- ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
- ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
- ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
- ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
- ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ಮಹಮ್ಮದ್ ಯಾಸೀನ್ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ
- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
Author: Kodagu-admin
ಮಡಿಕೇರಿ ತಾಲೂಕಿನ ಮರಗೋಡು ಸಮೀಪದ ಹುಲಿತಾಳ ಗ್ರಾಮದಲ್ಲಿ ಇಂದು ಸಂಜೆ ವಿದ್ಯುತ್ ಕಂಬ ಏರಿ ದುರಸ್ಥಿಗೆ ಯತ್ನಿಸಿದ್ದ ಸಂದರ್ಭ ಕಂಬದಲ್ಲೇ ವಿದ್ಯುತ್ ಪ್ರವಹಿಸಿ ಪ್ರದೀಪ್ ಹೆಚ್.ಪಿ (32) ಸಾವು.
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನ ಬೆಳ್ಳಾರೆಯಲ್ಲಿ ನಡೆದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಪ್ರಮುಖ ಆರೋಪಿಗಳಿಗೆ ಆಶ್ರಯ ನೀಡಿದ್ದ ಕೊಡಗಿನ ಸೋಮವಾರಪೇಟೆ ತಾಲೂಕಿನ ಅಬ್ದುಲ್ ರೆಹಮಾನ್ ಕಲ್ಕಂದೂರು ಎಂಬಾತನನ್ನು ಎನ್ ಐ ಎ ಅಧಿಕಾರಿಗಳು ಕೇರಳದ ವಿಮಾನ ನಿಲ್ದಾಣದಲ್ಲಿ ಬಂಧಿಸಿದಿದ್ದಾರೆ. ಪ್ರವೀಣ್ ನೆಟ್ಟಾರು ಹತ್ಯೆ ಬಳಿಕ ವಿದೇಶಕ್ಕೆ ತೆರಳಿ ಕತಾರ್ ನ ದೋಹಾದಲ್ಲಿ ತಲೆಮರೆಸಿಕೊಂಡಿದ್ದ. ತಲೆಮರೆಸಿಕೊಂಡಿದ್ದ ಎಲ್ಲಾ ಆರೋಪಿಗಳಿಗಾಗಿ ಲುಕ್ ಔಟ್ ನೋಟೀಸ್ ಕೂಡ ಜಾರಿ ಮಾಡಲಾಗಿತ್ತು. ಅಬ್ದುಲ್ ರೆಹಮಾನ್ ಕಲ್ಕಂದೂರ್ ಹಾಗು ತಲೆ ಮರೆಸಿಕೊಂಡಿರುವ ಇತರರ ಬಗ್ಗೆ ಮಾಹಿತಿ ನೀಡಿದವರಿಗೆ ನಗದು ಬಹುಮಾನವನ್ನು ಕೂಡ ರಾಜ್ಯ ಗೃಹ ಇಲಾಖೆ ಘೋಷಿಸಿತ್ತು. ಅಬ್ದುಲ್ ರೆಹಮಾನ್ ನಿಷೇಧಿತ ಪಿಎಫೈ ಸಂಘಟನೆಯ ಕಾರ್ಯದರ್ಶಿಯಾಗಿದ್ದ. ರೆಹಮಾನನ್ನು ವಶಕ್ಕೆ ಪಡೆದಿರುವ ಎನ್ ಐ ಎ ಅಧಿಕಾರಿಗಳು ಬೆಂಗಳೂರಿನ ಎನ್ ಐ ಎ ನ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿ ಹೆಚ್ಚಿನ ತನಿಕೆಗಾಗಿ ಮತ್ತೆ ತಮ್ಮ ವಶಕ್ಕೆ ಪಡೆದುಕೊಂಡಿರುವ ಬಗ್ಗೆ ಕೊಡಗು ನ್ಯೂಸ್ ಗೆ ಮಾಹಿತಿ ಲಭ್ಯವಾಗಿದೆ. *ಕೊಡಗು…
