- ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
- ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
- ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
- ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
- ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ಮಹಮ್ಮದ್ ಯಾಸೀನ್ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ
- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
Author: Kodagu-admin
ಮುಂಬರುವ ಗಣೇಶ ಚತುರ್ಥಿ ಹಬ್ಬವನ್ನು ಶಾಂತಿ ಮತ್ತು ಸೌಹಾರ್ದಯುತವಾಗಿ ಆಚರಿಸುವ ನಿಟ್ಟಿನಲ್ಲಿ ಮಡಿಕೇರಿ ತಾಲೂಕಿನ ಗಣೇಶ ಹಬ್ಬ ಆಚರಣಾ ಸಮಿತಿಗಳ ಪದಾಧಿಕಾರಿಗಳ ಸಭೆಯನ್ನು ನಗರದ ಕಾವೇರಿ ಹಾಲ್‌ನಲ್ಲಿ ಏರ್ಪಡಿಸಲಾಗಿತ್ತು. ಸಭೆಯಲ್ಲಿ ಗಣೇಶ ಹಬ್ಬದ ಸಂದರ್ಭ ಪಾಲಿಸಬೇಕಾದ ಕ್ರಮಗಳ ಕುರಿತು ಚರ್ಚಿಸಲಾಯಿತು.
ದೀಪ, ಗಾನ, ಪುಪ್ಪಗಳ ಮೂಲಕ ವೀರಯೋಧರಿಗೆ ನಮನ ಸಲ್ಲಿಸಿದ ದೇಶಭಕ್ತರು ಕೊಡಗು ಪತ್ರಕತ೯ರ ಸಂಘ, ರೋಟರಿ ಮಿಸ್ಟಿ ಹಿಲ್ಸ್ ಆಯೋಜನೆಯ ಕಾಯ೯ಕ್ರಮದಲ್ಲಿ ಪಾಲ್ಗೊಂಡ 75 ಸಂಘಸಂಸ್ಥೆಗಳು ಮಡಿಕೇರಿ ಜು. 27 – ಹಣತೆ ಉರಿಸಿ, ಪುಪ್ಪಗಳನ್ನು ಅಪಿ೯ಸಿ, ದೇಶಭಕ್ತಿಯ ಹಾಡುಗಳೊಂದಿಗೆ ಯೋಧರು, ಹಾಗೂ ಭಾರತ ಮಾತೆಗೆ ಜೈಘೋಷಗಳ ಮೂಲಕ ವಿನೂತನ ರೀತಿಯಲ್ಲಿ ಕೊಡಗು ಪತ್ರಕತ೯ರ ಸಂಘ (ರಿ) ಮತ್ತು ರೋಟರಿ ಮಿಸ್ಟಿ ಹಿಲ್ಸ್ ವತಿಯಿಂದ ಕಾಗಿ೯ಲ್ ವಿಜಯ್ ದಿವಸ್ ಅಂಗವಾಗಿ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು. ನಗರದ ಗೌಡ ಸಮಾಜದ ಸಭಾಂಗಣದಲ್ಲಿ ಆಯೋಜಿತ ಕಾಯ೯ಕ್ರಮದಲ್ಲಿ ಜಿಲ್ಲೆಯಾದ್ಯಂತಲಿನ 75 ಸಂಘ ಸಂಸ್ಥೆಗಳ ಪ್ರತಿನಿಧಿಗಳು ಪಾಲ್ಗೊಂಡು ಅಮರ್ ಜವಾನ್ ಸ್ಮಾರಕದ ಪ್ರತಿಕೖತಿಗೆ ಪುಪ್ಪಾಚ೯ನೆ ಮಾಡಿ, ಹಣತೆ ಬೆಳಗಿ ಯೋಧರಿಗೆ ಭಾವಪೂಣ೯ ಗೌರವ ನಮನ ಸಲ್ಲಿಸಿದರು. ಯೋಧರೆ ನಾವೆಂದೂ ಮರೆಯೋದಿಲ್ಲ ನಿಮ್ಮನ್ನು ಎಂಬ ಸಂದೇಶ ಸಾರುವ ಕಾಯ೯ಕ್ರಮವನ್ನು ಕಾಗಿ೯ಲ್ ಸಮರದಲ್ಲಿ ಹುತಾತ್ಮರಾದ ಪೆಮ್ಮಂಡ ಕಾವೇರಪ್ಪ ಅವರ ಪತ್ನಿ ಪೆಮ್ಮಂಡ ಶೋಭಾ ಕಾವೇರಪ್ಪ ದೀಪಬೆಳಗಿಸಿ ಉದ್ಘಾಟಿಸಿದರು. ರೋಟರಿ…
ಮಡಿಕೇರಿ : -ಅರಣ್ಯಕ್ಕೆ ಸಂಬಂಧಿಸಿದಂತೆ ಹಲವು ಸಮಸ್ಯೆ ಪರಿಹರಿಸಲು ಅಧಿಕಾರಿಗಳು ಮುಂದಾಗಬೇಕು. ಆ ನಿಟ್ಟಿನಲ್ಲಿ ತಳಮಟ್ಟದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಜನಸ್ನೇಹಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ಸಂಪಾಜೆ, ಚೆಂಬು, ಪೆರಾಜೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯಕ್ಕೆ ಸಂಬಂಧಿಸಿದ ಹಲವು ವಿಚಾರಗಳ ಕುರಿತು ಅರಣ್ಯ ಅಧಿಕಾರಿಗಳು ಹಾಗೂ ಸಾರ್ವಜನಿಕರ ಜೊತೆ ಚೆಂಬು ಗ್ರಾ.ಪಂ.ಸಭಾಂಗಣದಲ್ಲಿ ನಡೆದ ಸಭೆಯಲ್ಲಿ ಶಾಸಕರು ಮಾತನಾಡಿದರು. ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳೀಯರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಿದಲ್ಲಿ ಎಷ್ಟೋ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಬಹುದು. ಆ ನಿಟ್ಟಿನಲ್ಲಿ ಗಮನಹರಿಸಬೇಕು. ಯಾರಿಗೂ ಸಹ ತೊಂದರೆಯಾಗದಂತೆ ಕಾಳಜಿ ವಹಿಸಬೇಕು ಎಂದು ಸೂಚಿಸಿದರು. ಸರ್ಕಾರ ಶಕ್ತಿ, ಗೃಹಜ್ಯೋತಿ, ಗೃಹಭಾಗ್ಯ, ಯುವನಿಧಿ, ಅನ್ನಭಾಗ್ಯ ಹೀಗೆ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಬಡವರು ಸಹ ಉತ್ತಮ ಬದುಕು ನಡೆಸುವಂತಾಗಲು ಹಲವು ಸಮಾಜಪರ ಕಾರ್ಯಕ್ರಮಗಳನ್ನು ನೀಡಿದೆ. ಅವುಗಳನ್ನು ಸ್ಮರಿಸುವಂತಾಗಬೇಕು ಎಂದರು. ಕಾಡಾನೆ ಮತ್ತು ಮಾನವ ಸಂಘರ್ಷ…
