- ಭೂಮಿ, ದೌರ್ಜನ್ಯ, ಸುಳ್ಳು ಪ್ರಕರಣಗಳ ಸದ್ದು; ಪರಿಶಿಷ್ಟರ ನೋವು ಆಲಿಸಿದ ಎಸ್ಪಿ ಬಿಂದುಮಣಿ
- ಹೋಬಳಿ ಮಟ್ಟದ ಕ್ರೀಡಾಕೂಟದಲ್ಲಿ ಮಲ್ದಾರೆ ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿಗಳ ಮೇಲುಗೈ
- ಏಕಾಂಗಿಯಾದರೂ ಎದೆಗುಂದದ ರವಿ ಕುಶಾಲಪ್ಪ: ಬಿಜೆಪಿ ಒಗ್ಗಟ್ಟಿನ ಮೇಲೆ ಮತ್ತೆ ಪ್ರಶ್ನಾರ್ಥಕ ಚಿಹ್ನೆ
- ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ
- ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಪರಿಹಾರ: ಸಚಿವರ ಸಭೆಯಲ್ಲಿ ಗದ್ದಲ!
- ಕೊಡಗು ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ತ್ರಿಕೋನ ಸ್ಪರ್ಧೆ: ದೆಹಲಿ ತಲುಪಿದ ಮೂವರ ಹೆಸರು?
- ಕರವೇ ಸ್ವಾಭಿಮಾನಿ ಸೇನೆಗೆ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಸೇರ್ಪಡೆ: ನಾಡು-ನುಡಿಯ ರಕ್ಷಣೆಗೆ ಹಲವರು ಕಟಿಬದ್ಧ
- ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
Author: Kodagu-admin
ಚೆಟ್ಟಳ್ಳಿ ಸಮೀಪ ಪೊನ್ನತ್ತುಮೊಟ್ಟೆಯಲ್ಲಿ ಜೋಡಿ ಕಾಡಾನೆಗಳ ದಾಳಿ ನೂರಾರು ಅಡಿಕೆ ಗಿಡಗಳು ನಾಶ; ಕೃಷಿಕರಲ್ಲಿ ಆತಂಕ – ಅರಣ್ಯ ಇಲಾಖೆ ವಿರುದ್ಧ ಆಕ್ರೋಶ ಚೆಟ್ಟಳ್ಳಿ: ಕೊಡಗು ಜಿಲ್ಲೆಯ ಚೆಟ್ಟಳ್ಳಿ ಸಮೀಪದ ಪೊನ್ನತ್ತುಮೊಟ್ಟೆ ತೋಟಕ್ಕೆ ಜೋಡಿ ಕಾಡಾನೆಗಳು ಲಗ್ಗೆಯಿಟ್ಟು ಅಪಾರ ಪ್ರಮಾಣದ ಕೃಷಿ ಹಾನಿ ಮಾಡಿವೆ. ಕಳೆದ ಒಂದು ವಾರದ ಹಿಂದಷ್ಟೇ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ನಡೆಸಿ ಕಾಡಾನೆಗಳನ್ನು ಕಾಡಿಗಟ್ಟಿದ್ದರು. ಇದೀಗ ಮತ್ತೆ ಅದೇ ಪ್ರದೇಶಕ್ಕೆ ಕಾಡಾನೆಗಳು ಮರಳಿದ್ದು, ತೋಟದಲ್ಲಿದ್ದ ನೂರಾರು ಅಡಿಕೆ ಗಿಡಗಳನ್ನು ತುಳಿದು ಹಾಗೂ ಮುರಿದು ನಾಶಪಡಿಸಿವೆ. ಇದರಿಂದ ಕೃಷಿಕರಿಗೆ ಭಾರೀ ನಷ್ಟ ಉಂಟಾಗಿದೆ. ತೋಟದಲ್ಲಿ ಕಾಡಾನೆಗಳ ಓಡಾಟದಿಂದ ಕಾರ್ಮಿಕರು ಕೂಡ ಆತಂಕಗೊಂಡಿದ್ದು, ಕೃಷಿ ಚಟುವಟಿಕೆಗಳಿಗೆ ತೆರಳಲು ಭಯಪಡುವಂತಾಗಿದೆ. ಜೋಡಿ ಆನೆಗಳು ಮತ್ತೆ ಮತ್ತೆ ತೋಟ ಪ್ರದೇಶಕ್ಕೆ ಬರುತ್ತಿರುವುದರಿಂದ ಸ್ಥಳೀಯರಲ್ಲಿ ಆತಂಕ ಹೆಚ್ಚಾಗಿದೆ. ಕಾಡಾನೆಗಳನ್ನು ಕಾಡಿಗಟ್ಟಿದ ಕೆಲವೇ ದಿನಗಳಲ್ಲಿ ಮತ್ತೆ ಅವು ತೋಟ ಪ್ರದೇಶಕ್ಕೆ ನುಗ್ಗಿರುವುದು ಅರಣ್ಯ ಇಲಾಖೆಯ ಕಾರ್ಯಾಚರಣೆಯ ಬಗ್ಗೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಕಾಡಾನೆಗಳ ಶಾಶ್ವತ…
ಕಸ್ತೂರಿ ರಂಗನ್ ವರದಿ: ಪಶ್ಚಿಮ ಘಟ್ಟಗಳ ESA ಕುರಿತು ಕೇಂದ್ರದಿಂದ 7ನೇ ಕರಡು ಅಧಿಸೂಚನೆ ಪಶ್ಚಿಮ ಘಟ್ಟಗಳ ಪರಿಸರ ಸಂರಕ್ಷಣೆಗೆ ಸಂಬಂಧಿಸಿದಂತೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯವು 7ನೇ ಕರಡು ಅಧಿಸೂಚನೆ ಹೊರಡಿಸಿದ್ದು, ಪಶ್ಚಿಮ ಘಟ್ಟಗಳ ವ್ಯಾಪ್ತಿಯ ಪ್ರದೇಶಗಳಲ್ಲಿ ಮತ್ತೆ ಚರ್ಚೆ ಹಾಗೂ ಆತಂಕಕ್ಕೆ ಕಾರಣವಾಗಿದೆ. ಕೇಂದ್ರದ ಹೊಸ ಕರಡು ಪ್ರಕಾರ ಪಶ್ಚಿಮ ಘಟ್ಟಗಳ ಸುಮಾರು 56,825 ಚದರ ಕಿಲೋಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ESA) ಎಂದು ಗುರುತಿಸುವ ಪ್ರಸ್ತಾವನೆ ಮಾಡಲಾಗಿದೆ. 2014ರಿಂದ ಈ ಸಂಬಂಧ ಹಲವು ಕರಡು ಅಧಿಸೂಚನೆಗಳು ಪ್ರಕಟವಾಗಿದ್ದರೂ, ಸಂಬಂಧಪಟ್ಟ ರಾಜ್ಯಗಳೊಂದಿಗೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಅಂತಿಮ ಅಧಿಸೂಚನೆ ಹೊರಬಂದಿಲ್ಲ. ಕರ್ನಾಟಕ ಸೇರಿದಂತೆ ಪಶ್ಚಿಮ ಘಟ್ಟ ವ್ಯಾಪ್ತಿಯ ರಾಜ್ಯಗಳ ಹಲವು ಪ್ರದೇಶಗಳು ಈ ಪ್ರಸ್ತಾವನೆಯ ವ್ಯಾಪ್ತಿಗೆ ಬರಲಿವೆ. ಕರ್ನಾಟಕದಲ್ಲಿ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ ಸೇರಿದಂತೆ ಪಶ್ಚಿಮ ಘಟ್ಟ ವ್ಯಾಪ್ತಿಯ ಜಿಲ್ಲೆಗಳ ಗ್ರಾಮಗಳ ಕುರಿತು ಈ ಹಿಂದೆ ಪರಿಸರ…
