- ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
- ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
- ಮಾನವ–ಪ್ರಾಣಿ ಸಂಘರ್ಷದ ಬಗ್ಗೆ ನಾಳೆ ಮಡಿಕೇರಿಯಲ್ಲಿ ಮಹತ್ವದ ಸಭೆ
- ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ: ವಾರಸುದಾರರ ಪತ್ತೆಗೆ ಪೊಲೀಸರ ಮನವಿ
- ರಸ್ತೆ ಬದಿ ಮದ್ಯದ ಬಾಟಲಿ ಬಾಕ್ಸ್ ಎಸೆದ ಆಸ್ಪತ್ರೆ ಸಿಬ್ಬಂದಿ?
- ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
- ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
- ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
Author: Kodagu-admin
ಗುರು ಪೂರ್ಣಿಮಾ ದಿನವಾದ ಇಂದು ಸೋಮವಾರ ಪೇಟೆ ಬಿ.ಜೆ.ಪಿ.ಕಛೇರಿಯಲ್ಲಿ ಸಮಾಜದಲ್ಲಿ ಉತ್ತಮ ಸೇವೆ ಸಲ್ಲಿಸುತ್ತಿರುವ ಹಿರಿಯ ಹಾಗೂ ಕಿರಿಯ ಗುರುಗಳನ್ನು ಸನ್ಮಾನಿಸುವ ಮೂಲಕ ಗೌರವಿಸಲಾಯಿತು. ಈ ಗೌರವ ವಂದನೆ ಕಾರ್ಯಕ್ರಮ ದಲ್ಲಿ ಸ್ವತಂತ್ರ ಬಸವ ಲಿಂಗಸ್ವಾಮಿಯವರು ಹಾಗೂ ಪಕ್ಷದ ಪ್ರಮುಖ ರು ಹಾಜರಿದ್ದರು
ಹಾಸನದ ಶ್ರೀ ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದಲ್ಲಿ ಗುರು ಪೂರ್ಣಿಮೆ ಪ್ರಯುಕ್ತ ಆಯೋಜಿಸಲಾಗಿದ್ದ ಗುರು ಸ್ಮರಣೆ ಮತ್ತು ಗುರುವಂದನೆ “130 ನೇ ಗುರು ತೋರಿದ ದಾರಿ ತಿಂಗಳ ಮಾಮನ ತೇರು” ಕಾರ್ಯಕ್ರಮದಲ್ಲಿ ಶಾಸಕರಾದ ಡಾ.ಮಂತರ್ ಗೌಡ ರವರು ಭಾಗವಹಿಸಿ ಪರಮ ಪೂಜ್ಯ ಶ್ರೀ ಶ್ರೀ ಶ್ರೀ ಡಾ. ನಿರ್ಮಲಾನಂದನಾಥ ಮಹಾ ಸ್ಮಾಮೀಜಿಗಳ ಆಶೀರ್ವಾದ ಪಡೆದರು.
ಬೆಂಗಳೂರು ಬೆಂಗಳೂರಿನಲ್ಲಿ ಆರ್‌ಸಿಬಿ ವಿಜಯೋತ್ಸವ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತಕ್ಕೆ ಸಿಲುಕಿ 11 ಜನ ಮೃತಪಟ್ಟಿದ್ದ ದುರಂತದ ತನಿಖೆಗಾಗಿ, ಸರಕಾರ ನೇಮಿಸಿದ್ದ ನಿವೃತ್ತ ನ್ಯಾಯಮೂರ್ತಿ ಜಸ್ಟಿಸ್ ಡಿ’ಕುನ್ಹ ರವರು ಏಕ ಸದಸ್ಯ ಆಯೋಗದ ವರದಿಯನ್ನು ಇಂದು ಮಾನ್ಯ ಮುಖ್ಯಮಂತ್ರಿಗಳದ ಸಿದ್ದರಾಮಯ್ಯ ರವರಿಗೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ, ಮಾನ್ಯ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯವರಾದ ನಜೀರ್ ಅಹ್ಮದ್, ಸರಕಾರದ ಮುಖ್ಯ ಕಾರ್ಯದರ್ಶಿಯವರಾದ ಶಾಲಿನಿ ರಜನೀಶ್ ಮತ್ತು ಇತರರು ಉಪಸಿತರಿದ್ದರು.
ಲೈನ್‍ಮನೆಗಳಲ್ಲಿ ವಾಸಿಸುವ 2 ಸಾವಿರ ಆದಿವಾಸಿ ಬುಡಕಟ್ಟು ಕುಂಟುಂಬಕ್ಕೆ ಶೀಘ್ರ ಹಕ್ಕುಪತ್ರ ವಿತರಣೆ: ಎ.ಎಸ್.ಪೊನ್ನಣ್ಣ ************************************************ ಮಡಿಕೇರಿ ಜು.11. ಜಿಲ್ಲೆಯ ಲೈನ್‍ಮನೆಗಳಲ್ಲಿ ವಾಸಿಸುವ ಬುಡಕಟ್ಟು ಆದಿವಾಸಿಯ 2000 ಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನ ಹಕ್ಕು ಪತ್ರವನ್ನು ಎರಡು ಮೂರು ತಿಂಗಳಲ್ಲಿ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ. ನಗರದ ಜಿಲ್ಲಾಡಳಿತ ಭವನದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕರು ನಿವೇಶನ ಹಕ್ಕು ಪತ್ರ ನೀಡುವ ಸಂಬಂಧ ಆಯಾಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ಜಾಗ ಗುರುತಿಸಲಾಗಿದ್ದು, ಮಾನ್ಯ ಮುಖ್ಯಮಂತ್ರಿಯವರು, ಉಪ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಿ ನಿವೇಶನ ಹಕ್ಕುಪತ್ರ ವಿತರಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ಅವರು ಮಾಹಿತಿ ನೀಡಿದರು. ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನೇಕ ಬುಡಕಟ್ಟು ಸಮಾಜದವರು ಬಡವರಿದ್ದು, ಇವರಿಗೆ ನಿವೇಶನ ಇಲ್ಲದವರಿಗೆ ಹಕ್ಕು ಪತ್ರ ನೀಡಲು ಅಭಿಯಾನ ಮಾದರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸುಮಾರು 1500 ಕ್ಕೂ ಹೆಚ್ಚು ನಿವೇಶನ…