ಸಿದ್ದಾಪುರ : ಸಿದ್ದಾಪುರ – ಬೆಂಗಳೂರಿನಿಂದ ಕೊಡಗಿಗೆ ಬಂದಿದ್ದ ಪ್ರವಾಸಿಗರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿದ್ದ ಮರಕ್ಕೆ ಅಪ್ಪಳಿಸಿದ ಘಟನೆ ವಿರಾಜಪೇಟೆ ಮಾರ್ಗದ ಇಂಜಿಲಗೆರೆ ಪೂಮಾಡಪುರ ಮುತ್ತಪ್ಪ ದೇವಾಲಯದ ಸಮೀಪ ನಡೆದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಜಖಂಗೊಂಡಿದ್ದು, ಕಾರಿನಲ್ಲಿದ್ದವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. *KODAGU NEWS*
ಮಡಿಕೇರಿ : ಕರ್ನಾಟಕ ರಾಜ್ಯ ಒಕ್ಕಲಿಗರ ವಿಕಾಸ ವೇದಿಕೆಯ 14 ನೇ ವರ್ಷದ ವಾರ್ಷಿಕೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿನ ಸಾಧಕರಿಗೆ ನೀಡುವ ಪುರಸ್ಕಾರಕ್ಕೆ ನೆಲ್ಯಹುದಿಕೇರಿ ಗ್ರಾಮದ ವಸಂತಕುಮಾರ್ ಅವರ ಪತ್ನಿ ಕಾಪ್ಸ್ ಶಾಲೆಯ ಶಿಕ್ಷಕಿ ಹಾಗೂ ಸಾಹಿತಿ ಜಯಲಕ್ಷ್ಮಿ ಎಂ.ಬಿ ಅವರಿಗೆ ಸಾಹಿತ್ಯ ಹಾಗೂ ಶಿಕ್ಷಣ ಕ್ಷೇತ್ರದಲ್ಲಿನ ಸಾಧನೆಗೆ ಸೇವಾ ಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಮೈಸೂರು ಕಲಾಮಂದಿರದ ಆವರಣದಲ್ಲಿ ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಮಡಿಕೇರಿ: ಪ್ರಜಾತಂತ್ರ ವ್ಯವಸ್ಥೆಗೆ ವಿವಿಧ ಕಾಲ ಘಟ್ಟಗಳಲ್ಲಿ ಎದುರಾದ ಸಂಕಷ್ಟಗಳ ಸಂದರ್ಭಗಳಲ್ಲೆಲ್ಲ ಪತ್ರಿಕಾ ಕ್ಷೇತ್ರ ಅದಕ್ಕೆ ಎದುರಾಗಿ ಕಾರ್ಯ ನಿರ್ವಹಿಸುವ ಮೂಲಕ ‘ಪ್ರಜಾಪ್ರಭುತ್ವ’ ವ್ಯವಸ್ಥೆಯ ಸಂರಕ್ಷಣೆಗೆ ಶ್ರಮಿಸಿರುವುದಾಗಿ ಸಮಾಜ ಸೇವಕರಾದ ತೇಲಪಂಡ ಶಿವ ಕುಮಾರ್ ನಾಣಯ್ಯ ಅಭಿಪ್ರಾಯಿಸಿದರು. ಕೊಡಗು ಪತ್ರಕರ್ತರÀ ಸಂಘದ ವತಿಯಿಂದ ನಗರದ ಪÀತ್ರಿಕಾ ಭವನದ ಸಭಾಂಗಣದಲ್ಲಿ ಆಯೋಜಿತ ‘ಪತ್ರಿಕಾ ದಿನಾಚರಣೆ’ ಮತ್ತು ವಾರ್ಷಿಕ ಪ್ರಶಸ್ತಿ ಪದಾನ ಸಮಾರಂಭವನ್ನು ಜ್ಯೋತಿ ಬೆಳಗಿ ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗು ಪತ್ರಕರ್ತರ ಸಂಘದ ‘ಸ್ವಾಸ್ಥö್ಯ, ಸುಂದರ, ಸಮಾಜ’ ಎನ್ನುವ ಘೋಷವಾಕ್ಯದಂತೆ ಪತ್ರಿಕಾ ಕ್ಷೇತ್ರವು ಸಮಾಜದ ಸ್ವಾಸ್ಥö್ಯವನ್ನು ಕಾಪಾಡುವ ಮೂಲಕ ಆರೋಗ್ಯಪೂರ್ಣ ಸಮಾಜ ನಿರ್ಮಾಣಕ್ಕೆ ಸದಾ ಶ್ರಮಿಸುತ್ತಿದೆಯೆಂದು