- ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
- ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
- ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
- ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
- ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ಮಹಮ್ಮದ್ ಯಾಸೀನ್ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ
- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
Author: Kodagu-admin
ಮಡಿಕೇರಿ ಶ್ರೀ ಓಂಕಾರೇಶ್ವರ ದೇವಾಲಯದ ಅಭಿವೃದ್ಧಿ ಕಾಮಗಾರಿಗಳ ಕುರಿತಂತೆ ಬೆಂಗಳೂರಿನ ವಿಧಾನಸೌಧದಲ್ಲಿ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ರವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಮುಜರಾಯಿ ಇಲಾಖೆ ಸಚಿವರಾದ ರಾಮಲಿಂಗಾ ರೆಡ್ಡಿಯವರನ್ನು ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರು ಭೇಟಿಯಾಗಿ ಅಧಿಕಾರಿಗಳ ಸಮ್ಮುಖದಲ್ಲಿ ಸಭೆ ನಡೆಸಿದರು. ದೇವಾಲಯದ ಸಮಗ್ರ ಅಭಿವೃದ್ಧಿಗೆ ಪೂರಕವಾಗಿ ಸಹಕಾರ ನೀಡುವಂತೆ ಶಾಸಕ ಡಾ.ಮಂತರ್ ಗೌಡ ಸಚಿವರಲ್ಲಿ ಮನವಿ ಸಲ್ಲಿಸಿದರು. ನಂತರ ಸಭೆಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ ದೇವಾಲಯದ ಅಭಿವೃದ್ಧಿಗೆ ಪೂರಕವಾಗಿ ಯೋಜನಾ ವರದಿ ತಯಾರಿ ಮಾಡಿ ವರದಿ ಸಲ್ಲಿಸುವಂತೆ ಇಲಾಖಾ ಅಧಿಕಾರಿಗಳಿಗೆ ತಿಳಿಸಿದರು. ಈ ಸಭೆಯಲ್ಲಿ ದೇವಾಲಯ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಚುಮ್ಮಿ ದೇವಯ್ಯ, ಸಮಿತಿಯ ಸದಸ್ಯರುಗಳಾದ ರಾಜೇಂದ್ರ, ನಿರಂಜನ್ ಎಂ ಎ, ಪ್ರಕಾಶ ಆಚಾರ್ಯ, ಅಂಬೇಕಲ್ ಕುಶಾಲಪ್ಪ, ಅರ್ಚಕರಾದ ಸಂತೋಷ್ ಭಟ್, ಕಾರ್ಯನಿರ್ವಾಹಕ ಅಧಿಕಾರಿ ದೇವರಾಜ್ ಉಪಸ್ಥಿತರಿದ್ದರು.
ಕುಶಾಲನಗರ : ಮೊಬೈಲ್ ಫೋಟೋಗ್ರ‍್ರಾಫಿ ಪರಿಣಾಮ ವೃತ್ತಿ ಪರ ಫೋಟೋಗ್ರಾಫರ್ ಹಾಗೂ ವಿಡಿಯೋಗ್ರಾಫರ್ ಗಳ ಜೀವನ ದುಸ್ತರವಾಗಿದ್ದು, ಭವಿಷ್ಯದ ದಿನಗಳ ಚಿಂತೆ ಇವರನ್ನು ಕಾಡುತ್ತಿದೆ ಎಂದು ಕೊಡಗು ಜಿಲ್ಲಾ ಛಾಯಾಗ್ರಹಕರ ಕ್ಷೇಮಾಭಿವೃದ್ಧಿ ಸಂಘದ ಅಧ್ಯಕ್ಷ ಆವರ್ತಿ ಮಹದೇವಪ್ಪ ಆತಂಕ ವ್ಯಕ್ತಪಡಿಸಿದ್ದಾರೆ. ಕೊಡಗು ಪತ್ರಕರ್ತರ ಸಂಘ ಹಾಗೂ ಕುಶಾಲನಗರ ತಾಲೂಕು ಪತ್ರಕರ್ತರ ಸಂಘದಿಂದ ಕುಶಾಲನಗರದ ಗೌಡ ಸಮಾಜದಲ್ಲಿ ಮಂಗಳವಾರ ಆಯೋಜಿಸಲಾಗಿದ್ದ ವಿಶ್ವ ಛಾಯಾಗ್ರಹಣ ದಿನಾಚರಣೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು. ಪತ್ರಿಕಾ ವೃತ್ತಿಯಲ್ಲಿ ಪತ್ರಕರ್ತರು ಹಾಗೂ ಛಾಯಾಗ್ರಾಹಕರು ಒಂದೇ ನಾಣ್ಯದ ಎರಡು ಮುಖ ವೆಂದು ಬಣ್ಣಿಸಿದ ಅವರು, ಈ ಇಬ್ಬರ ಸಂಬಂಧ ಬಿಡಿಸಲಾಗದ ಅನುಬಂಧ ಎಂದು ಆವರು ಬಣ್ಣಿಸಿದರು. ತಮ್ಮ ಛಾಯಾಗ್ರಾಹಕ ವೃತ್ತಿ ಜೀವನದ ಅನುಭವವನ್ನು ವಿವರಿಸಿದ ಅವರು ನಮ್ಮ ಜೀವನದಲ್ಲಿ ಮಾನವೀಯತೆ ಗುಣಗಳನ್ನು ಬೆಳೆಸಿಕೊಂಡು ಸಮಾಜಮುಖಿಯಾಗಿ ಕೆಲಸ ಮಾಡಿಕೊಡಬೇಕೆಂದು ಸಲಹೆ ನೀಡಿದರು. ಕೊಡಗು ಜಿಲ್ಲಾ ಬಿಜೆಪಿ ಮಾಜಿ ಅಧ್ಯಕ್ಷ ಬಿ.ಬಿ. ಭಾರತೀಶ್ ಮಾತನಾಡಿ ಪತ್ರಕರ್ತರಷ್ಟೇ ಜವಾಬ್ದಾರಿ ಛಾಯಾಚಿತ್ರಗಾಹಕರಿಗಿದೆ. ಒಬ್ಬ ವ್ಯಕ್ತಿಯ ಭವಿಷ್ಯವನ್ನು ನಿರ್ಧರಿಸುವ…
ಸಮಾಜ ಸೇವಕರಾದ ಅಬ್ದುಲ್ ರಹಮಾನ್ ಅವರು ಪಾಲಿಬೆಟ್ಟದ ಚಶೇರ್ ಹೋಮ್ ಸಹಾಯದಿಂದ ಹುಟ್ಟು ಅಂಗವೈಕಲ್ಯರಾದ ಮಣಿ ಅವರ ಮಗನಿಗೆ ವ್ಹೀಲ್ ಚೇರ್ ಅನ್ನು ಸಿದ್ದಾಪುರ ಠಾಣಾಧಿಕಾರಿಗಳಾದ ಮಂಜುನಾಥ್ ಮತ್ತು ರವೀಂದ್ರ ಭಾವೆ ಅವರ ಸಮ್ಮುಖದಲ್ಲಿ ಹಸ್ತಾಂತರಿಸಿದ್ದಾರೆ.
ಇದೊಂದು ಕೇಸು ಪತ್ತೆಯಾಗಬೇಕಿತ್ತು. ಇದೊಂದು ಗೆಲುವು ಪೊಲೀಸರಿಗೆ ಬೇಕಾಗಿತ್ತು! ಪೊಲೀಸರ ವಸತಿ ಗೃಹದಲ್ಲೇ ಕಳ್ಳತನ,ರಕ್ಷಣೆ ನೀಡುವ ಆರಕ್ಷಕರಿಗೆ ರಕ್ಷಣೆ ಇಲ್ಲವೇ?…..ಎಂದು ಇತ್ಯಾದಿಯಾಗಿ ಮಡಿಕೇರಿಯ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾದದ್ದು ಕಳೆದ ಜೂನ್ 17ರಂದು ರಾತ್ರಿ ಜಿಲ್ಲಾ ಕೇಂದ್ರ ಮಡಿಕೇರಿಯ ಮೈತ್ರಿ ಹಾಲ್ ಬಳಿ ಇರುವ ಪೊಲೀಸ್ ವಸತಿ ಗೃಹಗಳಲ್ಲಿ ನಡೆದ ಕಳ್ಳತನ ಪ್ರಕರಣಗಳು. ಪೊಲೀಸರ ಮನೆಗಳಿಗೆ ಕನ್ನ ಹಾಕಿದ್ದ ಖದೀಮರು ಸುಮಾರು ಎಂಟು ಮನೆಗಳ ಬೀಗ ಹೊಡೆದು ರೂ. 90,000 ನಗದು ಸೇರಿದಂತೆ ಸ್ವಲ್ಪ ಪ್ರಮಾಣದ ಚಿನ್ನ-ಬೆಳ್ಳಿ ಆಭರಣಗಳನ್ನು ಕಳ್ಳರು ಕಳ್ಳತನ ಮಾಡುವ ಮೂಲಕ ಕೊಡಗು ಪೊಲೀಸರಿಗೆ ಎಸೆದಿದ್ದ ಸವಾಲನ್ನು ನಮ್ಮೆಲ್ಲರ ನೆಚ್ಚಿನ ಎಸ್.ಪಿ. ಸಾಹೇಬರು ಸವಾಲಾಗಿಯೇ ಸ್ವೀಕರಿಸಿ ಪ್ರಕರಣವನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿ-ಸಿಬ್ಬಂದಿಗಳ ವಿವಿಧ ತಂಡಗಳನ್ನು ರಚಿಸಿ ಆ ತಂಡಗಳಿಗೆ ಸಿಸಿಟಿವಿ ಪರಿಶೀಲಿಸುವ, ಮೊಬೈಲ್ ಟವರ್ ಡಂಪ್ ಪರಿಶೀಲಿಸುವ, ರಾಜ್ಯ – ಅಂತರ್ ರಾಜ್ಯ MOB ಗಳ ಮಾಹಿತಿ ಸಂಗ್ರಹಿಸುವುದು ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ನೀಡಿ ಪ್ರತಿದಿನ…
