- ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
- ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
- ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
- ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
- ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ಮಹಮ್ಮದ್ ಯಾಸೀನ್ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ
- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
Author: Kodagu-admin
ನಮ್ಮ ಮೆಟ್ರೋ ಪ್ರಯಾಣ ಮಾಡಿದ ಮಡಿಕೇರಿ ಶಾಸಕ ಡಾ.ಮಂತರ್ ಗೌಡ ಮೆಟ್ರೋ ದಲ್ಲಿ ಸಹ ಪ್ರಯಾಣಿಕರೊಂದಿಗೆ ಮಾತುಕತೆ. ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ ಶಾಸಕ ಡಾ.ಮಂತರ್ ಗೌಡ ರವರು ಹೆಚ್ಚಿನ ಟ್ರಾಫಿಕ್ ಒತ್ತಡ ಇರುವುದನ್ನು ಗಮನಿಸಿ ಸಮಯ ವ್ಯರ್ಥವಾಗುವುದನ್ನು ತಪ್ಪಿಸಲು ಕೆಂಗೇರಿ – ವಿಧಾನಸೌದ ಮಾರ್ಗದಲ್ಲಿ “ನಮ್ಮ ಮೆಟ್ರೊ” ರೈಲು ಪ್ರಯಾಣ ನಡೆಸಿದರು. ಜನಸಾಮಾನ್ಯರಂತೆ ಸರದಿಯಲ್ಲಿ ತೆರಳಿ ಸಾಮಾನ್ಯ ಪ್ರಯಾಣಿಕರಂತೆ ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ಸಹ ಪ್ರಯಾಣಿಕರುಗಳೊಂದಿಗೆ ಮಾತುಕತೆ ನಡೆಸಿ ಬೆಂಗಳೂರಿನ ದಿನ ನಿತ್ಯದ ವಿಚಾರ ವಿನಿಮಯ ಮಾಡಿಕೊಂಡರು. ನಿತ್ಯ ಸ್ವಂತ ವಾಹನಗಳಲ್ಲಿ ತೆರಳುವವರು ಮೆಟ್ರೋ ಬಳಸಿ ಬೆಂಗಳೂರು ಟ್ರಾಫಿಕ್ ಜಂಜಾಟಕ್ಕೆ ಬ್ರೇಕ್ ನೀಡುವ ಸಂದೇಶವನ್ನು ನೀಡಿದರು.
ಸೋಮವಾರಪೇಟೆ :-ವಿದ್ಯಾರ್ಥಿಗಳ ಶಿಕ್ಷಣದಲ್ಲಿ ಗುರುಗಳ ಪಾತ್ರ ಅಮೂಲ್ಯವಾದದ್ದು. ಪೋಷಕರು ವಿದ್ಯಾರ್ಥಿಗಳಿಗೆ ಮೊದಲ ಗುರುಗಳು ಎಂದು ಶಾಸಕ ಮಂತರ್ ಗೌಡ ಹೇಳಿದರು. ಕೊಡಗು ಪತ್ರಕರ್ತರ ಸಂಘದ ಸೋಮವಾರಪೇಟೆ ಘಟಕದ ವತಿಯಿಂದ ಇಲ್ಲಿನ ಪತ್ರಿಕಾ ಭವನದಲ್ಲಿ ಆಯೋಜಿಸಿದ್ದ 2024-25ನೇ ಸಾಲಿನ ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮದಲ್ಲಿ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಗುರುಗಳೇ ವಿದ್ಯಾರ್ಥಿಗಳಿಗೆ ದಾರಿ ತೋರಿಸುವ ದೀಪ,ವಿದ್ಯಾರ್ಥಿಗಳ ಜೀವನದಲ್ಲಿ ಗುರುಗಳ ಪಾತ್ರ ಅತ್ಯಂತ ಮಹತ್ವವಾದದ್ದು ಬಾಲ್ಯದಲ್ಲಿ ತಂದೆ-ತಾಯಿಗಳು ಪ್ರಥಮ ಗುರುಗಳು. ಬಳಿಕ ಶಾಲಾ-ಕಾಲೇಜುಗಳಲ್ಲಿ ಶಿಕ್ಷಕರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗುತ್ತಾರೆ, ಎಂದರು.ವಿವಿಧ ಸಂಸ್ಥೆಗಳು ಏರ್ಪಡಿಸುತ್ತಿರುವ ಸಾಧಕರ ಸನ್ಮಾನ ಕಾರ್ಯಕ್ರಮಗಳು ಇತರ ವಿದ್ಯಾರ್ಥಿಗಳಿಗೆ ಪ್ರೇರಣೆಯಾಗಬೇಕು. ಧೈರ್ಯ ಮತ್ತು ದೃಢ ನಿರ್ಧಾರ ಇದ್ದರೆ ಯಾವುದೇ ಗುರಿಯನ್ನೂ ಸಾಧಿಸಬಹುದು. ಒಬ್ಬ ಮನುಷ್ಯನಿಗೆ ಆಸೆ ಮತ್ತು ಕನಸುಗಳಿರಲೇಬೇಕು. ಇವುಗಳಿಲ್ಲದಿದ್ದರೆ ಯಶಸ್ಸಿನ ಗುರಿಯತ್ತ ಸಾಗುವುದು ಸಾಧ್ಯವಿಲ್ಲ, ವಿದ್ಯಾರ್ಥಿಗಳು ಪತ್ರಿಕೆಗಳ ಪ್ರಾಮುಖ್ಯತೆಯನ್ನು ಅರಿತುಕೊಳ್ಳಬೇಕು ಎಂದರು. ಪತ್ರಿಕಾ ಹಾಗೂ ಮಾಧ್ಯಮಗಳ ಮೂಲಕ ಸ್ಥಳೀಯ ಸಮಸ್ಯೆಗಳನ್ನು ತೋರಿಸಿದರೆ, ನಾವು ಅವುಗಳನ್ನು ಪ್ರಾಮಾಣಿಕವಾಗಿ ಪರಿಹರಿಸಲು ಬದ್ಧರಾಗಿದ್ದೇವೆ, ಎಂದು ವಿಶ್ವಾಸ…
ಮಡಿಕೇರಿ ಗ್ರಾಮಾಂತರ ಠಾಣೆಯ ಪಿಐ ಮತ್ತು ಸಿಬ್ಬಂದಿಗಳು ಮೂರ್ನಾಡಿನ ಜ್ಞಾನಜ್ಯೋತಿ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯ್ದೆ, ಬಾಲ್ಯ ವಿವಾಹ ಕಾಯ್ದೆ, ಮಾದಕ ದ್ರವ್ಯಗಳ ದುಷ್ಪರಿಣಾಮ, ಸಂಚಾರ ಸುರಕ್ಷತೆ, ಸೈಬರ್ ಸುರಕ್ಷತೆ ಮುಂತಾದ ವಿಷಯಗಳ ಬಗ್ಗೆ ಅರಿವು ಮೂಡಿಸಿದರು.
ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಇಂದು ದೈವಾಧೀನರಾದ ಮೈಸೂರು ಮಿತ್ರ ಹಾಗೂ ಸ್ಟಾರ್ ಆಫ್ ಮೈಸೂರು ಪತ್ರಿಕೆಯ ಸಂಪಾದಕರಾದ ಶ್ರೀ ಕಲ್ಯಾಟಂಡ ಗಣಪತಿಯವರ ಅಂತಿಮ ದರ್ಶನ ಪಡೆದು, ಅವರ ಮನೆಯವರಿಗೆ ಸಾಂತ್ವನ ತಿಳಿಸಿದರು.
