೂರಕ್ಕೂ ಹೆಚ್ಚು ಹೊಸ ಸದಸ್ಯತ್ಯವನ್ನ ಮಾಡಿರುವುದಾಗಿ ಮಾಹಿತಿ ನೀಡಿದರು.…
*ಧರ್ಮಸ್ಥಳ ಪ್ರಕರಣಕ್ಕೆ ನ್ಯಾಯ ಸಿಗಲಿದೆ ಪಾರದರ್ಶಕ ತನಿಖೆ ಆಗುವುದು* ಬಿಜೆಪಿ ಇದರಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವ ಅವಶ್ಯಕತೆ ಇಲ್ಲ ಮೈಸೂರಿನಲ್ಲಿ ಮುಖ್ಯ ಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಎ ಎಸ್ ಪೊನ್ನಣ್ಣ ಹೇಳಿಕೆ ಪಾರದರ್ಶಕ ತನಿಖೆ ಆಗಬೇಕು ಎಂಬುದನ್ನು ನಾವು ಹೇಳಿದ್ದೇವೆ. ಯಾರೇ ತಪ್ಪಿತಸ್ಥರಿದ್ದರೂ ಗುರುತಿಸಿ ಶಿಕ್ಷಿಸುವ ಕೆಲಸ ಸರ್ಕಾರ ಮಾಡಲಿದೆ. ರಾಜಕೀಯಕ್ಕಾಗಿ ಆರೋಪ ಮಾಡಿ ಇಂತ ಪ್ರಯತ್ನ ಮಾಡಿರೋದು ಸರಿಯಲ್ಲ ಧರ್ಮಸ್ಥಳ ಪಾವಿತ್ತ್ಯತೆ ಕಾಪಾಡಿ ತನಿಖೆ ಆಗಬೇಕು ಎಂದು ಸರ್ಕಾರ ಹೇಳಿದೆ. ಹೆಗಡೆ ಅವರೇ ಎಸ್. ಐ. ಟಿ ರಚನೆಗೆ ಸ್ವಾಗತ ಮಾಡಿದರು. ಪೊಲೀಸರು ತನಿಖೆ ಮಾಡಿ ಬೇರೆ ಬೇರೆ ಅಂಶಗಳು ಇಂದು ಹೊರ ಬಂದಿರುವ ಸಾಧ್ಯತೆ ಇದೆ. ದೂರು ಕೊಟ್ಟವರಿಗೂ ಜವಾಬ್ದಾರಿ ಇದೆ ಸುಳ್ಳು ದೂರು ಕೊಟ್ಟು, ಇಂತಹ ವಾತಾವತಣ ಸೃಷ್ಟಿ ಮಾಡಿದ್ದರೆ ಅಪರಾಧ ಅದಕ್ಕಾಗಿ ದೂರುದಾರನನ್ನು ಬಂಧಿಸಲಾಗಿದೆ. …
*ಡಿಸ್ಕಸ್ ಥ್ರೋ ವೇಳೆ ಅವಘಡ:ವಿದ್ಯಾರ್ಥಿ ಗಂಭೀರ* ಕುಶಾಲನಗರ ತಾಲ್ಲೂಕಿನ ನಂಜರಾಯಪಟ್ಟಣ ಸರ್ಕಾರಿ ಪ್ರೌಢ ಶಾಲೆಯಲ್ಲಿ ವಿದ್ಯಾರ್ಥಿಗಳು ಡಿಸ್ಕಸ್ ಥ್ರೋ ಅಭ್ಯಾಸ ನಡೆಸುತ್ತಿದ್ದ ಸಂದರ್ಭ ಆಕಸ್ಮಿಕವಾಗಿ ಅಡ್ಡ ಬಂದ ವಿದ್ಯಾರ್ಥಿಯೊಬ್ಬರ ತಲೆಗೆ ಡಿಸ್ಕಸ್ ಬಡಿದು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ವಿರೂಪಾಕ್ಷಪುರ ಗ್ರಾಮದ ಶೇಖರ್, ಆಶಾ ದಂಪತಿಗಳ ಪುತ್ರ 8ನೇ ತರಗತಿಯ ವಿದ್ಯಾರ್ಥಿ ಪ್ರಜ್ವಲ್ ಗಾಯಗೊಂಡ ವಿದ್ಯಾರ್ಥಿಯಾಗಿದ್ದು,ಕೋಮಾ ಸ್ಥಿತಿಗೆ ತಲುಪಿದ ಹಿನ್ನಲೆಯಲ್ಲಿ ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಆಸ್ಪತ್ರೆಗೆ ರವಾನಿಸಲಾಗಿದೆ. *ಕೊಡಗು ನ್ಯೂಸ್*
ಪಾಡಿ ಶ್ರೀ ಇಗ್ಗುತ್ತಪ್ಪ ದೇವಾಲಯದ ಕಾರ್ಯಕಾರಿ ಮಂಡಳಿ ಅಧ್ಯಕ್ಷರಾಗಿ ಬಿ. ಯು.ಪೂವಣ್ಣ ರವರನ್ನು ಎಲ್ಲಾ ಸದಸ್ಯರು ಒಮ್ಮತದಿಂದ ಆಯ್ಕೆ ಮಾಡಿ ಮೂರು ವರ್ಷದ ಅವದಿಗೆ ಅಧ್ಯಕ್ಷರಾಗಿರುತ್ತಾರೆ ಸಮಿತಿಯ ಸದಸ್ಯರುಗಳಾದ ಕುಶ ಭಟ್, ಕೆ. ಸಿ. ರಮೇಶ್, ಸಿ ಡಿ.ಉಷಾ, ಕೆ. ಸಿ. ನೈಲ್, ಪಿ. ಎಂ. ನರೇಂದ್ರ, ಎ. ಜಗದೀಶ್, ಭೀಮಯ್ಯ, ಉಲ್ಲಾಸ್ ಆರ್. ರವಿಕುಮಾರ್ ಕಾರ್ಯನಿರ್ವಾಹಕ ಅಧಿಕಾರಿ, ಪಿ. ಟಿ.ತಮ್ಮಯ್ಯ ಹಾಗೂ ಶ್ರೀಕಾಂತ್ ಸಭೆಯಲ್ಲಿ ಹಾಜರಿದ್ದರು.