******************************************* ಮಡಿಕೇರಿ : ಜಿಲ್ಲೆಯಲ್ಲಿನ ರಾಷ್ಟ್ರೀಯ ಹೆದ್ದಾರಿ, ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆ ವ್ಯಾಪ್ತಿಯ ರಸ್ತೆಯನ್ನು ಸಮರ್ಪಕವಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸ್ಪಷ್ಟ ನಿರ್ದೇಶನ ನೀಡಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ‘ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆ’ಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಅಗತ್ಯವಿರುವ ಕಡೆಗಳಲ್ಲಿ ವೇಗ ನಿಯಂತ್ರಣ ಸಂಬಂಧ ಹಂಪ್‍ಗಳನ್ನು ಅಳವಡಿಸುವುದು. ಜೊತೆಗೆ ಎದ್ದು ಕಾಣುವಂತೆ ಬಿಳಿ ಪಟ್ಟೆ ಬರೆಯುವುದು. ರಸ್ತೆ ಬದಿ ಗಿಡಗಂಟೆಗಳನ್ನು ಕಡಿಯುವುದು, ಜೊತೆಗೆ ರಸ್ತೆ ತಿರುವು, ಉಬ್ಬು ರಸ್ತೆ ಮತ್ತಿತರ ಬಗ್ಗೆ ಸೂಚನಾ ಫಲಕ ಅಳವಡಿಸಿ, ರಸ್ತೆ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡುವಂತೆ ಎಂಜಿನಿಯರ್‍ಗಳಿಗೆ ತಾಕೀತು ಮಾಡಿದರು. ಚಾಲಕರಿಗೆ ರಸ್ತೆಗೆ ಸಂಬಂಧಿಸಿದಂತೆ ಮಾಹಿತಿ ದೊರೆಯುವಂತಾಗಬೇಕು. ಇದರಿಂದ ವೇಗ ನಿಯಂತ್ರಣಕ್ಕೆ ಸಹಕಾರಿಯಾಗಿ ಅಪಘಾತ ತಡೆಯಬಹುದಾಗಿದೆ. ಆ ನಿಟ್ಟಿನಲ್ಲಿ ತುರ್ತು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಸೂಚಿಸಿದರು. ಕುಶಾಲನಗರದಿಂದ ಸಂಪಾಜೆ ರಾಷ್ಟ್ರೀಯ ಹೆದ್ದಾರಿ ವ್ಯಾಪ್ತಿಯಲ್ಲಿ ಹಲವು ಅಪಘಾತಗಳು…
*ಆಹಾರದ ಬದಲು ಹಣಕ್ಕಾಗಿ ಕಾಯಿಲೆ ಹಂಚುವ ಕೇರಳದ ಕೆಲ ಸಂಸ್ಥೆಗಳು.* *ಹಂತ ಹಂತವಾಗಿ ಸತ್ಯ ಬಿಚ್ಚಿಟ್ಟ ತನಿಖಾ ಪತ್ರಕರ್ತ ಸುರೇಶ್ ಬಿಳಿಗಿರಿ.* ಇನ್ನಾದರೂ ಎಚ್ಚೆತ್ತುಕೊಳ್ಳಬೇಕು. ಎಚ್ಚೆತ್ತುಕೊಳ್ಳದಿದ್ದರೆ ಬಲಿಯಾಗುವುದು ಅಮಾಯಕರ ಜೀವಗಳು. ನೆರೆಯ ರಾಜ್ಯವಾದ ಕೇರಳದಿಂದ ಬರುತ್ತಿರುವ ವಿಷಕಾರಿ ಆಹಾರ ಪದಾರ್ಥಗಳನ್ನು ಸಾರ್ವಜನಿಕರು ಒಮ್ಮೆ ಪರೀಕ್ಷಿಸಿ ನೋಡಿ ಸೇವಿಸಬೇಕೆಂದು ಕೊಡಗು ನ್ಯೂಸ್ ಮನವಿ ಮಾಡಿದೆ. *SHARE MORE SAVE HEALTH* *ಕೊಡಗು ನ್ಯೂಸ್*