ಬಲ್ಲಮಾವಟಿ ಪೇರೂರು ಗ್ರಾಮದಲ್ಲಿ ಭಾರಿ ಮಳೆಗೆ ಅಡುಗೆಮನೆ ಗೋಡೆ ಕುಸಿದು ಹಾನಿ ನಾಪೋಕ್ಲು :ನಾಪೋಕ್ಲು ಬಳಿಯ ಬಲ್ಲಮಾವಟಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೇರೂರು ಗ್ರಾಮದಲ್ಲಿ ಸುರಿದ ಭಾರಿ ಮಳೆಗೆ ಮನೆಯ ಅಡುಗೆ ಮನೆಯ ಒಂದು ಭಾಗ ಕುಸಿದು ಹಾನಿಯಾಗಿದೆ. ಪೇರೂರು ಗ್ರಾಮದ ನಿವಾಸಿ ಬಿ.ಮೊಣ್ಣಪ್ಪ ಎಂಬುವವರ ವಾಸದ ಮನೆಯ ಅಡುಗೆ ಮನೆಯ ಒಂದು ಭಾಗದ ಗೋಡೆಯು ಭಾರಿ ಮಳೆಗೆ ಕುಸಿದಿದ್ದು ಹಾನಿಸಂಭವಿಸಿ ನಷ್ಟ ಉಂಟಾಗಿದೆ. ಸ್ಥಳಕ್ಕೆ ನಾಪೋಕ್ಲು ಕಂದಾಯ ಪರಿವೀಕ್ಷಕ ರವಿ ಕುಮಾರ್, ಗ್ರಾಮ ಲೆಕ್ಕಿಗರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
2ನೇ ಮೊಣ್ಣಂಗೇರಿ ಸಂಪರ್ಕ ರಸ್ತೆಯಲ್ಲಿ ಭೂಕುಸಿತ: ಸಂಚಾರಕ್ಕೆ ಅಡಚಣೆ ಮಡಿಕೇರಿ: 2ನೇ ಮೊಣ್ಣಂಗೇರಿ ಗ್ರಾಮದ ಸಂಪರ್ಕ ರಸ್ತೆಯಲ್ಲಿ ಭೂಕುಸಿತ ಉಂಟಾಗಿ ರಸ್ತೆ ಬದಿ ಮಣ್ಣು ಕುಸಿದಿರುವ ಪರಿಣಾಮ ವಾಹನ ಸಂಚಾರದಲ್ಲಿ ವ್ಯತ್ಯಯ ಉಂಟಾಗಿದೆ. ನಿರಂತರ ಮಳೆ ಹಿನ್ನೆಲೆಯಲ್ಲಿ ರಸ್ತೆ ಬದಿ ಮಣ್ಣು ಕುಸಿದಿದ್ದು, ರಸ್ತೆಯ ಒಂದು ಭಾಗಕ್ಕೆ ಹಾನಿಯಾಗಿದೆ. ಇದರಿಂದ ಗ್ರಾಮಸ್ಥರು ಹಾಗೂ ವಾಹನ ಸವಾರರು ಸಂಚಾರಕ್ಕೆ ತೊಂದರೆ ಅನುಭವಿಸುವಂತಾಗಿದೆ. ಸಂಬಂಧಪಟ್ಟ ಇಲಾಖೆ ಕೂಡಲೇ ಸ್ಥಳ ಪರಿಶೀಲನೆ ನಡೆಸಿ, ಕುಸಿದಿರುವ ಭಾಗವನ್ನು ತೆರವುಗೊಳಿಸಿ ರಸ್ತೆ ಸಂಚಾರವನ್ನು ಸುಗಮಗೊಳಿಸುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಮಡಿಕೇರಿ: ನಗರದ ಜಲಾಶಯ ಬಡಾವಣೆಯ ನಿವಾಸಿಗಳ ಬಹುಕಾಲದ ಬೇಡಿಕೆಯಾಗಿದ್ದ 50 ಲಕ್ಷ ರೂ. ವೆಚ್ಚದ ತಡೆಗೋಡೆ ಕಾಮಗಾರಿಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಮಂತರ್ ಗೌಡ ಅವರು ಲೋಕಾರ್ಪಣೆ ಮಾಡಿದರು. 2018ರ ಪ್ರಕೃತಿ ವಿಕೋಪದ ಬಳಿಕ ಜಲಾಶಯ ಬಡಾವಣೆಯಲ್ಲಿ ಭೂಕುಸಿತದ ಆತಂಕ ಎದುರಾಗಿದ್ದು, ಬಡಾವಣೆಯ ರಕ್ಷಣೆಗೆ ತಡೆಗೋಡೆ ನಿರ್ಮಿಸುವಂತೆ ನಿವಾಸಿಗಳು ಹಲವು ವರ್ಷಗಳಿಂದ ಮನವಿ ಮಾಡುತ್ತಿದ್ದರು. ಕಳೆದ ಮಳೆಗಾಲದಲ್ಲಿ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದ ಶಾಸಕ ಡಾ.ಮಂತರ್ ಗೌಡ ಅವರು ಕಾಮಗಾರಿಗೆ ಅನುದಾನದ ಭರವಸೆ ನೀಡಿದ್ದರು. ಇದೀಗ 50 ಲಕ್ಷ ರೂ. ವೆಚ್ಚದಲ್ಲಿ ತಡೆಗೋಡೆ ಕಾಮಗಾರಿ ಪೂರ್ಣಗೊಂಡಿದೆ. ಇದೇ ವೇಳೆ ನಗರದ ಗೌಳಿಬೀದಿಯ ನೂತನ ಕಾಂಕ್ರೀಟ್ ರಸ್ತೆ ಹಾಗೂ ಭಗವತಿ ನಗರದ ಮೂಲಕ ಅಬ್ಬಿಫಾಲ್ಸ್‌ಗೆ ಸಂಪರ್ಕ ಕಲ್ಪಿಸುವ ಕಾಂಕ್ರೀಟ್ ರಸ್ತೆ ಕಾಮಗಾರಿಯನ್ನೂ ಶಾಸಕರು ನಾಗರಿಕರ ಸಮ್ಮುಖದಲ್ಲಿ ಉದ್ಘಾಟಿಸಿದರು. ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಮಡಿಕೇರಿ ನಗರದ ವಿವಿಧ ಬಡಾವಣೆಗಳ ಅಭಿವೃದ್ಧಿಗಾಗಿ 3.5 ಕೋಟಿ ರೂ. ಅನುದಾನ ದೊರೆತಿದ್ದು, ಮುಂದಿನ ದಿನಗಳಲ್ಲಿ ಮತ್ತಷ್ಟು…
ಕುಶಾಲನಗರ: ಜನರ ತೆರಿಗೆ ಹಣದಲ್ಲಿ ನಿರ್ಮಿಸಿರುವ ಶೌಚಾಲಯವನ್ನು ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸದೆ ಬೀಗ ಹಾಕಿರುವುದನ್ನು ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಪದಾಧಿಕಾರಿಗಳು ಕುಶಾಲನಗರ ಪುರಸಭೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕುಶಾಲನಗರ ಪುರಸಭೆ ಕಚೇರಿಗೆ ಪ್ರತಿದಿನ ಕಂದಾಯ ಪಾವತಿ, ಖಾತೆ ಬದಲಾವಣೆ ಸೇರಿದಂತೆ ವಿವಿಧ ಕೆಲಸಗಳಿಗಾಗಿ ನೂರಾರು ಸಾರ್ವಜನಿಕರು ಆಗಮಿಸುತ್ತಾರೆ. ಆದರೆ ಸಾರ್ವಜನಿಕರಿಗೆ ಕನಿಷ್ಠ ಶೌಚಾಲಯದ ವ್ಯವಸ್ಥೆಯೂ ಇಲ್ಲದಿರುವುದರಿಂದ, ವಿಶೇಷವಾಗಿ ಮಹಿಳೆಯರು, ಮಕ್ಕಳು ಹಾಗೂ ವಯೋವೃದ್ಧರು ತೊಂದರೆ ಅನುಭವಿಸುವಂತಾಗಿದೆ ಎಂದು ಸಂಘಟನೆ ಆರೋಪಿಸಿದೆ. ಈ ಹಿನ್ನೆಲೆಯಲ್ಲಿ ಕರವೇ ಸ್ವಾಭಿಮಾನಿ ಬಣದ ಜಿಲ್ಲಾಧ್ಯಕ್ಷ ಫ್ರಾನ್ಸಿಸ್ ಡಿಸೋಜ ನೇತೃತ್ವದಲ್ಲಿ ಪದಾಧಿಕಾರಿಗಳು