ತಿಳಿಸಿದ ಅವರು, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಬಲ ತುಂಬುವ ಮತ್ತು ಬೆಂಬಲವನ್ನು ನೀಡುವ ಕಾರ್ಯದ ಮೂಲಕ ಸುಂದರ ಸಮಾಜ ನಿರ್ಮಾಣ ಸಾಧ್ಯವೆÀನ್ನುವ ಅನಿಸಿಕೆ ವ್ಯಕ್ತಪಡಿಸಿದರು. ಪ್ರಸ್ತುತ ವ್ಯವಸ್ಥೆಯಲ್ಲಿ ಬಂಡವಾಳ ಶಾಹಿಗಳು, ಅಧಿಕಾರಸ್ಥರಿಂದ ನಿರಂತರವಾಗಿ ಅಧಿಕಾರದ ದುರ್ಬಳಕೆ ನಡೆಯುತ್ತಿದೆ. ಸ್ವಾತಂತ್ರ‍್ಯವನ್ನು ಪಡೆದು ಎಪ್ಪತ್ತೆöÊದು ವರ್ಷಗಳು ಕಳೆದಿರುವ ಈ…
* 10 ಪತ್ರಕತ೯ರಿಗೆ ಕೊಡಗು ಪತ್ರಕತ೯ರ ಸಂಘದ ವಾಷಿ೯ಕ ಪ್ರಶಸ್ತಿ ಪ್ರಕಟ* ಕೊಡಗು ಪತ್ರಕರ್ತರ ಸಂಘ(ರಿ) ದಿಂದ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರಕಟ ಮಾಡಲಾಗಿದ್ದು, ಜಿಲ್ಲೆಯ ಹತ್ತು ಮಂದಿ ಪತ್ರಕರ್ತರು ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜು.1 ರಂದು ಮಂಗಳವಾರ ಮಡಿಕೇರಿಯ ಪತ್ರಿಕಾ ಭವನದಲ್ಲಿ ನಡೆಯುವ ಪತ್ರಿಕಾ ದಿನಾಚರಣೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ವಿಜೇತ ಪತ್ರಕರ್ತರಿಗೆ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಕೊಡಗು ಪತ್ರಕರ್ತರ ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ, ಪ್ರಧಾನ ಕಾರ್ಯದರ್ಶಿ ಸುರೇಶ್ ಬಿಳಿಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕೊಡಗಿನಲ್ಲಿ ಪತ್ರಕರ್ತರಾಗಿದ್ದ ದಿ.ಕೆ.ಬಿ. ಮಹಂತೇಶ್ ಸ್ಮರಣಾರ್ಥ ಅವರ ಪತ್ನಿ ಭಾಗೀರಥಿ ಅವರು ಸ್ಥಾಪಿಸಿರುವ ಅತ್ಯುತ್ತಮ ಕ್ರೀಡಾ ವರದಿಗೆ ಶಕ್ತಿ ಪತ್ರಿಕೆಯಲ್ಲಿ ಪ್ರಕಟಗೊಂಡ ಕುಡೆಕಲ್ ಸಂತೋಷ್ ಅವರ ಇರುವುದೊಂದೇ ಕ್ರೀಡಾಂಗಣ ಅದಕ್ಕೂ ಗ್ರಹಣ ಎಂಬ ವರದಿ ಆಯ್ಕೆಯಾಗಿದೆ. ಕೊಡಗು ಚೇಂಬರ್ ಆಫ್ ಕಾಮರ್ಸ್ ಅಧ್ಯಕ್ಷ ಬಿ.ಆರ್. ನಾಗೇಂದ್ರ ಪ್ರಸಾದ್ ಮತ್ತು ಪುತ್ರ ಬಿ.ಎನ್. ಅಂಜನ್ ಅವರು ದಿವಂಗತ ಬಿ.ಆರ್.ಶಶಿರಮ್ಮ ಮತ್ತು…
ವಿರಾಜಪೇಟೆಯ ಮಾಲ್ದಾರೆ ಯಲ್ಲಿ ಸತತ ಮಳೆಯಿಂದ ಮರ ಬಿದ್ದು ಹಾನಿಯಾಗಿರುವ ಮನೆಯನ್ನು ಸಚಿವರಾದ ಎನ್.ಎಸ್.ಭೋಸರಾಜು ಹಾಗೂ ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ವೀಕ್ಷಿಸಿದರು.
