- ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
- ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
- ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
- ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
- ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ಮಹಮ್ಮದ್ ಯಾಸೀನ್ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ
- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
Author: Kodagu-admin
ಸಾರ್ವಜನಿಕರ ಸಮಸ್ಯೆ, ದೂರು ಆಲಿಸಲು ಪೊಲೀಸ್ ಸಿಬ್ಬಂದಿಯೇ ಮನೆಬಾಗಿಲಿಗೆ ಬರುವಂಥ ವಿನೂತನ ಪರಿಕಲ್ಪನೆಯಾದ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಈ ದಿನ ನೆಲ್ಲಿಹುದಿಕೇರಿಯಲ್ಲಿ ಚಾಲನೆ ನೀಡಲಾಯಿತು. ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಮತ್ತು ಸಿಬ್ಬಂದಿಗಳು ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯತಿ ಸದಸ್ಯರು ತೆರಳಿ ಪೊಲೀಸರ ಜನಸ್ನೇಹಿ ಕಾರ್ಯಕ್ರಮವಾಗಿರುವ ಮನೆಬಾಗಿಲಿಗೆ ಪೊಲೀಸರು ತೆರಳಿ ಜನರಲ್ಲಿ ಜಾಗೃತಿ ಮೂಡಿಸಿದರು. ನಂತರ ಪೊಲೀಸ್ ಸಿಬ್ಬಂದಿಗಳು ಸೈಬರ್ ಅಪರಾಧ, ಮಾದಕ ವಸ್ತು, ಪೋಕ್ಸೋ ಕಾಯ್ದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಿದರು. ಮನೆಯಲ್ಲಿರುವವರ ಹೆಸರು ಹಾಗೂ ಮೊಬೈಲ್ ನಂಬರ್ ಪಡೆದುಕೊಳ್ಳಲಾಯಿತು. ಸಿದ್ದಾಪುರ ಠಾಣಾಧಿಕಾರಿಗಳು, ಪಂಚಾಯತಿ ಅಧ್ಯಕ್ಷ ರು, ಸದಸ್ಯರು ಗ್ರಾಮಸ್ಥರು. ಹಾಗೂ ಪೊಲೀಸ್ ಸಿಬ್ಬಂದಿಗಳು ಅಭಿಯಾನವನ್ನು ಮುನ್ನಡೆಸಿದರು.
ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆ ರಾಜಾಸೀಟಿನಲ್ಲಿ ‘ಪುಟಾಣಿ ರೈಲು’ ಆರಂಭಕ್ಕೆ ಕ್ರಮ: ವೆಂಕಟ್ ರಾಜಾ ಮಡಿಕೇರಿ : ರಾಜಾಸೀಟಿನಲ್ಲಿ ‘ಮಕ್ಕಳ ಪುಟಾಣಿ ರೈಲು’ ಆರಂಭ ಸಂಬಂಧ ದಕ್ಷಿಣ ವಲಯ ರೈಲ್ವೆ ವಿಭಾಗದ ಎಂಜಿನಿಯರ್‍ಗಳು ಪರಿಶೀಲಿಸಿದ್ದು, ಈ ಬಗ್ಗೆ ವರದಿ ಬಂದ ನಂತರ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಧಿಕಾರಿ ಅವರ ಕಚೇರಿ ಸಭಾಂಗಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರೈಲು ಬೋಗಿ ಅಳವಡಿಸುವುದು ಸೇರಿದಂತೆ ದಕ್ಷಿಣ ರೈಲ್ವೆ ವಲಯದ ವಿಭಾಗದ ಎಂಜಿನಿಯರ್‍ಗಳು ಮಾಹಿತಿ ಪಡೆದಿದ್ದು, ಈ ಸಂಬಂಧ ವರದಿ ಬಂದ ನಂತರ ಪುಟಾಣಿ ರೈಲು ನಿರ್ಮಾಣಕ್ಕೆ ಕ್ರಮವಹಿಸಲಾಗುವುದು ಎಂದು ಜಿಲ್ಲಾಧಿಕಾರಿ ಅವರು ಪ್ರತಿಕ್ರಿಯಿಸಿದರು. ಈ ಕುರಿತು ವಿಷಯ ಪ್ರಸ್ತಾಪಿಸಿದ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ ವಿಶೇಷ ಆಹ್ವಾನಿತರಾದ ಜಿ.ಚಿದ್ವಿಲಾಸ್ ಅವರು ರಾಜಾಸೀಟಿನಲ್ಲಿ ಮಕ್ಕಳ ರೈಲು ಸ್ಥಗಿತವಾಗಿ ಹಲವು ವರ್ಷಗಳಾಗಿದ್ದು, ಈ ಬಗ್ಗೆ…
ಸಿದ್ದಾಪುರ : ಮನೆ ಮನೆಗೆ ಪೊಲೀಸ್ ಕಾರ್ಯಕ್ರಮಕ್ಕೆ ಚಾಲನೆ ಠಾಣಾಧಿಕಾರಿ ಮಂಜುನಾಥ್ ಮತ್ತು ಸಿಬ್ಬಂದಿಗಳ ಜತೆ ಸ್ಥಳೀಯ ಸಂಸ್ಥೆಗಳ ಪ್ರತಿನಿಧಿಗಳು ಸಾಥ್ ಮಡಿಕೇರಿ : ಸಾರ್ವಜನಿಕರ ಸಮಸ್ಯೆ, ದೂರು ಆಲಿಸಲು ಪೊಲೀಸ್ ಸಿಬ್ಬಂದಿಯೇ ಮನೆಬಾಗಿಲಿಗೆ ಬರುವಂತಹ ವಿನೂತನ ಪರಿಕಲ್ಪನೆಯಾದ ‘ಮನೆ ಮನೆಗೆ ಪೊಲೀಸ್’ ಕಾರ್ಯಕ್ರಮಕ್ಕೆ ಸಿದ್ದಾಪುರ ಠಾಣಾ ವ್ಯಾಪ್ತಿಯ ನೆಲ್ಲಿಹುದಿಕೇರಿಯಲ್ಲಿ ಚಾಲನೆ ನೀಡಲಾಯಿತು. ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ಮತ್ತು ಸಿಬ್ಬಂದಿಗಳು ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅಧ್ಯಕ್ಷರು, ಉಪಾಧ್ಯಕ್ಷರು ಮತ್ತು ಪಂಚಾಯತಿ ಸದಸ್ಯರು ತೆರಳಿ ಪೊಲೀಸರ ಜನಸ್ನೇಹಿ ಕಾರ್ಯಕ್ರಮವಾಗಿರುವ ಮನೆಬಾಗಿಲಿಗೆ ಪೊಲೀಸರು ಅಭಿಯಾನದ ಕುರಿತು ಜನರಲ್ಲಿ ಜಾಗೃತಿ ಮೂಡಿಸಿದರು. ನಂತರ ಪೊಲೀಸ್ ಸಿಬ್ಬಂದಿಗಳು ಸೈಬರ್ ಅಪರಾಧ, ಮಾದಕ ವಸ್ತು, ಪೋಕ್ಸೋ ಕಾಯ್ದೆ, ಮನೆ ಕಳ್ಳತನ, ಸರ ಕಳ್ಳತನ, ರಸ್ತೆ ಸಂಚಾರ ನಿಯಮ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಿದರು. ಇದೇ ಸಂದರ್ಭ ಮನೆಯಲ್ಲಿರುವವರ ಹೆಸರು ಹಾಗೂ ಮೊಬೈಲ್ ನಂಬರ್ ಪಡೆದುಕೊಳ್ಳಲಾಯಿತು. ಸಿದ್ದಾಪುರ ಠಾಣಾಧಿಕಾರಿಗಳು, ಪಂಚಾಯತಿ ಅಧ್ಯಕ್ಷ ರು, ಸದಸ್ಯರು ಗ್ರಾಮಸ್ಥರು ಹಾಗೂ…
ಇಂದು ಭಾಗಮಂಡಲ ನಾಡಗೌಡ ಸಮಾಜದ ಅಧ್ಯಕ್ಷರಾದ ಕುದ್ಪಾಜೆ ಪಿ ಪಳಂಗಪ್ಪರವರ ನಿಯೋಗದೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ರವರನ್ನು ಭೇಟಿಯಾಗಿ ಹಲವು ಪ್ರಮುಖ ಬೇಡಿಕೆಗಳಿಗೆ ಮನವಿ ಸಲ್ಲಿಸಲಾಯಿತು. ಪ್ರಮುಖವಾಗಿ, ಭಾಗಮಂಡಲ ಗ್ರಾಮದಲ್ಲಿ 1983 ರಲ್ಲಿ ನಿರ್ಮಿಸಿರುವ ಗೌಡ ಸಮುದಾಯ ಭವನದಲ್ಲಿ ಮೂಲ ಸೌಲಭ್ಯಗಳ ಕೊರತೆ ಇದ್ದು, ಭಾಗಮಂಡಲ ಭಾಗದಲ್ಲಿ ಏಕೈಕ ಸಮುದಾಯ ಭವನ ಇದಾಗಿದೆ. ಗೌಡ ಸಮಾಜ ಮತ್ತು ಎಲ್ಲಾ ಜಾತಿ-ಧರ್ಮದವರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ನೂತನವಾಗಿ ಸಮುದಾಯ ಭವನದ ನಿರ್ಮಿಸಲು ಅನುದಾನ ಮಂಜೂರು ಮಾಡಲು ಮನವಿ ಸಲ್ಲಿಸಲಾಯಿತು. ಮನವಿಗೆ ಸ್ಪಂದಿಸಿದ ಮಾನ್ಯ ಮುಖ್ಯಮಂತ್ರಿಗಳು ಅನುದಾನ ಮಂಜೂರು ಮಾಡುವ ಬಗ್ಗೆ ಭರವಸೆ ನೀಡಿದರು. ಈ ನಿಯೋಗದಲ್ಲಿ, ಗೌಡ ಸಮಾಜದ ಪ್ರಮುಖರಾದ ಹೊಸೂರು ಸತೀಶ್ ಜೋಯಪ್ಪ, ಪ್ರಕಾಶ್ ಕುದ್ಪಾಜೆ, ದೇವಂಗೋಡಿ ಹರ್ಷ, ಕುಯ್ಯಮುಡಿ ರಂಜು ನಿಡ್ಯಮಲೆ ರವಿ, ಕುದ್ಪಾಜೆ ಗಗನ್, ನಿಡ್ಯಮಲೆ ದಾಮೋದರ, ಅಮೆ ಹರೀಶ್ ಮತ್ತಿತರ ಪ್ರಮುಖರು ಉಪಸ್ಥಿತರಿದ್ದರು.