ಪುರಸಭೆ ಆವರಣಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪುರಸಭೆಯ ಕೆಳಭಾಗದ ಪಾರ್ಕಿಂಗ್ ಕಟ್ಟಡದಲ್ಲಿ ಲಕ್ಷಾಂತರ ರೂಪಾಯಿ ವೆಚ್ಚದಲ್ಲಿ ಶೌಚಾಲಯ ನಿರ್ಮಿಸಲಾಗಿದ್ದು, ಕಾಮಗಾರಿ ಪೂರ್ಣಗೊಂಡು ಬಳಕೆಗೆ ಸಿದ್ಧವಾಗಿದ್ದರೂ ಸಾರ್ವಜನಿಕರಿಗಾಗಿ ತೆರೆಯಲಾಗಿಲ್ಲ ಎಂದು ಅವರು ಆರೋಪಿಸಿದರು. ಜನರ ತೆರಿಗೆ ಹಣದಲ್ಲಿ ನಿರ್ಮಿಸಿರುವ ಶೌಚಾಲಯವನ್ನು ಕೂಡಲೇ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸಬೇಕು. ಇಲ್ಲವಾದರೆ ಪುರಸಭೆ ಕಚೇರಿಗೆ…
ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ ಕುಶಾಲನಗರ, ಜು.30: ಕಾವೇರಿ ಜಲ ನಿಯಂತ್ರಣ ಸಮಿತಿಯು ತಮಿಳುನಾಡಿಗೆ ಪ್ರತಿ ದಿನ 3500 ಕ್ಯೂಸೆಕ್ ನೀರು ಬಿಡಲು ಆದೇಶಿಸಿರುವುದನ್ನು ಖಂಡಿಸಿ ಹೆಚ್. ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆ, ಕೊಡಗು ಜಿಲ್ಲಾ ಘಟಕ ವತಿಯಿಂದ ಜು.30 ರಂದುಪ್ರತಿಭಟನೆ ನಡೆಯಿತು ಈ ಸಂಬಂಧ ಜಿಲ್ಲಾಧ್ಯಕ್ಷ ಬಿ ಎ ದಿನೇಶ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ ದೆಹಲಿ ಕಾವೇರಿ ಜಲ ನಿಯಂತ್ರಣ ಸಮಿತಿಯು ಮುಂದಿನ 15 ದಿನಗಳವರೆಗೆ ತಮಿಳುನಾಡಿಗೆ ನೀರು ಬಿಡಲು ಶಿಫಾರಸು ಮಾಡಿರುವುದು ಖಂಡನೀಯ. ಈಗಾಗಲೇ ತೀವ್ರ ಬರದಿಂದ ಕರ್ನಾಟಕದ ರೈತರು ಸಂಕಷ್ಟದಲ್ಲಿದ್ದಾರೆ. ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ಇದೆ. ಹೀಗಿರುವಾಗ ತಮಿಳುನಾಡಿಗೆ ನೀರು ಬಿಡುವುದು ರೈತರಿಗೆ ಮಾಡುವ ಘೋರ ಅನ್ಯಾಯ” ಎಂದು ಕಿಡಿಕಾರಿದರು. ” ಇದೇ ಸಂದರ್ಭ ಫೀಲ್ಡ್ ಮಾರ್ಷಲ್ ಕೆ.ಎಂ. ಕಾರ್ಯಪ್ಪ ವೃತ್ತದವರೆಗೆ ಮೆರವಣಿಗೆ ನಡೆಸಿ, ಅಲ್ಲಿ ಮಾನವ ಸರಪಳಿ ರಚಿಸಿ ದೆಹಲಿ ಕಾವೇರಿ ಜಲ ಮಂಡಳಿ ಧೋರಣೆಯನ್ನು ಖಂಡಿಸಲಾಗುವುದು” ಎಂದು ತಿಳಿಸಿದರು.
