- ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
- ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
- ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
- ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
- ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ಮಹಮ್ಮದ್ ಯಾಸೀನ್ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ
- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
Author: Kodagu-admin
ಬಾಳೆಲೆ ಹೋಬಳಿಯ ಕೊಟ್ಟಗೇರಿ ಗ್ರಾಮದ ರಸ್ತೆಯು ಮಳೆಯಿಂದಾಗಿ ಜಲಾವೃತಗೊಂಡಿದ್ದು, ಬ್ಯಾರಿಕೇಡ್ ಅಳವಡಿಸಲಾಗಿರುತ್ತದೆ. ಹಾಗೂ ಸದರಿ ಗ್ರಾಮಕ್ಕೆ ತೆರಳಲು ಬದಲಿ ಸಂಪರ್ಕ ರಸ್ತೆ ಇದೆ.
ಕೊಡಗು ಪತ್ರಕತ೯ರ ಸಂಘದಿಂದ ಮಡಿಕೇರಿಯಲ್ಲಿ ಆಯೋಜನೆ – ವಿವಿಧ ಸಂಘಸಂಸ್ಥೆಗಳಿಂದ ಅಭಿನಂದನಾ ಕಾಯ೯ಕ್ರಮ ಮಡಿಕೇರಿ ಜೂನ್ 26 – ಸಾಹಿತ್ಯ ಲೋಕದ ಪ್ರತಿಷ್ಟಿತ ಅಂತರರಾಷ್ಟ್ರೀಯ ಬೂಕರ್ ಪ್ರಶಸ್ತಿಯನ್ನು ಪಡೆದ ಕೊಡಗಿನ ಹೆಮ್ಮೆಯ ಲೇಖಕಿ ಮಡಿಕೇರಿಯ ದೀಪಾಭಾಸ್ತಿಯವರಿಗೆ ಕೊಡಗು ಪತ್ರಕತ೯ರ ಸಂಘದ ಆಶ್ರಯದಲ್ಲಿ ಜೂನ್ 29 ರಂದು ಭಾನುವಾರ ಜಿಲ್ಲೆಯ ವಿವಿಧ ಸಂಘ ಸಂಸ್ಥೆಗಳಿಂದ ಅಭಿನಂದನಾ ಸಮಾರಂಭ ಆಯೋಜಿಸಲಾಗಿದೆ ಎಂದು ಸಂಘದ ಅಧ್ಯಕ್ಷ ಅನಿಲ್ ಹೆಚ್.ಟಿ. ತಿಳಿಸಿದ್ದಾರೆ. . ಜೂನ್ 29 ರಂದು ಭಾನುವಾರ ಸಂಜೆ 5 ಗಂಟೆಗೆ ಮಡಿಕೇರಿಯ ರೆಡ್ ಬ್ರಿಕ್ಸ್ ಇನ್ ನ ಸತ್ಕಾರ್ ಸಭಾಂಗಣದಲ್ಲಿ ಮಡಿಕೇರಿ ಕ್ಷೇತ್ರ ಶಾಸಕ ಡಾ.ಮಂಥರ್ ಗೌಡ ಅಧ್ಯಕ್ಷತೆಯಲ್ಲಿ ಆಯೋಜಿತ ಅಭಿವಂದನಾ ದೀಪಾ ಹೆಸರಿನ ಅಭಿನಂದನಾ ಕಾಯ೯ಕ್ರಮವನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಮತ್ತು ವಿರಾಜಪೇಟೆ ಕ್ಷೇತ್ರ ಶಾಸಕರಾದ ಎ.ಎಸ್. ಪೊನ್ನಣ್ಣ ನೆರವೇರಿಸಲಿದ್ದಾರೆ. ವಿಧಾನಪರಿಷತ್ ಸದಸ್ಯ ಎಂ.ಪಿ. ಸುಜಾಕುಶಾಲಪ್ಪ, ಮಡಿಕೇರಿ ನಗರಸಭೆ ಅಧ್ಯಕ್ಷೆ ಕಲಾವತಿ, ಜಿಲ್ಲಾಧಿಕಾರಿ ವೆಂಕಟರಾಜಾ, ಹೆಚ್ಚುವರಿ ಜಿಲ್ಲಾದಿಕಾರಿ ಆರ್.…