ಕೊಡಗು ಪತ್ರಕರ್ತರ ಸಂಘದಿಂದ ಕಥೆ ಹೇಳುವ ಸ್ಪರ್ಧೆ ಕೊಡಗು ಜಿಲ್ಲಾ ಪತ್ರಕರ್ತರ ಸಂಘ ( ರಿ) ಸಹಯೋಗದಲ್ಲಿ ವಿರಾಜಪೇಟೆ ತಾಲೂಕು ಪತ್ರ ಕರ್ತರ ಸಂಘ ದಿಂದ *ಕಥೆ ಹೇಳುವ ಸ್ಪರ್ಧೆ* ಆಯೋಜಿಸಲಾಗಿದೆ. ಆಗಸ್ಟ್ 3 ರಂದು ಭಾನುವಾರ ‘ಕಥಾ ಸಮಯ’ ಎನ್ನುವ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಸ್ವರಚಿತ ಕಥೆ ವಾಚಿಸಲು ಮೂರರಿಂದ ಐದು ನಿಮಿಷ ಸಮಯದ ಅವಕಾಶವಿರುತ್ತದೆ. ಎಲ್ಲಾ ವಯೋಮಾನದವರು ಈ ಸ್ಪರ್ಧೆಯಲ್ಲಿ ಭಾಗವಹಿಸಬಹುದು. ವಿರಾಜಪೇಟೆ ತಾಲೂಕಿನ ಕಾವಾಡಿ ಗ್ರಾಮದ ಕಾಮಧೇನು ಗೋ ಶಾಲೆಯಲ್ಲಿ ಈ ಕಾರ್ಯಕ್ರಮ ನಡೆಯಲಿದೆ. ಆಸಕ್ತರು ತಮ್ಮ ಹೆಸರನ್ನು ಜುಲೈ 25 ರೊಳಗಾಗಿ ನೊಂದಾಯಿಸಿಕೊಳ್ಳಲು. ಸಂಪರ್ಕಿಸಬೇಕಾದ ಸಂಖ್ಯೆಗಳು:9353531976, +917760908774
ಕರ್ನಾಟಕ ರಾಜ್ಯ ಸರಕಾರದ ಮಾನ್ಯ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ* ರವರು ಇಂದು ವಿಕಾಸ ಸೌಧದ ಮಾನ್ಯ ಸಚಿವರ ಕೊಠಡಿಯಲ್ಲಿ ಭೇಟಿ ಮಾಡಿ, ಕಂದಾಯ ಇಲಾಖೆಯ ಕೆಲವು ಮಸೂದೆಗಳಿಗೆ ತಿದ್ದುಪಡಿ ತರುವಂತೆ ಮನವಿ ಸಲ್ಲಿಸಿದರು. ವಿಶೇಷವಾಗಿ, ಕೊಡಗಿನವರ ಜಮ್ಮಬಾಣೆಗೆ ಕಂದಾಯ ನಿಗದಿ, ಪಟ್ಟೇದಾರರ ಸಮಸ್ಯೆ ಮತ್ತು ಪಹಣಿ ಪತ್ರದಲ್ಲಿ P ನಂಬರ್ ಗಳ ಸಮಸ್ಯೆಯನ್ನ ನಿವಾರಣೆ ಮಾಡಲು ಸೂಕ್ತ ತಿದ್ದುಪಡಿಯನ್ನು ಕರ್ನಾಟಕ ಕಂದಾಯ ಸಚಿವರಲ್ಲಿ ಮನವಿ ಮಾಡಲಾಯಿತು. ಇದಕ್ಕೆ ಪೂರಕವಾಗಿ ಸ್ಪಂದಿಸಿದ ಕಂದಾಯ ಸಚಿವರು, ಮುಂಬರುವ ಮುಂಗಾರು ಅಧಿವೇಶನದಲ್ಲಿ ಅಗತ್ಯ ತಿದ್ದುಪಡಿಯನ್ನು ತರಲಾಗುವುದೆಂಬ ಭರವಸೆಯನ್ನು ನೀಡಿದರು.
ಮಡಿಕೇರಿ : ನಾಪೋಕ್ಲು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮದ ಅಡಿಯಲ್ಲಿ ನಾಪೋಕ್ಲು ಗ್ರಾಮ ಪಂಚಾಯಿತಿಯ ಅಧ್ಯಕ್ಷರಾದ ವನಜಾಕ್ಷಿ ಮತ್ತು ನಾಪೋಕ್ಲು ಠಾಣೆಯ ಪಿಎಸ್ಐ ರಾಘವೇಂದ್ರರವರಿಂದ ಮನೆ ಮನೆಗೆ ಪೊಲೀಸ್ ಕಾರ್ಯಕ್ರಮವನ್ನು ಪ್ರಾರಂಭಿಸಲಾಯಿತು. ಕಾರ್ಯಕ್ರಮದಲ್ಲಿ ಠಾಣೆಯ ಅಧಿಕಾರಿ ಸಿಬ್ಬಂದಿಗಳು ಭಾಗವಹಿಸಿದ್ದರು.
ಜಿಲ್ಲಾಸ್ಪತ್ರೆಯಿಂದ ಕಾಣೆಯಾಗಿದ್ದ ವ್ಯಕ್ತಿ ಶವವಾಗಿ ಇಂದು ಪತ್ತೆ ಮಡಿಕೇರಿ : ಜುಲೈ 11 ರಂದು ಮಡಿಕೇರಿಯ ಜಿಲ್ಲಾಸ್ಪತ್ರೆಯಿಂದ ಕಾಣೆಯಾದ ವ್ಯಕ್ತಿ 37 ವರ್ಷದ ರಘು ಮೃತದೇಹ ಸರ್ಕಾರಿ ಆಸ್ಪತ್ರೆಯ ನಿರ್ಮಾಣ ಹಂತದಲ್ಲಿರುವ ಕಟ್ಟಡದ ಸಮೀಪದ ನೀರಿನ ಹೊಂಡದಲ್ಲಿ ಪತ್ತೆಯಾಗಿದೆ. ಸ್ಥಳಕ್ಕೆ ಮಡಿಕೇರಿ ನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅರೇಕಾಡುವಿನಲ್ಲಿ ತಮ್ಮ ತಾಯಿಯೊಂದಿಗೆ ವಾಸವಾಗಿದ್ದ ಮೃತ ರಘು ಪತ್ನಿ ರಾಜೇಶ್ವರಿ ಹಾಗೂ ಇಬ್ಬರು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.
ಅಗಲಿದ ಕೆ.ಬಿ.ಜಿ. ಅವರಿಗೆ ಕೊಡಗು ಪತ್ರಕತ೯ರ ಸಂಘದಿಂದ ನುಡಿನಮನ ಮಡಿಕೇರಿ ಜು 14- ಮೈಸೂರು ಮಿತ್ರ ಮತ್ತು ಸ್ಟಾರ್ ಆಫ್ ಮೈಸೂರು ಪತ್ರಿಕೆಗಳ ಸ್ಥಾಪಕ ಸಂಪಾದಕ ಕಲ್ಯಾಟಂಡ ಗಣಪತಿ ಅವರ ನಿಧನಕ್ಕೆ ಕೊಡಗು ಪತ್ರಕತ೯ರ ಸಂಘದಿಂದ ಶೖದ್ದಾಂಜಲಿ ಸಲ್ಲಿಸಲಾಯಿತು. 48 ವಷ೯ಗಳ ಕಾಲ ಅಂಕಣಕಾರರಾಗಿ, ಪತ್ರಕತ೯ರಾಗಿ ಜನಮನದಲ್ಲಿ ನೆಲೆಯೂರಿದ ಪತ್ರಕತ೯ನ ಅಗಲಿಕೆಗೆ ಸಂಘದ ಮೂಲಕ ಪತ್ರಕತ೯ರು, ಸಂಘಸಂಸ್ಥೆಗಳ ಪ್ರಮುಖರು ನುಡಿನಮನ ಸಲ್ಲಿಸಿದರು. ನಗರದ ಪತ್ರಿಕಾಭವನದಲ್ಲಿ ಕೊಡಗು ಪತ್ರಕತ೯ರ ಸಂಘದಿಂದ ಆಯೋಜಿತ ದಿ.ಗಣಪತಿ ಅವರಿಗೆ ಸಂತಾಪ ಸಭೆಯಲ್ಲಿ ಮಾತನಾಡಿದ ಹಿರಿಯ ಪತ್ರಕತ೯ ಜಿ.