ಮಡಿಕೇರಿ : ದೇವನಹಳ್ಳಿಯಲ್ಲಿ ಪ್ರತಿಭಟನಾನಿರತ ರೈತರು, ರೈತ ಕಾರ್ಮಿಕ ಮುಖಂಡರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಿ , ಭೂ ಸ್ವಾಧಿನ ಪ್ರಕ್ರಿಯೆಯಿಂದ ಸರಕಾರ ದೂರ ಸರಿಯಬೇಕು ಎಂದು ಆಗ್ರಹಿಸಿ ಸಿಐಟಿಯು ಕೊಡಗು ಜಿಲ್ಲಾ ಘಟಕದ ವತಿಯಿಂದ ಸಿದ್ದಾಪುರದಲ್ಲಿ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭ ಮಾತನಾಡಿದ ಸಂಘಟನೆಯ ಮುಖಂಡರು ದೇವನಹಳ್ಳಿಯಲ್ಲಿ 1720 ಎಕರೆ ಕೃಷಿ ಭೂಮಿಯನ್ನು ಹಿಂದಿನ ಬಿಜೆಪಿ ಸರಕಾರ ವಶಪಡಿಸಿಕೊಂಡಿತು. ಅಧಿಕಾರಕ್ಕೇರುವ ಮುನ್ನ ರೈತರ ಹೋರಾಟ ಬೆಂಬಲಿಸಿ ಭರವಸೆ ನೀಡಿದ ಸಿದ್ದರಾಮಯ್ಯ ಇದೀಗ ಕಾರ್ಪೊರೇಟ್ ಕಂಪನಿಗಳ ಪರ ವಹಿಸಿದ್ದಾರೆ. ಆ ಮೂಲಕ ಅವರು ರೈತರಿಗೆ ದ್ರೋಹ ಬಗೆದಿದ್ದಾರೆಂದು ಆರೋಪಿಸಿದರು. ಬಿಜೆಪಿ ಸರಕಾರ ತಂದಿದ್ದ ನೀತಿಯನ್ನೇ ಕಾಂಗ್ರೆಸ್ ಸರಕಾರ ಕೂಡ ಮುಂದುವರೆಸುತ್ತಿರುವುದರ ವಿರುದ್ಧ ಹೋರಾಟಕ್ಕೆ ಮುಂದಾದ ರೈತರನ್ನು ಬಂಧಿಸಿ ಜೈಲಿಗೆ ಹಾಕಿದ್ದಾರೆ. ಅಲ್ಲದೆ ಕೃಷಿ ಭೂಮಿಯನ್ನು ಹಿಂದೂರಿಗಿಸಲ್ಲ ಎಂದು ಕೂಡ ಹೇಳುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ ಪ್ರತಿಭಟನಾಕಾರರು, ಸಿಐಟಿಯು ರಾಜ್ಯಾಧ್ಯಕ್ಷರಾದ ವರಲಕ್ಷ್ಮಿ ಹಾಗೂ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಸೇರಿದಂತೆ ಹೋರಾಟಗಾರರನ್ನು ಬಂಧಿಸಿರುವುದಕ್ಕೆ…
ಸಿದ್ದಾಪುರ : ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಲ್ದಾರೆ ಪಂಚಾಯಿತಿ ವ್ಯಾಪ್ತಿಯ ಬಾಡಗ ಬಾಣoಗಾಲದ ಗಿರಿಜನ ಕಾಲೋನಿಯಲ್ಲಿ ಮಳೆಯಿಂದ ಹಾನಿಯಾದ ಅನಿಲ್ ಕುಮಾರ್ ಅವರ ಮನೆಗೆ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಭೋಸರಾಜು ಹಾಗೂ ಶಾಸಕರು ಹಾಗೂ ಮುಖ್ಯಮಂತ್ರಿಯವರ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭೇಟಿ ನೀಡಿ ಪರಿಶೀಲಿಸಿದರು. ಇತ್ತೀಚೆಗೆ ಸುರಿದ ಬಾರಿ ಮಳೆ ಹಾಗೂ ಗಾಳಿಯಿಂದಾಗಿ ಬಾಡಗ ಬಾಣoಗಾಲದಲ್ಲಿ ಮನೆಯ ತೀವ್ರ ಹಾನಿಯಾಗಿದೆ. ಆದ್ದರಿಂದ ಅಗತ್ಯ ಪರಿಹಾರ ಬಿಡುಗಡೆಗೆ ಸಚಿವರು ಸೂಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನದ ಅಧ್ಯಕ್ಷರಾದ ತಿತೀರ ಧರ್ಮಜ ಉತ್ತಪ್ಪ, ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗ ಅಧಿಕಾರಿ ವಿನಾಯಕ ನರ್ವಾಡೆ, ಗ್ರಾ.ಪಂ. ಅಧ್ಯಕ್ಷರಾದ ಮಾಲತಿ ಇತರರು ಇದ್ದರು.
ನಾಪೋಕ್ಲು ವ್ಯಾಪ್ತಿಯ ಚೆರಿಯಪರಂಬು ಭಾಗದಲ್ಲಿ ಮಳೆಯಿಂದ ಉಂಟಾಗಿರುವ ಹಾನಿ ಪ್ರದೇಶಕ್ಕೆ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್ ಭೋಸರಾಜು, ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರು. ಪ್ರತಿ ವರ್ಷ ಮಳೆಗಾಲದಲ್ಲಿ ಉಕ್ಕಿ ಹರಿಯುವ ಕಾವೇರಿ ನದಿಗೆ ಅಡ್ಡಲಾಗಿ ಕಟ್ಟಿರುವ ಸೇತುವೆಯ ಹಾಗೂ ಸುತ್ತಮುತ್ತಲಿನ ಪರಿಸರದ ವೀಕ್ಷಿಸಿದ ಮಾಡಿದ ಶಾಸಕರು, ಅಧಿಕಾರಿಗಳೊಂದಿಗೆ ಸುರಕ್ಷತೆ ಕ್ರಮದ ಬಗ್ಗೆ ಚರ್ಚಿಸಿ ಸಲಹೆ ನೀಡಿದರು. ಮುಂದಿನ ದಿನಗಳಲ್ಲಿ ಪ್ರವಾಹ ದಿಂದ ಸಂಪರ್ಕ ಕಡಿತ ಗೊಳ್ಳುವ ಈ ಸೇತುವೆಯ ಆಸುಪಾಸಿನಲ್ಲಿ ಮುಂಜಾಗ್ರತೆ ಕ್ರಮ ಕೈಗೊಳ್ಳುವ ನಿಟ್ಟಿನಲ್ಲಿ ಚರ್ಚಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಅಧಿಕಾರಿ ವೆಂಕಟ್ ರಾಜಾ, ಜಿ. ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಉಪ ವಿಭಾಗದ ಅಧಿಕಾರಿ ವಿನಾಯಕ ನರ್ವಾಡೆ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷರಾದ ಧರ್ಮಜ ಉತ್ತಪ್ಪ ಇತರರು ಇದ್ದರು.