ತಿತಿಮತಿ, ಮಾಯಮುಡಿ ವ್ಯಾಪ್ತಿಯಲ್ಲಿ 4 ಕಾಡಾನೆಗಳ ಗುಂಪನ್ನು ಕಾಡಿಗಟ್ಟುವಲ್ಲಿ ಯಶಸ್ವಿಯಾದ ಅರಣ್ಯ ಇಲಾಖೆ. *ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ, ಶಾಸಕ ಎ.ಎಸ್.ಪೊನ್ನಣ್ಣ ಸೂಚನೆ ಮೇರೆಗೆ ದಾಂಧಲೆ ನಿರತ ಕಾಡಾನೆಗಳ ಗುಂಪನ್ನು ಕಾಡಿಗೆಟ್ಟಲಾಯಿತು* ಅನೇಕ ದಿನಗಳಿಂದ ಕೖಷಿ ಫಸಲು ನಷ್ಟ. ಪ್ರಾಣಭೀತಿಯುಂಟು ಮಾಡಿದ್ದ ದಾಳಿಕೋರ ಕಾಡಾನೆಗಳೂ ಕೊನೆಗೂ ಕಾಡಿಗೆ ನಿನ್ನೆಯಷ್ಟೇ ಶಾಸಕ ಪೊನ್ನಣ್ಣ ಅರಣ್ಯಾಧಿಕಾರಿಗಳು, ಎಲಿಫೆಂಟ್ ಟಾಸ್ಕ್ ಫೋಸ್೯ ತಂಡದ ಸಭೆ ನಡೆಸಿ ಕಾಡಾನೆಗಳ ದಾಂಧಲೆ ತಡೆಗಟ್ಟಿ, ಆನೆಗಳನ್ನು ಕಾಡಿಗೆ ಓಡಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದ ಬೆನ್ನಲ್ಲೇ ಇಂದು ಕಾಡಾನೆಗಳ 4 ಗುಂಪನ್ನು ಅರಣ್ಯದೊಳಕ್ಕೆ ಅಟ್ಟುವಲ್ಲಿ ಯಶಸ್ವಿಯಾಗಿದ್ದಾರೆ. ಮಳೆಗಾಲದಲ್ಲಿ ಹಲಸು, ಬಿದಿರು, ಸೊಪ್ಪಿನಾಸೆಯಿಂದ ಹೆಚ್ಚಿನ ಸಂಖ್ಯೆಯಲ್ಲಿ ತೋಟಗಳಿಗೆ ಕಾಡಾನೆಗಳು ಬರುವ ಸಾಧ್ಯತೆ ಹಿನ್ನಲೆಯಲ್ಲಿ ಕಾಡಾನೆಗಳ ನಿಯಂತ್ರಣಕ್ಕೆ ನಿನ್ನೆಯಷ್ಟೇ ಶಾಸಕ ಪೊನ್ನಣ್ಣ ಸೂಚನೆ ನೀಡಿದ್ದರು. **
ಹದವಾದ ನೆರಳಿನಲ್ಲಿ ಬೆಳೆಯುವ ಕೊಡಗಿನ ‘ಶೇಡ್ ಕಾಫಿ’ ಯ ಸುವಾಸನೆ ಮತ್ತು ಸ್ವಾದವನ್ನು ವಿಶ್ವ ಸ್ತರದಲ್ಲಿ ಪರಿಚಯಿಸುವ ಪ್ರಯತ್ನಗಳು ವ್ಯಾಪಕವಾಗಿ ನಡೆಯುತ್ತಿದೆ. ಇದರ ಭಾಗವಾಗಿ ಕೊಡಗಿನ ಕಾಫಿಗೆ ಆಸ್ಟ್ರೇಲಿಯಾ ದಲ್ಲಿ ಮಾರುಕಟ್ಟೆ ಸೃಷ್ಟಿಸುವ ಚಿಂತನೆಗಳೊಂದಿಗೆ ಮಡಿಕೇರಿ ನಗರದ ಖಾಸಗಿ ಹೊಟೇಲ್ ನಲ್ಲಿ ಬೆಂಗಳೂರಿನಲ್ಲಿರುವ ಆಸ್ಟ್ರೇಲಿಯಾದ ಡೆಪ್ಯುಟಿ ಕೌನ್ಸಿಲ್ ಜನರಲ್ ರವರೊಂದಿಗೆ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತುಕತೆ ನಡೆಸಲಾಯಿತು.