ವಿರಾಜಪೇಟೆ ತಾಲೂಕು ಬಿಟ್ಟಂಗಾಲ ಪಂಚಾಯ್ತಿಯ ವಿ. ಬಾಡಗ ಗ್ರಾಮದಲ್ಲಿ ಗದ್ದೆಯಲ್ಲಿ ಮೇಯಲು ಬಿಟ್ಟಿದ ತೀತಿಮಾಡ ಬೋಪಣ್ಣ ಅಯ್ಯಪ್ಪನವರ ಹಾಲು ಕರೆಯುತ್ತಿದ್ದ ಹಸುವನ್ನು ಹುಲಿ ಕೊಂದು ಸ್ವಲ್ಪ ಭಾಗ ತಿಂದು ಹಾಕಿದೆ, ಗದ್ದೆಯಲ್ಲಿ ಮೇಯಲು ಬಿಟ್ಟಿದ್ದ ಹಸು ಕಾಣೆಯಾಗಿ ನೆನ್ನೆಯಿಂದ ಹುಡುಕಿ ಇಂದು ಪಕ್ಕದ ತೋಟದಲ್ಲಿ ಹಸುವಿನ ಕಳೇಬರ ಪತ್ತೆಯಾಗಿದೆ. ಅಂದಾಜು 15 ಲೀಟರ್ನಷ್ಟು ಹಾಲು ಕೊಡುತ್ತಿದ್ದ ಹಸು ಹುಲಿ ದಾಳಿಗೆ ಬಲಿಯಾಗಿದ್ದು ಬೋಪಣ್ಣನವರು ಕಂಗೆಡುವಂತೆ ಮಾಡಿದೆ, ಸುತ್ತ ಮುತ್ತಲಿನ ಜನರು ಕೂಡ ಇನ್ನು ಮುಂದೆ ಹುಲಿಯ ಭಯದಲ್ಲೇ ಕಾಲ ಕಳೆಯುವಂತಾಗಿದೆ. ಶೀಘ್ರದಲ್ಲಿ ಅರಣ್ಯ ಇಲಾಖೆಯವರು ಹುಲಿಯನ್ನು ಪತ್ತೆ ಹಚ್ಚಬೇಕಾಗಿ ಸಾರ್ವಜನಿಕರು ಮನವಿ ಮಾಡಿದ್ದಾರೆ. *ಕೊಡಗು ನ್ಯೂಸ್*
*ಕೊಡಗು ಜಿಲ್ಲೆಯಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ಭಾರಿ ಮಳೆ ಹಾಗೂ ವಿಪರೀತ ಗಾಳಿಯಿಂದ ವಿದ್ಯುತ್ ಕಂಬಕ್ಕೆ ಮರ ಹಾಗೂ ರೆಂಬೆ ಕೊಂಬೆಗಳು ಮುರಿದು ಬಿದ್ದು ವಿದ್ಯುತ್ ಮಾರ್ಗಕ್ಕೆ ಹಾನಿ ಉಂಟಾಗಿರುತ್ತದೆ. ದುರಸ್ತಿ ಕಾರ್ಯವು ಸೆಸ್ಕ್ ವತಿಯಿಂದ ಸಮಾರೊಪಾದಿಯಲ್ಲಿ ನಡೆಯುತ್ತಿದ್ದು ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯಪಾಲಕ ಎಂಜಿನಿಯರ್ ಅವರು ಕೋರಿದ್ದಾರೆ* *ಕೊಡಗು ನ್ಯೂಸ್*
*ಮನೆಯ ಗೋಡೆ ಕುಸಿದು ಕಾರ್ಮಿಕ ಮಹಿಳೆ ದುರ್ಮರಣ* *ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದ ಘಟನೆ* ಕಲಬುರಗಿ ಜಿಲ್ಲೆ, ಅಫ್ಜಲ್ ಪುರದ ಸುಷ್ಮಾ(29) ಮೃತ ಮಹಿಳೆ ಇಂದು ಬೆಳಿಗ್ಗೆ 5.30ಕ್ಕೆ ಘಟನೆ ಸೋಮವಾರಪೇಟೆ ತಾಲೂಕಿನ ಹಾನಗಲ್ಲು ಗ್ರಾಮದಲ್ಲಿ ನಡೆದ ಘಟನೆ ಮನೆಯೊಳಗಿದ್ದ ಈರ್ವರು ಮಕ್ಕಳು ಹಾಗೂ ಸಹೋದರ ಪ್ರಾಣಾಪಾಯದಿಂದ ಪಾರು ಕಳೆದ ಎರಡು ವರ್ಷದ ಹಿಂದೆ ಸೋಮವಾರಪೇಟೆಗೆ ಆಗಮಿಸಿದ್ದ ಕುಟುಂಬ ಮಣ್ಣಿನ ಗೋಡೆ ಕುಸಿದು ತಲೆ ಭಾಗಕ್ಕೆ ಬಿದ್ದ ಹಿನ್ನೆಲೆ ಸ್ಥಳದಲ್ಲೇ ಸಾವು. *ಕೊಡಗು ನ್ಯೂಸ್*