26ನೇ ವರ್ಷದ ಅದ್ದೂರಿ ಗೌರಿಗಣೇಶ ಶ್ರೀ ಸಿದ್ಧಿ ವಿನಾಯಕ ಯು ವಕ ಮಿತ್ರ ಮಂಡಳಿ ಚಾಮುಂಡೇಶ್ವರಿ ನಗರ ಮಡಿಕೇರಿ ಅಧ್ಯಕ್ಷರಾಗಿ ನಂದೀಶ್ ಆಯ್ಕೆ ಯಾಗಿದ್ದಾರೆ, ಹಾಗೆಯೆ ಉಪಾಧ್ಯಕ್ಷರಾಗಿ ಜೈ ಕುಮಾರ್, ಗೌರವಾಧ್ಯಕ್ಷರಾಗಿ ರವಿಕುಮಾರ್, ಉಪ ಕಾರ್ಯದರ್ಶಿಯಾಗಿ ಹರ್ಷಿತ್ ಕೊಂಬನ್ ಖಜಾಂಚಿ ಯಾಗಿ ರಾಜೇಶ್, ಉಪ ಖಜಾಂಚಿ ಕಿರಣ್, ಕಾರ್ಯದರ್ಶಿಗಳಾಗಿ ಸ್ಟೀಫನ್ ಹಾಗೂ ರೇಣು, ಅಲಂಕಾರ ಸಮಿತಿ ಅಧ್ಯಕ್ಷರಾಗಿ ತೇಜು ಹಾಗೂ ಜಹೀರ್, ಪ್ರಧಾನ ಸಂಚಾಲಕರಾಗಿ ಅಜಿತ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಆಡಳಿತ ಮಂಡಳಿ ತಿಳಿಸಿದೆ.
ಗುರು ಪೂರ್ಣಿಮಾ ದಿನವಾದ ಇಂದು ಸೋಮವಾರ ಪೇಟೆ ಬಿ.ಜೆ.ಪಿ.ಕಛೇರಿಯಲ್ಲಿ ಸಮಾಜದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಹಿರಿಯ ಹಾಗೂ ಕಿರಿಯ ಗುರುಗಳನ್ನು ಸನ್ಮಾನಿಸುವ ಮೂಲಕ ಗೌರವಿಸಲಾಯಿತು. ಈ ಗೌರವ ವಂದನೆ ಕಾರ್ಯಕ್ರಮ ದಲ್ಲಿ ಸ್ವತಂತ್ರ ಬಸವ ಲಿಂಗಸ್ವಾಮಿಯವರು ಹಾಗೂ ಪಕ್ಷದ ಪ್ರಮುಖ ರು ಹಾಜರಿದ್ದರು
ಹಾಸನದ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಆಯೋಜಿಸಲಾಗಿದ್ದ ಗುರು ಸ್ಮರಣೆ ಮತ್ತು ಗುರುವಂದನೆ “130 ನೇ ಗುರು ತೋರಿದ ದಾರಿ ತಿಂಗಳ ಮಾಮನ ತೇರು” ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ಮಂತರ್ ಗೌಡ ರವರು ಭಾಗವಹಿಸಿ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ಮಾಮೀಜಿಗಳ ಆಶೀರ್ವಾದ ಪಡೆದರು.
ಬೆಂಗಳೂರು ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಸಿಲುಕಿ 11 ಜನ ಮೃತಪಟ್ಟಿದ್ದ ದುರಂತದ ತನಿಖೆಗಾಗಿ, ಸರಕಾರ ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಡಿ’ಕುನ್ಹ ರವರು ಏಕ ಸದಸ್ಯ ಆಯೋಗದ ವರದಿಯನ್ನು ಇಂದು ಮಾನ್ಯ ಮುಖ್ಯಮಂತ್ರಿಗಳದ ಸಿದ್ದರಾಮಯ್ಯ ರವರಿಗೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ, ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ನಜೀರ್ ಅಹ್ಮದ್, ಸರಕಾರದ ಮುಖ್ಯ ಕಾರ್ಯದರ್ಶಿಯವರಾದ ಶಾಲಿನಿ ರಜನೀಶ್ ಮತ್ತು ಇತರರು ಉಪಸಿತರಿದ್ದರು.