ಮಡಿಕೇರಿ:-ಹನ್ನೆರಡನೇ ಶತಮಾನದಲ್ಲಿ ಬಸವಣ್ಣ ಅವರಿಗೆ ಶಿವಶರಣ ಹಡಪದ ಅಪ್ಪಣ್ಣ ಅವರು ಆತ್ಮೀಯರಾಗಿ, ಸಮಾಜ ಸುಧಾರಣೆಗೆ ಶ್ರಮಿಸಿದ್ದಾರೆ ಎಂದು ಕುಶಾಲನಗರದ ಕನ್ನಡ ಭಾರತಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕರಾದ ಕೆ.ಎ.ಸೌಮ್ಯ ಅವರು ತಿಳಿಸಿದ್ದಾರೆ. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಇವರ ಸಹಯೋಗದೊಂದಿಗೆ ನಗರದ ಗಾಂಧಿ ಭವನದಲ್ಲಿ ಗುರುವಾರ ನಡೆದ ಶಿವಶರಣ ಶ್ರೀ ಹಡಪದ ಅಪ್ಪಣ್ಣ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಶರಣರು 12ನೇ ಶತಮಾನದಲ್ಲಿ ತಮ್ಮ ವಚನಗಳ ಮೂಲಕ ಸಾಮಾಜಿಕ ಬದಲಾವಣೆಯಲ್ಲಿ ಮಹತ್ತರ ಪಾತ್ರ ವಹಿಸಿದ್ದಾರೆ. ಆ ನಿಟ್ಟಿನಲ್ಲಿ ಬಸವಣ್ಣನವರ ಜೊತೆಗೂಡಿ ಹಡಪದ ಅಪ್ಪಣ್ಣ ಅವರು ಸಮಾಜ ಸುಧಾರಣೆಗೆ ಪ್ರಯತ್ನಿಸಿದ್ದಾರೆ ಎಂದು ನುಡಿದರು. ಹಡಪದ ಅಪ್ಪಣ್ಣ ಅವರು 12ನೇ ಶತಮಾನದಲ್ಲಿ ಧಾರ್ಮಿಕ, ಸಾಮಾಜಿಕವಾಗಿ ಎಲ್ಲರನ್ನು ಮೇಲೆತ್ತುವಲ್ಲಿ ಶ್ರಮಿಸಿದ್ದಾರೆ. ಎಲ್ಲರಿಗೂ ಸಮಾನತೆ ಕಲ್ಪಿಸಲು ಶ್ರಮಿಸಿದ್ದಾರೆ. ಕಂದಾಚಾರವನ್ನು ಗಟ್ಟಿಯಾಗಿ ಪ್ರಶ್ನಿಸುವ ಮೂಲಕ ಅಸಮಾನತೆ ಹೋಗಲಾಡಿಸಲು ಶ್ರಮಿಸಿದ್ದಾರೆ ಎಂದರು. ಹಡಪದ ಅಪ್ಪಣ್ಣ ಅವರ ಕಾಲ ಕ್ರಿ.ಶ.1160 ಎಂದು ಗುರುತಿಸಲಾಗಿದ್ದು, ವಿಜಯಪುರ ಜಿಲ್ಲೆಯ…
ಮಕ್ಕಳ ಕಲಾ ಪ್ರತಿಭೆ *********** ರಾಜ್ಯ ಬಾಲಭವನ ಸೊಸೈಟಿ ಬೆಂಗಳೂರು, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಬಾಲಭವನ ಸಮಿತಿ ಹಾಗೂ ಮಡಿಕೇರಿ ತಾಲ್ಲೂಕು ಬಾಲಭವನ ಸಮಿತಿ ಕೊಡಗು ಇವರ ಸಹಯೋಗದಲ್ಲಿ 2025-26ನೇ ಸಾಲಿನ ಮಕ್ಕಳ ಕಲಾ ಪ್ರತಿಭೆ ಕಾರ್ಯಕ್ರಮವು ಪಿಎಂಶ್ರೀ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಗುರುವಾರ ನಡೆಯಿತು. ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರಾದ ಕೃಷ್ಣಮೂರ್ತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಮಕ್ಕಳು ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಕುರಿತು ಹೆಚ್ಚು ಗಮನ ಹರಿಸಬೇಕು. ಈ ಯುಗದಲ್ಲಿ ಮೊಬೈಲ್ ಪೋನ್‍ಗಳು ಸರ್ವವ್ಯಾಪಿಯಾಗಿವೆ. ಸಂವಹನ, ಮನರಂಜನೆ ಮತ್ತು