*ಸಮಾಜ ಸೇವೆ, ಪರೋಪಕಾರದಲ್ಲಿ* *ಕೊಡಗಿನವರು ದೇಶಕ್ಕೇ ಮಾದರಿ; ಆರ್.ಐಶ್ವರ್ಯ* -ಸಮಾಜಸೇವೆ, ಪರೋಪಕಾರ ವಿಚಾರದಲ್ಲಿ ಕೊಡಗಿನವರ ಛಲ ದೇಶಕ್ಕೇ ಮಾದರಿಯಾಗಿದೆ. ಯಾವುದೇ ಸವಾಲು ಎದುರಾದರೂ ಸ್ಥೈರ್ಯಗೆಡದೇ ಆ ಸವಾಲನ್ನು ಎದುರಿಸಲಿದ್ದಾರೆ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ ಅವರು ಶ್ಲಾಘಿಸಿದ್ದಾರೆ. ನಗರದ ರೆಡ್‍ಕ್ರಾಸ್ ಭವನದಲ್ಲಿ ಆಯೋಜಿತ ಭಾರತೀಯ ರೆಡ್‍ಕ್ರಾಸ್‍ನ ಕೊಡಗು ಶಾಖೆಯ 2024-25 ನೇ ಸಾಲಿನ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಮಾತನಾಡಿದ ಐಶ್ವರ್ಯ, ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಉತ್ತಮವಾದ ಸೇವೆ ನೀಡುವ ಮೂಲಕ ಆ ವ್ಯಕ್ತಿಯ ಏಳಿಗೆಗೆ ರೆಡ್‍ಕ್ರಾಸ್ ಸಂಸ್ಥೆ ಬದ್ದವಾಗಿದೆ. ಅನೇಕ ಸೇವಾ ಯೋಜನೆಗಳ ಮೂಲಕ ಕೊಡಗು ರೆಡ್‍ಕ್ರಾಸ್ ಗಮನ ಸೆಳೆದಿದೆ. ಸ್ವಾರ್ಥ ಬಿಟ್ಟು ಸಮಾಜ ಸೇವಾ ಮನೋಭಾವದಿಂದ ಉತ್ತಮ ಕಾರ್ಯದ ಮೂಲಕ ಸಮಾಜಕ್ಕೆ ಒಳಿತಾಗುವ ನಿಟ್ಟಿನಲ್ಲಿ ರೆಡ್‍ಕ್ರಾಸ್ ಸದಸ್ಯರ ಕಾರ್ಯವೈಖರಿ ಆದರ್ಶವಾದದ್ದು ಎಂದು ಅವರು ಹೆಮ್ಮೆಯಿಂದ ನುಡಿದರು. ರೆಡ್‍ಕ್ರಾಸ್ ಕರ್ನಾಟಕದ ನಿರ್ದೇಶಕ ಮಹಂತೇಶ್ ಸಭೆಯ ವೀಕ್ಷಕರಾಗಿ ಪಾಲ್ಗೊಂಡು ಮಾತನಾಡಿ, ಅತ್ಯುತ್ತಮ ಕಾರ್ಯಯೋಜನೆಗಾಗಿ ರಾಜ್ಯಪಾಲರಿಂದ ಅತ್ಯುತ್ತಮ ಘಟಕ ಎಂಬ ಪ್ರಶಸ್ತಿ ಪಡೆದ ಕೊಡಗು…
ಮಡಿಕೇರಿ ಜೂ.26(ಕರ್ನಾಟಕ ವಾರ್ತೆ):-ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ ಅವರು ಮಳೆ ಹಾನಿ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿ ವೀಕ್ಷಿಸಿದರು. ಕುಶಾಲನಗರದ ಸೇತುವೆಗೆ ತೆರಳಿ ಕಾವೇರಿ ನೀರಿನ ಹರಿವು