ಮಡಿಕೇರಿ: ಕೊಡಗು ಕಾಂಗ್ರೆಸ್ ರಾಜಕೀಯದಲ್ಲಿ ಈಗ ಜಿಲ್ಲಾಧ್ಯಕ್ಷ ಸ್ಥಾನದ ಪೈಪೋಟಿ ಶುರುವಾಗಿದೆ. ಕಾಂಗ್ರೆಸ್ ಜಿಲ್ಲಾಧ್ಯಕ್ಷ ಸ್ಥಾನಕ್ಕೆ ಹಲವು ನಾಯಕರು ಒಲವು ತೋರಿದ್ದು ಪ್ರಬಲ ಆಕಾಂಕ್ಷಿಗಳ ಪಟ್ಟಿಯಲ್ಲಿ ನಾಪಂಡ ಮುತ್ತಪ್ಪ ಮುಂಚೂಣಿಯಲ್ಲಿದ್ದಾರೆ. ಕೊಡಗಿನಲ್ಲಿ ಬಿಜೆಪಿ ಹಾಗೂ ಆರ್‌ಎಸ್‌ಎಸ್ ರಾಜಕಾರಣವನ್ನು ಆರಂಭಿಕ ಹಂತದಲ್ಲೇ ವಿರೋಧಿಸುತ್ತಾ, ತಮ್ಮದೇ ಸಿದ್ಧಾಂತದೊಂದಿಗೆ ರಾಜಕೀಯ ಹೋರಾಟ ನಡೆಸಿದ ನಾಪಂಡ ಮುತ್ತಪ್ಪ ಹಾಗೂ ಮುದ್ದಪ್ಪ ಸಹೋದರರು ಇದೀಗ ಮತ್ತೆ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾಗಿದ್ದಾರೆ. ಹೊಂದಾಣಿಕೆಯ ರಾಜಕಾರಣಕ್ಕೆ ಒಗ್ಗಿಕೊಳ್ಳದೆ, ತಾವು ನಂಬಿರುವ ಎಡಪಂಥೀಯ ಸಿದ್ಧಾಂತದೊಂದಿಗೆ ರಾಜಿ ಮಾಡಿಕೊಳ್ಳದಿರುವುದೇ ನಾಪಂಡ ಸಹೋದರರ ರಾಜಕೀಯ ಪಯಣದ ಪ್ರಮುಖ ಅಂಶವಾಗಿದೆ. ಈ ಕಾರಣಕ್ಕಾಗಿಯೇ ಪಕ್ಷದೊಳಗೆಯೂ ಹಲವು ಸಂದರ್ಭಗಳಲ್ಲಿ ಮೂಲೆಗುಂಪಾಗಬೇಕಾಯಿತು ಎಂಬ ಮಾತುಗಳು ಕಾಂಗ್ರೆಸ್ ವಲಯದಲ್ಲಿ ಕೇಳಿಬರುತ್ತಿವೆ. ಹೋರಾಟಗಳ ಮೂಲಕವೇ ರಾಜಕೀಯಕ್ಕೆ ಎಂಟ್ರಿ ಟ್ರೇಡ್ ಯೂನಿಯನ್ ಚಟುವಟಿಕೆಗಳ ಮೂಲಕ ರಾಜಕೀಯ ಪ್ರವೇಶಿಸಿದ ಮುತ್ತಪ್ಪ ಮತ್ತು ಮುದ್ದಪ್ಪ, ಕಾರ್ಮಿಕರು ಹಾಗೂ ಸಾಮಾನ್ಯ ಜನರ ಸಮಸ್ಯೆಗಳ ಪರವಾಗಿ ಧ್ವನಿ ಎತ್ತುತ್ತಾ ತಮ್ಮದೇ ಆದ ರಾಜಕೀಯ ನೆಲೆಯನ್ನು ನಿರ್ಮಿಸಿಕೊಂಡವರು. ಟ್ರೇಡ್ ಯೂನಿಯನ್…
ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ ಮಡಿಕೇರಿ: ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯ ತಾಳತ್ತಮನೆ ಬಳಿ ರಸ್ತೆಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದಿದ್ದು, ವಾಹನ ಸಂಚಾರಕ್ಕೆ ಅಡ್ಡಿಯುಂಟಾಗಿದೆ. ರಾತ್ರಿಯಿಂದ ಬೀಸುತ್ತಿರುವ ಬಿರುಗಾಳಿ ಹಿನ್ನೆಲೆಯಲ್ಲಿ ರಸ್ತೆಬದಿಯಲ್ಲಿನ ಮರ ಉರುಳಿ ಬಿದ್ದಿದೆ ಎನ್ನಲಾಗಿದೆ. ಘಟನೆ ತಿಳಿಯುತ್ತಿದ್ದಂತೆ ಸಂಬಂಧ ಪಟ್ಟ ಇಲಾಖಾ ಸಿಬ್ಬಂದಿಗಳು ಹಾಗೂ ಸ್ಥಳೀಯರು ಮರ ತೆರವುಗೊಳಿಸುವಲ್ಲಿ ಮುಂದಾಗಿದ್ದಾರೆ ಮರ ತೆರವುಗೊಳಿಸಿ ರಸ್ತೆ ಸಂಚಾರವನ್ನು ಸುಗಮಗೊಳಿಸುವ ಕಾರ್ಯ ಮುಂದುವರಿದಿದೆ. ವಾಹನ ಸವಾರರು ಎಚ್ಚರಿಕೆಯಿಂದ ಸಂಚರಿಸುವಂತೆ ಸೂಚಿಸಲಾಗಿದೆ.
ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ ಸೋಮವಾರಪೇಟೆ, ಜು.29: ಸೋಮವಾರಪೇಟೆ ತಾಲೂಕಿನ ಮಾದಾಪುರ ಸಮೀಪದ ಬಿಳಿಗೇರಿ ಟಾಟಾ ಕಾಫಿ ಎಸ್ಟೇಟ್‌ನಲ್ಲಿ ಬುಧವಾರ ಭಾರೀ ಗಾಳಿ ಬೀಸಿದ ಪರಿಣಾಮ ಬೃಹತ್ ಮರವೊಂದು ಕಾರ್ಮಿಕರ ಮೇಲೆ ಉರುಳಿ ಬಿದ್ದು ಅಸ್ಸಾಂ ಮೂಲದ ಇಬ್ಬರು ಮಹಿಳಾ ಕಾರ್ಮಿಕರು ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತರನ್ನು ಪರ್ಬಿನಾ ಖಾತುನ್ (29) ಹಾಗೂ ಅಲೆಮನ್ (48) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಇನ್ನಿಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಡಿಕೇರಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಮಾದಾಪುರ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ಮುದ್ದುಮಹಾದೇವ ಹಾಗೂ ತಹಸೀಲ್ದಾರ್ ಕೃಷ್ಣಮೂರ್ತಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮೃತದೇಹಗಳ ಮಹಜರು ನಡೆಸಿ, ಪ್ರಕರಣ ದಾಖಲಿಸಿಕೊಂಡು ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗಿದೆ. ಭಾರೀ ಮಳೆ ಹಾಗೂ ಗಾಳಿಯಿಂದ ಮರಗಳು ಉರುಳುವ ಅಪಾಯ ಹೆಚ್ಚಿರುವ ಹಿನ್ನೆಲೆಯಲ್ಲಿ ತೋಟ ಪ್ರದೇಶಗಳಲ್ಲಿ…