************************************************* ಮಡಿಕೇರಿ -ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂರ್ನಾಡು ಶಾಖೆ ಇವರ ಸಹಯೋಗದೊಂದಿಗೆ ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮದಲ್ಲಿ, ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಕೇಂದ್ರ ಸರಕಾರದ ಆದೇಶದಂತೆ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು. ಕಾರ್ಯಕ್ರಮದಲ್ಲಿ ಮಾತನಾಡಿದ ಆರ್ಥಿಕ ಸಾಕ್ಷರತಾ ಕಾರ್ಯಕ್ರಮ ನಡೆಸುತ್ತಿರುವ ಅವಾರ್ಡ್ ಸಂಸ್ಥೆಯ ಜಿಲ್ಲಾ ಸಂಯೋಜಕರಾಗಿರುವ ಕೆ.ಎ.ಆಸೀಫ್ ಅವರು, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣ ಮಾಹಿತಿ ಮತ್ತು ಉಪಯೋಗ ತಿಳಿದುಕೊಂಡು ಇದುವರೆಗೂ ಯೋಜನೆ ಮಾಡಿಸಿಕೊಳ್ಳದೆ ಇರುವವರು ಶೀಘ್ರದಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಕೋರಿದರು. ವಿಶೇಷವಾಗಿ ಕೊಡಗು ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭದಲ್ಲಿ ಅತೀ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು ಇಂತಹ ಸಂದರ್ಭದಲ್ಲಿ ಇದು ಅತೀ ಉಪಯೋಗಕರ ಎಂದು ತಿಳಿಸಿದರು. ಮೊಬೈಲ್ ಪೆÇೀನಿನಲ್ಲಿ ಬ್ಯಾಂಕ್‍ನಿಂದ ಅಂತ ಹೇಳಿ ಒಟಿಪಿ ಮತ್ತು ಕೆವೈಸಿ ಕೇಳಿ ಬರುವ ಕರೆಗಳು ಸೈಬರ್ ವಂಚಕರ ಜಾಲವಾಗಿದ್ದು, ಗ್ರಾಹಕರು ಪೆÇೀನಿನ ಮುಖಾಂತರ ಮಾಹಿತಿ ಹಂಚಿಕೊಳ್ಳಬಾರದು ಎಂದು ತಿಳಿಸಿದರು. ಅನಾಮಧೇಯ…
*********************************** ಮಡಿಕೇರಿ :-ವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಥ್ರ್ಯ ಸೌಧದಲ್ಲಿ ವಿರಾಜಪೇಟೆ ತಾಲ್ಲೂಕು ಆಡಳಿತಾಧಿಕಾರಿಗಳು, ಜಿ.ಪಂ.ಉಪ ಕಾರ್ಯದರ್ಶಿ ಎಂ.ಸಿ.ಚಂದ್ರಶೇಖರ್ ಅವರ ನೇತೃತ್ವದಲ್ಲಿ ವಿರಾಜಪೇಟೆ ತಾ.ಪಂ.