*ಸಿದ್ದರಾಮಯ್ಯ ಅವರು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಆಧುನಿಕ ಭಾರತದ ನಿರ್ಮಾತೃ, ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜಯಂತಿಯ ಅಂಗವಾಗಿ ಆಚರಿಸಲ್ಪಡುವ ಸದ್ಭಾವನಾ ದಿನದ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.* ಈ ವೇಳೆ ಮಾನ್ಯ ಸಚಿವರಾದ ಕೆ.ಜೆ.ಜಾರ್ಜ್, ಕೆ.ಹೆಚ್.ಮುನಿಯಪ್ಪ, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಅಜ್ಜಿಕುಟ್ಟಿರ ಎಸ್.ಪೊನ್ನಣ್ಣ, ರಾಜಕೀಯ ಕಾರ್ಯದರ್ಶಿ ನಜೀರ್ ಅಹ್ಮದ್, ಸರ್ಕಾರದ ಮುಖ್ಯಕಾರ್ಯದರ್ಶಿಗಳಾದ ಡಾ.ಶಾಲಿನಿ ರಜನೀಶ್ ಹಾಗೂ ಸಚಿವಾಲಯದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಪ್ರತಿಜ್ಞೆ ಸ್ವೀಕರಿಸಿದರು.
*ಶಾಸಕ ಮಂತರ್ ನೇತೃತ್ವದಲ್ಲಿ ಮುಜರಾಯಿ ಸಚಿವರನ್ನು ಭೇಟಿಯಾದ ಓಂಕಾರೇಶ್ವರ ದೇವಾಲಯ ಆಡಳಿತ ಸಮಿತಿ.* ಮಡಿಕೇರಿ ಶ್ರೀ ಓಂಕಾರೇಶ್ವರ ದೇವಾಲಯದ ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಬೆಂಗಳೂರಿನ ವಿಧಾನಸೌಧದಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿಯವರನ್ನು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರು ಭೇಟಿಯಾಗಿ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿದರು. ದೇವಾಲಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಸಹಕಾರ ನೀಡುವಂತೆ ಶಾಸಕ ಡಾ.ಮಂತರ್ ಗೌಡ ಸಚಿವರಲ್ಲಿ ಮನವಿ ಸಲ್ಲಿಸಿದರು. ನಂತರ ಸಭೆಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ ದೇವಾಲಯದ ಅಭಿವೃದ್ಧಿಗೆ ಪೂರಕವಾಗಿ ಯೋಜನಾ ವರದಿ ತಯಾರಿ ಮಾಡಿ ವರದಿ ಸಲ್ಲಿಸುವಂತೆ ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು. ಈ ಸಭೆಯಲ್ಲಿ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ಸಮಿತಿಯ ಸದಸ್ಯರುಗಳಾದ ರಾಜೇಂದ್ರ, ನಿರಂಜನ್ ಎಂ ಎ, ಪ್ರಕಾಶ ಆಚಾರ್ಯ, ಅಂಬೇಕಲ್ ಕುಶಾಲಪ್ಪ, ಅರ್ಚಕರಾದ ಸಂತೋಷ್ ಭಟ್, ಕಾರ್ಯನಿರ್ವಾಹಕ ಅಧಿಕಾರಿ ದೇವರಾಜ್ ಉಪಸ್ಥಿತರಿದ್ದರು.