ಲೈನ್‍ಮನೆಗಳಲ್ಲಿ ವಾಸಿಸುವ 2 ಸಾವಿರ ಆದಿವಾಸಿ ಬುಡಕಟ್ಟು ಕುಂಟುಂಬಕ್ಕೆ ಶೀಘ್ರ ಹಕ್ಕುಪತ್ರ ವಿತರಣೆ: ಎ.ಎಸ್.ಪೊನ್ನಣ್ಣ ************************************************ ಮಡಿಕೇರಿ ಜು.11. ಜಿಲ್ಲೆಯ ಲೈನ್‍ಮನೆಗಳಲ್ಲಿ ವಾಸಿಸುವ ಬುಡಕಟ್ಟು ಆದಿವಾಸಿಯ 2000 ಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನ ಹಕ್ಕು ಪತ್ರವನ್ನು ಎರಡು ಮೂರು ತಿಂಗಳಲ್ಲಿ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಡಳಿತ ಭವನದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕರು ನಿವೇಶನ ಹಕ್ಕು ಪತ್ರ ನೀಡುವ ಸಂಬಂಧ ಆಯಾಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ಜಾಗ ಗುರುತಿಸಲಾಗಿದ್ದು, ಮಾನ್ಯ ಮುಖ್ಯಮಂತ್ರಿಯವರು, ಉಪ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಿ ನಿವೇಶನ ಹಕ್ಕುಪತ್ರ ವಿತರಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ಅವರು ಮಾಹಿತಿ ನೀಡಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನೇಕ ಬುಡಕಟ್ಟು ಸಮಾಜದವರು ಬಡವರಿದ್ದು, ಇವರಿಗೆ ನಿವೇಶನ ಇಲ್ಲದವರಿಗೆ ಹಕ್ಕು ಪತ್ರ ನೀಡಲು ಅಭಿಯಾನ ಮಾದರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸುಮಾರು 1500 ಕ್ಕೂ ಹೆಚ್ಚು ನಿವೇಶನ…
ತಿತಿಮತಿ, ಮಾಯಮುಡಿ ವ್ಯಾಪ್ತಿಯಲ್ಲಿ 4 ಕಾಡಾನೆಗಳ ಗುಂಪನ್ನು ಕಾಡಿಗಟ್ಟುವಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆ. *ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ ಮೇರೆಗೆ ದಾಂಧಲೆ ನಿರತ ಕಾಡಾನೆಗಳ ಗುಂಪನ್ನು ಕಾಡಿಗೆಟ್ಟಲಾಯಿತು* ಅನೇಕ ದಿನಗಳಿಂದ ಕೖಷಿ ಫಸಲು ನಷ್ಟ. ಪ್ರಾಣಭೀತಿಯುಂಟು ಮಾಡಿದ್ದ ದಾಳಿಕೋರ ಕಾಡಾನೆಗಳೂ ಕೊನೆಗೂ ಕಾಡಿಗೆ ನಿನ್ನೆಯಷ್ಟೇ ಶಾಸಕ ಪೊನ್ನಣ್ಣ ಅರಣ್ಯಾಧಿಕಾರಿಗಳು, ಎಲಿಫೆಂಟ್ ಟಾಸ್ಕ್ ಫೋಸ್೯ ತಂಡದ ಸಭೆ ನಡೆಸಿ ಕಾಡಾನೆಗಳ ದಾಂಧಲೆ ತಡೆಗಟ್ಟಿ, ಆನೆಗಳನ್ನು ಕಾಡಿಗೆ ಓಡಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದ ಬೆನ್ನಲ್ಲೇ ಇಂದು ಕಾಡಾನೆಗಳ 4 ಗುಂಪನ್ನು ಅರಣ್ಯದೊಳಕ್ಕೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಮಳೆಗಾಲದಲ್ಲಿ ಹಲಸು, ಬಿದಿರು, ಸೊಪ್ಪಿನಾಸೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ತೋಟಗಳಿಗೆ ಕಾಡಾನೆಗಳು ಬರುವ ಸಾಧ್ಯತೆ ಹಿನ್ನಲೆಯಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ನಿನ್ನೆಯಷ್ಟೇ ಶಾಸಕ ಪೊನ್ನಣ್ಣ ಸೂಚನೆ ನೀಡಿದ್ದರು. **