ಸಾಮಾನ್ಯ ಸಭೆ ನಡೆಯಿತು. ಕುಡಿಯುವ ನೀರಿಗೆ ಸಂಬಂಧಿಸಿದಂತೆ ಪೆÇನ್ನಂಪೇಟೆ ಹಾಗೂ ವಿರಾಜಪೇಟೆ ತಾಲ್ಲೂಕಿನ ವಿವಿಧ ಗ್ರಾಮ ಪಂಚಾಯಿತಿಗಳಲ್ಲಿ ಜಲ ಜೀವನ್ ಮಿಷನ್ ಯೋಜನೆಯಡಿ ಒಟ್ಟು 3 ಬ್ಯಾಚ್‍ಗಳಿಂದ 120 ಕಾಮಗಾರಿಗಳಿದ್ದು 44 ಕಾಮಗಾರಿಗಳು ಮಾತ್ರ ಮುಕ್ತಾಯಗೊಂಡಿದ್ದು, ಇನ್ನುಳಿದ ಕಾಮಗಾರಿಗಳನ್ನು ತುರ್ತಾಗಿ ಪೂರ್ಣಗೊಳಿಸಲು ಕ್ರಮವಹಿಸಿ ಕುಡಿಯುವ ನೀರಿಗೆ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದು ಗ್ರಾಮೀಣ ಕುಡಿಯುವ ನೀರು ಇಲಾಖೆಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಶಾಲಾ ಮಕ್ಕಳಿಗೆ ಉತ್ತಮ ಶಿಕ್ಷಣವನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಉಚಿತ ಪಠ್ಯ-ಪುಸ್ತಕ, ಸಮವಸ್ತ್ರ, ಮಧ್ಯಾಹ್ನದ ಬಿಸಿಊಟದ ನೀಡುತ್ತಿದ್ದರೂ ಕೂಡ ಸರ್ಕಾರಿ ಶಾಲೆಗೆ ದಾಖಲಾಗುವ ಮಕ್ಕಳ ಸಂಖ್ಯೆ ಮಾತ್ರ ಇಳಿಕೆಯಾಗುತ್ತಿದೆ. ಎಸ್ಸೆಸ್ಸೆಲ್ಸಿ ಓದುತ್ತಿರುವ ಮಕ್ಕಳ ಶಿಕ್ಷಣದ ಬಗ್ಗೆ ಹೆಚ್ಚಿನ ಗಮನಹರಿಸಿ ಫಲಿತಾಂಶವು ಕಳೆದ ವರ್ಷಕ್ಕಿಂತ ಈ ಬಾರಿ ಉತ್ತಮಪಡಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ನಿರ್ದೇಶನ ನೀಡಿದರು.…
ಬೆಂಗಳೂರು ವಿರಾಜಪೇಟೆ ಮೂಲಕ ಮಡಿಕೇರಿಯತ್ತ ಬರುತ್ತಿದ್ದ ಖಾಸಗಿ ಬಸ್ಸೊಂದು ಬಿಟ್ಟಂಗಾಲ ಸಮೀಪದಲ್ಲಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯ ಬದಿಯ ಬರೆಗೆ ಗುದ್ದಿದೆ. *ಕೊಡಗು ನ್ಯೂಸ್*
ಸೋಮವಾರಪೇಟೆ ತಾಲ್ಲೂಕಿನ ಪ್ರಸಿದ್ಧ ಮಲ್ಲಳ್ಳಿ ಜಲಪಾತದ ಬಳಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.ಸೋಮವಾರಪೇಟೆ ಪಟ್ಟಣ ಸಮೀಪದ ಹನಗೋಡು ಗ್ರಾಮದ ಚಿದಾನಂದ್ (27)ಎಂಬಾತ ಜೀವನದಲ್ಲಿ ಜಿಗುಪ್ಸೆ ಗೊಂಡಿದ್ದು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಸ್ನೇಹಿತರಿಗೆ ಮೆಸೇಜ್ ಮಾಡಿದ್ದಾನೆ ಎನ್ನಲಾಗಿದೆ, ಪೂರಕವಾಗಿ ಚಿದಾನಂದ್ ಜಲಪಾತದ ಕಡೆಗೆ ತೆರಳುತ್ತಿದ್ದ ದೃಶ್ಯ ಸ್ಥಳೀಯ ಸಿಸಿ ಕ್ಯಾಮೆರಾ ದಲ್ಲಿ ಸೆರೆ ಯಾಗಿದೆ. ಚಿದಾನಂದ ಬೀದಳ್ಳಿ ಹೈಡ್ರೋ ಪ್ರಾಜೆಕ್ಟ್ ನಲ್ಲಿ ಉದ್ಯೋಗಿ ಎಂದು ತಿಳಿದು ಬಂದಿದ್ದು, ಸಿಸಿ ಕ್ಯಾಮರಾ ದೃಶ್ಯಗಳು ಅಧರಿಸಿ ಜಲಪಾತದ ಬಳಿ ಶೋಧ ಕಾರ್ಯ ನಡೆಸಲಾಗುತ್ತಿದೆ.
ಸೋಮವಾರಪೇಟೆ ತಾಲೂಕು ಕೋರ್ಟ್ ನ ಮಹಿಳಾ ಸಿಬ್ಬಂದಿಗಳು ರಂಗೋಲಿ ರಚಿಸಿ ಸ್ವಾತಂತ್ರ್ಯ ಸಂಭ್ರಮವನ್ನು ಆಚರಿಸಿದರು
ಮಡಿಕೇರಿ ತಾಲೋಕು ಸಂಪಾಜೆ ಹೋಬಳಿ ನಾಡಕಛೇರಿಯಲ್ಲಿ 79 ನೇ ಸ್ವಾತಂತ್ರೋತ್ಸವದ ಸಂಭ್ರಮಾಚಾರಣೆಯನ್ನು ಆಚರಿಸಲಾಯಿತು