ತೀವ್ರ ಮಳೆ,ಗಾಳಿಯಿಂದ ಕೊಡಗು ಜಿಲ್ಲೆಯ ಜನಜೀವನ ಅಸ್ತವ್ಯಸ್ತ ಗೊಂಡಿರುವ ಸನ್ನಿವೇಶದಲ್ಲಿ ಅರಣ್ಯ ಇಲಾಖೆಯವರೇ ಜಿಲ್ಲೆಯ ಜನರ ಜೀವನಕ್ಕೆ ಕಂಟಕಪ್ರಾಯವಾಗಿ ವರ್ತನೆ ಮಾಡಿದ್ದು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ರವರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ಇಂದು ಮುಂಜಾನೆ ಮಡಿಕೇರಿಯಲ್ಲಿ ನಡೆದಿದೆ. ಕೆ.ನಿಡುಗಣೆ ಗ್ರಾಮದ ನಿವಾಸಿ ಅರ್ಚಕರಾದ ಕಿಶೋರ್ ಸ್ವಾಮಿ ಯವರ ಮನೆಯ ಸಮೀಪದ ಬೃಹತ್ ಮರದ ಕೊಂಬೆ ಬೆಳಗ್ಗಿನ ಜಾವ ಅತಿಯಾದ ಗಾಳಿ ಮಳೆಗೆ ಮುರಿದು ಬಿದ್ದಿದೆ.ಅದೃಷ್ಟವಶಾತ್ ಮನೆಯ ಮುಂದೆ ನಿಲ್ಲಿಸಿದ ವಾಹನಗಳ ಮೇಲೆ ಬಿದ್ದ ಕಾರಣ,ಕೂದಲೆಳೆಯ ಅಂತರದಲ್ಲಿ ಮನೆ ಬಚಾವಾಗಿದೆ.ಮತ್ತು ಯಾವುದೇ ಪ್ರಾಣ ಹಾನಿ ಸಂಭವಿಸಿಲಿಲ್ಲ.ಸುದ್ದಿ ತಿಳಿದ ತಕ್ಷಣವೇ ಗ್ರಾಮದ ಜನರು ಸೇರಿ ಮರವನ್ನು ತೆರವುಗೊಳಿಸಿ ಮಿಕ್ಕ ಮರದ ಕೊಂಬೆ ಮನೆಯ ಮೇಲೆ ಬೀಳಲು ಕ್ಷಣಗಣನೆ ಆರಂಭಿಸಿದನ್ನು ಗಮನಿಸಿ ಹಗ್ಗ ಬಳಸಿ ಹರಸಾಹಸ ಪಟ್ಟು ಅವುಗಳನ್ನು ತೆರವುಗೊಳಿಸಿ ಮನೆಯವರನ್ನು ನಿಶ್ಚಿಂತರಾಗಿಸಿ ತೆರಳಿದ್ದಾರೆ. ನಂತರ ನಡೆಯಿತು ನೋಡಿ ಸಿನಿಮೀಯ ಘಟನೆ. ಮರಗಳ್ಳರ ಒಡನಾಡಿಗಳಾದ ಅಲ್ಲಿನ ಅರಣ್ಯ…
ನಿನ್ನೆ ದಿನ ರಾಜಾ ಸೀಟ್ ರಸ್ತೆಯಲ್ಲಿ ಬೈಕ್ ನಲ್ಲಿ ಸಂಚರಿಸುವಾಗ ಗುಂಡಿ ತಪ್ಪಿಸಲು ಹೋಗಿ ದಂಪತಿ ಬೈಕ್ ನಿಂದ ಬಿದ್ದು ಅಪಾಯದಿಂದ ಪಾರಾಗಿದ್ದರು. ಹಿನ್ನಲೆ ಇಂದು ಬೆಳಗ್ಗೆ ನಗರ ಸಭಾ ಸಿಬ್ಬಂದಿಗಳ ಸಹಾಯ ದಿಂದ ನಗರಸಭೆ ಉಪಾಧ್ಯಕ್ಷ ಮಹೇಶ್ ಜೈನಿ ಅವರು ತಾತ್ಕಾಲಿಕ ವಾಗಿ ಗುಂಡಿ ಮುಚ್ಚಿಸಿದರು *ಕೊಡಗು ನ್ಯೂಸ್*