ರಾಜೇಂದ್ರ, ಮೇರು ವ್ಯಕ್ತಿತ್ವದ ಗಣಪತಿಯವರ ಅಗಲಿಕೆ ಪತ್ರಿಕೋದ್ಯಮ ಮಾತ್ರವಲ್ಲದೇ ಸಮಾಜಕ್ಕೂ ಸಾಕಷ್ಟು ನಷ್ಟ ಉಂಟು ಮಾಡಿದೆ. ಯಾರನ್ನೂ ದ್ವೇಷಿಸದ, ಯೂರನ್ನೂ ದೂಷಿಸದ ಗಣಪತಿ ಅವರಲ್ಲಿದ್ದ ಸದ್ಗುಣ ಇತರರಿಗೂ ಆದಶ೯ಪ್ರಾಯವಾದದ್ದು ಎಂದರಲ್ಲದೇ, ಪರಿಸರ ಕಾಳಜಿಯ ಜತೆಗೇ ಸಾಮಾಜಿಕ ಕಳಕಳಿಯನ್ನೂ ಹೊಂದಿದ್ದ ಸುಸಂಸ್ಕೖತ ವ್ಯಕ್ತಿತ್ವದ ಮೇಧಾವಿಯಾಗಿದ್ದರು ಗಣಪತಿಯವರು ಎಂದು ಸ್ಮರಿಸಿಕೊಂಡರು. ಮಾಧ್ಯಮ ಮುಖ್ಯಸ್ಥರೋವ೯ನಿಗೆ ಅಗತ್ಯವಾಗಿದ್ದ ಎಲ್ಲಾ ಅಗತ್ಯ ಗುಣಗಳನ್ನೂ ಹೊಂದಿದ್ದ ಗಣಪತಿಯವರು ನಿಷ್ಪಾಕ್ಷಪಾತ…
ಬಾನುವಾರ ತಡ ರಾತ್ರಿ ಅಧಿಕಾರಿಗಳ ಗಮನ ಸೆಳೆದಿದ್ದ ಕೊಡಗು ನ್ಯೂಸ್ ಭಾರಿ ಸರಕು ವಾಹನಗಳ ಓಡಾಟಕ್ಕೆ ಜಿಲ್ಲೆಯಲ್ಲಿ ನಿಷೇಧ ಇರುವ ಹಿನ್ನೆಲೆಯಲ್ಲಿ ಮರದ ದಿಮ್ಮಿಗಳನ್ನು ತುಂಬಿದ ಮೂರು ವಾಹನಗಳನ್ನು ವಶಪಡಿಸಿಕೊಳ್ಳುವಲ್ಲಿ ಸಿದ್ದಾಪುರ ಪೊಲೀಸರು ಯಶಸ್ವಿಯಾಗಿದ್ದಾರೆ. ಸಿದ್ದಾಪುರ ಸಮೀಪದ ಆನಂದಪುರ ಹಂಚಿಕಾಡು ಎಸ್ಟೇಟ್ ನಲ್ಲಿ ಕಾನೂನು ಬಾಹಿರವಾಗಿ ಮರದ ದಿಮ್ಮಿಗಳನ್ನು ಸಾಗಿಸಲು ಯತ್ನಿಸುತ್ತಿರುವ ಖಚಿತ ಮಾಹಿತಿ ಮೇರೆಗೆ ಸಿದ್ದಾಪುರ ಠಾಣಾಧಿಕಾರಿ ಮಂಜುನಾಥ್ ನೇತೃತ್ವದಲ್ಲಿ ದಾಳಿ ನಡೆಸಿದ ಪೊಲೀಸರು ಮಾಲು ಸಹಿತ ಮೂರು ವಾಹನಗಳನ್ನು ವಶಪಡಿಸಿ ಪ್ರಕರಣ ದಾಖಲಿಸಿದ್ದಾರೆ. ಬಾನುವಾರ ರಾತ್ರಿ ಮೂರು ಲಾರಿಗಳ ಮೂಲಕ ಮರದ ದಿಮ್ಮಿಗಳನ್ನು ಸಾಗಿಸಲು ತಯಾರಿ ನಡೆಸಲಾಗಿತ್ತು. ಸ್ಥಳೀಯ ಮಹಿಳೆಯೋರ್ವರು ಕೊಡಗು ನ್ಯೂಸ್ ಗೆ ಮಾಹಿತಿ ನೀಡಿದ ಹಿನ್ನಲೆಯಲ್ಲಿ ಕೊಡಗು ನ್ಯೂಸ್ ತಂಡ ಪ್ರಕರಣವನ್ನು ಸುದ್ದಿ ಮೂಲಕ ಬಯಲಿಗೆಳೆದು ಅಧಿಕಾರಿಗಳ ಗಮನಕ್ಕೆ ತಂದಿತ್ತು.