ಪ್ರಮಾಣ ವೀಕ್ಷಿಸಿದರು. ಬಳಿಕ ಕುಶಾಲನಗರದ ಚಂದ್ರಶೇಖರ ಅವರ ಮನೆಹಾನಿ ಪರಿಶೀಲಿಸಿದರು. ಬಳಿಕ ಕಾವೇರಿ ನದಿ ನೀರು ಹರಿಯುವ ಕಣಿವೆ ಬಳಿಯ ತೂಗು ಸೇತುವೆ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ವೀಕ್ಷಿಸಿದರು. ನಂತರ ರಂಗಸಮುದ್ರ ಹತ್ತಿರ ಕುಸಿಯುತ್ತಿರುವ ಸೇತುವೆ ಪರಿಶೀಲಿಸಿದರು. ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಈ ಬಾರಿ ಮೇ ಅಂತ್ಯದಲ್ಲಿಯೇ ಮುಂಗಾರು ಆರಂಭವಾಗಿದ್ದು, ಹೆಚ್ಚಿನ ಮಳೆಯಿಂದ ಜಿಲ್ಲೆಯಲ್ಲಿ ಮನೆ, ಸೇತುವೆ, ರಸ್ತೆ ಸೇರಿದಂತೆ ಹಲವು ರೀತಿಯ ಪ್ರಾಕೃತಿಕ ವಿಕೋಪ ಸಂಭವಿಸಿದೆ ಎಂದರು. ಜಿಲ್ಲೆಯಲ್ಲಿ ಇನ್ನು ಎರಡು ತಿಂಗಳ ಕಾಲ ಹೆಚ್ಚಿನ ಮಳೆಯಾಗುವುದರಿಂದ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರ ವಹಿಸಬೇಕು ಎಂದು ಸಚಿವರು ಮನವಿ ಮಾಡಿದರು. ಪ್ರಾಕೃತಿಕ ವಿಕೋಪ…
ಗ್ರಾಮ ಪಂಚಾಯಿತಿಗೆ ಕಟ್ಟಡ ಖರೀದಿಸಲು ಗ್ರಾಮೀಣ ಅಭಿವೃದ್ಧಿ ಸಚಿವರಿಗೆ ಎ.ಎಸ್ ಪೊನ್ನಣ್ಣ ಮನವಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರಾದ ಪ್ರಿಯಾಂಕ್ ಖರ್ಗೆ* ಅವರನ್ನು, ಇಂದು ಮಾನ್ಯ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ* ಅವರ ನೇತೃತ್ವದಲ್ಲಿ, ಗ್ರಾಮ ಪಂಚಾಯಿತಿ ಸದಸ್ಯರು ಭೇಟಿ ಮಾಡಿ, ಕೆ ಬಾಡಗ ಗ್ರಾಮ ಪಂಚಾಯತಿ ಕಚೇರಿಗೆ, *ಮಹಿಳಾ ಸಾಂಸ್ಕೃತಿಕ ಸಂಘದ ಕಟ್ಟಡವನ್ನು* ಪಂಚಾಯತಿಯಲ್ಲಿ ಲಭ್ಯವಿರುವ ಹಣದಲ್ಲಿ, ಸದ್ರಿ ಕಟ್ಟಡವನ್ನೇ ಖರೀದಿಸಲು ಅನುಮತಿ ನೀಡುವಂತೆ ಸಚಿವರಿಗೆ ಮನವಿ ಸಲ್ಲಿಸಿದರು. ಈ ಸಂದರ್ಭದಲ್ಲಿ ಕೆ ಬಾಡಗ ಪಂಚಾಯಿತಿ ಅಧ್ಯಕ್ಷರಾದ ರೀತಿಶ್ ಬಿದ್ದಪ್ಪ, ಪಂಚಾಯಿತಿ ಸದಸ್ಯರಾದ ಸಿ ಡಿ ಬೋಪಣ್ಣ ಉಪಸ್ಥಿತರಿದ್ದರು.
ಕುಶಾಲನಗರದಲ್ಲಿ ಮನೆ ಹಾನಿಯಾಗಿರುವ ಪ್ರದೇಶಕ್ಕೆ ಮಾನ್ಯ ಜಿಲ್ಲಾ ಉಸ್ತುವಾರಿ ಸಚಿವ ಬೋಸರಾಜು ಭೇಟಿ ನೀಡಿದರು.