ಮಾಹಿತಿ ಪ್ರವೇಶಕ್ಕೆ ಅನಿವಾರ್ಯ ಸಾಧನಗಳಾಗಿ ಕಾರ್ಯನಿರ್ವಹಿಸುತ್ತಿವೆ. ಈ ಸಾಧನಗಳು ಹಲವಾರು ಪ್ರಯೋಜನಗಳನ್ನು ನೀಡುತ್ತವೆಯಾದರೂ, ಅವುಗಳ ಸಂಭಾವ್ಯ ಋಣಾತ್ಮಕ ಪರಿಣಾಮ ಗುರುತಿಸುವುದು ಅತ್ಯಗತ್ಯ, ವಿಶೇಷವಾಗಿ ವಿದ್ಯಾರ್ಥಿಗಳ ಮೇಲೆ, ಶೈಕ್ಷಣಿಕ ಕಾರ್ಯಕ್ಷಮತೆಯಿಂದ ಹಿಡಿದು ಮಾನಸಿಕ ಮತ್ತು ದೈಹಿಕ ಆರೋಗ್ಯದವರೆಗೆ, ಈ ಮೊಬೈಲ್ ಪೆÇೀನ್…
ವಿರಾಜಪೇಟೆ ತಾಲೂಕು ಕಚೇರಿಯಲ್ಲಿಂದು, ಶಾಸಕ ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಜನಾಂಗದವರಿಗೆ ವಸತಿ ಕಲ್ಪಿಸುವ ವಿಶೇಷ ಯೋಜನೆಯ ಕುರಿತಾಗಿ ಮಾನ್ಯ ಜಿಲ್ಲಾಧಿಕಾರಿಗಳೊಂದಿಗೆ ಸಭೆ ನಡೆಸಿದರು. ಈ ಸಭೆಯಲ್ಲಿ ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿಗಳಾದ ವೆಂಕಟರಾಜ್ , ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಆನಂದ್ ಪ್ರಕಾಶ್ ಮೀನಾ, ಕ್ಷೇತ್ರ ವ್ಯಾಪ್ತಿಯ ತಹಶೀಲ್ದಾರರುಗಳು, ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಇಂದು ವಿರಾಜಪೇಟೆಯ ತಾಲೂಕು ಕಚೇರಿ ಸಭಾಂಗಣದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ವಿಶೇಷ ಸಭೆ ನಡೆಸಿದರು. ಕ್ಷೇತ್ರದ್ಯಂತ ನಿರಂತರವಾಗಿ ಸಂಭವಿಸುತ್ತಿರುವ ಪ್ರಾಣಿ-ಮಾನವ ಸಂಘರ್ಷ, ಅರಣ್ಯ ಅಂಚಿನಲ್ಲಿ ಸರ್ಕಾರದ ವತಿಯಿಂದ ಕೈಗೊಳ್ಳಲಾಗುತ್ತಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಶಾಸಕರು ಅಧಿಕಾರಿಗಳಿಗೆ ಮಾಹಿತಿ ಪಡೆದು ಹಲವು ಸೂಚನೆಗಳನ್ನು ನೀಡಿದರಲ್ಲದೆ ಕ್ಷೇತ್ರದಲ್ಲಿ ಇರುವ ಹಲವು ಜಲ್ವಂತ ಸಮಸ್ಯೆಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ರಾಜ್ಯ ವನ್ಯ ಜೀವಿ ಮಂಡಳಿಯ ಸದಸ್ಯರಾದ ಸಂಕೇತ್ ಪೂವಯ್ಯ, ಜಿಲ್ಲಾಧಿಕಾರಿಗಳಾದ ವೆಂಕಟರಾಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯವರಾದ ಆನಂದ್ ಪ್ರಕಾಶ್ ಮೀನಾ, ಕ್ಷೇತ್ರ ವ್ಯಾಪ್ತಿಯ ತಹಶೀಲ್ದಾರರುಗಳು,ಜಿಲ್ಲಾ ಗ್ಯಾರೆಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಧರ್ಮಜ ಉತ್ತಪ್ಪ, ಹಿರಿಯ ಅರಣ್ಯ ಅಧಿಕಾರಿಗಳು, ವಲಯ ಅರಣ್ಯಾಧಿಕಾರಿಗಳು ಹಾಗೂ ಸಿಬ್ಬಂದಿಗಳು ಉಪಸ್ಥಿತರಿದ್ದರು.