ಮಡಿಕೇರಿ : ಹಿಂದುಳಿದ ವರ್ಗಗಳ ಕಲ್ಯಾಣ, ಪೊಲೀಸ್ ಹಾಗೂ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಮಾದಕ ವಸ್ತುಗಳ ದುರುಪಯೋಗ ಮತ್ತು ಅಕ್ರಮ ಸಾಗಾಣಿಕೆ ವಿರುದ್ದ ಅಂತರ ರಾಷ್ಟ್ರೀಯ ದಿನ ಕುರಿತು ಜಾಗೃತಿ ಅಭಿಯಾನವು ನಗರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಡೈರಿ ಫಾರಂನಲ್ಲಿರುವ ವಿದ್ಯಾರ್ಥಿ ನಿಲಯದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಶ್ರೀನಾಥ್ ಅವರು ಹಿಂದೆ ಹಲವು ರೀತಿಯ ವೈರಸ್ ಮತ್ತು ಬ್ಯಾಕ್ಟೀರಿಯಾ ರೋಗಗಳಿಗೆ ತುತ್ತಾಗುತ್ತಿದ್ದರು. ಇತ್ತೀಚಿನ ದಿನಗಳಲ್ಲಿ ಮಾನಸಿಕ ಸ್ಥಿತಿ, ಒತ್ತಡ ಹಾಗೂ ಉದಾಸೀನತೆಯಿಂದ ಹಲವು ರೋಗಗಳನ್ನು ಕಾಣುತ್ತೇವೆ. ಆದ್ದರಿಂದ ಬದುಕಿನ ಜೀವನ ಶೈಲಿಯನ್ನು ಬದಲಿಸಿಕೊಂಡು, ಉತ್ತಮ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು ಎಂದು ಹೇಳಿದರು. ಹಿಂದೆ ಮನುಷ್ಯನ ಆಯಸ್ಸು 80 ರಿಂದ 100 ವರ್ಷಗಳ ಕಾಲ ಬದುಕುತ್ತಿದ್ದರು. ಆದರೆ ಇತ್ತೀಚಿನ ದಿನಗಳಲ್ಲಿ ವರ್ಷದಿಂದ ವರ್ಷಕ್ಕೆ ಆಯಸ್ಸು ಕಡಿಮೆಯಾಗುತ್ತಿದೆ. ಆದ್ದರಿಂದ ಯಾವುದೇ ರೀತಿಯ ಮದ್ಯ ಹಾಗೂ ಮಾದಕ ವಸ್ತುಗಳ ಚಟಕ್ಕೆ ತುತ್ತಾಗಬಾರದು…
ಮಡಿಕೇರಿ : ನಾಡಪ್ರಭು ಕೆಂಪೇಗೌಡರ ಜಯಂತಿ ಪ್ರಯುಕ್ತ ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಶಾಲಾ ಶಿಕ್ಷಣ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದಲ್ಲಿ ನಗರದ ಸರ್ಕಾರಿ ಪ್ರೌಢಶಾಲೆ ಹಾಗೂ ಕೂಡಿಗೆಯ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಪ್ರಬಂಧ ಸ್ಪರ್ಧೆ ಹಾಗೂ ಚಿತ್ರಕಲಾ ಸ್ಪರ್ಧೆಯು ಬುಧವಾರ ನಡೆಯಿತು. ‘ನಮ್ಮ ಬೆಂಗಳೂರು ಹೇಗೆ ಇದ್ದರೆ ಚೆನ್ನ’ ಹಾಗೂ ‘ನಾಡಪ್ರಭು ಕೆಂಪೇಗೌಡರ ಕೊಡುಗೆ’ ಕುರಿತು ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆ ನಡೆಯಿತು. ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ ಅವರು ಮಾತನಾಡಿ ಬೆಂಗಳೂರು ನಿರ್ಮಾತೃ ಕೆಂಪೇಗೌಡರನ್ನು ಸದಾ ಸ್ಮರಿಸುವಂತಾಗಬೇಕು. ಅವರ ದೂರ ದೃಷ್ಟಿಯಿಂದ ಹಿಂದೆಯೇ ಬೆಂಗಳೂರು ಅಭಿವೃದ್ಧಿಯತ್ತ ಸಾಗಿತ್ತು. ಕೆರೆ ಕಟ್ಟೆಗಳ ನಿರ್ಮಾಣ, ಮರಗಿಡಗಳನ್ನು ಬೆಳೆಸಿ ಪರಿಸರ ಶುಚಿತ್ವಕ್ಕೆ ಒತ್ತು ನೀಡಿದ್ದರು ಎಂದು ಅವರು ಹೇಳಿದರು. ಪ್ರಬಂಧ ಹಾಗೂ ಚಿತ್ರಕಲಾ ಸ್ಪರ್ಧೆಯಲ್ಲಿ ಪಾಲ್ಗೊಳ್ಳುವುದರಿಂದ ಆತ್ಮವಿಶ್ವಾಸ ಮತ್ತು ಜ್ಞಾಪಕಶಕ್ತಿ ಹೆಚ್ಚಾಗುತ್ತದೆ. ಪಠ್ಯದ ಜೊತೆಗೆ ಇತರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳುವುದರಿಂದ ಜ್ಞಾನ ವೃದ್ಧಿಯಾಗುತ್ತದೆ ಎಂದರು. ಕನ್ನಡ ಮತ್ತು ಸಂಸ್ಕøತಿ…
ಮಡಿಕೇರಿ : ಕೊಡಗು ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆ ಜಿಲ್ಲೆಯ ಎಲ್ಲಾ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿ ಪೂರ್ವ ಕಾಲೇಜಿಗೆ ನಾಳೆ ( ಜೂನ್ 26) ರಂದು ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಅವರು ಆದೇಶಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ತೆರವುಗೊಂಡಿರುವ ಸಹಾಯಕ ಔಷಧ ನಿಯಂತ್ರಕರಾಗಿ ಮೈಸೂರು ಜಿಲ್ಲೆಯ ಸಹಾಯಕ ಔಷಧ ನಿಯಂತ್ರಕ ಷರೀಫ್ ಅವರನ್ನ ಪ್ರಭಾರ ಆಗಿ ನಿಯೋಜಿಸಲಾಗಿದೆ. ಕಳೆದ ಐದು ವರ್ಷಗಳಿಂದ ಕೊಡಗು ಜಿಲ್ಲೆಯಲ್ಲಿ ಸಹಾಯಕ ಔಷಧ ನಿಯಂತ್ರಕರಾಗಿ ಕರ್ತವ್ಯ ನಿರ್ವಹಿಸುತ್ತಿದ್ದ ಮಂಜುನಾಥ್ ಮಾಗಣಗೇರಿ ವರ್ಗಾವಣೆ ಹಿನ್ನಲೆ ಷರೀಫ್ ಅವರನ್ನು ನೇಮಿಸಲಾಗಿದೆ. ಮಂಗಳವಾರ ಅಧಿಕಾರ ವಹಿಸಿಕೊಂಡ ಷರೀಫ್ ಅವರಿಗೆ ಕೊಡಗು ಔಷಧ ವ್ಯಾಪಾರಿಗಳ ಸಂಘದ ಪದಾಧಿಕಾರಿಗಳು ಸ್ವಾಗತವನ್ನು ಕೋರಿದರು. ಅಧ್ಯಕ್ಷ ಅಂಬೆಕಲ್ಲು ಜೀವನ್ ನೇತೃತ್ವದಲ್ಲಿ ಸಹಾಯಕ ಔಷಧ ನಿಯಂತ್ರಕ ಷರೀಫ್ ಅವರನ್ನು ಭೇಟಿಯಾಗಿ ಶುಭಾಶಯ ಕೋರಿ ಕೆಲವು ಸೂಕ್ಷ್ಮ ವಿಚಾರಗಳ ಚರ್ಚಿಸಲಾಯಿತು. ಈ ಸಂದರ್ಭ ಕೊಡಗು ಔಷಧ ವ್ಯಾಪಾರಿಗಳ ಸಂಘದ ಹಿರಿಯ ಸದಸ್ಯರಾದ ಶ್ರೀ ಅಂಬೇಕಲ್ ಕುಶಾಲಪ್ಪ, ಸಂಘದ ಉಪಾಧ್ಯಕ್ಷರ ಅಂಬೇಕಲ್ ವಿನೋದ್, ಖಜಾಂಜಿ ಪ್ರಸಾದ್ ಗೌಡ, ಜಂಟಿ-ಕಾರ್ಯದರ್ಶಿ ವಸಂತ್, ಸದಸ್ಯರಾದ ಶ್ರೀ ಶಶಿಧರ್ ರೈ, ಧನಂಜಯ ಶಾಸ್ತ್ರೀ, ಶ್ರೀ ಸುರೇಶ್ ಬಿಳಿಗೇರಿ ಉಪಸ್ಥಿತರಿದ್ದರು.
